Wednesday, September 17, 2025
ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ : ಸಂಸದ ರಮೇಶ ಜಿಗಜಿಣಗಿ
ವಿಜಯಪುರ : ಭಾರತ ದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಅನೇಕ ಜನಪರ ಅಭಿವೃದ್ಧಿ ಕಾರ್ಯಕ್ರಮಗಳು ಅನುಷ್ಠಾನಗೊಳ್ಳುತ್ತಿವೆ. ಇಂದು ದೇಶ ಹಾಗೂ ರಾಜ್ಯಾದ್ಯಂತ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನವನ್ನು ದಿನಾಂಕ: 17-09-2025 ರಿಂದ ದಿನಾಂಕ: 02-10-2025ರ ವರೆಗೆ ಹಮ್ಮಿಕೊಳ್ಳಲಾಗಿದ್ದು. ಸಮುದಾಯದ ಅಭಿವೃದ್ಧಿಯ ಸಂಕಲ್ಪವನ್ನು ಹೊಂದಲಾಗಿರುತ್ತದೆ. ಸಾರ್ವಜನಿಕರ ಬದಕನ್ನು ಸುಗಮಗೊಳಿಸುವಲ್ಲಿ ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳಿಗಾಗಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿರುತ್ತದೆ. ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ ಎಂದು ಸನ್ಮಾನ್ಯ ಸಂಸದರಾದ ರಮೇಶ ಜಿಗಜಿಣಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ “ಸ್ವಸ್ತ ನಾರಿ ಶಸಕ್ತ ಪರಿವಾರ “ಅಭಿಯಾನ ಉದ್ಘಾಟನಾ ಕಾರ್ಯಕ್ರಮವನ್ನು ಹಾಗೂ ಮಹಾನಗರ ಪಾಲಿಕೆಯ ಮಹಾಪೌರರಾದ ಎಮ್.ಎಸ್. ಕರಡಿಯವರೊಂದಿಗೆ ಜಂಟಿಯಾಗಿ ಚಾಲನೆ ನೀಡಿ ಅವರು ಮಾತನಾಡಿದರು.
ಮಹಾನಗರ ಪಾಲಿಕೆಯ ಮಹಾಪೌರ ಮಡಿವಾಳಪ್ಪ ಕರಡಿ ಮಾತನಾಡಿ, ಸಮಾಜದ ಏಳಿಗೆಗಾಗಿ ಮಹಿಳೆಯರು ಸ್ವಾವಲಂಬಿ ಬದಕನ್ನು ಕಟ್ಟಿಕೊಳ್ಳಲು ಅವರು ಮಾನಸಿಕ, ದೈಹಿಕ, ಕೌಟಂಬಿಕ ಸಮಾಜಿಕವಾಗಿ ಆರೋಗ್ಯವಂತರಾಗಿ ಇರಲು ಈ ಅಭಿಯಾನದಲ್ಲಿ ನಡೆಯುವ ಮಹಿಳೆಯರಿಗಾಗಿ ವೈದ್ಯಕೀಯ ಆರೋಗ್ಯ ತಪಾಸಣೆ ಮಾಡಿಸುವದರಿಂದ ಆರೋಗ್ಯವಂತ ಸಮಾಜವನ್ನು ಕಾಪಾಡುವದು ನಮ್ಮಲ್ಲೆರ ಹೊಣೆಯಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ಸಂಪತ್ತ ಗುಣಾರಿ ಮಾತನಾಡಿ, ವಿಶೇಷವಾಗಿ ಮಹಿಳೆಯರ ಆರೋಗ್ಯ ತಪಾಸಣೆ, ತಾಯಿ ಮತ್ತು ಮಕ್ಕಳ ಆರೈಕೆ, ಜಾಗೃತಿ ಮತ್ತು ವರ್ತನೆಯ ಬದಲಾವಣೆ, ರಕ್ತದಾನ ಶಿಬಿರಗಳು ಹೀಗೆ ಹಲವಾರು ಕಾರ್ಯಕ್ರಮಗಳನ್ನು ಈ ಅಭಿಯಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಉಪಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕಾ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ದಿನಾಂಕ: 17-09-2025 ರಿಂದ 02-10-2025ರ ವರೆಗೆ ಉಚಿತ ಮಹಿಳಾ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದ್ದು. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಶಿವಾನಂದ ಮಾಸ್ತಿಹೊಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪ ಮಹಾಪೌರರಾದ ಸುಮಿತ್ರಾ ಜಾಧವ, ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಹಾನಗರ ಪಾಲಿಕೆಯ ಸದಸ್ಯರುಗಳಾದ ರಾಜಶೇಖರ್ ಮಗಿಮಠ, ಶಿವರುದ್ರ ಬಾಗಲಕೋಟ, ರಾಹುಲ್ ಜಾಧವ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ-ಸಿಬ್ಬಂದಿ ವರ್ಗದವರು ಮತ್ತು ಸಾರ್ಜನಿಕರು ಹಾಗೂ ಸರ್ನಿಂಗ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಆಸ್ಪತ್ರೆಯ ಹಿರಿಯ ಆಪ್ತಸಮಾಲೋಚಕರಾದ ರವಿ ಕಿತ್ತೂರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
