Friday, October 10, 2025
ಮಾನಸಿಕ ಆರೋಗ್ಯ ಮತ್ತು ಸೌಲಭ್ಯಗಳ ಅರಿವು ಮೂಡಿಸಿ : ನ್ಯಾಯಾಧೀಶ ಅರವಿಂದ ಹಾಗರಗಿ
ವಿಜಯಪುರ : ಮಾನಸಿಕ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಹೇಳಿದರು.
ಜಿಲ್ಲಾ ಆಡಳಿತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ವಿಜಯಪುರ ಹಾಗೂ ವಿವಿದ ನರ್ಸಿಂಗ್ ಕಾಲೇಜು ಹಾಗೂ ಮನೋಜ್ಯೋತಿ ಫೌಂಡೇಶನ್ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಪದ್ಮಶ್ರೀ ಪ್ರಶಸ್ತಿ ವಿಜೇತರರು ಹಾಗೂ ಹಿರಿಯ ಮನೋರೋಗ ತಜ್ಞ ಡಾ|| ಸಿ.ಆರ್. ಚಂದ್ರಶೇಖರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಸಂಪತ್ತ ಗುಣಾರಿ ಅವರೊಂದಿಗೆ ಜಂಟಿಯಾಗಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾನಸಿಕ ಕಾಯಿಲೆಯು ಪುರಾತನ ಕಾಲದಿಂದ ಮನುಷ್ಯನನ್ನು ಕಾಡುತ್ತಾ ಬಂದಿದೆ ಇದಕ್ಕೆ ಸರಳವಾದ ಚಿಕಿತ್ಸೆ ಇರಲಿಲ್ಲ ಈಗ ಆ ಕಾಲ ಬದಲಾಗಿದೆ. ರಾಷ್ಟಿçÃಯ ಮಾನಸಿಕ ಆರೋಗ್ಯ ಕಾರ್ಯಕ್ರಮ ಬಂದ ನಂತರ ಸಮುದಾಯಕ್ಕೆ ಆರೋಗ್ಯದ ಅರಿವು ಮತ್ತು ಜ್ಞಾನವನ್ನು ಕೊಡಲಾಗುತ್ತಿದ್ದು, ಅಲ್ಲದೇ ಮಾನಸಿಕ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ಹಾಗೂ ಆಪ್ತಸಮಾಲೋಚನೆ ಮೂಲಕ ಮಾನಸಿಕ ಸಮಸ್ಯೆಗಳಿಗೆ ಪರಿಹಾರ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಸೌಲಭ್ಯಗಳನ್ನು ಪಡೆದುಕೊಂಡು ತಮ್ಮ ಜೀವನ ಶೈಲಿಯ ಬದಲಾವಣೆಯಿಂದ ಮಾನಸಿಕವಾಗಿ ಆರೋಗ್ಯವಂತರಾಬೇಕು ಎಂದು ಅವರು ಹೇಳಿದರು.
ಮಾನಸಿಕ ಆರೋಗ್ಯದ ಬಗೆಗೆ ಸಾರ್ವಜನಿಕರಲ್ಲಿ ಅರಿವುವನ್ನು ಮೂಡಿಸುವುದು ಬಹಳ ಅತ್ಯವಶ್ಯಕ ಎಂಬುದನ್ನು ಮನಗಂಡು 1948ರಲ್ಲಿ ವಿಶ್ವ ಮಾನಸಿಕ ಆರೋಗ್ಯ ಒಕ್ಕೂಟ ಸ್ಥಾಪನೆಯಾಯಿತು. 1992ರಲ್ಲಿ ಮೊದಲ ಬಾರಿಗೆ ಒಕ್ಕೂಟದ ವತಿಯಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು ಎಂದು ಅವರು ಹೇಳಿದರು.
ಡಾ|| ಸಿ.ಆರ್. ಚಂದ್ರಶೇಖರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಹಿರಿಯ ಮನೋರೋಗ ತಜ್ಞರು ಮಾತನಾಡುತ್ತಾ ದೈಹಿಕ ರೋಗಗಳನ್ನು ಗುಣಪಡಿಸಲು ಚಿಕಿತ್ಸೆ ನೀಡುವಂತೆ ಮಾನಸಿಕ ರೋಗಗಳನ್ನು ಚಿಕಿತ್ಸೆ ನೀಡಿ ಗುಣಪಡಿಸಬಹುದು ಇದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಕೇಂದ್ರಗಳನ್ನು ಪ್ರಾರಂಭಿಸಿ ಚಿಕಿತ್ಸಾ ಸೌಲಭ್ಯಗಳನ್ನು ನೀಡುತ್ತಿದೆ. ಈ ಸೌಲಭ್ಯದ ಅರಿವು ರೋಗಿಗಳಿಗೆ ಮೂಡಿಸುವುದು ದಿನಾಚರಣೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಡಾ|| ಸಂಪತ್ತ ಗುಣಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ರವರು ರಾಜ್ಯ ಸರ್ಕಾರ 2014ರಲ್ಲಿ “ಮನೋಚೈತನ್ಯ ಕ್ಲಿನಿಕ” ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿತ್ತು. ಈ ಕಾರ್ಯಕ್ರಮದಡಿಯಲ್ಲಿ ಪ್ರತಿ ಮಂಗಳವಾರ ತಾಲೂಕು ಆಸ್ಪತ್ರೆಗಳಲ್ಲಿ ಮಾನಸಿಕ ಆರೋಗ್ಯ ತಪಾಸಣೆ ಮತ್ತು ಆರೈಕೆ ಕುರಿತಾಗಿ ಶಿಬಿರಗಳನ್ನು ಆಯೋಜಿಸಲಾಗುತ್ತದೆ. ಗರ್ಭಿಣಿ ಮತ್ತು ಬಾಣಂತಿಯರ ಮಾನಸಿಕ ಸಮಸ್ಯೆಗಳನ್ನು ಗುರುತಿಸಿ ಅವರುಗಳಿಗೆ ಸೂಕ್ತ ಮಾನಸಿಕ ಚಿಕಿತ್ಸೆ ಮತ್ತು ಆಪ್ತ ಸಮಾಲೋಚನಾ ಸೇವಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶವಾಗಿದೆ. ರಾಷ್ಟಿçÃಯ ಟೆಲಿಮಾನಸಿಕ ಆರೋಗ್ಯ ಕಾರ್ಯಕ್ರಮವಾಗಿದ್ದು ಇದು ಮಾನಸಿಕ ಆರೋಗ್ಯ ಸೇವಾ ಸೌಲಭ್ಯವನ್ನು ಉಚಿತವಾಗಿ ದಿನದ 24 ಗಂಟೆಗಳು ಒದಗಿಸುವ ಮಾನಸಿಕ ಆರೋಗ್ಯ ಸಹಾಯವಾಣಿಯಾಗಿದೆ (ಸಹಾಯವಾಣಿ ಸಂಖ್ಯೆ:14416) ಪರೀಕ್ಷೆ ಒತ್ತಡ, ಮಾದಕ ಮತ್ತು ಮಧ್ಯವ್ಯಸನಿಗಳು, ಕೌಟುಂಬಿಕ ಸಮಸ್ಯೆ, ಖಿನ್ನತೆ ಮುಂತಾದ ಮಾನಸಿಕ ರೋಗಗಳಿಂದ ಬಳಲುವವರಿಗೆ ಮಾನಸಿಕ ಆರೋಗ್ಯ ವಿಷಯ ಪರಿಣಿತರು ಆಪ್ತಸಲಹೆ ಸೇವೆಯನ್ನು ಒದಗಿಸುವರು. ಮಾನಸಿಕ ರೋಗಿಗಳ ಗೌಷ್ಯತೆಯನ್ನು ಕಾಪಾಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮನೋರೋಗ ತಜ್ಞರಾದ ಡಾ|| ಮಂಜುನಾಥ ಮಸಳಿ ಪ್ರಾಸ್ತಾವಿಕವಾಗಿ ಮಾತನಾಡಿ, ತಂಬಾಕು ಹಾಗೂ ದೂಮಪಾನ ಸೇವನೆಯಿಂದ ಮಾನಸಿಕ ಖಿನ್ನತೆಯಿಂದ ಹೆಚ್ಚು ಜನರು ಬಳಲುತ್ತಿದ್ದು. ಅದರಲ್ಲಿ ಮಹಿಳೆಯರು ಶೇ 3ರಷ್ಟು ಮಾನಸಿಕ ರೋಗಕ್ಕೆ ತುತ್ತಾಗುತ್ತಿದ್ದಾರೆ. ಹಾಗೂ ವಿವಿದ ರೀತಿಯ ಮಾನಸಿಕ ರೋಗಗಳ ಕುರಿತು ಮತ್ತು ಅದರ ಚಿಕಿತ್ಸೆಯ ಬಗ್ಗೆ ಮಾತನಾಡಿದರು.
ಜಾಥಾ ಹಾಗೂ ವೇಧಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿಮೂಲನಾ ಅಧಿಕಾರಿ ಡಾ|| ಅರ್ಚನಾ ಕುಲಕರ್ಣಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಜಾನ್ ಕಟವಟೆ, ಮನೋರೋಗ ತಜ್ಞ ಡಾ.ಚೌಕಿಮಠ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ.ಕೋಲೂರ, ಸುರೇಶ ಹೊಸಮನಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಖಾ ದಶವಂತ, ಕೆ.ಬಿ ಬಾಗವಾನ ಕ್ಲಿನಿಕ್ ಸೈಕಾಲೋಜಿಸ್ಟ್, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ವಿವಿಧ ನರ್ಸಿಂಗ ಕಾಲೇಜಿನ ಭೋದಕ ಸಿಬ್ಬಂದಿ ವರ್ಗದವರು ಮತ್ತು ವಿಧ್ಯಾರ್ಥಿ/ವಿಧ್ಯಾರ್ಥಿನಿಯರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್ ಭಾಗವಾನ ಸ್ವಾಗತಿಸಿದರು. ರವಿ ಕಿತ್ತೂರ ನಿರೂಪಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು
ವಸತಿ ನಿಲಯ ನಿರ್ವಹಣೆಗೆ ಹಾಸ್ಟೆಲ್ ಮೆಂಟರ್-ವಾರ್ಡನ್‌ಗಳಿಗೆ ಮಾರ್ಗದರ್ಶನ ಸಭೆ ವಸತಿ ನಿಲಯಗಳಲ್ಲಿನ ಮಕ್ಕಳ ಒತ್ತಡ ನಿವಾರಣೆ-ಆತ್ಮವಿಶ್ವಾಸ ಹೆಚ್ಚಿಸಲು ಕ್ರಮ ವಹಿಸಿ -ಜಿಲ್ಲಾಧಿಕಾರಿ ಡಾ.ಆನಂದ ಕೆ.
ವಿಜಯಪುರ : ಜಿಲ್ಲೆಯಲ್ಲಿರುವ ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಲು ಹಾಗೂ ಪರೀಕ್ಷಾ ಒತ್ತಡವನ್ನು ತಗ್ಗಿಸುವ ನಿಟ್ಟಿನಲ್ಲಿ ಸಂಬAಧಿಸಿದ ವಸತಿ ನಿಲಯಗಳ ವಾರ್ಡನ್‌ಗಳು ಹಾಗೂ ಹಾಸ್ಟೆಲ್ ಮೆಂಟರ್‌ಗಳು ಮಕ್ಕಳಿಗೆ ಮುಕ್ತವಾದ ವಾತಾವರಣ ಕಲ್ಪಿಸಿ, ಮಕ್ಕಳೊಂದಿಗೆ ಬೆರೆತು, ಸಮಸ್ಯೆಗಳನ್ನು ಆಲಿಸಿ-ಚರ್ಚಿಸಿ, ಪರಿಹರಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವಿಹಯಪುರ ಇವರ ಸಂಯುಕ್ತಾಶ್ರಯದಲ್ಲಿ ಹಾಸ್ಟೇಲ್ ಮೆಂಟರ್ ಮತ್ತು ವಾರ್ಡನ್ ರವರಿಗೆ ವಸತಿ ನಿಲಯಗಳ ನಿರ್ವಹಣೆಯ ಕುರಿತು ಮಾರ್ಗದರ್ಶಿ ಸಭೆ ಹಾಗೂ ಜಿಲ್ಲಾ ಮಟ್ಟದ. ವಿದ್ಯಾರ್ಥಿಗಳ ಸುರಕ್ಷಾ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಪಡೆಯಲು ತಮ್ಮ ಕುಟುಂಬದಿAದ ದೂರವಾಗಿರುತ್ತಾರೆ. ವಾರಕ್ಕೊಮ್ಮೆಯಾದರೂ ಒಂದು ಅವರೊಂದಿಗೆ ಊಟ ಮಾಡುವ ಮೂಲಕ ಅವರೊಂದಿಗೆ ಬೆರೆತು, ಕುಟುಂಬದಿAದ ದೂರವಿರುವ ಭಾವನೆ ಹೋಗಲಾಡಿಲು ಪ್ರಯತ್ನಿಸಬೇಕು. ವಸತಿ ನಿಲಯಗಳಲ್ಲಿ ಉತ್ತಮವಾದ ಮುಕ್ತ ವಾತಾವರಣ ನಿರ್ಮಿಸಬೇಕು. ಅವರೊಂದಿಗೆ ಚರ್ಚಿಸಬೇಕು. ಮಕ್ಕಳೊಂದಿಗೆ ಮುಕ್ತವಾಗಿ ಮಾತನಾಡಿದಾಗ ಮಾತ್ರ ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಆಸಕ್ತ ವಿಷಯಗಳ ಕುರಿತು ಮಕ್ಕಳಿಗೆ ಬೋಧನೆ ಮಾಡಬೇಕು. ವಿಚಾರಗಳು ತಮ್ಮಲ್ಲಿರುವ ಅನುಭವ ಜ್ಞಾನವನ್ನು ಹಂಚಿಕೊಳ್ಳಬೇಕು. ವಸತಿ ನಿಲಯಗಳಲ್ಲಿನ ಸಣ್ಣ ಪುಟ್ಟ ಸಮಸ್ಯೆಗಳನ್ನು ತಮ್ಮ ಹಂತದಲ್ಲಿಯೇ ಪರಿಹರಿಸುವ ಮೂಲಕ ಮಕ್ಕಳಲ್ಲಿನ ಆತ್ಮವಿಶ್ವಾಸ ಹೆಚ್ಚಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
ವಸತಿ ನಿಲಯಗಳಲ್ಲಿ ಅವಶ್ಯಕವಿರುವ ಎಲ್ಲ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸಬೇಕು. ಸಾಧಾರಣವಾಗಿ ಮಕ್ಕಳಲ್ಲಿ ಚರ್ಮರೋಗ ಸಮಸ್ಯೆ ಉಂಟಾಗುತ್ತದೆ. ಇದನ್ನು ಸಂಬAಧಿಸಿದ ಹಾಸ್ಟೆಲ್ ವಾರ್ಡನ್, ಮೆಂಟರ್‌ಗಳು ಅವಲೋಕಿಸಬೇಕು. ವಾರಕ್ಕೊಮ್ಮೆ ವೈದ್ಯರನ್ನು ಹಾಸ್ಟೇಲ್‌ಗೆ ಕರೆಸಿ ತಪಾಸಣೆ ನಡೆಸಬೇಕು. ರಕ್ತಹೀನತೆ ತಪಾಸಣೆ ನಡೆಸಬೇಕು. ಆಗಾಗ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ವೈದ್ಯಕೀಯ ತಪಾಸಣೆ ನಡೆಸಬೇಕು. ಯೋಗ, ವ್ಯಾಯಾಮಗಳಂತಹ ದೈಹಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಸುಸಜ್ಜಿತವಾದ ಗ್ರಂಥಾಲಯ ಇರುವಂತೆ ನೋಡಿಕೊಳ್ಳಬೇಕು. ಕಂಪ್ಯೂಟರ್ ತರಬೇತಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ವಸತಿ ನಿಲಯಗಳ ವಿದ್ಯಾರ್ಥಿಗಳ ಬೆಳವಣಿಗೆ ಹಾಗೂ ಜೀವನ ಮಟ್ಟ ಸುಧಾರಿಸಲು ಪ್ರೇರೆಪಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಕುಟುಂಬದಿAದ ದೂರ ಬಂದು, ಹಾಸ್ಟೆಲ್‌ನಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಬಂದಿರುವ ಮಕ್ಕಳ ಪೋಷಕರಾಗಿ ಹಾಸ್ಟೆಲ್ ವಾರ್ಡನ್‌ಗಳು ಕಾರ್ಯನಿರ್ವಹಿಸಬೇಕು. ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ಹಾಸ್ಟೆಲ್‌ಗಳಲ್ಲಿನ ಕೊಠಡಿಗಳ ಸ್ವಚ್ಛತೆ, ಶುಚಿತ್ವ ಶೌಚಾಲಯ, ಗ್ರಂಥಾಲಯಗಳಲ್ಲಿ ಮಕ್ಕಳಿಗೆ ಅಗತ್ಯವಿರುವ ಪುಸ್ತಕಗಳು ಸ್ಪರ್ಧಾತ್ಮ, ಪುಸ್ತಕಗಳು, ಉತ್ತಮ ಪೌಷ್ಠಿಕಾಂಶವುಳ್ಳ ಮೆನು ಪ್ರಕಾರ ಆಹಾರ ಒದಗಿಸುವುದು ಬಹುಮುಖ್ಯ ಜವಾಬ್ದಾರಿಯಾಗಿದೆ. ಇದನ್ನರಿತುಕೊಂಡು ಕಾರ್ಯನಿರ್ವಹಿಸಬೇಕು. ಮಿಷನ್ ವಿಜಯಪುರದಡಿ ವೆಬ್ ಕಾಸ್ಟಿಂಗ್ ಮೂಲಕ ಸಂಜೆ ಕ್ಲಾಸ್ ಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುಂತೆ ನಿಗಾ ವಹಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ ಅವರು ಮಾತನಾಡಿ, ವಸತಿ ನಿಲಯಗಳಲ್ಲಿರುವ ಮಕ್ಕಳೊಂದಿಗೆ ಸಂಬAಧಿಸಿದ ಹಾಸ್ಟೆಲ್ ವಾರ್ಡನ್‌ಗಳು ಬೆರೆತು, ಮುಕ್ತವಾಗಿ ಮಾತನಾಡಿ, ವಿಷಯಗಳನ್ನು ಹಂಚಿಕೊAಡಾಗ ಅವರ ಸಮಸ್ಯೆಗಳನ್ನು ಅರಿಯಲು ಸಾಧ್ಯವಾಗುತ್ತದೆ. ಅವರಲ್ಲಿನ ಸಮಸ್ಯೆ ಅರ್ಥ ಮಾಡಿಕೊಂಡು ಪರಿಹಾರ ಕಲ್ಪಿಸಲು ಮುಂದಾಗಬೇಕು. ಮಕ್ಕಳಿಗೆ ಓದಿನ ವಾತಾವರಣ ಕಲ್ಪಿಸಬೇಕು. ಸರ್ಕಾರ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಲು, ಶೈಕ್ಷಣಿಕ ಅಭಿವೃದ್ದಿಗೆ ಸಾಕಷ್ಟು ಅನುದಾನ ನೀಡಿದೆ. ಇದರ ಸದ್ವಿನಿಯೋಗ ಪಡಿಸಿಕೊಂಡು ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಮುಂದಾಗಬೇಕು ಎಂದು ಅವರು ಹೇಳಿದರು.
ಉತ್ತಮ ಸಮಾಜ ನಿರ್ಮಾಣಕ್ಕೆ ಮಾರ್ಗದರ್ಶನ ಅಗತ್ಯವಿದೆ. ಈ ನಿಟ್ಟಿನಲ್ಲಿ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ಭವಿಷ್ಯಕ್ಕೆ ರೂಪಿಸಿಕೊಳ್ಳಲು ಉತ್ತಮ ಮಾರ್ಗದರ್ಶನ ನೀಡಬೇಕು. ದುಶ್ಚಟಗಳಿಗೆ ಬಲಿಯಾಗದಂತೆ ತಿಳುವಳಿಕೆ ಮೂಡಿಸಬೇಕು. ವಸತಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹಾಸ್ಟೆಲ್ ಜವಾಬ್ದಾರಿ ಹೊಂದಿರುವ ವಾರ್ಡನ್‌ಗಳು, ಮೆಂಟರ್‌ಗಳು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಮೂಲಕ ಮಾದರಿಯಾಗಬೇಕು. ನೂರು ವಿದ್ಯಾರ್ಥಿಗಳು ಸುಧಾರಿಸಿದಾಗ, ಬೆಳವಣಿಗೆ ಹೊಂದಿದಾಗ ನೂರು ಕುಟುಂಬಗಳು ಬೆಳವಣಿಗೆ ಹೊಂದುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮಾಜದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಡಿ.ಎ.ಮೂಲಿಮನಿ ಉಪನ್ಯಾಸ ನೀಡಿದರು. ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದೀನ್ ಸೌದಾಗರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಡಾ.ನಾಗರಾಜ್, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಆಹಾರ ಸುರಕ್ಷತಾ ಅಧಿಕಾರಿ ಬಿರಾದಾರ, ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ಸಮಾಜ ಕಲ್ಯಾಣ ಇಲಾಖೆ ಮಹೇಶ ಪೋತದಾರ, ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು
ಸಹಕಾರಿ ಯಶಸ್ಸಿಗೆ ಕಾನೂನು ಅರಿವು ಅಗತ್ಯ : ಸಚಿವ ಶಿವಾನಂದ
ನಗರದಲ್ಲಿರುವ ವಿಡಿಸಿಸಿ ಬ್ಯಾಂಕ್ ಆವರಣದಲ್ಲಿ ಹಮ್ಮಿಕೊಂಡಿದ್ದ ಸಹಕಾರಿ ಕಾಯ್ದೆ ತಿದ್ದುಪಡಿಗಳ ಕುರಿತ ತರಬೇತಿ ಕಾರ್ಯಾಗಾರಕ್ಕೆ ಸಚಿವ ಶಿವಾನಂದ ಪಾಟೀಲ ಚಾಲನೆ ನೀಡಿದರು.
ವಿಜಯಪುರ : ಸಹಕಾರಿ ರಂಗದಲ್ಲಿರುವ ಎಲ್ಲರೂ ಪ್ರಾಮಾಣಿಕ, ಪಾರದರ್ಶಕ ಹಾಗೂ ಸೇವಾ ಮನೋಭಾವದ ಜೊತೆಗೆ ಕಾನೂನಿನ ಅರಿವಿನೊಂದಿಗೆ ಕೆಲಸ ಮಾಡಿಬೇಕಿದೆ. ಹಾಗಾದಲ್ಲಿ ಸಹಕಾರಿ ರಂಗವನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಸಾಧ್ಯವಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.
ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ವಿಜಾಪುರ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಹಾಗೂ ಸಹಕಾರಿ ಸಹಕಾರ ಒಕ್ಕೂಟದ ಸಹಯೋಗದಲ್ಲಿ ಪಟ್ಟಣ ಸಹಕಾರಿ ಬ್ಯಾಂಕ್, ಪತ್ತಿನ ಸಹಕಾರಿ ಸಂಘಗಳು ಹಾಗೂ ವಿವಿಧೊದ್ದೇಶಗಳ ಸಹಕಾರಿ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯ ನಿರ್ವಾಹಕರಿಗೆ ಹಮ್ಮಿಕೊಂಡಿದ್ದ ಸಹಕಾರಿ ಕಾಯ್ದೆಗಳಿಗೆ ತಿದ್ದುಪಡಿ, ಅಭಿವೃದ್ಧಿ ಹಾಗೂ ಎದುರಿಸುತ್ತಿರುವ ಸವಾಲುಗಳ ಸಮಾಲೋಚನೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಹಕಾರಿ ರಂಗದ ಬಲವರ್ಧನೆಗೆ ಸರ್ಕಾರಗಳು ಮೇಲಿಂದ ಮೇಲೆ ಸಕಾರಾತ್ಮಕ ಕ್ರಮಗಳನ್ನು ಕೈಗೊಳ್ಳುತ್ತವೆ. ಸರ್ಕಾರದ ನಿಯಮಗಳ ಪಾಲನೆಯೊಂದಿಗೆ ಸಹಕಾರಿ ಬಲವರ್ಧನೆಗೆ ಶ್ರಮಿಸಬೇಕಿದೆ ಎಂದರು.
ಪ್ರಸಕ್ತ ಸ್ಪರ್ಧಾತ್ಮಕ ಸಂದರ್ಭದಲ್ಲಿ ಸಹಕಾರಿ ರಂಗದ ಪ್ರಗತಿ ನಿರೀಕ್ಷಿತದಂತೆ ಪ್ರಗತಿ ಕಂಡಿಲ್ಲ ಎಂಬುದು ಸತ್ಯವಾದರೂ ತೀರಾ ನಿರಾಶಾದಾಯವಾಗೇನೂ ಇಲ್ಲ. ಕಾನೂನು ಚೌಕಟ್ಟಿನೊಳಗಿನ ವ್ಯವಹಾರ ಒಂದೆಡೆಯಾದರೆ, ಮಾನವೀಯ ನೆಲೆಯಲ್ಲಿ ವ್ಯವಹರಿಸುವ ಮೂಲಕ ಸಹಕಾರಿ ರಂಗದಲ್ಲಿ ಅಭಿವೃದ್ಧಿಯ ಪರಿವರ್ತನೆ ತರುವ ಅಗತ್ಯವಿದೆ. ರೈತರು, ಜನ ಸಾಮಾನ್ಯರ ಆರ್ಥಿಕ ಜೀವನ ಮಟ್ಟ ಸುಧಾರಣೆಗಾಗಿ ಸಹಕಾರಿ ವ್ಯವಸ್ಥೆಯಲ್ಲಿ ಇರುವ ಎಲ್ಲರೂ ಬದ್ಧತೆಯಿಂದ ಸೇವೆ ಸಲ್ಲಿಸಬೇಕಿದೆ ಎಂದರು.
ಸಹಕಾರಿ ರಂಗದಲ್ಲಿ ಉತ್ತುಂಗದಲ್ಲಿರುವ ಸಹಕಾರಿ ಸಂಸ್ಥೆಗಳೂ ಇವೆ, ಕೆಲವು ಸಾಮಾನ್ಯ ಸ್ಥಿತಿಯಲ್ಲೂ, ಮತ್ತೆ ಕೆಲವು ಸುಧಾರಣೆ ಹಂತದಲ್ಲೂ, ಇನ್ನಷ್ಟು ಸಂಸ್ಥೆಗಳು ಸಂಕಷ್ಟದ ಸ್ಥಿತಿಯಲ್ಲಿವೆ. ಆದರೆ ಸೋತವರನ್ನು ಕೈ ಬಿಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವುದು ಇಂದಿನ ಅಗತ್ಯವಾಗಿದೆ ಎಂದರು.
ಸಹಕಾರಿ ರಂಗದದಲ್ಲಿ ಆರ್ಥಿಕ ವ್ಯವಹಾರ ಪಾರದರ್ಶಕತೆ, ನಿಸ್ವಾರ್ಥದ ಜೊತೆಗೆ ಆಡಳಿತದ ನ್ಯೂನ್ಯತೆಗಳು ಕಂಡು ಬಂದಾಗ ತಿದ್ದಿಕೊಂಡು ಮುನ್ನಡೆಯಬೇಕು. ಸಹಕಾರಿ ರಂಗದ ಬಲವರ್ಧನೆ ಎಂದರೆ ಅದು ಜನ ಸಾಮಾನ್ಯನ ಆರ್ಥಿಕ ಬಲವರ್ಧನೆ ಎಂದೇ ಅರ್ಥ ಎಂದು ವಿಶ್ಲೇಷಿಸಿದರು.
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಗುಡದಿನ್ನಿ ಅವರು ಮಾತನಾಡಿ, ಸಹಕಾರಿ ಕ್ಷೇತ್ರದ ಬಲವರ್ಧನೆಗಾಗಿ ಸಹಕಾರಿ ಪತ್ತಿನ ಸಂಘಗಳು ಹೆಚ್ಚಿನ ಪ್ರಮಾಣದಲ್ಲಿ ಠೇವಣಿ ಸಂಗ್ರಹಿಸಿ, ಆರ್ಥಿಕ ಸುಸ್ಥಿತಿ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸಹಕಾರಿ ಸಂಘಗಳ ವಿಶ್ರಾಂತ ಅಪರ ನಿಬಂಧಕರಾದ ಎಂ.ಜಿ.ಪಾಟೀಲ ಅವರು, ಸಹಕಾರಿ ಸಂಘಗಳ ಕಾಯ್ದೆಗಳ ಇತ್ತೀಚಿನ ತಿದ್ದುಪಡಿ, ಪತ್ತಿನ ಸಹಕಾರಿ ಸಂಸ್ಥೆಗಳ ಅಭಿವೃದ್ಧಿ ಮತ್ತು ಎದುರಿಸುತ್ತಿರುವ ಸವಾಲುಗಳ ಕುರಿತು ಸಮಗ್ರ ವಿವರ ನೀಡಿದರು.
ವಿಜಾಪುರ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಹಾಗೂ ಸಹಕಾರಿ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿರುವ ವಿಡಿಸಿಸಿ ನಿರ್ದೇಶಕರಾದ ಗುರುಶಾಂತ ನಿಡೋಣಿ ಅಧ್ಯಕ್ಷತೆ ವಹಿಸಿದ್ದರು. ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಚಂದ್ರಶೇಖರಗೌಡ ಪಾಟೀಲ ಮನಗೂಳಿ, ಸುರೇಶಗೌಡ ಬಿರಾದಾರ, ಎಸ್.ಎಸ್.ಜಾಗೀರದಾರ, ಶೇಖರ ದಳವಾಯಿ, ಸಿಇಒ ಎಸ್.ಎ.ಢವಳಗಿ, ಸಹಕಾರಿ ರತ್ನ ಪ್ರಶಸ್ತಿ ಪುರಸ್ಕøತರಾದ ಶ್ರೀ ಶಾಂತೇಶ್ವರ ವಿವಿಧೋದ್ದೇಶಗಳ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀಮಂತ ಇಂಡಿ, ವಿಡಿಸಿಸಿ ಹಿರಿಯ ಅಧಿಕಾರಿಗಳು ಸೇರಿದಂತೆ ಇತರರು ವೇದಿಕೆ ಮೇಲಿದ್ದರು.
ವಿಶ್ರಾಂತ ಪ್ರಾಚಾರ್ಯ ಬಸವರಾಜ ಸಾವಕಾರ ನಿರೂಪಿಸಿದರೆ, ವಿಡಿಸಿಸಿ ಉಪ ಪ್ರಧಾನ ವ್ಯವಸ್ಥಾಪಕರಾದ ಸತೀಶ ಪಾಟೀಲ ವಂದಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

.jpeg)
