Tuesday, September 30, 2025
ರಾಷ್ಟಿçÃಯ ಪೋಷಣ ಮಾಸಾಚರಣೆ-ಸ್ವಸ್ಥö್ಯನಾರಿ- ಸಶಕ್ತ ಪರಿವಾರ ಅಭಿಯಾನ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ
ವಿಜಯಪುರ : ತಾಯಂದಿರು ಸಂಸಾರವನ್ನು ಸಾಗಿಸುವುದರ ಜೊತೆ ಸ್ವಸ್ಥö್ಯವಾಗಿರಲು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಅವರು ಹೇಳಿದರು.
ಮಂಗಳವಾರ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಈಶ್ವರಲಿಂಗ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಆರೋಗ್ಯ ಇಲಾಖೆ ಹಾಗೂ ಬಿ.ಎಲ್.ಡಿ.ಇ ಕಾನೂನು ಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪೋಷಣ ಮಾಸಾಚರಣೆ, ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾಯಂದಿರು ಬೆಳಿಗ್ಗೆಯಿಂದ ರಾತ್ರಿಯವರೆಗೆ ಪ್ರತಿಯೊಂದು ಕೆಲಸಗಳಲ್ಲಿ ನಿರತರಾಗಿರುತ್ತಾರೆ ಅವರಿಗೆ ಬಿಡುವು ಅನ್ನುವುದೆ ಮರಿಚಿಕೆಯಾಗಿರುತ್ತದೆ ಇಂತಹ ಸಮಯದಲ್ಲಿ ಅವರು ಅನಾರೋಗ್ಯ ತುತ್ತಾಗಿ ಕಷ್ಟ ಪಡುವಂತಹ ಪರಿಸ್ಥಿತಿ ಒದಗಿ ಬರುತ್ತವೆ ಈ ದೃಷ್ಟಿಯಲ್ಲಿ ತಮ್ಮ ಆರೋಗ್ಯ ರಕ್ಷಣೆ ಕೂಡ ಅಷ್ಟೆ ಮಹತ್ವದಾಗಿರುತ್ತದೆ. ಕೆಲಸಗಳ ಮದ್ಯ ತಮ್ಮ ಆರೋಗ್ಯಕ್ಕೂ ಮೀಸಲಿಡಬೇಕು. ಹೆಣ್ಣು ಮಕ್ಕಳಿಗಾಗಿ ಉಚಿತ ಕಾನೂನು ಹಾಗೂ ಆರೋಗ್ಯ ಸೇವೆಗಳ ಕುರಿತು ಅಧಿಕಾರಿಗಳು ತಮಗೆ ಸಂಪೂರ್ಣವಾಗಿ ಮಾಹಿತಿ ನೀಡಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರಿನ ಜಿಲ್ಲಾ ನ್ಯಾಯಾದೀಶರು ಮತ್ತು ಸದಸ್ಯ ಕಾರ್ಯದರ್ಶಿಗಳಾದ ಹೆಚ್ ಶಶಿಧರ ಶೆಟ್ಟಿ ಅವರು ಮಾತನಾಡಿ, ನಿರಂತರ ಕರ್ತವ್ಯಗಳ ಮದ್ಯ ಮಹಿಳೆಯರು, ಮಕ್ಕಳು ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆ ತಮ್ಮ ಸ್ವಾಸ್ತö್ಯವನ್ನು ಕಾಪಾಡಿಕೊಳ್ಳಬೇಕು. ದೌರ್ಜನ್ಯ, ಅನ್ಯಾಯವಾದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹಾಗೂ ಪ್ರಶ್ನಿಸುವ ಹಕ್ಕವುಳ್ಳವರಾಗಿದ್ದು ತಮಗೆ ಹತ್ತಿರದ ಗ್ರಾಮ ಪಂಚಾಯತಿ ಇಲ್ಲವೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿರುವ ಜನತಾ ನ್ಯಾಯಾಲಯಗಳಲ್ಲಿ ದೂರು ದಾಖಲಿಸಬೇಕು. ತಮಗೆ ಕಾನೂನುಗಳ ಕುರಿತು ಅರಿವು ಮೂಡಿಸಲು ತಮ್ಮ ಗ್ರಾಮ ಮಟ್ಟಗಳಲ್ಲಿ ಶಿಭಿರಗಳನ್ನು ಆಯೋಜಿಸಲಾಗುತ್ತಿದೆ ಅದರ ಸದುಪಯೊಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಕಾನೂನು ಸೇವಾ ಪ್ರಾಧಿಕಾರವು ಹಲವಾರು ಜನರಿಗೆ ಉಚಿತ ಕಾನೂನಿನ ನೆರವನ್ನು ನೀಡುತ್ತಿದೆ ಮಹಿಳೆಯರು ಹಾಗೂ ಮಕ್ಕಳ ಹಕ್ಕುಗಳಿಗಾಗಿ ಇದು ಕಾನೂನಾತ್ಮಕ ಹಕ್ಕಾಗಿದೆ. ಇತ್ತೀಚೆಗೆ ಪೋಕ್ಸೊ ಪ್ರಕರಣಗಳು ಹೆಚ್ಚಾಗುತ್ತಿದ್ದು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮನೆಯಲ್ಲಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವುದು ಮತ್ತು ಪೋಕ್ಸೊ ಕಾಯಿದೆ ಕುರಿತು ಅರಿವು ಹೊಂದಬೇಕು ಎಂದು ಅವರು ಹೇಳಿದರು.
ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡುವುದು ಅದರೊಂದಿಗೆ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ನಿಷೇದ, ಗ್ರಾಮದ ಕೆರೆಗಳನ್ನು ರಕ್ಷಿಸಿ ಅದರಲ್ಲಿರುವ ಹೂಳು ತೆಗೆಯುವುದರಿಂದ ಅಂತರ್ಜಲ ಮಟ್ಟ ಹೆಚ್ಚುವುದು ಇದಕ್ಕೆ ತಾವೆಲ್ಲರೂ ಕೈಜೋಡಿಸಬೇಕು. ಕಾನೂನಿನ ಅರಿವಿನ ಕಾರ್ಯಕ್ರಮಗಳನ್ನು ಸಾಮಾನ್ಯವಾಗಿ ಎಲ್ಲಾ ನಾಗರಿಕರಿಗೆ ವಿಶೇಷವಾಗಿ ಸಮಾಜದ ದುರ್ಬಲ ವರ್ಗಗಳಿಗೆ ಕಾನೂನು ಜ್ಞಾನದ ಸಬಲೀಕರಣಕ್ಕಾಗಿ ತೆಗೆದುಕೊಳ್ಳಲಾಗುತ್ತದೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರು ಮತ್ತು ಮಕ್ಕಳಂತಹ ಸಮಾಜದ ದುರ್ಬಲ ವರ್ಗಗಳನ್ನು ತಲುಪಲು ವಿವಿಧ ಕಾರ್ಯಚಟುವಟಿಕೆಗಳನ್ನು ಏರ್ಪಡಿಸಲಾಗುತ್ತಿದೆ. ಎಂದು ಅವರು ಹೇಳಿದರು.
ಪ್ರತಿ ಗ್ರಾಮ ಪಂಚಾಯತಿ, ಕಾನೂನು ಮಹಾವಿದ್ಯಾಲಯಗಳಲ್ಲಿ, ಲೀಗಲ್ ಸೇವಾ ಕ್ಲಿನಿಕ್‌ಗಳನ್ನು ತೆರೆಲು ಕ್ರಮ ವಹಿಸಲಾಗುತ್ತಿದೆ. ಲೋಕ ಅದಾಲತ್‌ಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ರಾಜಿ ಸಂದಾನದ ಮೂಲಕ ಮಧ್ಯಸ್ಥಿಕೆ ವಹಿಸಿ ತಮ್ಮ ತಮ್ಮ ದೂರುಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಸಾರ್ವಜನಿಕರು, ಮಹಿಳೆಯರು, ಮಕ್ಕಳು ಇದರ ಸದುಪಯೊಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು.
ಬೆಂಗಳೂರಿನ ಖಾಯಂ ಜನತಾ ನ್ಯಾಯಾಲಯದ ಅಧ್ಯಕ್ಷರು ಹಾಗೂ ಜಿಲ್ಲಾ ನ್ಯಾಯಾಧೀಶರಾದ ಜೈ ಶಂಕರ ಮಾತಾನಾಡಿ, ಈಗ ಸರ್ಕಾರದ ವಿವಿಧ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸು ಸಮಯೋಚಿತ ನ್ಯಾಯವನ್ನು ಒದಗಿಸಲು ತಮ್ಮ ಗ್ರಾಮಗಳಿಗೆ ಅಧಿಕಾರಿಗಳು ಬಂದು ಸಲಹೆ ಸೂಚನೆಗಳನ್ನು ನೀಡಿ ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಮಾಹಿತಿ ಗರ್ಭಿಣಿ ಮಹಿಳೆಯರಿಗೆ ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ ದೊರಕುವಂತೆ ಕಾನೂನು ಸೇವಾ ಪ್ರಾಧಿಕಾರ ಕರ್ತವ್ಯ ನಿರ್ವಹಿಸುತ್ತದೆ ಹಾಗೂ ನ್ಯಾಯಾಧೀಶರೆ ಇದರ ಉಸ್ತುವಾರಿ ವಹಿಸಿಕೊಳ್ಳುತ್ತದ್ದಾರೆ ಎಂದು ಅವರು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳಾದ ಗೃಹಲಕ್ಷಿö್ಮÃ ಯೋಜನೆ ಐಸಿಡಿಎಸ್ ಯೋಜನೆ,ಐಸಿಡಿಎಸ್ ಯೋಜನೆ,ಬೇಟಿ ಬಚಾವೋ ಬೇಟಿ ಪಡಾವೋ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಪೋಷಣ್ ಅಭಿಯಾನ ಸಾಂತ್ವನ ಯೋಜನೆ, ಬಾಲಕಿಯರ ವಸತಿ ನಿಲಯ ಯೋಜನೆ, ಉದ್ಯೋಗಿನಿ ಚೇತನಾ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ, ಮಿಷÀನ್ ಶಕ್ತಿ ಯೋಜನೆಗಳ ಕುರಿತು ಸಮಗ್ರವಾಗಿ ವಿವರ ನೀಡಿದರು.
ಗ್ರಾಮ ಪಂಚಾಯತ ಅಧ್ಯಕ್ಷರಾದ ಮಕಲನಗೌಡ ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಬಬಲೇಶ್ವರ ತಹಶೀಲ್ಧಾರರಾದ ಶಾಂತಲಾ ಚಡಚಣ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಡಿ.ಬಿ. ಬಿರಾದಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಸಂಪತ ಗುಣಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ.ಕೆ. ಚವ್ಹಾಣ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ, ಬಬಲೇಶ್ವರ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜಿ.ಎಚ್ ಪಠಾಣ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಪವಿತ್ರಾ ನೀಲಖೇಣಿ, ಎಸ್.ಸಿ ಮ್ಯಾಗೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಕಾನೂನು ಮಹಾವಿದ್ಯಾಲಯಗಳ ಪ್ರಾಂಶುಪಾಲರು, ವಿದ್ಯಾರ್ಥಿಗಳು, ಗ್ರಾಮದ ಸಮಸ್ತ ನಾಗರೀಕರು ಹಾಗೂ ಇತರರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ನವರಾತ್ರಿ ಪ್ರಯುಕ್ತ ಗಂಗಾಧರ ಕೋರಳ್ಳಿ ಮಹಾಶಕ್ತಿ ಮಂದಿರದಲ್ಲಿ ಅನ್ನ ಪ್ರಸಾದ
ವಿಜಯಪುರ : ನಗರದ ಇಂಡಿ ರಸ್ತೆಯಲ್ಲಿರುವ ಗೋಕಾಕ ಚಳುವಳಿ ಹೋರಾಟಗಾರ ಗಂಗಾಧರ ಕೋರಳ್ಳಿ ಪ್ರತಿಷ್ಠಾಪಿತ ಮಹಾಶಕ್ತಿ ನಾಡದೇವಿ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ಮಂಗಳವಾರ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ಅನ್ನ ದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದÀರ್ಭದಲ್ಲಿ ನೀಲಕಂಠ ಕೋರಳ್ಳಿ, ಮಹಾದೇವಿ ಕೋರಳ್ಳಿ, ವೀಣಾ ಕೋರಳ್ಳಿ ಆದಿತ್ಯ ಕೋರಳ್ಳಿ, ಗಂಗಾಬಾಯಿ ಮನಗೂಳಿ, ತ್ರಿವೇಣಿ ಮನಗೂಳಿ, ಸವಿತಾ ಬಿರಾದಾರ, ನಿಹಾರಿಕಾ ಮಂಟಾಳೆ, ಶಾಂತಾಬಾಯಿ ಬಿದರಿ, ಹಣಮಂತ ಕಲಾದಗಿ, ಶೋಭಾ ಪಾಟೀಲ, ಉಮಾ ಇಟ್ಟಂಗಿ, ಕವಿತಾ ಪ್ಯಾಟಿ ಎಚ್ ಜಿ ವಾಲಿ, ರಾಜೇಂದ್ರ, ಗುರು ಹಿರೇಮಠ, ಸಂಗು ಹಿರೇಮಠ, ಭೀಮರಾಯ ಕುಂಟೋಜಿ, ಕಲ್ಲಪ್ಪ ಶಿವಶರಣ, ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನದ ಕಾರ್ಯದರ್ಶಿ ಲಾಯಪ್ಪ ಇಂಗಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

