Wednesday, July 30, 2025

ಸಚಿವರ ಸ್ಪಂದನೆಗೆ ಸಂತ್ರಸ್ತರು ಖುಷ್ ಪು.ಕೇ. ನಿವಾಸಿಗಳ ಸಮಸ್ಯೆ ಆಲಿಸಿದ ಸಚಿವ ಶಿವಾನಂದ


ನಿಡಗುಂದಿ (ವಿಜಯಪುರ) : ಕೃಷ್ಣಾ ಮೇಲ್ದಂಡೆ ಯೋಜನಾ ಬಾಧಿತರಾದ ನಮ್ಮ ಎಲ್ಲ ಸಮಸ್ಯೆಗಳಿಗೆ ಶಾಸ್ವತ ಹಾಗೂ ಸಂತೃಪ್ತ ಪರಿಹಾರ ಕಂಡುಕೊಟ್ಟಿದ್ದೀರಿ. ಯೋಜನಾ ನಿರಾಶ್ರಿತರ ಬಗ್ಗೆ ನಿಮಗಿರುವ ಕಾಳಜಿಗೆ ನಾವು ಕೃತಜ್ಞರಾಗಿದ್ದೇವೆ ಎಂದು ಸಚಿವ ಶಿವಾನಂದ ಪಾಟೀಲ ಅವರ ಸ್ಪಂದನೆಗೆ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಕೇಂದ್ರದ ನಿರಾಶ್ರಿತರು ಕೃತಜ್ಞತಾ ಭಾವ ವ್ಯಕ್ತಪಡಿಸಿದ ಘಟನೆ ಜರುಗಿತು.

ನಿಡಗುಂದಿ ತಾಲೂಕ ಕೇಂದ್ರಕ್ಕೆ ಹೊಂದಿಕೊಂಡಿರುವ ಕಮದಾಳ ಪುನರ್ವಸತಿ ಕೇಂದ್ರದ ಶಾಲಾ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳಿದ್ದ ಸಚಿವರು, ಅನಿರೀಕ್ಷಿತವಾಗಿ ಸಂತ್ರಸ್ತರ ಅಹವಾಲು ಆಲಿಸಲು ಮುಂದಾದರು. 

ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಆಲಮಟ್ಟಿಯ ಲಾಲ ಬಹಾದ್ದೂರ ಶಾಸ್ತ್ರೀ ಜಲಾಶಯದ ಹಿನ್ನೀರಿಗೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹೊಲ-ಮನೆ, ಕೃಷಿ ಅವಲಂಬಿತ ಎಲ್ಲ ಬದುಕನ್ನು ಕಳೆದುಕೊಂಡ ನಮ್ಮನ್ನು ನಿಮ್ಮ ಮಡಿಲಿಗೆ ತಂದು ಹಾಕಿದ್ದಾರೆ. ನಿಡಗುಂದಿ ಭಾಗದ ಈ ಪುನರ್ವಸತಿ ಕೇಂದ್ರಕ್ಕೆ ಬಂದ ಮೇಲೆ ಕಷ್ಟದ ದಿನಗಳನ್ನು ಕಳೆಯುತ್ತಿದ್ದೆವು. ನೀವು ಆಯ್ಕೆಯಾಗಿ ಬಂದ ಮೇಲೆ ನಮ್ಮ ಸಮಸ್ಯೆಗಳಿಗೆ ಶಾಸ್ವತ ಪರಿಹಾರ ಕಂಡುಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೀರಿ ಎಂದು ಸಂತ್ರಸ್ತರು ಸಂತೃಪ್ತಿ ವ್ಯಕ್ತಪಡಿಸಿದರು.

ಇದ್ದಲ್ಲದೇ ಬೀಳಗಿ ಭಾಗದಲ್ಲಿ ಯೋಜನೆ ನಿರಾಶ್ರಿತರಾದ ನಮಗೆ ಕೃಷ್ಣಾ ಭಾಗ್ಯ ಜಲ ನಿಗದಮದ ಪುನರ್ವಸತಿ-ಪುನರ್ ನಿರ್ಮಾಣ ವಿಭಾಗದಿಂದ ಇನ್ನೂ ಹಲವರಿಗೆ ಕೆಲವು ಸೌಲಭ್ಯ ಸಿಗಬೇಕಿದೆ. ಕೂಡಲೇ ಈ ಸಮಸ್ಯೆಗೆ ಪರಿಹಾರ ಕಂಡುಕೊಡುವಂತೆ ಮನವಿ ಮಾಡಿದರು.

ಇದಲ್ಲದೇ ಎರಡು ದಶಕಗಳ ಬೇಡಿಕೆಯಾಗಿದ್ದ ಕುಡಿಯುವ ನೀರಿನ ಸಮಸ್ಯೆಗೆ ಬಗೆ ಹರಿದಿದ್ದರೂ, ವಾರಕ್ಕೊಮ್ಮೆ ನೀರು ಬರುತ್ತಿದ್ದು, ದಿನ ಬಿಟ್ಟು ದಿನ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ರಸ್ತೆಗೆ ಹರಿಯುವ ಕೊಳಚೆ ನೀರಿನ ಸಮಸ್ಯೆ ನೀಗಲು ಚರಂಡಿ ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.

ನಿಡಗುಂದಿ ಪಕ್ಕದಲ್ಲೇ ನಿರ್ಮಾಣಗೊಂಡಿರುವ ಕಮದಾಳ, ಮಣಗೂರು, ಚಿನಿವಾಲ, ನಿಂಗಾಪುರ, ಗುಂಡನಪಲ್ಯ ಸೇರಿದಂತೆ ಇತರೆ ಪುನರ್ವಸತಿ ಕೇಂದ್ರಗಳಲ್ಲಿನ ಯೋಜನಾ ನಿರಾಶ್ರಿತರು ತಮ್ಮ ಸಮಸ್ಯೆ ನಿವೇದಿಸಿಕೊಂಡರು.

ಕೂಡಲೇ ಕೃಷ್ಣಾ ಭಾಗ್ಯ ಜಲ ನಿಗಮದ ಪುವರ್ನಸತಿ-ಪುನರ್ ನಿರ್ಮಾಣದ ಆಯುಕ್ತರಾದ ಸುನೀಲಕುಮಾರ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಿ, ಬೀಳಗಿ ತಾಲೂಕಿಗೆ ಪ್ರಭಾರಿ ಅಧಿಕಾರಿಗೆ ಬದಲಾಗಿ ಶಾಸ್ವತವಾಗಿ ಪುನರ್ವಸತಿ ಅಧಿಕಾರಿಯನ್ನೇ ನೇಮಿಸಿ, ನಿರಾಶ್ರಿತರ ಸಮಸ್ಯೆ ಆಲಿಸಿ, ಪರಿಹಾರ ಕಂಡುಕೊಳ್ಳಲು ಅಧಿಕಾರಿಯನ್ನೇ ಸ್ಥಳಕ್ಕೆ ಕಳಿಸಿಕೊಡುವಂತೆ ಸಚಿವರು ಸೂಚಿಸಿದರು.

ಇದಲ್ಲದೇ ಪುನರ್ವಸತಿ ಕೇಂದ್ರಗಳಲ್ಲಿ ಚರಂಡಿ ನಿರ್ಮಾಣಕ್ಕೆ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಬೇಕು. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಗಮನ ಹರಿಸಬೇಕು ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ  ಪ್ರತಾಪ ಕೊಡಗೆ ಅವರಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಮಣಗೂರು ಪುನರ್ವಸತಿ ಕೇಂದ್ರದ ವಿನಾಯಕ ವಂದಾಲ, ಹನುಮಂತಗೌಡ ಪಾಟೀಲ, ಕಮದಾಳ ಪುನರ್ವಸತಿ ಕೇಂದ್ರದ ಬಸವರಾಜ ಮೇಟಿ, ಅಶೋಕ ಖಾನಾಪುರ,  ನಿಡಗುಂದಿ ಪ್ರಮುಖರಾದ ಸಿದ್ದಣ್ಣ ನಾಗಠಾಣ, ಸಂಗಮೇಶ ಬಳಿಗಾರ, ಲಕ್ಷ್ಮಣ ವಿಭೂತಿ, ಪುನರ್ವಸತಿ ಕೇಂದ್ರಗಳ ಪಟ್ಟಣ ಪಂಚಾಯತ್ ಸದಸ್ಯರಾದ ಕರಿಯಪ್ಪ, ರಾಜು, ಬಸವರಾಜ ಹಾಗೂ ವಿವಿಧ ಪುನರ್ವಸತಿ ಕೇಂದ್ರಗಳ ಯೋಜನಾ ನಿರಾಶ್ರಿತರು, ಪಂಚಾಯತ್ ರಾಜ್ ಇಂಜಿಯರಿಂಗ್‍ನ ಎಇಇ ವಿಲಾಸ ರಾಠೋಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸೊಂಬೆರಿ, ಕರ್ತವ್ಯ ಪ್ರಜ್ಞೆ ಮರೆತ ಭ್ರಷ್ಟ ಅಧಿಕಾರಿಗಳ ಮೇಲೆ ಕ್ರಮ ಕೈಕೊಳ್ಳಲು; ಜಯ ಕರ್ನಾಟಕ ಸೇನೆ ಆಗ್ರಹ

ವಿಜಯಪುರ : ಸೊಂಬೆರಿ, ಕರ್ತವ್ಯ ಪ್ರಜ್ಞೆ ಮರೆತ ಭ್ರಷ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವವಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಕೃಷ್ಣಾ ಭೋಸಲೆ ಮಾತನಾಡಿ, ಸಾರ್ವಜನಿಕರ ಕಚೇರಿಗಳನ್ನು ತಮ್ಮ ಅಪ್ಪನ ಮನೆಯಂತೆ ತಿಳಿದುಕೊಂಡಿರುವ ಸೊಂಬೆರಿ, ಕರ್ತವ್ಯ ಪ್ರಜ್ಞೆ ಮರೆತ ಭ್ರಷ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು. ರೈತರು, ಸಾರ್ವಜನಿಕರು, ದಲಿತರು, ಮಹಿಳೆಯರು, ಪುರುಷರು, ಹಿಂದುಳಿದವರು, ಪ್ರತಿಯೊಬ್ಬ ಫಲಾನುಭವಿಗಳು ತಮ್ಮ ತಮ್ಮ ಹಕ್ಕನ್ನು ಸಂವಿಧಾನ ಬದ್ಧ ಹಕ್ಕನ್ನು ಪಡೆದುಕೊಳ್ಳಲು ಸರ್ಕಾರಿ ಕಚೇರಿಗಳಿಗೆ ತೆರಳಿದರೆ ಅಲ್ಲಿನ ಅಧಿಕಾರಿಗಳ ಖುರ್ಚಿ ಖಾಲಿ ಇರುತ್ತದೆ. ಇಲ್ಲವಾದಲ್ಲಿ ಸಾರ್ವಜನಿಕರೊಂದಿಗೆ ಸರಿಯಾಗಿ ಸ್ಪಂದಿಸದೆ ಫೋನಿನಲ್ಲಿಯೇ ಮಾತನಾಡುತ್ತಾ ಫೋಜುಕೊಡುತ್ತಾ, ಮೀಟಿಂಗ್ ಇಟಿಂಗ್ ಎನ್ನುತ್ತಾ ಕಾಲ ಹರಣ ಮಾಡಿ ಸಾರ್ವಜನಿಕರ ತೆರಿಗೆಯಿಂದ ಸರ್ಕಾರದ ಸಂಬಳದ ಪಡೆಯುತ್ತಾರೆ. ಆದರೆ ರೈತರು, ಸಾರ್ವಜನಿಕರು ತಮ್ಮ ತಮ್ಮ ಕೆಲಸ ಮಾಡಿಕೊಡುವಂತೆ ಕಚೇರಿಗೆ ಪದೇ ಪದೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ದುರಂತ. ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಸರಿಯಾದ ಮಾಹಿತಿಯನ್ನು ಬಂದತಹ ಸಾರ್ವಜನಿಕರಿಗೆ ತಿಳಿ ಹೇಳದೆ ತಮ್ಮ ಕರ್ತವ್ಯ ಪ್ರಜ್ಞೆಯಿಂದ ಜಾರಿಗೊಳ್ಳುತ್ತಿದ್ದಾರೆ. 

ಸರ್ಕಾರಿ ಕಚೇರಿಗಳಲ್ಲಿ ಏಜಂಟರ್ ಹಾವಳಿಯೇ ಜಾಸ್ತಿಯಾಗಿದೆ. ತಿಂಗಳಿಗೆ ಒಂದು ಬಾರಿಯಾದರೂ ಸರ್ಕಾರಿ ಕಚೇರಿಗಳಿಗೆ ತಾವು ಅಧಿಕಾರಿಗಳಿಗೆ ಮಾಹಿತಿ ನೀಡದೆ ಖುದ್ದಾಗಿ ಕಚೇರಿಗೆ ತೆರಳಿ ಅಲ್ಲಿನ ವಾಸ್ತು ಪರಿಸ್ಥಿತಿಯನ್ನು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಗಳವೆ ಮಾತನಾಡಿ, ಸರ್ಕಾರಿ ಕಚೇರಿಗೆ ಸಾರ್ವಜನಿಕರು ಹೋದಾಗ ಅಧಿಕಾರಿಗಳ ವಿವರ ಗೊತ್ತಾಗುವುದಿಲ್ಲ. ಅವರ ಹೆಸರು ಅವರ ಹುದ್ದೆ ಗೊತ್ತಾಗುವುದಿಲ್ಲ. ಅವರ ಕಾರ್ಯಗಳ ವಿವರ ಸರ್ಕಾರದ ಪ್ರಕಾರ ಅವರು ಗುರುತಿನ ಚೀಟಿ ಹಾಕಿಕೊಳ್ಳುವಂತೆ ಖಡಕ್ ಆದೇಶ ಹೊರಡಿಸಬೇಕು. ಪ್ರತಿಯೊಂದು ಇಲಾಖೆಯ ಸೊಂಬೆರೆ ಕರ್ತವ್ಯ ಪ್ರಜ್ಞೆ ಮರೆತ ಭ್ರಷ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು. ಪ್ರತಿಯೊಂದು ಇಲಾಖೆಯ ಸಭೆಯನ್ನು ತಿಂಗಳಲ್ಲಿ ನಡೆಸಿ ಸಾರ್ವಜನಿಕರಿಂದ ಬಂದ ಪ್ರತ್ಯೇಕ ಅರ್ಜಿಗಳು ಹಾಗೂ ವಿಲೇವಾರಿಗಳ ಸಂಪೂರ್ಣ ವಿವರಗಳನ್ನು ತಿಳಿದುಕೊಂಡು ಪಾರದರ್ಶಕವಾಗಿ ಅದಕ್ಕೆ ಸ್ಪಂದಿಸಬೇಕು ಎಂದು ಜಯ ಕರ್ನಾಟಕ ರಕ್ಷಣಾ ಸೇನೆ ಒತ್ತಾಯಿಸುತ್ತದೆ ಎಂದರು.

ಈ ಸಂದರ್ಭ ರಾಜ್ಯ ಉಪಾಧ್ಯಕ್ಷೆ ಮಂಜುಳಾ ವಾಲಿ, ಜಿಲ್ಲಾಧ್ಯಕ್ಷ ವಾಣಿಶ್ರೀ ಪಟ್ಟಣಶೆಟ್ಟಿ, ಎಸ್ಸಿ ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಯಮನಪ್ಪ ಬೂದಿಹಾಳ, ಜಿಲ್ಲಾ ಮುಖಂಡರಾದ ರಾಜು ಕೋಟ್ಯಾಳ, ಸಕಾರಾಂ ಪವಾರ, ಮಾದೇವ ಢಗೆ, ರಾಜು ಬಿಸೆ, ಆನಂದ ಪೂಜಾರಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.