Tuesday, September 16, 2025

17-09-2025 EE DIVASA KANNADA DAILY NEWS PAPER

ಚಡಚಣ ಎಸ್ ಬಿಐ ಬ್ಯಾಂಕ್ ನಲ್ಲಿ ಪಿಸ್ತೂಲ್ ತೋರಿಸಿ ಸಿಬ್ಬಂದಿಗೆ ಕಟ್ಟಿಹಾಕಿ ದರೋಡೆ

ವಿಜಯಪುರ: ಜಿಲ್ಲೆಯ ಭೀಮಾತೀರದ ಚಡಚಣ ಪಟ್ಟಣದ ಎಸ್ ಬಿಐ ಬ್ಯಾಂಕ್ ನಲ್ಲಿ ಸಿನಿಮೀಯ ರೀತಿಯಲ್ಲಿ ಕಳ್ಳರು ಪಿಸ್ತೂಲ್ ತೋರಿಸಿ, ಸಿಬ್ಬಂದಿಗೆ ಕಟ್ಟಿಹಾಕಿ, ದರೋಡೆ ಮಾಡಿರುವ ಘಟನೆ  ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ  ಮಂಗಳವಾರ ಸಂಜೆ ನಡೆದಿದೆ.

ಇಲ್ಲಿನ ಬ್ಯಾಂಕ್ ನ ವ್ಯವಹಾರದ ಸಮಯ ಮುಗಿದ ಮೇಲೆ, 3 ಜನ ಮುಸುಕುಧಾರಿ ಖದೀಮರು, ಏಕಾಏಕಿ ಬ್ಯಾಂಕಿಗೆ ನುಗ್ಗಿ, ಪಿಸ್ತೂಲ್ ತೋರಿಸಿ ಸಿಬ್ಬಂದಿಯನ್ನು ಹೆದರಿಸಿ, ಕೈಕಾಲು ಕಟ್ಟಿ ಹಾಕಿ ಕಳ್ಳತನ ಮಾಡಿ, ಪರಾರಿಯಾಗಿದ್ದಾರೆ.

ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿದ್ದಾರೆ. ಬ್ಯಾಂಕ್ ನಲ್ಲಿ ಎಷ್ಟು ಹಣ ಕಳ್ಳತನವಾಗಿದೆ ಎನ್ನುವ ಕುರಿತು ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.