Wednesday, July 9, 2025

ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕರಿಸಿದರು.

ವಿಜಯಪುರ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ 2016ರ ಬ್ಯಾಚ್ನ ಐಎಎಸ್ ಅಧಿಕಾರಿ ಡಾ.ಆನಂದ ಕೆ ಅವರು ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಜುಲೈ 09ರಂದು ಅಧಿಕಾರ ಸ್ವೀಕರಿಸಿದರು.

 ವಿಜಯಪುರ ನಿರ್ಗಮಿತ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಬರ ಮಾಡಿಕೊಂಡು, ಹೂಗುಚ್ಛ ನೀಡಿ ಸ್ವಾಗತಿಸಿ, ಬುಧವಾರ ಅಧಿಕಾರ ಹಸ್ತಾಂತರಿಸಿದರು.

 ಜನರಲ್ ಮೆಡಿಸಿನ್ ವಿಭಾಗದಲ್ಲಿ ಎಂಬಿಬಿಎಸ್ ಹಾಗೂ ಎಂಡಿ ವೈದ್ಯಕೀಯ ಪದವಿ ಪಡೆದಿರುವ ಇವರು, ಕಳೆದ 2 ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದ ಡಾ.ಆನಂದ ಕೆ ಅವರು ವಿಜಯಪುರ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆಯಾಗಿದ್ದಾರೆ.

 ಈ ಹಿಂದೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ, ಗದಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ತದನಂತರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪ ಕಾರ್ಯದರ್ಶಿಗಳಾಗಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಅಧಿಕಾರಿಗಳಾಗಿ ಹಾಗೂ ಜಿಲ್ಲೆಯ ಇಂಡಿ ಉಪ ವಿಭಾಗಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.