Tuesday, July 29, 2025

10 ಸಾವಿರ ಲಂಚ ಪಡೆಯುತ್ತಿದ್ದ ಗ್ರಾಪಂ ನೌಕರ ಲೋಕಾ ಬಲೆಗೆ


ಈ ದಿವಸ ವಾರ್ತೆ

ವಿಜಯಪುರ: 10 ಸಾವಿರ ರೂ.ಗಳ ಲಂಚ ಪಡೆಯುತ್ತಿದ್ದ ಗ್ರಾಪಂ ದ್ವಿತೀಯ ದರ್ಜೆ ಸಹಾಯಕನೊಬ್ಬ ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ನಡೆದಿದೆ.

ಇಲ್ಲಿನ ದ್ವಿತೀಯ ದರ್ಜೆಯ ಸಹಾಯಕ ಮಲ್ಲಪ್ಪ ಸಾಬು ಹೊಸಕೇರಿ ಲೋಕಾ ಬಲೆಗೆ ಬಿದ್ದ ಆರೋಪಿ.

ಮಲ್ಲಪ್ಪ ಹೊಸಕೇರಿ ಈತ ಮುಳವಾಡ ಕೆಐಎಡಿಬಿ ವಸಾಹತು ಪ್ರದೇಶದ ನಿವೇಶನದ ಇ- ಸ್ವತ್ತು ಉತಾರೆ ನೀಡಲು 10,000 ರೂ.ಗಳ ಬೇಡಿಕೆ ಇಟ್ಟಿದ್ದ, ಈ ಕುರಿತು ಫಿರ್ಯಾದಿದಾರರು ದೂರು ನೀಡಿದ ಹಿನ್ನೆಲೆ, ಆರೋಪಿ ಮಲ್ಲಪ್ಪ ಹೊಸಕೇರಿ 10 ಸಾವಿರ ರೂ. ಲಂಚ ಪಡೆಯುವಾಗ, ಲೋಕಾ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸಪೆಕ್ಟರ್ ಆನಂದ ಟಕ್ಕನ್ನವರ್, ಆನಂದ ಡೋಣಿ ಹಾಗೂ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ನಡೆಸಿದೆ.

ವಿಜಯಪುರ ಜಿಲ್ಲೆಗೆ 371 ಜೆ ಮೀಸಲಾತಿ ಕಲ್ಪಿಸುವಂತೆ ಬೃಹತ್ ಹೋರಾಟ : ಮಲ್ಲಿಕಾರ್ಜುನ ಕೆಂಗನಾಳ

ವಿಜಯಪುರ : ದಿನಾಂಕ: 31-07-2025, ಬೆಳಿಗ್ಗೆ 10.00 ಗಂಟೆಗೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಸಂವಿಧಾನದ ಕಲಂ 371 ಜೆ ಅಡಿ ವಿಶೇಷ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ಸುಳ್ಳು ಭರವಸೆಗಳನ್ನು ನೀಡಿ ಜಿಲ್ಲೆಯ ಜನರ ಮುಗ್ದತೆಯನ್ನು ರಾಜಕೀಯವಾಗಿ ದುರುಪಯೋಗ ಮಾಡಿಕೊಳ್ಳುತ್ತಿರುವ ರಾಜಕೀಯ ಪಕ್ಷಗಳ ನಡೆಯನ್ನು ಖಂಡಿಸಿ ಜಿಲ್ಲೆಯ ಮಕ್ಕಳು ಹಾಗೂ ಯುವಕರಿಗೆ ನ್ಯಾಯ ದೊರಕಿಸಿಕೊಡಲು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಳೆದ 10 ವರ್ಷಗಳಿಂದ ಜಿಲ್ಲೆಗೆ ಸಾಕಷ್ಟು ಅನ್ಯಾಯವಾಗಿದೆ.

 371 ಜೆ ವಿಶೇಷ ಸ್ಥಾನ ಮಾನ ಪಡೆಯಲು ಎಲ್ಲ ಅರ್ಹತೆ ಹೊಂದಿರುವ ವಿಜಯಪುರ ಜಿಲ್ಲೆಯನ್ನು ಕೈಬಿಟ್ಟಿದ್ದರಿಂದ ಜಿಲ್ಲೆಯು ಅಭಿವೃದ್ಧಿ ವಂಚಿತವಾಗಿದೆ. ಬಿಟ್ಟು ಹೋದ ಪ್ರದೇಶವಾದ ವಿಜಯಪುರ ಜಿಲ್ಲೆಗೆ ಮೀಸಲಾತಿ ಪಡೆಯಲು ಜಿಲ್ಲೆಯ ಜನರು, ಸಂಘ, ಸಂಸ್ಥೆಯವರು, ಪ್ರಜ್ಞಾವಂತ ನಾಗರಿಕರು ನಮ್ಮ ಹೋರಾಟಕ್ಕೆ ಬೆಂಬಲಿಸಬೇಕು. ಮುಖ್ಯವಾಗಿ ಯುವ ಜನಾಂಗ ಹೋರಾಟದಲ್ಲಿ ಭಾಗವಹಿಸಿ ನಮ್ಮ ಪಾಲಿನ ಹಕ್ಕನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.