ವಿಜಯಪುರ: ಮುಂಗಾರು ಮಳೆ ಹಿನ್ನಲೆಯಲ್ಲಿ ಡೋಣಿ ನದಿ ತೀರದ ಪ್ರದೇಶದಲ್ಲಿನ ಕೃಷಿ ಭೂಮಿ ಪ್ರವಾಹಕ್ಕೊಳಗಾಗಿ ಅಂದಾಜು 5500 ಹೆಕ್ಟೇರ್ ಜಮೀನು ಮುಳುಗಡೆಯಾಗಿ ಬೆಳೆಗಳು ಹಾನಿಯಾಗಿದ್ದು, ಈ ಕುರಿತು ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಶೀಘ್ರದಲ್ಲೇ ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸಲಿದ್ದು, ವರದಿಯನುಸಾರ ಬೆಳೆ ನಷ್ಟವಾಗಿರುವ ರೈತರ ಖಾತೆಗೆ ನೇರವಾಗಿ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ತಿಳಿಸಿದರು.
ಡೋಣಿ ನದಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಶನಿವಾರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರೊಂದಿಗೆ ಜಂಟಿಯಾಗಿ ಜಿಲ್ಲೆಯ ಸಾರವಾಡ, ದದಾಮಟ್ಟಿ, ಉಕುಮನಾಳ ಹಾಗೂ ಎಂಬತ್ನಾಳ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿ ಮಾತನಾಡಿದರು.
ಡೋಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಈಗಾಗಲೇ ಸ್ಥಳೀಯ ರೈತರು ಕೆಲವು ಬೇಡಿಕೆಗಳನ್ನು ಸಲ್ಲಿಸಿದ್ದು, ಇವರ ಬೇಡಿಕೆಯನ್ವಯ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾಗುವ ಅನುದಾನ, ಸೂಕ್ತ ಯೋಜನೆ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು.
ಡೋಣಿ ನದಿಯ ಪ್ರವಾಹ ನಿಯಂತ್ರಣಕ್ಕಾಗಿ ಅಂದಾಜು 7.5 ಕೋಟಿ ರೂ.ಗಳ ವಿಪತ್ತು ನಿರ್ವಹನಾ ಉಪಶಮನ ನಿಧಿಯಡಿ ಈಗಾಗಲೇ ಪಂಚಾಯತ್ ರಾಜ್ ಇಂಜಿನೀಯರಿAಗ್ ವಿಭಾಗದಿಂದ ಸೇತುವೆ ಮುಂಭಾಗ ಹಾಗೂ ಹಿಂಭಾಗದಲ್ಲಿನ ಒಂದು ಕಿ.ಮೀ. ಅಂತರದಲ್ಲಿ ಹೂಳೂ ತೆಗೆಯುವುದು, ಗಿಡಗಂಟಿಗಳನ್ನು ತೆರವುಗೊಳಿಸುವುದು ಹಾಗೂ ಪಕ್ಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗದಂತೆ ಅರಣ್ಯೀಕರಣ ಕಾಮಗಾರಿ ಸೇರಿದಂತೆ ಪ್ರವಾಹ ನಿಯಂತ್ರಣಕ್ಕಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ನವೆಂಬರ್ ಅಂತ್ಯದಲ್ಲಿ ಹೂಳು ತೆಗೆಯುವುದು, sಸೇತುವೆ ಪಾತ್ರದಲ್ಲಿ ಅರಣ್ಯೀಕರಣ ಕಾಮಗಾರಿ ಸಹ ಆರಂಭವಾಗಲಿದ್ದು, ಡೋಣಿನದಿ ಪ್ರವಾಹ ನಿಯಂತ್ರಣ ಕಾಮಗಾರಿಗಳನ್ನು ಆದ್ಯತೆಯಾಗಿ ತೆಗೆದುಕೊಂಡು ಡೋಣಿ ನದಿಯಿಂದಾಗುವ ಸಮಸ್ಯೆಗಳನ್ನು ಅವಲೋಕಿಸಿ ಅದಕ್ಕೆ ಸಂಬAಧಿಸಿದ ಕಾಮಗಾರಿಗಳನ್ನು ಹಂತ ಹಂತವಾಗಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ,ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಹುಲ್ ಭಾವಿದೊಡ್ಡಿ,ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ ತಹಶಿಲ್ದಾರರಾದ ಶ್ರೀಮತಿ ಶಾಂತಲಾ ಚಂದನ, ರೈತರಾದ ಭೀಮಸೇನ, ಮಲ್ಲಿಕಾರ್ಜುನ ಭಟಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

