Tuesday, July 22, 2025

ವಿಡಿಸಿಸಿ ಬ್ಯಾಂಕ್ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ವಿಜಯಪುರ : ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೌಕರರ ಗಜಾನನ ಉತ್ಸವ ಮಂಡಳಿಯಿಂದ ಗಣೇಶ ಚತುರ್ಥಿ ಅಂಗವಾಗಿ ಕ್ರೀಡಾಕೂಟ ಆಯೋಜಿಸಲಾಗಿತ್ತು.

ನಗರದ ರೂಪಾದೇವಿ ಶಾಲಾ ಪರಿಸರದ ಬಳಿ ಹಮ್ಮಿಕೊಂಡಿದ್ದ ಕ್ರೀಡಾಕೂಟಕ್ಕೆ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಗುಡದಿನ್ನಿ ಚಾಲನೆ ನೀಡಿದರೆ, ನಿರ್ದೇಶಕರಾದ ಜಿ.ಬಿ. ನಿಡೋಣಿ ಕ್ರಿಕೆಟ್ ಕ್ರೀಡೆಗೆ ಟಾಸ್ ಮಾಡಿದರು.

ನಿರ್ದೇಶಕರಾದ ಹನುಮಂತ್ರಾಯಗೌಡ ಪಾಟೀಲ ಪುಷ್ಪ ಗುಚ್ಚಗಳನ್ನು ನೀಡುವ ಮೂಲಕ ಕ್ರೀಡಾಪಟುಗಳಿಗೆ ಶುಭಕೋರಿದರು.

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್.ಎ.ಢವಳಗಿ ಅವರು ಕ್ರೀಡಾ ಸಾಮಗ್ರಿ ಬಿಡುಗಡೆ ಮಾಡಿದರು.

ಬ್ಯಾಂಕ್ ಅಧಿಕಾರಿಗಳಾದ ಸತೀಶ ಡಿ. ಪಾಟೀಲ, ಪಿ.ವೈ.ಡೆಂಗಿ, ಎಂ.ಜಿ.ಬಿರಾದಾರ, ಎಂ.ಎಚ್.ಹಟ್ಟಿ, ಎಂ.ಎಸ್.ದೇಸಾಯಿ, ಎಸ್.ಬಿ.ಹೊಸಮನಿ, ಬಿ.ಎಸ್.ಪಾಟೀಲ, ಐ.ಎಸ್.ಸಂಖ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಆರ್.ಪಿ. ಪವಾರ ಸ್ವಾಗತಿಸಿದರೆ, ಸಂತೋಷ ಮಾನಕರ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಗಣೇಶ ಹಬ್ಬ : ಪರಿಸರ ಸ್ನೇಹಿ ಗಣಪತಿ ವಿಗ್ರಹಗಳ ಪ್ರತಿಷ್ಠಾಪನೆ ಕುರಿತು ಜುಲೈ 25ರಂದು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸಭೆ

 ವಿಜಯಪುರ  : ಜಿಲ್ಲೆಯಲ್ಲಿ ಆಗಸ್ಟ್ ಮಾಹೆಯಲ್ಲಿ ಆಚರಿಸಲಾಗುವ ಗೌರಿ ಗಣೇಶ ಚತುರ್ಥಿ ಉತ್ಸವದಲ್ಲಿ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಹಾಗೂ ಬಡಾವಣೆಗಳಲ್ಲಿ ಜೇಡಿ-ಇತರೆ ಮಣ್ಣಿನಿಂದ ತಯಾರಿಸಲಾದ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವುದು ಹಾಗೂ ವಿಗ್ರಹಗಳನ್ನು ಪಾಲಿಕೆಯಿಂದ ನಿರ್ಮಿಸಲಾದ ಕೃತಕ ಹೊಂಡಗಳು, ಸಂಚಾರಿ ಗಣೇಶ ವಿಸರ್ಜನಾ ವಾಹನಗಳಲ್ಲಿ ವಿಸರ್ಜಿಸುವ ಕುರಿತು ದಿನಾಂಕ : 25-07-2025 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಸಭಾಭವನದಲ್ಲಿ ಮಹಾನಗರ ಪಾಲಿಕೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿದೆ. 

 ಈ ಸಭೆಗೆ ಸಾರ್ವಜನಿಕರು, ಪ್ರತಿನಿಧಿಗಳು, ಗಣೇಶ ಮಹಾಮಂಡಳಿ ಮತ್ತು ಮಂಡಳಗಳ ಅಧ್ಯಕ್ಷರು, ಪದಾಧಿಕಾರಿಗಳು, ಗಣೇಶ ವಿಗ್ರಹ ಮಾರಾಟಗಾರರು ಹಾಗೂ ಸಂಘ-ಸAಸ್ಥೆಗಳು ಭಾಗವಹಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.