Friday, June 27, 2025

ಮಹಿಳಾ ವಿವಿ: ನೂತನ ಹಂಗಾಮಿ ಕುಲಪತಿಯಾಗಿ ಪ್ರೊ.ಮಲ್ಲಿಕಾರ್ಜುನ ಎನ್‌.ಎಲ್. ನೇಮಕ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನೂತನ ಹಂಗಾಮಿ ಕುಲಪತಿಯಾಗಿ ನೇಮಕವಾಗಿರುವ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರು, ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಚಿತ್ರದಲ್ಲಿ ಪ್ರೊ.ಶಾಂತಾದೇವಿ ಟಿ ಮತ್ತು ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ ಇದ್ದಾರೆ.

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆ ನಿಕಾಯದ ಡೀನ್ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯೂ ಆಗಿರುವ ಶ್ರೀ.ಥಾವರಚಂದ ಗೆಹಲೋಟ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಹಂಗಾಮಿ ಕುಲಪತಿಯಾಗಿದ್ದ ಪ್ರೊ..ಶಾಂತಾದೇವಿ ಟಿ ಅವರ ಡೀನ್ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ- 2000ನ ಸೆಕ್ಷನ್ 16 (2) ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರನ್ನು ನೇಮಕ ಮಾಡಲಾಗಿದೆ. ಇವರ ಅಧಿಕಾರ ಅವಧಿ 27-6-2025ರ ಮಧ್ಯಾಹ್ನದಿಂದ 30-06-2025ರ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಧಿಕಾರ ಹಸ್ತಾಂತರ: ರಾಜ್ಯಪಾಲರ ಆದೇಶದಂತೆ ನೂತನ ಹಂಗಾಮಿ ಕುಲಪತಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಇಂದು ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪ್ರೊ..ಶಾಂತಾದೇವಿ ಟಿ ಮತ್ತು ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು ಎಂದು ವಿವಿ ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ರಾಜ್ಯದ ರೈತರ ಸುಭಿಕ್ಷೆಗಾಗಿ ತಿರುಪತಿ ಬಾಲಾಜಿಗೆ ಸಚಿವ ಶಿವಾನಂದ ವಿಶೇಷ ಪೂಜೆ

ವಿಜಯಪುರ : ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ಅವರು ರಾಜ್ಯದಲ್ಲಿ ಸುಭಿಕ್ಷೆಗಾಗಿ ಸಮೃದ್ಧ ಮಳೆ-ಬೆಳೆ, ರೈತರಿಗೆ ಸಂತೃಪ್ತ ಜೀವನ ಕರುಣಿಸುವಂತೆ ತಿರುಪತಿಗೆ ತೆರಳಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕುಟುಂಬ ಸಮೇತರಾಗಿ ತಿರುಪತಿಗೆ ತೆರಳಿ ತಿರುಮಲ ತಿಮ್ಮಪ್ಪ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದು, ನಾಡಿನ ಅನ್ನದಾತರು ಸಂತೃಪ್ತ ಜೀವನ ನಡೆಸುವಂತೆ ಕರುಣಿಸುವಂತೆ ಬಾಲಾಜಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಕುಟುಂಬದ ಸದಸ್ಯರಾದ ಪತ್ನಿ ಭಾಗ್ಯಶ್ರೀ, ಮಕ್ಕಳಾದ ಸಂಯುಕ್ತ, ಸಂಪ್ರದಾ, ಸತ್ಯಜಿತ್‌, ಶ್ರೇಯಸ್, ಅಳಿಯ ಶಿವಕುಮಾರ ತಾಳಂಪಳ್ಳಿ ಇವರ ಜೊತೆ ತೆರಳಿ ಸಚಿವರು ತಿರುಪತಿ ಬಾಲಾಜಿ ದರ್ಶನ ಪಡೆದರು.