ವಿಜಯಪುರ : ದೌರ್ಜನ್ಯ ಪ್ರಕರಣಗಳಲ್ಲಿ ಸಕಾಲದಲ್ಲಿ ತ್ವರಿತ ಪರಿಹಾರ ಒದಗಿಸಿಕೊಡಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಪಂಚಾಯತಿಯ ಮುಖ್ಯಕಾರ್ಯ ನಿರ್ವಣಾಧಿಕಾರಿಗಳಾದ ರಿಷಿ ಆನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಈ ಸೂಚನೆ ನೀಡಿದರು.
ಅರ್ಹ ಫಲಾನುಭವಿಗಳು ಪಹಣಿ ಪತ್ರ ಪಡೆಯಲು ಸಮಾಜ ಕಲ್ಯಾಣ ಇಲಾಖೆಯಿಂದ ಭೂ ಒಡೆತನ ಯೋಜನೆಯಡಿಯ ಫಲಾನುಭವಿಗಳ ಪಟ್ಟಿಯನ್ನು ಸಿದ್ದಪಡಿಸಿ, ತಹಶೀಲ್ದಾರರಿಗೆ ಸಲ್ಲಿಸಿ, ಪಹಣಿಪತ್ರ ಸಿದ್ದಪಡಿಸಲು ಸಹಕರಿಸಬೇಕು ಎಂದು ಅವರು ಹೇಳಿದರು.
ಡಾ. ಬಿ.ಆರ್.ಅಂಬೇಡ್ಕರ ವೃತ್ತ ನಿರ್ಮಾಣಕ್ಕೆ ಸ್ಥಳಾವಕಾಶ ಕುರಿತು ಸದಸ್ಯರಾದ ಯಮನಪ್ಪ ಸಿದರಡ್ಡಿ ಅವರು ಮಾಡಿದ ಮನವಿ ಆಲಿಸಿದ ಅವರು, ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸಿದರು.
ಪ್ರತಿ ಸಭೆಗೂ ಮುನ್ನ ಸಭೆಯ ಕುರಿತು ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ, ಉಸ್ತುವಾರಿ ಸಮಿತಿಯ ಸದಸ್ಯರಿಗೆ ಒದಗಿಸುವಂತೆ ಹಾಗೂ ಸಣ್ಣ ಪುಟ್ಟ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಭೇಟಿ ನೀಡಿ ಪ್ರಕರಣ ಕುರಿತು ಮಾಹಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳುವಂತೆ ಅವರು ಸಭೆಗೆ ತಿಳಿಸಿದರು.
ಪರಿಶಿಷ್ಟ ಜಾತಿ ಕಾಲೋನಿಯಲ್ಲಿರುವ ಚರಂಡಿಗಳನ್ನು ಕಾಲಕಾಲಕ್ಕೆ ಸ್ವಚ್ಚಗೊಳಿಸಿ, ಶುಚಿತ್ವ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಭೂ ಒಡೆತನ ಯೋಜನೆಯಡಿ ಖರೀದಿಯಾದ ಜಮೀನುಗಳಿಗೆ ಆರ್‍ಟಿಸಿ ಹಾಗೂ ಪಹಣಿ ಬದಲಾವಣೆ ಅರ್ಹ ಫಲಾನುಭವಿಗಳಿಗೆ ತೊಂದರ ತಪ್ಪಿಸಿ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಕ್ರೂಢೀಕರಿಸಿಕೊಂಡು ಅರ್ಹ ಫಲಾನುಭವಿಗಳಿಗೆ ಅನುಕೂಲವಾಗಲು ಕ್ರಮವಹಿಸುವಂತೆ ಅವರು ಸೂಚಿಸಿದರು.
ಭೂ ಒಡೆತನ ಯೋಜನೆಯಡಿ ಇಲ್ಲಿಯವರೆಗೆ ಸ್ವೀಕರಿಸಿದ ಅರ್ಜಿ ಹಾಗೂ ಇತ್ಯರ್ಥಗೊಳಿಸಿದ್ದ ಕುರಿತ ಪಟ್ಟಿ ನೀಡುವಂತೆ ಸಂಬಂಧಿಸಿದ್ದ ಅಧಿಕಾರಿಗಳಿಗೆ ಸೂಚಿಸಿದ ಅವರು ಸಮಾಜ ಕಲ್ಯಾಣ ಇಲಾಖೆಯು ಪ್ರಗತಿಯ ಕುರಿತು ಆಗಾಗ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಬೇಕು ಎಂದು ಹೇಳಿದರು.
ಈಗಾಗಲೇ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳು ಶೀಘ್ರವಾಗಿ ಇತ್ಯರ್ಥಗೊಳಿಸುವಂತೆಯೂ,ಸ್ಮಶಾನದ ಜಾಗ ಒತ್ತುವರಿ,ಮಹರ್ಷಿ ವಾಲ್ಮಿಕಿ ಸಮುದಾಯ ಭವನ ನಿರ್ಮಾಣ ಸೇರಿದಂತೆ ಸಮಿತಿ ಸದಸ್ಯರ ಮನವಿಗೆ ಸ್ಪಂದಿಸಿ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಸಮಿತಿ ಸದಸ್ಯರಾದ ಅಭಿಷೇಕ ಚಕ್ರವರ್ತಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಜಾತಿ ನಿಂದನೆ, ದೌರ್ಜನ್ಯ ನಿಂದನೆ ಪ್ರಕರಣಗಳು ದಾಖಲಾಗದಂತೆ ಸೂಕ್ತ ಜಾಗೃತಿ ಮೂಡಿಸಬೇಕು. ಈಗಾಗಲೇ ದಾಖಲಾಗಿರುವ ಪ್ರಕರಣಗಳು ಶೀಘ್ರವಾಗಿ ಇತ್ಯರ್ಥಗೊಳಿಸುವಂತೆ ಸಭೆಯಲ್ಲಿ ಅವರು ಮನವಿ ಮಾಡಿದರು.
ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಮಾತನಾಡಿ, ಪ್ರತಿ ತಿಂಗಳು ಜಿಲ್ಲೆಯ ಎಲ್ಲ ಪೆÇಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಕುಂದು ಕೊರತೆ ದೌರ್ಜನ್ಯ ಪರಿಹಾರ ಕುರಿತು ಸಭೆಗಳನ್ನು ಏರ್ಪಡಿಸಲಾಗುತ್ತಿದೆ. ಯಾವುದೇ ಸಮಸ್ಯೆಗಳಿದ್ದಲ್ಲಿ ಇಲಾಖೆಯ ವತಿಯಿಂದ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಸಹಾಯ ಸಹಕಾರ ನೀಡುವುದಾಗಿ ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಉಪವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ, ಹೇಮಲತಾ ವಸ್ತ್ರದ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲೀಕ ಮಾನವರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ರಾಜಶೇಖರ ಚೌರ, ನಾನು ಸೋಮಲು ಲಮಾಣಿ, ಮಹಾಂತೇಶÀ ಧರ್ಮಣ್ಣ ಸಾಸಬಾಳ, ಬಂದಗಿ ಸಿದ್ದಪ್ಪ ಗಸ್ತಿ, ಮದನಕುಮಾರ ನಾಗರದಿನ್ನಿ, ರವಿಕಾಂತ ಬಿರಾದಾರ, ಯಮನಪ್ಪ ಸಿದರಡ್ಡಿ, ಸಿದ್ದು ರಾಯಣ್ಣವರ, ಮಲ್ಲು ತಳವಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


