Thursday, July 17, 2025

ಜಿಲ್ಲಾ ಪತ್ರಕರ್ತರ ಪ್ರಶಸ್ತಿಗೆ ವಿನೋದ ಎಂ.ಸಾರವಾಡ ಆಯ್ಕೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನೀಡ ಲಾಗುವ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ರಣರಂಗ ದಿನ ಪತ್ರಿಕೆಯ ಸಂಪಾದಕರಾದ ವಿನೋದ ಎಂ.ಸಾರವಾಡ ಆಯ್ಕೆ ಯಾಗಿದ್ದಾರೆ ಎಂದು ಕಾನಿಪ ವಿಜಯಪುರ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ. ಜುಲೈ 19 ಶನಿವಾರ ವಿಜಯಪುರದ ಕಂದಗಲ್ ಹಣಮಂತರಾಯ ರಂಗಮಂದಿ ಕರ್ತರ ವಾರ್ಷಿಕ ಪ್ರಶಸ್ತಿಯನ್ನು ರದಲ್ಲಿ ನಡೆಯಲಿರುವ ಪತ್ರಿಕಾ ವಿನೋದ ಎಂ.ಸಾರವಾಡ ಅವರಿಗೆ ದಿನಾಚರಣೆ ಸಮಾರಂಭದಲ್ಲಿ ಪತ್ರ ನೀಡಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಏಷ್ಯಾನೆಟ್ ಸುವರ್ಣ ನ್ಯೂಸ್ ಕ್ಯಾಮರಾಮೆನ್ ಅಪ್ಪು ಚಿನಗುಂಡಿಗೆ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ..!

ವಿಜಯಪುರ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾ‌ಮಟ್ಟದಲ್ಲಿ ನೀಡಲಾಗುವ ಉತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನ ವಿಜಯಪುರ ಏಷ್ಯಾನೆಟ್ ಸುವರ್ಣ ನ್ಯೂಸ್ ಕ್ಯಾಮರಾಮೆನ್ ಅಪ್ಪಾಸಾಹೇಬ್ ಚಿನಗುಂಡಿಗೆ ಅವರಿಗೆ ನೀಡಲಾಗ್ತಿದೆ. ಕಳೆದ 14 ವರ್ಷಗಳಿಂದ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸುತ್ತಿರುವ ಅಪ್ಪಾಸಾಹೇಬ್ ಚಿನಗುಂಡಿಯವರು ಮಾಡಿರುವ ಸ್ಟಿಂಗ್ ಆಫರೇಶನ್ ಗಳು ರಾಜ್ಯಮಟ್ಟದಲ್ಲಿ ಸದ್ದು ಮಾಡಿವೆ‌. ಅದ್ಭುತ ಛಾಯಾಗ್ರಹಣ, ಸೂಕ್ಷ್ಮ ಸಂವೇದನೆಯ ದೃಶ್ಯಗಳನ್ನು ಸೆರೆಹಿಡಿಯುವುದರಲ್ಲಿ ನಿಪುಣರಾಗಿದ್ದಾರೆ. ಕಸ್ತೂರಿ ನ್ಯುಸ್ 24, ಪ್ರಜಾ ಟಿವಿ, ಸಧ್ಯ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಜಿಲ್ಲಾ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಸ್ತೂರಿ ನ್ಯುಸ್ 24 ನಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಹುಬ್ಬಳ್ಳಿಯಲ್ಲಿ ನಡೆದಿದ್ದ ಕಳಸಾ ಬಂಡೂರಿಗಾಗಿ ಚಿತ್ರರಂಗದಿಂದ ನಡೆದ ಹೋರಾಟದ ವೇಳೆ ಉತ್ತಮ ಕವರೇಜ್ ಗಾಗಿ ಸಂಸ್ಥೆಯಿಂದ ಪ್ರಶಂಸೆ ಪಡೆದಿದ್ದರು. ಗದಗ ಜಿಲ್ಲೆಯಲ್ಲಿ ವಿಶೇಷ ಸ್ಟೋರಿಗಳಿಗಾಗಿ ಅದ್ಭತ ದೃಶ್ಯಗಳನ್ನ ಸೆರೆಹಿಡಿದಿದ್ದರು. ಇನ್ನು ಮಹಾರಾಷ್ಟ್ರದ ರೆಡ್‌ಲೈಟ್ ಏರಿಯಾಗಳಲ್ಲಿ ನಡೆಯುತ್ತಿದ್ದ ಕನ್ನಡದ ಹೆಣ್ಣು ಗೋಳಾಟದ ಕುರಿತು ರಹಸ್ಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಮನಕಲಕುವ ಎಕ್ಸಕ್ಲೂಜಿವ್ ದೃಶ್ಯಗಳನ್ನ ಸೆರೆಹಿಡಿದು ಭೇಷ್ ಎನಿಸಿಕೊಡಿದ್ದರು. ಇನ್ನೂ ಕಳೆದ 4 ವರ್ಷಗಳಿಂದ ಏಷ್ಯಾನೆಟ್ ಸುವರ್ಣ ನ್ಯೂಸ್ ನಲ್ಲಿ‌ ವಿಜಯಪುರ ಜಿಲ್ಲಾ ಕ್ಯಾಮರಾಮೆನ್ ಆಗಿ ಸೇವೆ ಸಲ್ಲಿಸ್ತಿರೋ ಅಪ್ಪಾಸಾಹೇಬ್ ಅವರು ಅನೇಕ ವಿಶೇಷ ತನಿಖಾ ವರದಿಗಳಲ್ಲಿ ತಮ್ಮ ಕ್ಯಾಮರಾ ಕೈಚಳಕ ತೋರಿಸಿರೋದು ಗಮನಾರ್ಹವಾಗಿದೆ. ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಇವರ ಈ ಸೇವೆಯನ್ನ ಪರಿಗಣಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ ನೀಡಿ ಗೌರವಿಸಲಾಗ್ತಿದೆ. ದಿನಾಂಕ 19 ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯುತ್ತಿರುವ ಪತ್ರಿಕಾದಿನಾಚರಣೆಯಲ್ಲಿ ಸಚಿವ ಎಂ ಬಿ ಪಾಟೀಲ್, ಸಚಿವ ಶಿವಾನಂದ ಪಾಟೀಲ್, ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವ್ಹಿ ಪ್ರಭಾಕರ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಧ್ಯಕ್ಷರಾದ ಶಿವಾನಂದ ತಗಡೂರ್ ಅವರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

18-07-2025 EE DIVASA KANNADA DAILY NEWS PAPER

ಜು. 19 ರಂದು ಪತ್ರಿಕಾ ದಿನಾಚರಣೆ : ಪ್ರಕಾಶ ಬೆಣ್ಣೂರ

ವಿಜಯಪುರ: ಜಿಲ್ಲೆಯ ಹಿರಿಯ ಪತ್ರಕರ್ತರರಿಗೆ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪತ್ರಿಕಾ ದಿನಾಚರಣೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭವನ್ನು ಜು.19 ರಂದು ಶನಿವಾರ ಬೆಳಿಗ್ಗೆ 10 ಕೈ ವಿಜಯಪುರ ನಗರದ ಕಂದಗಲ ಹನುಮಂತರಾಯ ರಂಗಮAದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಬೆಣ್ಣೂರ ಹೇಳಿದರು.

ನಗರದಲ್ಲಿ ಜಿಲ್ಲಾಪಂಚಾಯತ ರಸ್ತೆಯ ಪತ್ರಿಕಾ ಭವನದಲ್ಲಿ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.

ಪತ್ರಿಕಾ ದಿನಾಚರಣೆ ಮತ್ತು ಜಿಲ್ಲೆಯ ಹಿರಿಯ ಪತ್ರಕರ್ತರರಿಗೆ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭವನ್ನು ಜು.19 ರಂದು ಶನಿವಾರ ಬೆಳಿಗ್ಗೆ 10 ಕೈ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಪತ್ರಕರ್ತರು ಹಾಗೂ ಸಂಘದ ಎಲ್ಲ ಸರ್ವ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ. ಹಾವೇರಿ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಸಂಸದ ರಮೇಶ ಜಿಗಜಿಣಗಿ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ್), ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವ್ಹಿ. ಪ್ರಭಾಕರ, ಕೆ ಯು ಡಬ್ಲ್ಯೂ ಜೆ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ ಲೋಕೇಶ, ಉಪಾಧ್ಯಕ್ಷ ಪುಂಡಲೀಕ ಬಾಳೊಜಿ, ಭವಾನಿ ಸಿಂಗ ಠಾಕೂರ ಭಾಗವಹಿಸಲಿದ್ದಾರೆ.

ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪುರಸ್ಕೃತರು :

ಸರೋಜಿನಿ ಕುಲಕರ್ಣಿ (ಕನ್ನಡ ಕೋಗಿಲೆ), ಪರಶುರಾಮ ಶಿವಶರಣ (ಹೊಸದಿಗಂತ), ನವೀದ ಅಂಜುಮ್ ಮಮದಾಪುರ, (ಸಂಯುಕ್ತ ಕರ್ನಾಟಕ), ವಿನೋದ್ ಸಾರವಾಡ (ರಣರಂಗ), ಶರಣಬಸಪ್ಪ ಮಸಳಿ (ಕರುನಾಡು ಪ್ರಭ), ಅಪ್ಪು ಚಿನಗುಂಡಿ (ಸುವರ್ಣ ಟಿವಿ ವಾಹಿನಿಯ ಕ್ಯಾಮೆರಾ ಮ್ಯಾನ), ಗುರಪ್ಪ ಲೋಕುರಿ (ವಿಜಯವಾಣಿ), ಸಿಂದಗಿಯ ಮಲ್ಲಿಕಾರ್ಜುನ ಅಲ್ಲಾಪುರ (ವಿಶ್ವವಾಣಿ), ಬಸವನಬಾಗೇವಾಡಿಯ ಮಂಜು ಕಲಾಲ (ವಿಶ್ವವಾಣಿ), ಕೊಲ್ಹಾರದ ಮಲ್ಲಿಕಾರ್ಜುನ ಕುಬಕಡ್ಡಿ (ಕನ್ನಡ ಪ್ರಭ), ನಿಡಗುಂದಿಯ ಬಸಲಿಂಗಯ್ಯ ಮಠಪತಿ (ಹೊಸದಿಗಂತ), ಇಂಡಿಯ ಬೀರಪ್ಪ ಹೊಸೂರ (ರವಿವಾಣಿ), ಅಲಮೇಲದ ಗುರು ಹಿರೇಮಠ (ವಿಜಯ ಕರ್ನಾಟಕ), ತಿಕೋಟಾದ ಲಕ್ಷಿö್ಮÃ ಹಿರೇಮಠ (ಸಂಯುಕ್ತ ಕರ್ನಾಟಕ), ದೇವರಹಿಪ್ಪರಗಿಯ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ (ಕನ್ನಡಪ್ರಭ), ಚಡಚಣದ ಶಿವಯ್ಯ ಮಠÀಪತಿ (ಉದಯವಾಣಿ), ಮುದ್ದೇಬಿಹಾಳದ ನೂರ್‌ನಬಿ ನದಾಫ (ಗುಮ್ಮಟ ನಗರಿ), ತಾಳಿಕೋಟೆಯ ಶಿವಾನಂದ್ ಸಜ್ಜನ (ವಿಜಯ ಕರ್ನಾಟಕ).

ಇದೇ ಸಂದರ್ಭ ಹಿರಿಯ ಪತ್ರಕರ್ತ ಗೋಪಾಲ ನಾಯಕ ಉಪನ್ಯಾಸ ನೀಡಲಿದ್ದಾರೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಧಿಕಾರಿ ರಿಷಿ ಆನಂದ, ಡಿವೈಎಸ್ಪಿ ಬಸವರಾಜ ಯಲಿಗಾರ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು.

ಸಭೆಯಲ್ಲಿ ಕೆ ಯು ಡಬ್ಲ್ಯೂ ಜೆ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷ ಇಂದುಶೇಖರ್ ಮಣ್ಣೂರ, ರಾಷ್ಟ್ರೀಯಮಂಡಳಿಯ ಮಹೇಶ ಶೆಟ್ಟಿಗಾರ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಡಿ.ಬಿ.ವಡವಡಗಿ, ನಾಮನಿರ್ದೇಶನ ಸದಸ್ಯರಾದ ಕೌಶಲ್ಯ ಪನಾಳಕರ, ಕೆ.ಕೆ. ಕುಲಕರ್ಣಿ, ಖಜಾಂಜಿ ರಾಹುಲ್ ಆಪ್ಟೆ, ಅಶೋಕ ಯಡಹಳ್ಳಿ, ಗುರು ಗದ್ದನಕೇರಿ, ಬಸವರಾಜ ಉಳ್ಳಾಗಡ್ಡಿ, ಇರ್ಫಾನ್ ಶೇಖ, ಶಶಿಕಾಂತ ಮೇಂಡೆಗಾರ, ಶರಣು ಮಸಳಿ, ಗುರು ಲೋಕೂರಿ, ಮಲ್ಲು ಕೆಂಭಾವಿ, ನಾಗೇಶ್ ನಾಗೂರ, ಮಹ್ಮದ ಸಮೀರ ಇನಾಮದಾರ ಹಾಗೂ ತಾಲೂಕು ಪದಾಧಿಕಾರಿಗಳು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಪತ್ರಕರ್ತರ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ಪರಶುರಾಮ ಶಿವಶರಣ ಆಯ್ಕೆ

ವಿಜಯಪುರ: ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಸಾಹಿತಿ ಪರಶುರಾಮ ಶಿವಶರಣ ಭಾಜನರಾಗಿದ್ದಾರೆ.

ಪರಶುರಾಮ ಶಿವಶರಣ ಅವರು ರಾಜ್ಯ ಮಟ್ಟದ ಕನ್ನಡ ದಿನ ಪತ್ರಿಕೆ ಹೊಸ ದಿಗಂತದ ವಿಜಯಪುರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ತಾವು ತೊಡಗಿಸಿಕೊಂಡು, ನಿರ್ಭಿತಿಯಾಗಿ ಜನಮುಖಿ, ಸಮಾಜಮುಖಿ ವರದಿಗಳನ್ನು ಮಾಡುತ್ತ ಖ್ಯಾತಿ ಪಡೆದವರು.

ಪರಶುರಾಮ ಶಿವಶರಣ ಅವರು ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವುದರ ಜೊತೆಗೆ ಸಾಹಿತಿಗಳು ಆಗಿದ್ದಾರೆ. ಈಗಾಗಲೇ ಹಲವು ಕೃತಿಗಳನ್ನು ಹೊರ ತಂದಿದ್ದು, 

ಜೀವಪೀಠ, ನೀಲಿ ಮಿಂಚು ಕವನ ಸಂಕಲನ, ರಾಣಿ ಬಗೀಚ್ ಕಥಾ ಸಂಕಲನ ಹಾಗೂ ವಾರ ನೋಟ ಅಂಕಣ ಸಂಕಲನಗಳನ್ನು ಹೊರ ತಂದಿದ್ದಾರೆ. ಇವರ ಕೃತಿಗಳು ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟವಾಗಿವೆ. ಅದರಂತೆ ಶಿವಶರಣ ಅವರ ವಿರಚಿತ ‘ಜೀವ ಪೀಠ’ ಕೃತಿಗೆ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ ‘ಅರಳು ಪ್ರತಿಭೆ’ ಪ್ರಶಸ್ತಿ ದೊರೆತಿದೆ.

ವಿವಿಧ ಸಂಘ, ಸಂಸ್ಥೆಗಳು ಕೊಡಮಾಡುವ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಜು. 19 ರಂದು ನಗರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಹಿರಿಯ ಪತ್ರಕರ್ತ ಪರಶುರಾಮ ಶಿವಶರಣ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ನೋಂ) ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡ ಪತ್ರಕರ್ತರ ದಿನಾಚರಣೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ - ಜಿಲ್ಲಾಧಿಕಾರಿ ಡಾ.ಆನಂದ.ಕೆ

ವಿಜಯಪುರ : ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬAಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಸೂಚಿಸಿದರು.

 ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ, ಕೌಟುಂಬಿ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006 ಹಾಗೂ ಪೋಕ್ಸೋ ಕಾಯ್ದೆಯ ಪರಿಶೀಲನಾ ಸಭೆಯ ಅಧ್ಯಕತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮರ್ಪಕ ಜಾರಿ ಒಳಗೊಂಡAತೆ ಮಹಿಳಾ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದ ಮತ್ತು ಸಂಕಷ್ಟಕೊಳಗಾಗಿರುವ ಮಹಿಳೆಯರಿಗೆ ಕೌನ್ಸೆಲಿಂಗ್ ಹಾಗೂ ಅಗತ್ಯ ಕಾನೂನು ನೆರವು ಒದಗಿಸುವಂತೆ ಅವರು ಸೂಚನೆ ನೀಡಿದರು.

 ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಸಂಬAಧಿಸಿದ ಇಲಾಖೆಗಳು ನಿರಂತರ ಸಭೆ, ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಏರ್ಪಡಿಸುವ ಮೂಲಕ ಸೂಕ್ತ ಕಾನೂನು ಅರಿವು ಮತ್ತು ತಿಳುವಳಿಕೆ ಮೂಡಿಸಬೇಕು. ಈ ವಿಷಯದಲ್ಲಿ ತುಂಬಾ ಗಂಭೀರತೆಯಿAದ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು.

 ಬಾಲ್ಯವಿವಾಹ ತಡೆಗಟ್ಟುವಲ್ಲಿ ಆಶಾ-ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಆಡಳಿತಗಳ ಪಾತ್ರ ಬಹುಮುಖ್ಯವಾಗಿದ್ದು, ಸಮನ್ವಯವಾಗಿ ಕಾರ್ಯನಿರ್ವಹಿಸಿ, ಬಾಲ್ಯವಿವಾಹ ನಡೆಯುವ ಮುನ್ನವೇ ಪತ್ತೆ ಹಚ್ಚಿ ತಪ್ಪಿತಸ್ಥರ ಸಂಬAಧಿಸಿದ ಪೋಷಕರು, ಬಾಲ್ಯವಿವಾಹವನ್ನು ಪ್ರೋತ್ಸಾಹಿಸುವವರ ವಿರುದ್ದ ವಿಳಂಬ ಮಾಡದೇ ಪ್ರಕರಣ ದಾಖಲಿಸಬೇಕು ಎಂದು ಅವರು ಸೂಚಿಸಿದರು.

 ಬಾಲ್ಯವಿವಾಹ ಅದೊಂದು ಅಪರಾಧ. ಸಾರ್ವಜನಿಕರಿಗೆ ಸೂಕ್ತ ಕಾನೂನಿನ ಅರಿವು ನೀಡುವುದರ ಜೊತೆಗೆ ಬಾಲ್ಯವಿವಾಹ ನಡೆಯುವುದು ಕಂಡುಬAದಲ್ಲಿ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳುವುದರ ಮೂಲಕ ಮಕ್ಕಳ ಭವ್ಯ ಭವಿಷ್ಯ ಹಾಳಾಗದಂತೆ ಸಂಬAಧಿಸಿದ ಇಲಾಖಾ ಅಧಿಕಾರಿಗಳು ಮುಂಜಾಗ್ರತೆವಹಿಸಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

 ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಫ್ ಕೇಂದ್ರಗಳಲ್ಲಿ ಪೋಕ್ಸೋ, ಬಾಲ್ಯವಿವಾಹ, ಮಹಿಳಾ ದೌರ್ಜನ್ಯ, ಕಿರುಕುಳ ಸೇರಿದಂತೆ ವಿವಿಧ ದೌರ್ಜನ್ಯಕೊಳಗಾದವರನ್ನು ಕೌನ್ಸೆಲಿಂಗ್ ಪ್ರಕ್ರಿಯೆಗೆ ಒಳಪಡಿಸಿ, ಅವರ ಮನೋಸ್ಥೆöÊರ್ಯ ಹೆಚ್ಚಿಸಬೇಕು. ಈ ಕೇಂದ್ರಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು.ವೈದ್ಯರು, ಪೊಲೀಸ್ ಇಲಾಖೆ ಸಹಕಾರ ಒದಗಿಸಬೇಕು. ಸಂಬAಧಿಸಿದ ಸಂತ್ರಸ್ತರ ಕುರಿತ ವಸ್ತುಸ್ಥಿತಿ ಆಗಾಗ ವರದಿ ಮಾಡಬೇಕು ಹೇಳಿದರು.

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗು ತೊಲಗಿಸಲು ಸಾರ್ವಜನಿಕರಿಗೆ ಜಾಗೃತಿ ಅವಶ್ಯವಾಗಿದ್ದು, ಈ ಬಗ್ಗೆ ನಿರಂತರ ಶಿಬಿರ, ಸಭೆ ನಡೆಸಬೇಕು. ಪ್ರಕರಣ ನಡೆದ ಸಂದರ್ಭದಲ್ಲಿ ಮಾಹಿತಿ ಒದಗಿಸಿದರೆ ಪೊಲೀಸ್ ಇಲಾಖೆಯಿಂದ ಈ ನಿಟ್ಟಿನಲ್ಲಿ ಶೀಘ್ರ ಕ್ರಮ ವಹಿಸಲಾಗುವುದು. ಸಂಬAಧಿಸಿದ ಇಲಾಖೆಗಳು ವಾಟ್ಸಾಫ್ ಗ್ರೂಪ್ ರಚಿಸಿಕೊಂಡು ಸಮರ್ಪಕ ಮಾಹಿತಿಯನ್ನು ವಿನಿಮಯ ಮಾಡಬೇಕು ಎಂದು ಅವರು ಹೇಳಿದರು.

 ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ವಿಜಯ ಆಜೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಶಸ್ತçಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.