Tuesday, June 3, 2025
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
ವಿಜಯಪುರ : ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರ ಸಹಯೋಗದೊಂದಿಗೆ ಬಾಲ್ಯವಿವಾಹ ಹಾಗೂ ಪೋಕ್ಸೊ ಕಾಯ್ದೆಗಳ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಆಯೋಜಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ್ಯವಿವಾಹವನ್ನು ತಡೆಗಟ್ಟಲು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳಲ್ಲಿ ಸಮಿತಿಗಳನ್ನು ರಚಿಸಿಕೊಂಡು, ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳು, ಪಾಲಕರು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.
ಬಾಲ್ಯವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಒಂದು ವಾರಗಳಿಂತ ಹೆಚ್ಚು ಗೈರಾದ ಮಕ್ಕಳ ಮಾಹಿತಿಗಳನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಖುದ್ದಾಗಿ ಶಾಲೆಗಳಿಗೆ ಭೇಟಿ ನೀಡುವುದರ ಮೂಲಕ ಸಮಗ್ರ ಮಾಹಿತಿ ಪಡೆದುಕೊಳ್ಳಬೇಕು. ಬಾಲ್ಯ ವಿವಾಹ ಘಟನೆ ಕಂಡುಬAದಲ್ಲಿ ಅವುಗಳನ್ನು ತಡೆÀಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಬಾಲ್ಯವಿವಾಹ ಕಂಡುಬAದಲ್ಲಿ ಬಾಲ್ಯ ವಿವಾಹಕ್ಕೆ ಪ್ರೋತ್ಸಾಹ ನೀಡುವವರೂ ಸೇರಿದಂತೆ ಮಗುವಿನ ಪೋಷಕರು, ಮಗುವಿನ ಜವಾಬ್ದಾರಿಯನ್ನು ಹೊತ್ತವರ, ಭಾಗವಹಿಸಿದ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅವರು ನಿರ್ದೇಶನ ನೀಡಿದರು.
ಬಾಲ್ಯ ವಿವಾಹದ ಘಟಿಸದಂತೆ ನೋಡಿಕೊಳ್ಳಬೇಕು ಹಾಗೂ ಬಾಲ್ಯ ವಿವಾಹ ತಡೆಗೆ ಇರುವ ಸಹಾಯವಾಣಿ ಸಂಖ್ಯೆ 1098 ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು ಹಾಗೂ ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ ಅಂತಹ ಗ್ರಾಮ ಪಂಚಾಯತಿಗಳಿಗೆ ಸನ್ಮಾನಿಸುವ ಕಾರ್ಯ ನಡೆಯಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಅವರು ತಿಳಿಸಿದರು.
ಬಾಣಂತಿ ಮತ್ತು ಗರ್ಭಿಣಿ ಮಹಿಳೆಯರ ಕ್ಷೇಮಾಭಿವೃದ್ಧಿಗಾಗಿ ಇರುವ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವುದರ ಮೂಲಕ ತಾಯಿ ಮತ್ತು ಮಗುವಿನ ಆರೋಗ್ಯ ಮತ್ತು ಪೋಷಣೆಯನ್ನು ಉತ್ತಮಪಡಿಸಲು ಅನುವಾಗಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನೊಂದ ಮಹಿಳೆಯರಿಗಾಗಿ ಸ್ಥಾಪಿಸಲಾಗಿರುವ ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ನೊಂದ ಮಹಿಳೆಯರಿಗೆ ಆರೋಗ್ಯ, ಆರೈಕೆ, ಪೊಲೀಸ್ ಹಾಗೂ ಕಾನೂನು ನೆರವು, ವಸತಿ ಹಾಗೂ ಆಪ್ತ ಸಮಾಲೋಚನೆ ಇತ್ಯಾದಿ ಸೇವೆಗಳನ್ನು ಸಮರ್ಪಕವಾಗಿ ದೊರಕುವಂತೆ ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಅವರು ಸೂಚಿಸಿದರು.
ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ನೊಂದ ಮಹಿಳೆಯರಿಗಾಗಿ ಜಿಲ್ಲೆಯಲ್ಲಿ ಒಟ್ಟು 06 ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಸದರಿ ಕೇಂದ್ರಗಳಲ್ಲಿ ನೊಂದ ಮಹಿಳೆಯರಿಗೆ ಆಪ್ತ ಸಮಾಲೋಚನೆ, ಕಾನೂನು ಅರಿವು, ನೆರವು ನೀಡಲಾಗುವುದು. ಅಂತಹ ಮಹಿಳೆಯರಿಗೆ ಆತ್ಮ ಸ್ಥೆöÊರ್ಯ ನೀಡಿ ಪುನಃ ಕುಟುಂಬದೊAದಿಗೆ ಸೇರಿಸುವ ಕಾರ್ಯವಾಗಬೇಕು. ಸಾಂತ್ವನ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತಂದು ಇತ್ಯರ್ಥ ಪಡೆಸಿಕೊಳ್ಳುವಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ ಅವರು ಸಾಂತ್ವನ ಕೇಂದ್ರಗಳ ವ್ಯವಸ್ಥಾಪಕರಿಗೆ ಸೂಚಿಸಿದರು.
ಪೋಕ್ಸೋ ಹಾಗೂ ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸಂಬAಧಿಸಿದ ಇಲಾಖೆಗಳಿಗೆ ಎಲ್ಲ ರೀತಿಯ ಸಹಾಯ ಸಹಕಾರವನ್ನು ಪೊಲೀಸ್ ಇಲಾಖೆ ವತಿಯಿಂದ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷö್ಮಣ ನಿಂಬರಗಿ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಶಂಕರ್ ಮಾರಿಹಾಳ, ಜಿಲ್ಲಾ ಶಸ್ತçಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಸಂಪತ್ತ ಗುಣಾರೆ, ಮಹಾ ನಗರ ಪಾಲಿಕೆಯ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ.ಕೆ.ಚವ್ಹಾಣ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ಸಿ.ಬಿ.ಕುಂಬಾರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಟಿ.ಎಸ್.ಕೊಲ್ಹಾರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
