ವಿಜಯಪುರ: ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ಎನ್‌ಟಿಪಿಸಿ) ಕೂಡಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘ (ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಮತ್ತು ಕರ್ನಾಟಕ ಸಂಪಾದಕೀಯರ ಸಂಘ (ರಿ), ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಇದೇ 26 ಶುಕ್ರವಾರದಂದು ವಿಜಯಪುರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಾರ್ತಾಲಾಪ ಕಾರ್ಯಾಗಾರ ಆಯೋಜಿಸಲಾಗಿದೆ.
ಕರ್ನಾಟಕ ಸರ್ಕಾರದ ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿದ್ದಾರೆ. ಕರ್ನಾಟಕ ಸರ್ಕಾರದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶ್ರೀ ಶಿವಾನಂದ ಎಸ್. ಪಾಟೀಲ ಗೌರವ ಉಪಸ್ಥಿತಿ ವಹಿಸಲಿದ್ದು, ವಿಜಯಪುರ ನಗರದ ಶಾಸಕರಾದ ಶ್ರೀ ಬಸನಗೌಡ ಆರ್. ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ. ವಿಜಯಪುರ ಕ್ಷೇತ್ರದ ಸಂಸದರಾದ ಶ್ರೀ ರಮೇಶ ಚಂ. ಜಿಗಜಿಣಗಿ ಹಾಗೂ ರಾಜ್ಯಸಭೆ ಸಂಸದರಾದ ಶ್ರೀಮತಿ ಸುಧಾ ಮೂರ್ತಿ ಅವರು ವಾರ್ತಾಲಾಪ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ರವಿಕುಮಾರ್ ಎನ್., ವಿಧಾನ ಪರಿಷತ್ ಶಾಸಕ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ - 2, ನವದೆಹಲಿ ಶ್ರೀ ಪ್ರಕಾಶ ಬಿ. ಹುಕ್ಕೇರಿ, ಮುದ್ದೇಬಿಹಾಳ ಕ್ಷೇತ್ರದ ಶಾಸಕರು ಹಾಗೂ ಕೆ.ಎಸ್.ಡಿ.ಎಲ್. ಅಧ್ಯಕ್ಷರಾದ ಶ್ರೀ ಅಪ್ಪಾಜಿ ಸಿ.ಎಸ್. ನಾಡಗೌಡ, ಇಂಡಿ ಕ್ಷೇತ್ರದ ಶಾಸಕರಾದ ಶ್ರೀ ಯಶವಂತರಾಯಗೌಡ ಬಿ. ಪಾಟೀಲ, ವಿಧಾನ ಪರಿಷತ್ ಶಾಸಕರಾದ ಶ್ರೀ ಹನುಮಂತ ಆರ್. ನಿರಾಣಿ, ಶ್ರೀ ಸುನೀಲ್ ಗೌಡ ಬಿ. ಪಾಟೀಲ್, ಶ್ರೀ ಪಿ.ಎಚ್. ಪೂಜಾರ, ನಾಗಠಾಣ ಕ್ಷೇತ್ರದ ಶಾಸಕರಾದ ಶ್ರೀ ವಿಠ್ಠಲ ಧೋಂಡಿಬಾ ಕಟಕಧೋಂಡ, ದೇವರಹಿಪ್ಪರಗಿ ಶಾಸಕರಾದ ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಸಿಂಧಗಿ ಶಾಸಕರಾದ ಶ್ರೀ ಅಶೋಕ ಮಲ್ಲಪ್ಪ ಮನಗೂಳಿ, ವಿಧಾನ ಪರಿಷತ್ ಶಾಸಕರಾದ ಶ್ರೀ ಕೇಶವ ಪ್ರಸಾದ ಎಸ್., ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸಂಗಮೇಶ ಅಪ್ಪಾಸಿ ಬಬಲೇಶ್ವರ, ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಕಾನನ್ ಅಬ್ದುಲ್ ಹಮೀದ್ ಮುಶ್ರೀಫ್, ಭಾರತ ಸರ್ಕಾರದ ವಾರ್ತಾ ಶಾಖೆಯ ಹೆಚ್ಚುವರಿ ಮಹಾನಿರ್ದೇಶಕರಾದ ಶ್ರೀ ಎಸ್.ಜಿ. ರವೀಂದ್ರ, ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ್ ಕೆ., ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ರಿಷಿ ಆನಂದ್, ಕೂಡಗಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಸಂತೋಷ್ ತಿವಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಶ್ರೀ ಪ್ರಕಾಶ್ ಜಿ. ಬೆಣ್ಣೂರ, ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘದ ಅಧ್ಯಕ್ಷರಾದ ಶ್ರೀ ಈರ್ಫಾನ್ ಶೇಖ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷರಾದ ಶ್ರೀ ಗುರುರಾಜ್ ಹೂಗಾರ್, ಕರ್ನಾಟಕ ರಾಜ್ಯ ಮಹಿಳಾ ಸಂಪಾದಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ರಶ್ಮಿ ಪಾಟೀಲ್ ಅವರು ಭಾಗವಹಿಸಲಿದ್ದಾರೆ.
ಕಾರ್ಯಾಗಾರದ ಮೊದಲ ಅಧಿವೇಷನದಲ್ಲಿ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ರಿಷಿ ಆನಂದ್ ಅವರು ಮಾತನಾಡಲಿದ್ದಾರೆ. ‘ಜಿ.ಎಸ್.ಟಿ. 2.0’ ಕುರಿತು ಸಿಜಿಎಸ್‌ಟಿ ವಿಜಯಪುರ ವಿಭಾಗದ ಸಹಾಯಕ ಆಯುಕ್ತರಾದ ಶ್ರೀ ವಾಯ್.ಸಿ. ಪೂಜಾರಿ, ‘ಸ್ವಸ್ಥ ನಾರಿ ಸಶಕ್ತ ಪರಿವಾರ’ ಅಭಿಯಾನ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸಂಪತ್ ಕುಮಾರ್ ಗುಣಾರಿ, ‘ಕೃಷಿ ತೋಟಗಾರಿಕಾ ವಲಯದ ಯೋಜನೆಗಳ ಅನುಷ್ಠಾನ’ ಕುರಿತು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ಶಿವನಗೌಡ ಎಸ್. ಪಾಟೀಲ್ ಮಾಹಿತಿ ಹಂಚಿಕೊಳ್ಳಲಿದ್ದಾರೆ.
ಕಾರ್ಯಾಗಾರದ ಎರಡನೇ ಅಧಿವೇಶನದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ನ್ಯಾಯ ಸಂಹಿತೆ, ಭಾರತೀಯ ಸಾಕ್ಷ್ಯಾ ಅಧಿನಿಯಮ 2023 ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಲಕ್ಷ್ಮಣ ನಿಂಬರಗಿ, ‘ಹಣಕಾಸು ಸೇರ್ಪಡೆ ಪರಿಪೂರ್ಣತೆ ಅಭಿಯಾನ’ ಕುರಿತು ಕೆನರಾ ಬ್ಯಾಂಕ್ ಮತ್ತು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕರಾದ ಶ್ರೀ ಬಿ. ಸಿದ್ದಯ್ಯ, ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಹಾಗೂ ಪೋಷಣಾ ಅಭಿಯಾನ’ದ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀ ಕೆ.ಕೆ. ಚವ್ಹಾಣ್ ಅವರು ಮಾಹಿತಿ ಹಂಚಿಕೊಳ್ಳಲಿದ್ದಾರೆ.
