Thursday, September 25, 2025
ನಮಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಕೊಡಿ ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ
ವಿಜಯಪುರ : ವಿಜಯಪುರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಬೇಕೆಂಬ ಬೇಡಿಕೆ ಅನೇಕ ವರ್ಷಗಳಿಂದ ಇದೆ. ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಿ ಬಡ ಜನರಿಗೆ ಆರೋಗ್ಯ ರಕ್ಷಣೆ ಹಾಗೂ ಜಿಲ್ಲೆಯ ಬಡ ಮಕ್ಕಳಿಗೆ ವೈದ್ಯಕೀಯ ಶಿಕ್ಷಣ ಕೊಡಬೇಕಾದ ಸರಕಾರ ಜಿಲ್ಲೆಗೆ ಖಾಸಗಿ ಸಹ ಭಾಗಿತ್ವದ ವೈದ್ಯಕೀಯ ಮಹಾವಿದ್ಯಾಲಯ ಘೋಷಣೆ ಮಾಡಿರುವುದರಿಂದ ಜಿಲ್ಲೆಗೆ ದೊಡ್ಡ ಅನ್ಯಾಯವಾಗಿದೆ.
ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ “ನಮಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಕೊಡಿ” ಎಂಬ ವಿಷಯದ ಕುರಿತು ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನ ಹಾಗೂ ಶಿವಶರಣ ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ ಹಾಗೂ ವಿವಿದೋದ್ದೇಶಗಳ ಸಂಸ್ಥೆ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ನಾಡಿನ ಕವಿಗಳಿಂದ ರಾಜ್ಯ ಮಟ್ಟದ ಬಹು ಭಾಷಾ ಕವಿಗೋಷ್ಠಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.
ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು ಸೆಪ್ಟೆಂಬರ್ 27ರ ಒಳಗಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಲು 9632096714/ 72042 79187 ಗೆ ಸಂಪರ್ಕಿಸಬೇಕೆAದು ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನದ ಕಾರ್ಯದರ್ಶಿ ಲಾಯಪ್ಪ ಇಂಗಳೆ ಮತ್ತು ಶಿವಶರಣ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ಹಾಗೂ ವಿವಿದೋದ್ದೇಶ ಸಂಸ್ಥೆ ಅಧ್ಯಕ್ಷ ಕಲ್ಲಪ್ಪ ಶಿವಶರಣ ಅವರು ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.