ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ: ರೈತ ಮುಖಂಡ, ಹೋರಾಟಗಾರ ಕಾಂ. ದಿ.ಭೀಮಶಿ ಕಲಾದಗಿ ಅವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ನೆನಪು ಕಾರ್ಯಕ್ರಮ ಜುಲೈ 28 ರಂದು ಬೆಳಿಗ್ಗೆ 11ಕ್ಕೆ ಇಂಡಿ ತಾಲ್ಲೂಕಿನ ಹಂಜಗಿ ಗ್ರಾಮದ ತೋಟದ ವಸ್ತಿಯಲ್ಲಿ ನಡೆಯಲಿದೆ. ಸಚಿವ ಶಿವಾನಂದ ಪಾಟೀಲ ಅವರು ಕಲಾದಗಿ ಅವರ ಪುತ್ಥಳಿಯನ್ನು ಅನಾವರಣ ಮಾಡಲಿದ್ದಾರೆ. ಕಾರ್ಮಿಕ ಮುಖಂಡ ವಿ.ಜಿ.ಕೆ.ನಾಯರ್, ಹಿರಿಯ ಹೋರಾಟಗಾರರಾದ ಅಣ್ಣಾರಾಯ ಈಳಗೇರ, ವಕೀಲ ಶ್ರೀಧರ ಕುಲಕರ್ಣಿ, ರೈತ ಮುಖಂಡ ಪಂಚಪ್ಪ ಕಲಬುರ್ಗಿ, ಮಲ್ಲಿಕಾರ್ಜುನ ಯಂಡಿಗೇರಿ, ರಿಯಾಜ್ ಫಾರೂಕಿ, ಡಿ.ಜಿ.ಬಿರಾದಾರ, ಸೋಮನಾಥ ಕಳ್ಳಿಮನಿ, ಮುಖಂಡ ಬಿ.ಡಿ.ಪಾಟೀಲ ಸೇರಿದಂತೆ ಅಪಾರ ಅಭಿಮಾನಿಗಳು ಸೇರಿದಂತೆ ಮತ್ತಿತರರು ಅಪಾಲ್ಗೊಳ್ಳುವರು ಎಂದು ಭೀಮಶಿ ಅವರ ಸುಪುತ್ರ ಸುರೇಶ ಕಲಾದಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
