Thursday, June 12, 2025
ಮಕ್ಕಳ ಸಾಹಿತ್ಯ ಕ್ಷೇತ್ರಕ್ಕೆ ವಿಜಯಪುರ ಜಿಲ್ಲೆ ಬಹುದೊಡ್ಡ ಕೊಡುಗೆ ನೀಡಿದೆ : ವಿಶ್ರಾಂತ ಪ್ರಾಚಾರ್ಯ ಸಂಗಮೇಶ ಗುಜಗೊಂಡ
ಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ ಹಾಗೂ ವಿದ್ಯಾಚೇತನ ಪ್ರಕಾಶನ ಸಹಯೋಗದಲ್ಲಿ ಹಮ್ಮಿಕೊಂಡ 344ನೆಯ ಸದ್ವಿಚಾರಗೋಷ್ಠಿ ಹಾಗೂ ಪ.ಗು.ಸಿದ್ದಾಪುರ ಅವರ ಜೀವನ ಮತ್ತು ಸಾಹಿತ್ಯ ಸಂಶೋಧನಾ ಮಹಾಪ್ರಬಂಧ, ಮಕ್ಕಳ ಸಾಹಿತ್ಯ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಳವಾಡದ ಮಕ್ಕಳ ಹಿರಿಯ ಸಾಹಿತಿ ಪ.ಗು.ಸಿದ್ದಾಪುರ ಅವರಿಗೆ ಮಕ್ಕಳ ಸಾಹಿತ್ಯ ಭೂಷಣ ಪ್ರಶಸ್ತಿಯನ್ನು ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಪ್ರದಾನ ಮಾಡಿದರು.
ಸಿಂದಗಿ: ಮಕ್ಕಳ ಸಾಹಿತ್ಯ ಕ್ಷೇತ್ರಕ್ಕೆ ವಿಜಯಪುರ ಜಿಲ್ಲೆ ಬಹು ದೊಡ್ಡ ಕೊಡುಗೆಯನ್ನೇ ನೀಡಿದೆ. ವಿಜಯಪುರ ಜಿಲ್ಲೆಯನ್ನು ಮಕ್ಕಳ ಸಾಹಿತ್ಯದ ತವರು ಎಂದು ಕರೆಯಲಾಗುತ್ತದೆ ಎಂದು ಮಕ್ಕಳ ಸಾಹಿತಿ, ಮೂಡಲಗಿ ಎಂ.ಇ.ಎಸ್ ಪದವಿ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಸಂಗಮೇಶ ಗುಜಗೊಂಡ ಹೇಳಿದರು.
ಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ ಹಾಗೂ ವಿದ್ಯಾಚೇತನ ಪ್ರಕಾಶನ ಸಹಯೋಗದಲ್ಲಿ ಹಮ್ಮಿಕೊಂಡ 344ನೆಯ ಸದ್ವಿಚಾರಗೋಷ್ಠಿ ಹಾಗೂ ಪ.ಗು.ಸಿದ್ದಾಪುರ ಅವರ ಜೀವನ ಮತ್ತು ಸಾಹಿತ್ಯ ಸಂಶೋಧನಾ ಮಹಾಪ್ರಬಂಧ, ಮಕ್ಕಳ ಸಾಹಿತ್ಯ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಏಕೆಂದರೆ ಕಂಚ್ಯಾಣಿ ಶರಣಪ್ಪ, ಸಿಸು ಸಂಗಮೇಶ, ಹ.ಮ.ಪೂಜಾರಿ, ಪ.ಗು. ಸಿದ್ದಾಪೂರ, ಶಂಗು ಬಿರಾದಾರ್ ಸಹಿತ ಶಿಶು ಸಾಹಿತಿಗಳು ಬೃಹತ ಮಟ್ಟದಲ್ಲೇ ಬೆಳೆದಿದ್ದಾರೆ. ಜಿಲ್ಲೆಯ ಹೆಸರನ್ನೂ ಬೆಳಗಿಸಿದವರಿದ್ದಾರೆ. ಮಕ್ಕಳ ಸಾಹಿತ್ಯದ ಗಾರುಡಿಗ ಎಂತಲೂ ಪ.ಗು.ಸಿದ್ದಾಪುರ ಅವರನ್ನು ಕರೆಯುತ್ತಾರೆ. ವಿಜಯಪುರದಲ್ಲಿ ಮಕ್ಕಳ ಸಾಹಿತ್ಯ ಬೆಳೆಯಲು ಹಲವು ಕಾರಣಗಳಿವೆ. ಮುಖ್ಯವಾಗಿ ಮಕ್ಕಳ ಸಾಹಿತ್ಯಕ್ಕೆ ಸಂಬAಧಿಸಿ ಇಲ್ಲಿ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತವೆ. ಸಾಹಿತ್ಯದಲ್ಲಿ ಪ್ರಮುಖ ಪ್ರಾಕಾರವಾಗಿ ಹೊರ ಹೊಮ್ಮಿರುವ ಮಕ್ಕಳ ಸಾಹಿತ್ಯದಲ್ಲಿ ವಿಜಯಪುರ ದೊಡ್ಡ ಹೆಸರು ಮಾಡಿದೆ. ವಿಜಯಪುರ ಜಿಲ್ಲೆ ಮಕ್ಕಳ ಸಾಹಿತ್ಯದ ಬಿಡು. ಅನೇಕ ಶಿಕ್ಷಣ ಸಂಸ್ಥೆಗಳು ಮೊದಲು ಹುಟ್ಟಿಕೊಂಡಿದ್ದು ವಿಜಯಪುರ ಜಿಲ್ಲೆ. ಮಕ್ಕಳ ಸಾಹಿತ್ಯವನ್ನು ಮಠ ಮಾನ್ಯಗಳು, ಸಂಸ್ಥೆಗಳು ಉಳಿಸಿ ಬೆಳೆಸಿಕೊಂಡು ಹೋಗುತ್ತಿವೆ ಎಂದರು.
ಈ ವೇಳೆ ಕಾರ್ಯಕ್ರಮದ ಪಾವನ ಸಾನಿಧ್ಯ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹಾಗೂ ಸಮ್ಮುಖ ವಹಿಸಿದ ಶ್ರೀಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಆಶೀರ್ವಚನ ನೀಡಿದರು. ಮಕ್ಕಳ ಸಾಹಿತಿ, ವಿದ್ಯಾಚೇತನ ಪ್ರಕಾಶನ ಸಂಚಾಲಕ ಹ.ಮ.ಪೂಜಾರ ಪ್ರಾಸ್ತಾವಿಕ ಮಾತನಾಡಿದರು. ಸಾಹಿತಿ ಶಿಕ್ಷಕ ಎಸ್.ಎಸ್.ಸಾತಿಹಾಳ ಕವಿ ಪರಿಚಯ ನೆರವೇಸಿರಿದರು.
ಈ ವೇಳೆ ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗಸAಸ್ಥೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಜಿ.ಪಿ.ಪೋರವಾಲ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಎಂ.ಎಚ್.ಲೋಣಿ, ಚೆನ್ನವೀರಸ್ವಾಮೀಜಿ ಪ್ರೌಢಶಾಲೆಯ ವಿಶ್ರಾಂತ ಮುಖ್ಯಗುರು ಜಿ.ಜಿ.ಬಿರಾದಾರ ಅವರಿಗೆ ಶ್ರೀಮಠದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿ ಉಪನ್ಯಾಸಕಿ, ಡಾ.ಸುಧಾರಾಣಿ ಮಣೂರ ರಚಿಸಿದ ಪ.ಗು.ಸಿದ್ದಾಪುರ ಅವರ ಜೀವನ ಮತ್ತು ಸಾಹಿತ್ಯ ಸಂಶೋಧನಾ ಮಹಾಪ್ರಬಂಧವನ್ನು ಸಮ್ಮುಖ ವಹಿಸಿದ ಶ್ರೀಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಲೋಕಾರ್ಪಣೆ ಮಾಡಿದರು.
ಇದೇ ಸಂದರ್ಭದಲ್ಲಿ ಡಾ.ಎಂ.ಎA.ಪಡಶೆಟ್ಟಿ, ಶಿವಪ್ಪ ಗವಸಾನಿ, ಹೆಚ್.ಟಿ.ಕುಲಕರ್ಣಿ, ಎ.ಆರ್.ಹೆಗ್ಗಣದೊಡ್ಡಿ, ಎಂ.ಎಸ್.ಹೈಯಾಳಕರ, ವಿ.ಡಿ.ವಸ್ತ್ರದ, ಶಕುಂತಲಾ ಹಿರೇಮಠ, ಡಾ.ಶರಣಬಸವ ಜೋಗುರ, ಪೂಜಾ ಹಿರೇಮಠ, ರಾಚು ಕೊಪ್ಪ, ಜಿ.ಎಸ್.ಭೂಸಗೊಂಡ, ವಿಶ್ವಾನಾಥ ಜೋಗುರ, ಬಿ.ಎಸ್.ಹಣಮಶೆಟ್ಟಿ, ಬಸಯ್ಯ ಹಿರೇಮಠ, ಗವಿಸಿದ್ದಪ್ಪ ಆನೆಗುಂದಿ, ಡಿ.ಎಂ.ಪಾಟೀಲ, ರಾಜಶೇಖರ ಪೂಜಾರ, ಅಶೋಕ ಅಲ್ಲಾಪುರ, ಬಸಮ್ಮ ಧರಿ, ವಿರೇಶ ಜೋಗುರ, ಶಿವಕುಮಾರ ಜೋಗುರ, ಶ್ರೀದೇವಿ ದುದ್ದಗಿ ಸೇರಿದಂತೆ ಶ್ರೀಮಠ ಭಕ್ತರು, ಸಾಹಿತ್ಯಾಸಕ್ತರು ಹಾಗೂ ವಿದ್ಯಾರ್ಥಿಗಳು ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಯೋಜನೆ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯವಿವಾಹ ಪಿಡುಗು ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್
ವಿಜಯಪುರ: ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಅನಿಷ್ಟ ಪಿಡುಗುಗಳ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ಪೋಷಕರು ಹಾಗೂ ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಸಂಘ-ಸAಸ್ಥೆಗಳು ಕೈಜೋಡಿಸಿ, ಈ ನಿಟ್ಟಿನಲ್ಲಿ ಎಲ್ಲರೂ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಸೂಕ್ತ ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಉತ್ತಮ ಗುಣಮಟ್ಟದ ಆರೋಗ್ಯ, ಶಿಕ್ಷಣ ಮಕ್ಕಳ ಮೂಲಭೂತ ಹಕ್ಕಾಗಿದ್ದು, ಇದನ್ನು ಉತ್ತಮಪಡಿಸುವುದರಿಂದ ಸುಭದ್ರ ಸಮಾಜದ ನಿರ್ಮಾಣಕ್ಕೆ ಅಡಿಪಾಯವಾಗುವುದು. ಬಾಲ ಕಾರ್ಮಿಕ ಹಾಗೂ ಬಾಲ್ಯ ವಿವಾಹ ಅನಿಷ್ಟ ಪದ್ಥತಿ ಮುಕ್ತ ಜಿಲ್ಲೆಯನ್ನಾಗಿಸಲು ಹಾಗೂ ಈ ಪಿಡಗುಗಳ ನಿರ್ಮೂಲನೆಗೊಳಿಸಲು ಕಟಿಬದ್ಧರಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಬಾಲಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಸಂಬAಧಿಸಿದ ಎಲ್ಲಾ ಇಲಾಖೆಗಳು ಶ್ರಮಿಸುತ್ತಿವೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ. ಮಕ್ಕಳ ಸಹಾಯವಾಣಿ-1098 ಕರೆ ಮಾಡಿ ಮಾಹಿತಿ ನೀಡಿದಲ್ಲಿ ಮಕ್ಕಳ ರಕ್ಷಣೆಯ ಕಾರ್ಯ ಮಾಡಲಾಗುವುದೆಂದು ಅವರು ತಿಳಿಸಿದರು. ಈ ದಿನ ದೇಶಾದ್ಯಂತ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನಾಗಿ ಆಚರಿಸಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವೂ ಸೇರಿದಂತೆ ಮಕ್ಕಳ ರಕ್ಷಣೆಯ ಹಿತ ಕಾಯುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಟಾನಗೊಳಿಸಲಾಗುತ್ತಿದೆ. ಯೋಜನೆಗಳ ಸದುಪಯೋಗಪಡೆದುಕೊಂಡು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಮೂಲಕ ಅವರ ಜೀವನ ಹಾಗೂ ಭವಿಷ್ಯ ಸುಂದರಗೊಳಿಸುವ ಮಹತ್ತರ ಹೊಣೆ ಪಾಲಕರ ಮೇಲಿದೆ ಎಂದು ಹೇಳಿದರು.
ಐತಿಹಾಸಿಕ ಹಿನ್ನೆಲೆ ಇರುವ ನಮ್ಮ ಹೆಮ್ಮೆಯ ಜಿಲ್ಲೆಯಲ್ಲಿ ಸಂಪೂರ್ಣ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ನಮ್ಮೆಲ್ಲರ ಜವಾಬ್ದಾರಿ ಇನ್ನೂ ಹೆಚ್ಚಾಗಿದೆ. ಎಲ್ಲ ಮಕ್ಕಳನ್ನು ಶಾಲಾ ದಾಖಲಾತಿ ಮಾಡಿಸುವ ಮೂಲಕ ಶಾಲೆಯಿಂದ ಹೊರಗುಳಿಯುವ ಮಕ್ಕಳ ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಸಂಬAಧಿಸಿದ ಇಲಾಖೆಗಳು ನಿಗಾವಹಿಸಬೇಕು. ಶಾಲೆಬಿಟ್ಟ ಮಕ್ಕಳ ಸಮಗ್ರ ಮಾಹಿತಿ ಕ್ರೋಢಿಕರಿಸಬೇಕು. ಬಾಲ ಕಾರ್ಮಿಕರು ಕಂಡು ಬಂದಲ್ಲಿ ಸಂಬAಧಿಸಿದ ಇಲಾಖೆಗಳಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು. ಯಾವುದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮೊಟಕುಗೊಳಿಸಿದೇ, ವಿದ್ಯಾಭ್ಯಾಸವನ್ನು ಮುಂದುವರೆಸುವ ಮೂಲಕ ಉನ್ನತ ಶಿಕ್ಷಣ ಪಡೆದುಕೊಂಡು ಬದುಕನ್ನು ಸುಂದರಗೊಳಿಸಿಕೊAಡು, ಸಮಾಜಕ್ಕೆ ಹಾಗೂ ದೇಶಕ್ಕೆ ತಮ್ಮ ಕೊಡುಗೆ ನೀಡಬೇಕು. ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳ ಭವಿಷ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ತಮ್ಮ ನೆರೆಹೊರೆಯವರಿಗೂ ತಿಳುವಳಿಕೆ ನೀಡಬೇಕು. ಬಾಲ ಕಾರ್ಮಿಕ ಮಕ್ಕಳು ಕಂಡು ಬಂದಲ್ಲಿ ಮಾಹಿತಿ ನೀಡಿ, ಅವರ ರಕ್ಷಣೆ ಮಾಡಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಅವರು ಶಿಕ್ಷನ ಪಡೆದುಕೊಂಡು ಉತ್ತಮ ಜೀವನ ನಿರ್ವಹಿಸುವಂತಾಗಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆÀಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಅವರು ಮಾತನಾಡಿ, 1986ರಲ್ಲಿ ಬಾಲ ಕಾರ್ಮಿಕ ನಿಷೇಧ ಹಾಗೂ 2016ರಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ನಿಷೇಧ ಕಾಯ್ದೆಯೂ ಜಾರಿಗೆ ಬಂದಿದೆ. ಬಾಲ ಕಾರ್ಮಿಕ ಪದ್ಧತಿ ಹೋಗಲಾಡಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ. ಬಾಲ ಕಾರ್ಮಿಕರು ಕಂಡು ಬಂದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕಾಗಲಿ, ಸಂಬAಧಿಸಿದ ಇಲಾಖೆಗಳಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಶಂಕರ ಮಾರಿಹಾಳ ಅವರು ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯಕವಾಗಿದೆ. ಮಕ್ಕಳಿಗೆ ಗುಣಮಟ್ಟದÀ ಶಿಕ್ಷಣ ಒದಗಿಸಬೇಕು. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದAತೆ ನೋಡಿಕೊಳ್ಳುವ ಬಹು ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಉಮಾಶ್ರೀ ಎಸ್.ಕೋಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ಮನಸ್ಸು ಬಹಳ ಸೂಕ್ಷö್ಮವಾದದ್ದು, ಅವರ ಬಾಲ್ಯವನ್ನು ಉತ್ತವiವಾಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬಾಲಕಾರ್ಮಿಕ ಮಕ್ಕಳನ್ನು ತೊಡಗಿಸಿಕೊಂಡಿರುವ ಮಾಲೀಕರ ವಿರುದ್ಧ ಈಗಾಗಲೇ ಬಹಳಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ 11 ಇಲಾಖೆಗಳ ಅಧಿಕಾರಿಗಳನ್ನು ನಿರೀಕ್ಷಕರನ್ನಾಗಿ ನೇಮಕ ಮಾಡಿದ್ದು, ಈ ಅಧಿಕಾರಿಗಳ ತಂಡ ಯೋಜಿತವಾಗಿ ಹಾಗೂ ಅನಿರೀಕ್ಷಿತವಾಗಿ ದಾಳಿ ಮಾಡುವ ಮೂಲಕ ಮಕ್ಕಳನ್ನು ರಕ್ಷಣೆ ಮಾಡಿ, ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸುತ್ತದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆÀಯಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೋಸಾಯಿಟಿ ವತಿಯಿಂದ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 26 ಪ್ರಕರಣಗಳನ್ನು ದಾಖಲಿಸಲಾಗಿದೆ. ಮಾಲೀಕರಿಗೆ ಜಾಗೃತಿ ಸಹ ಮೂಡಿಸಲಾಗುತ್ತಿದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರ ಹಾಗೂ ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಫಾದರ್ ಕೆವಿನ್ ಸೆಕ್ವೆರಾ ಅವರು, ಸಮಗ್ರ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯವೂ ಆಗಿದೆ. ಬಾಲಕಾರ್ಮಿಕ ಪದ್ದತಿಯ ಪಿಡುಗು ಮಕ್ಕಳ ತಮ್ಮ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಕಸಿದುಕೊಳ್ಳುತ್ತಿದ್ದು, ಬಾಲಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಸಂಘ-ಸAಸ್ಥೆಗಳು, ಸಾರ್ವಜನಿಕರ ಸಹಕಾರದ ಅಗತ್ಯತೆಯ ಕುರಿತು ಹೇಳಿದರು.
ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರಾದ ಕೆ. ಕೆ ಚವ್ಹಾಣ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಟಿ.ಎಸ್.ಕೋಲಾರ, ಜಿಲ್ಲಾ ಶಸ್ತç ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ದೀಪಾಕ್ಷಿ ಜಾನಕಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಬಸಮ್ಮ ಹತ್ತರಕಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಮಾಣ ವಚನ ಬೋಧಿಸಿದರು.
ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನದ ಅಂಗವಾಗಿ ಜಾಗೃತಿ ಜಾಥಾಗೆ ಚಾಲನೆ : ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಾಥಾಕ್ಕೆ ಹಸಿರು ನಿಶಾನೆ ತೋರುವ ಮೂಲಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಹರೀಶ ಎ. ಅವರು ಚಾಲನೆ ನೀಡಿದರು. ಜಾಥಾವು ಗಾಂಧಿ ಚೌಕ್‌ದಿಂದ ವಿವಿಧ ಮಾರ್ಗಗಳಲ್ಲಿ ಸಂಚರಿಸಿ, ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಸಮಾವೇಶಗೊಂಡಿತು. ವಿವಿಧ ಘೋಷ ವಾಕ್ಯ ಹೇಳಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆÀಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಅಪರ ಜಿಲ್ಲಾಧಿಕಾರಿಗಳು ಸೋಮಲಿಂಗ ಗೆಣ್ಣೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಕೆ ಹೊಸಮನಿ, ಶಾಲೆಯ ಪ್ರಾಂಶುಪಾಲರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


.jpeg)