Monday, September 15, 2025
ಮತಗಳನ್ನು ಮಾರಿಕೊಳ್ಳದೆ ವಿವೇಚನೆಯಿಂದ ಚಲಾಯಿಸಬೇಕು : ಕುಲಸಚಿವ ಶಂಕರಗೌಡ ಸೋಮನಾಳ
ವಿಜಯಪುರ: ಪ್ರಜಾಪ್ರಭುತ್ವದ ಯಶಸ್ಸಿಗೆ ಮುಖ್ಯವಾಗಿ ಚುನಾವಣೆಗಳಲ್ಲಿ ಸಕಾರಾತ್ಮಕವಾಗಿ ಭಾಗವಹಿಸಬೇಕು ಹಾಗೂ ತಮ್ಮ ತಮ್ಮ ಮತಗಳನ್ನು ಹಣ ಮತ್ತು ಇತರೆ ಪ್ರಲೋಭನೆಗಳಿಗೆ ಮಾರಿಕೊಳ್ಳದೆ ವಿವೇಚನೆಯಿಂದ ಚಲಾಯಿಸಬೇಕು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಘಟಕದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಪರಿಕಲ್ಪನೆ, ಅದರ ಹುಟ್ಟು ಹಾಗೂ ವಿಶ್ವದ ಅನೇಕ ರಾಷ್ಟçಗಳಲ್ಲಿ ಅದು ಬೆಳೆದುಬಂದ ದಾರಿಗಳನ್ನು ವಿದ್ಯಾರ್ಥಿನಿಯರಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕದ ನಿರ್ದೇಶಕ ಪ್ರೊ.ಮಲ್ಲಿಕಾರ್ಜುನ.ಎನ್.ಎಲ್. ಅವರು, ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಯುವಜನಾಂಗಕ್ಕೆ ಸರಿಯಾದ ಮಾರ್ಗದರ್ಶನ ಅಗತ್ಯ. ಒಂದೊಮ್ಮೆ ಪ್ರಜಾಪ್ರಭುತ್ವ ಸಡಿಲಗೊಂಡರೆ ಅರಾಜಕತೆ ಉಂಟಾಗುವ ಅಪಾಯಗಳಿವೆ ಎಂದರು.
ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿನಿಯರಿಗಾಗಿ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ, ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಾಮಾನ್ಯ ಜ್ಞಾನದ ಕುರಿತು ರಸಪ್ರಸ್ನೆ ಸ್ಪರ್ಧೆಯನ್ನು ಕುಲಸಚಿವರು ನಡೆಸಿಕೊಟ್ಟರು. ರಸಪ್ರಶ್ನೆಯಲ್ಲಿ ವಿಜೇತ ವಿಧ್ಯಾರ್ಥಿನಿಯರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಸಂಜೀವಕುಮಾರ ಗಿರಿ ಪ್ರಾಧ್ಯಾಪಕರಾದ ಡಾ.ವೆಂಕೋಬಾ ನಾರಾಯಣಪ್ಪ, ಡಾ.ಬಾಬು ಆರ್.ಎಲ್, ಡಾ.ರಮೇಶ ಸೋನಕಾಂಬ್ಳೆ, ಡಾ.ಯಲ್ಲಪ್ಪ ಕೋಂಬಿನೋರ್ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಮಹತ್ವವಾಗಿದೆ: ವಿಠ್ಠಲ ಕಟಕಧೋಂಡ
ವಿಜಯಪುರ : ಸಂವಿಧಾನದ ಮುಂದೆ ದೇಶದ ಎಲ್ಲ ಪ್ರಜೆಗಳು ಸಮಾನರು ಎಂಬ ಸಮಾನತೆ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯಂತ ಮಹತ್ವದಾಗಿದೆ ಎಂದು ಶಾಸಕ ವಿಠ್ಠಲ ಧೋಂಡಿಬಾ ಕಟಕಧೋಂಡ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯರ ರಂಗಮAದಿರದಲ್ಲಿ ನಡೆದ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ನನ್ನ ಮತ ನನ್ನ ಹಕ್ಕು ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಜಗತ್ತಿನ ಅನೇಕ ದೇಶಗಳಲ್ಲಿ ಹಂತ ಹಂತವಾಗಿ ಸಂವಿಧಾನ ಜಾರಿಗೆ ಬಂದು ಅಲ್ಲಿನ ಜನತೆಗೆ ಸಮಾನತೆ ದೊರಕಲು ದೀರ್ಘ ಕಾಲ ಪಡೆಯಿತು. ಆದರೆ, ವಿವಿಧತೆಯಲ್ಲಿ ಏಕತೆವಿರುವ ಭಾರತ ದೇಶದಲ್ಲಿ ಪ್ರಜಾಪ್ರಭುತ್ವ ಆಧಾರದ ಸಂವಿಧಾನ ಜಾರಿಗೆ ಬಂದ ದಿನದಿಂದಲೇ ಪ್ರತಿಯೊಬ್ಬರಿಗೂ ಸಮಾನತೆ ದೊರೆತಿದೆ ಎಂದು ಅವರು ಹೇಳಿದರು.
ಸರ್ವರ ಏಳ್ಗೆಯ ಅಂಶಗಳನ್ನು ಹೊಂದಿರುವ ಪ್ರಜಾಪ್ರಭುತ್ವದ ಸಂವಿಧಾನದ ಆಶಯಗಳನ್ನು ಸಾರ್ವಜನಿಕರು ಅರಿತುಕೊಂಡು ತಮ್ಮ ಹಕ್ಕು ಪಡೆದುಕೊಳ್ಳುವುದರೊಂದಿಗೆ ದೇಶದ ಪರ ತಮ್ಮ ಕರ್ತವ್ಯಗಳನ್ನು ನಿಭಾಯಿಸಲು ಕಟಿಬದ್ಧವಾಗಿರಬೇಕು ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಮಾತನಾಡಿ, ಪ್ರಜಾಪ್ರಭುತ್ವದ ತತ್ವಗಳನ್ನು ಪ್ರತಿಯೊಬ್ಬ ನಾಗರಿಕರು ಅರಿತುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದೇಶದ ಸರ್ಕಾರ, ಕಾನೂನುಗಳು ಸಂವಿಧಾನದ ಚೌಕಟ್ಟಿನಲ್ಲಿ ನಿರ್ಮಾಣವಾಗುತ್ತವೆ. ಇಲ್ಲಿ ಎಲ್ಲರೂ ಸಮಾನ, ಎಲ್ಲರಿಗೂ ಸಮಾನ ಅವಕಾಶವನ್ನು ಕಲ್ಪಿಸಿಕೊಟ್ಟಿರುವ ನಮ್ಮ ಪ್ರಜಾಪ್ರಭುತ್ವದ ತತ್ವಗಳನ್ನು ಕೇವಲ ಒಂದೇ ದಿನಕ್ಕೆ ಸಿಮಿತಗೊಳಿಸಿದೆ ಪ್ರತಿದಿನವು ಚಾಚುತಪ್ಪದೆ ಪಾಲಿಸಬೇಕು ಎಂದು ಅವರು ಹೇಳಿದರು.
ಪ್ರಜಾಪ್ರಭುತ್ವದ ಎಲ್ಲ ತತ್ವಗಳನ್ನು ನಾಗರಿಕರು ಅರ್ಥ ಮಾಡಿಕೊಳ್ಳಬೇಕು ಮತದಾನ ಪ್ರಜಾತಂತ್ರದ ಒಂದು ಭಾಗ. ನಮ್ಮ ದೇಶದಲ್ಲಿ ಮತದಾನದ ಹಕ್ಕು ಸಂವಿಧಾನದ ಜಾರಿಯಾದ ಪ್ರಾರಂಭದಲ್ಲಿಯೇ ಎಲ್ಲರಿಗೂ ದಕ್ಕಿದೆ, ಬೇರೆ ದೇಶಗಳ ಸಂವಿಧಾನ ತಿಳಿದುಕೊಂಡಾಗ ಮತದಾನ ಹಕ್ಕಿನ ಮಹತ್ವ ತಿಳಿದುಕೊಳ್ಳಬುದಾಗಿದೆ ಎಂದು ಅವರು ಹೇಳಿದರು.
ಭಾರತವು ಅತ್ಯಂತ ಯಶಸ್ವಿನ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ದೇಶವಾಗಿದೆ. ಅನೇಕ ಗಣ್ಯರ ಪರಿಶ್ರಮದಿಂದ ರಚಿಸಿರುವ ಅಮೂಲ್ಯವಾದ ನಮ್ಮ ಸಂವಿಧಾನ ಪ್ರತಿಯೊಬ್ಬರಿಗೆ ಸಮಾನ ಅವಕಾಶ ನೀಡಿದ್ದು, ಅದರ ಆಶಯದಂತೆ ನಾವೆಲ್ಲರೂ ನಡೆದುಕೊಳ್ಳೋಣ ಎಂದು ಅವರು ಹೇಳಿದರು.
ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೊಸ್ಕರ ಇರುವ ಪ್ರಜಾಪ್ರಭುತ್ವದ ದಿನಾಚರಣೆಯ ಅಂಗವಾಗಿ ರಾಜ್ಯದ ಎಲ್ಲ ಜಿಲ್ಲೆಯಿಂದ ನಿನ್ನೆ ತೆರಳಿದ 10 ಬೈಕ್‌ಗಳ ರ‍್ಯಾಲಿಯು ಇಂದು ಬೆಂಗಳೂರಿನ ವಿಧಾನ ಸಭೆಯಲ್ಲಿ ನಡೆಯುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿವೆ. ಹಾಗೂ ಇಂದು ಬೆಳಿಗ್ಗೆ ಜಿಲ್ಲಾಮಟ್ಟದ ಆಯೋಜಿಸಿದ ಸೈಕಲ್ ರ‍್ಯಾಲಿಯೂ ಅತ್ಯಂತ ಯಶಸ್ವಿಯಾಗಿ ಜರುಗಿತು ಎಂದು ಹೇಳಿದ ಅವರು ಪ್ರಜಾಪ್ರಭುತ್ವದ ಅಂಗವಾಗಿ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಹಾಗೂ ಛಾಯಾಚಿತ್ರ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ ಈ ಸ್ಪರ್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಅವರು ಕರೆ ನೀಡಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪ ಸ್ಥಾಪಿಸಿ, ಸಮಾನತೆಯ ಸಂದೇಶವನ್ನು ಸಾರಿದರು. ಜಗತ್ತಿನಾದ್ಯಂತ ಪ್ರಖ್ಯಾತಿ ಪಡೆದಿರುವ ಅನುಭವ ಮಂಟಪ ನಮ್ಮ ಕರ್ನಾಟಕದಲ್ಲಿರುವುದು ನಮ್ಮ ಹೆಮ್ಮೆಯಾಗಿದೆ ಎಂದು ಅವರು ಹೇಳಿದರು.
ಪ್ರಜಾಪ್ರಭುತ್ವದಲ್ಲಿ ಸರ್ವೋಚ್ಚ ಅಧಿಕಾರಿ ಸಾರ್ವಜನಿಕರ ಕೈಯಲ್ಲಿರುತ್ತದೆ. ತಮ್ಮ ನಾಯಕರನ್ನು ಆಯ್ಕೆ ಮಾಡುವ ಸ್ವಾತಂತ್ರö ಸಾರ್ವಜನಿಕರಿಗೆ ಸಂವಿಧಾನ ನೀಡಿದೆ. ವಿಶ್ವದಲ್ಲಿ ಅತ್ಯಂತ ದೊಡ್ಡ ಸಂವಿಧಾನ ಎಂಬ ಹೆಗ್ಗಳಿಗೆ ಪಾತ್ರವಾಗಿರುವ ನಮ್ಮ ಸಂವಿಧಾನದ ಪರ ನಮ್ಮ ಜವಾಬ್ದಾರಿಯನ್ನು ನಾವೇಲ್ಲರೂ ಪಾಲಿಸಬೇಕು ಎಂದು ಅವರು ಹೇಳಿದರು.
ಡಾ.ಮಂಜುನಾಥ ಕೋರಿ ಅವರು ಉಪನ್ಯಾಸ ನೀಡಿ, ದೇಶದ ಪ್ರಜಾಪ್ರಭುತ್ವ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ಸಾರ್ವಭೌಮ, ಸ್ವಾತಂತ್ರ, ಕಾನೂನು ಪ್ರಭುತ್ವ, ಬಹುಮತ ತತ್ವ, ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ಅಂಶಗಳನ್ನು ಹೊಂದಿರುವ ಸಂವಿಧಾನದ ರಚನೆ ಮಾಡಿರುವ ಹಕ್ಕು ಮತ್ತು ಕರ್ತವ್ಯಗಳ ಸಮತೋಲನವನ್ನು ಸಂವಿಧಾನದಲ್ಲಿ ಸೇರಿಸುವುದರ ಮೂಲಕ ದೇಶದ ಪ್ರತಿ ಪ್ರಜೆಗೂ ದೇಶದ ಪರ ಕರ್ತವ್ಯಗಳನ್ನು ವಹಿಸಿದ್ದಾರೆ. ಎಲ್ಲರಿಗೂ ಹೊಂದಿಕೆಯಾಗುವAತಹ ಸಂವಿಧಾನವನ್ನು ರಚಿಸಿ, ಸಂವಿಧಾನಕ್ಕೆ ಮತದಾನ ಎಂಬ ಜೀವಾಳ ತುಂಬಿದ ಕೀರ್ತಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಮತದಾನವು ಸಮಾನತೆಯ ಆಧಾರದ ಮೇಲೆ ಸರ್ವರಿಗು ಸಲ್ಲಿದ ಅವಕಾಶ. ಮತದಾರರು ಸರ್ಕಾರದ ನಿರ್ಣಯದಲ್ಲಿ ಮಹತ್ವದ ಪಾತ್ರ ನಿರ್ವಹಿಸುವರು ಎಂದು ಅವರು ಹೇಳಿದರು. ಮತದಾರರು ಉತ್ತಮ ನಾಯಕರ ಆಯ್ಕೆ ಮಾಡವ ಜವಾಬ್ದಾರಿ ಹೊಂದಿರುತ್ತಾರೆ ಮತದಾರರ ಮತವು ಭಾರತದ ಉಜ್ವಲ ಭವಿಷ್ಯದ ನಿರ್ಣಯ ಮಾಡುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನೇಪಾಳದ ಪ್ರಧಾನಿಯಾಗಿ ಆಯ್ಕೆಯಾಗಿರುವ ಸುಶೀಲಾ ಕರ್ಕಿಯವರು ಭಾರತದ ಸಹಾಯದೊಂದಿಗೆ ಸಂಸತು ರಚಿಸುತ್ತೇವೆ ತಮ್ಮ ದೇಶದ ಹೊಸ ಸಂಸತಿಯ ಸರ್ಕಾರ ರಚಿಸುತ್ತೇವೆ ಎಂದು ಹೇಳಿದರುವುದು ನಮ್ಮ ಸಂವಿಧಾನದ ಹೆಮ್ಮೆಯಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಹಾಗೂ ಛಾಯಾಚಿತ್ರ ಸ್ಪರ್ಧೆಗಳ ಕರಪತ್ರ ಬಿಡುಗಡೆಗೊಳಿಸಲಾಯಿತು. ಸಂವಿದಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಸ್ವಾಗತಿಸಿದರು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಕೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ ನಿರೂಪಿಸಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಜೆ ಇಂಡಿ ವಂದಿಸಿದರು.
ಕಾರ್ಯಕ್ರಮದಲ್ಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮಣ್ಣಗೌಡ ಹಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ವೀರಯ್ಯ ಸಾಲಿಮಠ, ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕರಾದ ಅಶೋಕ ಗೋಣಸಗಿ, ಮುಖಂಡರುಗಳಾದ ವಿದ್ಯಾವತಿ ಅಂಕಲಗಿ, ಅಡಿವೆಪ್ಪ ಸಾಲಗಲ, ಸಿದ್ದು ರಾಯಣ್ಣವರ, ಅಭಿಷೇಕ ಚಕ್ರವರ್ತಿ, ಭೀಮರಾಯ ಜಿಗಜಿಣಗಿ, ಸಂತೋಷ ಶಹಾಪೂರ, ವಿನಾಯಕ ಗುಣಸಾಗರ, ಅಶೋಕ ಚಲವಾದಿ, ಚೆನ್ನು ಕಟ್ಟಿಮಣಿ, ಮಲ್ಲಿಕಾರ್ಜುನ ಬಟಗಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸೈಕಲ್ ಜಾಥಾ: ಅಂತರಾಷ್ಟಿçಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನನ್ನ ಮತ ನನ್ನ ಹಕ್ಕು ಜಾಗೃತಿ ಅಭಿಯಾನದ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಸೋಮವಾರ ಬೆಳಿಗ್ಗೆ ಆಯೋಜಿಸಿದ ಸೈಕಲ್ ಜಾಥಾಕ್ಕೆ ಮಹಾನಗರ ಪಾಲಿಕೆಯ ಮಹಾಪೌರರಾದ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ ಅವರು ಗೋಲಗುಂಬಜ್ ಆವರಣದಲ್ಲಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಗೋಲಗುಂಬಜ್ ಆವರಣದಿಂದ ಪ್ರಾರಂಭಗೊAಡ ಈ ಜಾಥಾವು ಕನಕದಾಸ ವೃತ್ತ, ಗಣಪತಿ ವೃತ್ತ, ಶ್ರೀ ಸಿದ್ದೇಶ್ವರ್ ದೇವಸ್ಥಾನ, ಗಾಂಧಿ ವೃತ್ತ, ಶಿವಾಜಿ ವೃತ್ತ, ಮೀನಾಕ್ಷಿ ವೃತ್ತ, ಕೇಂದ್ರ ಬಸ್ ನಿಲ್ದಾಣ, ಬಸವೇಶ್ವರ ವೃತ್ತದಿಂದ, ಅಂಬೇಡ್ಕರ್ ವೃತ್ತದವರೆಗೆ ಸಮಾವೇಶಗೊಂಡಿತ್ತು. ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಈ ಜಾಥಾದಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಸಿ.ಬಿ.ಕುಂಬಾರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಕೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಶಿಕ್ಷಕರು ಆದರ್ಶ ಸಮಾಜ ರೂಪಿಸುವ ಶಿಲ್ಪಿಗಳಾಗಿ ಸಚಿವ ಶಿವಾನಂದ ಪಾಟೀಲ ಕರೆ
ಗೊಳಸಂಗಿ : ಕೆಲವೇ ಕೆಲವು ಶಿಕ್ಷಕರಿಂದಾಗಿ ಶಿಕ್ಷಣ ಕ್ಷೇತ್ರಕ್ಕೆ ಕಳಂಕ ಬರುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಶಿಕ್ಷಕರು ಆದರ್ಶಮಯ ಜೀವನದ ಮೂಲಕ ಆದರ್ಶ ಸಮಾಜ ರೂಪಿಸುವ ಶಿಲ್ಪಿಗಳಾಗಬೇಕು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಶಿಕ್ಷಕರಿಗೆ ಕಿವಿ ಮಾತು ಹೇಳಿದರು.
ಸೋಮವಾರ ಗೊಳಸಂಗಿ ಗ್ರಾಮದ ಅಪ್ಪಣ್ಣ ದಳವಾಯಿ ಪ್ರೌಢ ಶಾಲಾ ಸಭಾಭವನದಲ್ಲಿ ಬಸವವನಬಾಗೇವಾಡಿ ತಾಲೂಕ ಆಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೊಲ್ಹಾರ, ನಿಡಗುಂದಿ ಹಾಗೂ ಬಸವವನಬಾಗೇವಾಡಿ ತಾಲೂಕ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಅಭಿನಂದನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಶಿಕ್ಷಕರ ದಿನಾಚರಣೆ ಆಚರಿಸುತ್ತಿರುವ ಶಿಕ್ಷಕರಿಗೆ ಶುಭಾಶಯ ತಿಳಿಸಿದರು.
ಸರ್ಕಾರ ತನ್ನ ಆದಾಯದಲ್ಲಿ ಅತಿಹೆಚ್ಚು ಅನುದಾನವನ್ನು ಶಿಕ್ಷಣ ಹಾಗೂ ವೈದ್ಯಕೀಯ ಇಲಾಖೆಗಳಿಗೆ ಆರ್ಥಿಕ ವೆಚ್ಚ ಮಾಡುತ್ತಿದೆ. ಹೀಗಾಗಿ ಶಿಕ್ಷಕರು ಗುಣಮಟ್ಟ ಹಾಗೂ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಸಮಾಜ ತಮ್ಮ ಮೇಲೆ ಇರಿಸಿರುವ ನಿರೀಕ್ಷ ಹುಸಿ ಆಗದಂತೆ ವೃತ್ತಿ ಘನತೆ ಮೆರೆಯಬೇಕು ಎಂದು ಸಲಹೆ ನೀಡಿದರು.
ತಮ್ಮ ಪತ್ನಿಯ ತಂದೆಯವರು ಶಿಕ್ಷಕರಾಗಿ, ನಿವೃತ್ತಿ ಹೊಂದಿದ್ದಾರೆ ಎಂದ ಸಚಿವರು, ಪಾಟೀಲ ಎಂಬ ಶಿಕ್ಷಕರೊಬ್ಬರು ಮಸಬಿನಾಳವದಿಂದ ದೇವರಹಿಪ್ಪರಗಿ ವರೆಗೆ ನಡೆದುಕೊಂಡುಹೋಗಿ ಪಾಠ ಮಾಡುತ್ತಿದ್ದರು. ಇಂಥ ಶಿಕ್ಷಕರು ಇಂದಿನ ಶಿಕ್ಷಕರಿಗೆ ಮಾದರಿಯಾಗಲಿ ಎಂದು ಆಶಿಸಿದರು.
ಪ್ರಸಕ್ತ ಸಂದರ್ಭದಲ್ಲಿ ಸರ್ಕಾರ ಶಿಕ್ಷಕರ ಬೇಡಿಕೆ ಈಡೇರಿಕೆ ಮಾಡುತ್ತದೋ, ಇಲ್ಲವೋ ಆದರೆ ಸರ್ಕಾರ ಶಿಕ್ಷಕರ ಬೇಡಿಕೆ ಈಡೇರಿಸಲಿ ಎಂದು ಆಶಿಸಿದರು.
ಕೇಂದ್ರ ಸರ್ಕಾರ ಸೇರಿದಂತೆ ದೇಶದ ಯಾವುದೇ ರಾಜ್ಯ ಸಾಲ ಮಾಡದೇ ಬಜೆಟ್ ಮಂಡಿಸುವ ಹಾಗೂ ಅಭಿವೃದ್ಧಿ ಮಾಡುವ ಸ್ಥಿತಿ ಇಲ್ಲ. ರಾಜ್ಯದ ಸ್ಥಿತಿಯನ್ನೇ ಅವಲೊಕಿಸಿದರೆ 15 ಲಕ್ಷ ಕೋಟಿ ಸಾಲ ಮಾಡಿದ್ದೇವೆ.
ಸಾಲ ಮಾಡದೇ ಯಾವುದೇ ಸರ್ಕಾರ ನಡೆಸಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ದೇಶದ 31 ರಾಜ್ಯಗಳ ಬಜೆಟ್ ನಲ್ಲಿ ಸಾಲ ಇಲ್ಲದ ಬಜೆಟ್ ಮಂಡನೆ ಇಲ್ಲ. ದೇಶದ ಎಲ್ಲ ರಾಜ್ಯಗಳ ಆರ್ಥಿಕ ಸ್ಥಿತಿಯೂ ಇದೇ ಎಂದು ವಿವರಿಸಿದರು.
ಒಟ್ಟು ಜನಸಂಖ್ಯೆಯಲ್ಲಿ : ಶೇ.3 ಜನರಿಗೆ ಸರ್ಕಾರ ಉದ್ಯೋಗ ಕೊಡಲು ಸಾಧ್ಯವಿಲ್ಲ. ಆದರೂ ಸರ್ಕಾರ ತನ್ನ ಆದಾಯದ ಬಹುತೇಕ ಹಣವನ್ನು ಸರ್ಕಾರಿ ನೌಕರರಿಗೆ ವೆಚ್ಚ ಮಾಡುತ್ತಿದೆ. ಈ ಅಂಶವನ್ನು ಅರಿತು ಸರ್ಕಾರಿ ನೌಕರರು ಹಾಗೂ ಶಿಕ್ಷಕರು ತಮ್ನ ಜವಾಬ್ದಾರಿ ನಿಭಾಯಿಸಿ, ಸಮಾಜದ ಋಣ ತೀರಿಸಬೇಕು ಎಂದು ಸಲಹೆ ಕಿವಿ ಮಾತು ಹೇಳಿದರು.
ಆದರೆ ಕೃಷಿ ಕ್ಷೇತ್ರ ಒಟ್ಟು ಜನಸಂಖ್ಯೆಯ ಶೇ.70-80 ರಷ್ಟು ಪ್ರಮಾಣದಲ್ಲಿ ಉದ್ಯೋಗ ನೀಡಿದೆ. ಭಾರತೀಯರು ಅನ್ನಕ್ಕೆ ದಾರಿಯಾಗಿರುವುದೇ ಕೃಷಿರಂಗ ಹಾಗೂ ಅನ್ನದಾತ ರೈತ ಎಂಬುದು ಹೆಮ್ಮೆಯ ಸಂಗತಿ. ಹೀಗಾಗಿ ಸರ್ಕಾರದ ಸೌಲಭ್ಯ ಪಡೆಯುವ ಶಿಕ್ಷಕರು ತಮ್ಮನ್ನು ತಾವು ಅರಿತು ಸೇವೆ ಸಲ್ಲಿಸಬೇಕು ಎಂದರು.
ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸುವಲ್ಲಿ ಶಿಕ್ಷಕರು ಬದ್ಧತೆ ತೋರಬೇಕು ಎಂದರು.
ಕ್ರೀಡಾಪಟುಗಳಲ್ಲಿ ಹಲವರು ತಮ್ಮ ದುಡಿಮೆಯ ಹಣದಲ್ಲಿ ಬಹುತೇಕ ಹಣವನ್ನು ಸಮಾಜಕ್ಕೆ ವೆಚ್ಚ ಮಾಡು ಮಾಡುತ್ತಿದ್ದಾರೆ.
ಅಂಬಾನಿ, ಅದಾನಿ ಹೆಸರು ಮಾತ್ರ ದೊಡ್ಡದು. ಆದರೆ ಟಾಟಾ, ಇನ್ಫೋಸಿಸ್ ನಾರಾಯಣಮೂರ್ತಿ, ಸುಧಾಮೂರ್ತಿ, ಅಜೀಂ ಪ್ರೇಮಜೀ ಅವರಂಥ ಉದ್ಯಮಿಗಳು ಸಾಮಾಜಿಕ ಹೊಣೆಗಾರಿಕೆ ನಿಭಾಯಿಸುವಲ್ಲಿ ಮುಂಚೂಣಿಯಲ್ಲಿ ಇರುವುದು ಸಂತಸದ ಸಂಗತಿ ಎಂದರು.
ಶಿಕ್ಷಕರು ಬಸವವನಬಾಗೇವಾಡಿ ಗುರು ಭವನ ಕಟ್ಟಲು ಮುಂದಾಗಿ ಎಂದು ಸಲಹೆ ನೀಡಿದ ಸಚಿವರು, ಜಿಲ್ಲೆಯಲ್ಲಿ ನನ್ನ ವಿಧಾನಸಭೆ ಕ್ಷೇತ್ರದ ಕನಿಷ್ಟ ಐದಾರು ಮಕ್ಕಳಾದರೂ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿ ಕೀರ್ತಿ ತರುವಂತೆ ರೂಪಿಸುವಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಸಲಹೆ ನೀಡಿದರು.
ಶಿಕ್ಷಕರು ತಮ್ಮ ವೃತ್ತಿ ಘನೆಯ ಸಾಧನೆ ಮೂಲಕ ಪ್ರಶಸ್ತಿ ಪಡೆಯುವಂತೆ ಆಗಬೇಕು. ಆದರೆ ಈಚೆಗೆ ಶಿಫಾರಸು ಮೂಲಕ ಪ್ರಶಸ್ತಿ ಪಡೆಯವ ಪ್ರವೃತ್ತಿಯಲ್ಲಿ ತೊಡಗಿದ್ದು, ಇಂಥ ವ್ಯವಸ್ಥೆಯಿಂದ ಶಿಕ್ಷಕರು ವಿಮುಖರಾಗಬೇಕು ಎಂದು ಕಿವಿ ಮಾತು ಹೇಳಿದರು.
ವಿಜಯಪುರ ಜಿಲ್ಲೆ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಭಾರಿ ಕುಸಿತ ಕಂಡಿರುವುದು ಅತ್ಯಂತ ಖೇದಕರ ಸಂಗತಿ. ಜಿಲ್ಲೆಯ ಭವಿಷ್ಯ ಮಕ್ಕಳ ಶೈಕ್ಷಣಿಕ ಫಲಿತಾಂಶ ಹಾಗೂ ಶೈಕ್ಷಣಿಕ ಅಭಿವೃದ್ಧಿ ಮೇಲೆ ಅವಲಂವಿತವಾಗಿದೆ ಇದನ್ನರಿತು ಶಿಕ್ಷಕರು ಬದ್ಧತೆಯ ಸೇವೆ ಸಲ್ಲಿಸಲಿ ಎಂದರು.
ಗೊಳಸಂಗಿ ಮೂಲದ ಕಾ.ವು.ಬಿಜಾಪುರ ಸೇರಿದಂತೆ ಜಿಲ್ಲೆಯಲ್ಲಿ ಅನುಕರಣೀಯ ಶಿಕ್ಷಕರಾಗಿದ್ದ ಈಶ್ವರಚಂದ್ರ ಚಿಂತಾಮಣಿ, ಶರಣಪ್ಪ ಕಂಚ್ಯಾಣಿ, ಫ.ಗು.ಸಿದ್ಧಾಪುರ ಸೇರಿದಂತೆ ಜಿಲ್ಲೆ ಮಾತ್ರವಲ್ಲದೆ ರಾಜ್ಯ, ರಾಷ್ಟ್ರ ಮಟ್ಟದ ಪ್ರಶಸ್ತಿ ವಿಜೇತ ಜಿಲ್ಲೆ ಶಿಕ್ಷಕರು ಇಂದಿನ ಶಿಕ್ಷಕರಿಗೆ ಆದರ್ಶವಾಗಲಿ ಎಂದರು.
ಉತ್ತಮ ಶಿಕ್ಷಣ ವ್ಯವಸ್ಥೆ ಇರುವ ದೇಶ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ಇರುತ್ತವೆ. ಇದಕ್ಕೆಲ್ಲ ಪ್ರಮುಖ ಕಾರಣ ಶಿಕ್ಷಕರು ಎಂದರು.
ಭಾಷಾ ಸಂಘರ್ಷ ಹೆಚ್ಚುತ್ತಿದ್ದು, ಭಾಷೆ, ರಾಜ್ಯದ ಗಡಿ ಮೀರಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರನ್ನು ಇಡೀ ದೇಶ ರಾಷ್ಟ್ರದ ಅಧ್ಯಕ್ಷರನ್ನಾಗಿ ಸ್ವೀಕರಿಸಿತ್ತು. ಇಂದಿನ ಶಿಕ್ಷಕರು ರಾಷ್ಟ್ರೀಯ ಮನೋಭಾವ ಬೆಳೆಸಿಕೊಂಡು ಸಾಧಕ ಪ್ರತಿಭೆಗಳನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.
ವಿಶ್ವದ ಯಾವುದೇ ದೇಶಕ್ಕೆ ಹೋದರೂ ಭಾರತೀಯ ಮೂಲದ ವೈದ್ಯರು, ಎಂಜಿನಿಯರಗಳು, ಜಗತ್ತಿನ ಕಂಪನಿಗಳಲ್ಲಿ ಬಹುತೇಕ ಸಿಇಒ ಗಳು ಭಾರತೀಯರೇ ಆಗಿದ್ದಾರೆ ಎಂಬುದು ಹಿರಿಮೆಯ ಸಂಗತಿಯಾಗಿದ್ದು, ಇದಕ್ಕೆಲ್ಲ ಪ್ರಮುಖ ಕಾರಣ ಶಿಕ್ಷಕರು ನೀಡಿದ ಜ್ಞಾನ ಎಂಬುದು ಗಮನೀಯ ಎಂದರು.
ಬಸವವನಬಾಗೇವಾಡಿ ವಿರಕ್ತ ಮಠದ ಸಿದ್ಧಲಿಂಗ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು.
ವಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶೇಖರ ದಳವಾಯಿ, ಗ್ರಾ.ಪಂ. ಅಧ್ಯಕ್ಷ ರಾವುತ್ ಸೀಮಿಕೇರಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಹಿಬೂಬ ನಾಯ್ಕೋಡಿ, ಚಂದ್ರಶೇಖರ ಹಳೇಮನಿ, ಸಂತೋಷ ಗಣಾಚಾರಿ, ಕರ್ನಾಟಕ ರಾಜ್ಯ ಸಹಕಾರಿ ಮಹಾ ಮಂಡಳದ ನಿರ್ದೇಶಕರಾದ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ ಹಾರಿವಾಳ, ಜಾನಪದ ಸಾಹಿತಿಗಳಾದ ಅಮರಯ್ಯಸ್ವಾಮಿ ಜಾಲಿಬೆಂಚಿ, ತಹಶಿಲ್ದಾರಾದ ವೈ.ಎಸ್. ಸೋಮನಕಟ್ಟಿ, ಎ.ಡಿ.ಅಮರವಾಡಗಿ, ಸಂತೋಷ ಮ್ಯಾಗೇರಿ, ತಾ.ಪಂ. ಇಒಗಳಾದ ವೆಂಕಟೇಶ ವಂದಾಲ, ಸುನಿಲ ಮದ್ದಿನ, ಬಿಇಒ ವಸಂತ ರಾಠೋಡ, ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಮಂಗಾನವರ ಸೇರಿದಂತೆ ಇತರರು ವೇದಿಕೆ ಮೇಲೆ ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪನೆಗೆ ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ
ವಿಜಯಪುರ: ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪಿಸಲು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಸಿದ್ದಸಿರಿ ಸೌಹಾರ್ದ್ ಸಹಕಾರಿ ಸಂಘ ನಿಯಮಿತದಿಂದ ರೂ.25 ಲಕ್ಷ ದೇಣಿಗೆ ಚೆಕ್ ನ್ನು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಹಸ್ತಾಂತರಿಸಲಾಯಿತು.
ಕರ್ನಾಟಕ ರಾಜ್ಯ ಸೌಹಾರ್ದ್ ಸಂಯುಕ್ತ ಸಹಕಾರಿ ನಿ ಹಾಗೂ ಸಿದ್ದಸಿರಿ
ಸೌಹಾರ್ದ ಸಹಕಾರಿ ನಿ. ನಿರ್ದೇಶಕರಾದ ರಾಮನಗೌಡ ಪಾಟೀಲ ಯತ್ನಾಳ ರವರು, ವಿಜಯಪುರ ನಗರವು
ಬೃಹತ್ತಾಗಿ ಬೆಳೆದಿದೆ ಮತ್ತು ವರ್ಷದಿಂದ ವರ್ಷಕ್ಕೆ ಎಲ್ಲ ದಿಕ್ಕಿನಲ್ಲಿಯೂ ಬೆಳೆಯುತ್ತಿದೆ. ಅದಕ್ಕೆ
ಅನುಗುಣವಾಗಿ ವಾಹನಗಳ ಸಂಖ್ಯೆಯೂ ಹೆಚ್ಚಾಗುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಸಾರ್ವಜನಿಕರ
ಸುರಕ್ಷತೆಯಿಂದ ಈ ಸಂಚಾರ ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸಲು, ಅಪಘಾತಗಳನ್ನು ತಡೆಯಲು, ಸುಧಾರಿತ ಸಂಚಾರ ಕಣ್ಗಾವಲು ವ್ಯವಸ್ಥೆಗಳು, ಪ್ರಮುಖ
ವೃತ್ತಗಳ ಮೇಲ್ವಿಚಾರಣೆ, ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ಮತ್ತು ಸಂಯೋಜಿತ ಸಂವಹನ ಸೌಲಭ್ಯ
ಒಳಗೊಂಡ ಸಂಚಾರ ಕಮಾಂಡ್ ಕೇಂದ್ರವನ್ನು ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸ್ಥಾಪಿಸಲು ಆರ್ಥಿಕ ನೆರವು
ಕೋರಿ ಜಿಲ್ಲಾ ಪೊಲೀಸ್ ಇಲಾಖೆಗೆ ಮನವಿ ಮಾಡಿದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿ ರೂ.25 ಲಕ್ಷ ದೇಣಿಗೆ
ನೀಡಲಾಗಿದೆ ಎಂದರು.
ಸಿದ್ದಸಿರಿ ಸೌಹಾರ್ದ್ ಸಹಕಾರಿ ಸಂಘದ ನಿರ್ದೇಶಕರುಗಳಾದ ಪ್ರಬುಗೌಡ
ದೇಸಾಯಿ, ಜಗದೀಶ ಕ್ಷತ್ರಿ, ವ್ಯವಸ್ಥಾಪಕ ನಿರ್ದೇಶಕರಾದ ಜ್ಯೋತಿಬಾ ಖಂಡಾಗಳೆ, ಮಹಾಪ್ರಬಂಧಕರು ಉಮೇಶ
ಹಾರಿವಾಳ ಇತರರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


