Friday, October 24, 2025
ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ರಕ್ತದಲ್ಲಿ ಸಹಿ ಮಾಡಿ ಪ್ರತಿಭಟನೆ
ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಹೋರಾಟಗಾರರು ತಮ್ಮ ರಕ್ತದ ಮೂಲಕ ಸಹಿ ಮಾಡಿ ಸರ್ಕಾರಕ್ಕೆ ಸಂದೇಶ ರವಾನಿಸಿದರು.
ವಿಜಯಪುರ: ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸುವಂತೆ ಆಗ್ರಹಿಸಿ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ 37 ನೇ ದಿನ ಪೂರೈಸಿದ ಹಿನ್ನೆಲೆ ಶುಕ್ರವಾರ ರಕ್ತದ ಮೂಲಕ ಸಹಿ ಸಂಗ್ರಹಿಸಿ ಪ್ರತಿಭಟಿಸಲಾಯಿತು.
ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಸಮಿತಿ ಪದಾಧಿಕಾರಿಗಳು, ವೈದ್ಯರು, ಮಾಧ್ಯಮ ಪ್ರತಿನಿಧಿಗಳು, ವಿವಿಧ ಸಹಕಾರಿ ಸಂಘಗಳ ಮುಖಂಡರು, ಕನ್ನಡ ಹೋರಾಟಗಾರರು, ವಿದ್ಯಾರ್ಥಿಗಳು ಬಿಳಿ ಬಟ್ಟೆ ಮೇಲೆ ತಮ್ಮ ರಕ್ತದ ಮೂಲಕ ಸಹಿ ಮಾಡಿ ಸರ್ಕಾರಕ್ಕೆ ಒತ್ತಾಯಿಸಿದ್ದು, ರಕ್ತ ಸಹಿ ಸಂಗ್ರಹ ಮಾಡಿರುವ ಬೃಹತ್ ಬ್ಯಾನರ್, ಮನವಿಯೊಂದಿಗೆ ಮುಖ್ಯಮಂತ್ರಿಗಳಿಗೆ ರವಾನಿಸಲಾಯಿತು.
ಪ್ರತಿಭಟನಾಕಾರರು, ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪನೆಯಿಂದ ಶೋಷನೆಗೆ ದಾರಿಯಾಗಿ, ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ನಿಲುಕದ ನಕ್ಷತ್ರವಾಗುವ ಜೊತೆಗೆ ಬಡ ರೋಗಿಗಳು ಚಿಕಿತ್ಸೆ ಪಡೆಯಲು ಪರದಾಡುವಂತಾಗುತ್ತದೆ. ಹೀಗಾಗಿ ಪೂರ್ಣವಾಗಿ ಸರ್ಕಾರವೇ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಹೋರಾಟ ಸಮಿತಿಯ ಸದಸ್ಯರಾದ ಅರವಿಂದ ಕುಲಕರ್ಣಿ, ಭಗವಾನ್ ರೆಡ್ಡಿ, ಅಕ್ರಂ ಮಾಶಾಳಕರ, ಲಲಿತಾ ಬಿಜ್ಜರಗಿ, ಸುರೇಶ ಜೀಬಿ, ಸುರೇಶ ಬಿಜಾಪುರ, ಲಕ್ಷ್ಮಣ ಹಂದ್ರಾಳ, ಮಲ್ಲಿಕಾರ್ಜುನ ಬಟಗಿ, ಮಲ್ಲಿಕಾರ್ಜುನ ಎಚ್.ಟಿ., ಭರತಕುಮಾರ ಎಚ್.ಟಿ., ಸಿದ್ದಲಿಂಗ ಬಾಗೇವಾಡಿ, ಜಗದೇವ ಸೂರ್ಯವಂಶಿ, ಶಿವಬಾಳಮ್ಮ ಕೊಂಡಗೂಳಿ, ಸಿದ್ದರಾಮ ಹಿರೇಮಠ, ಗೀತಾ ಎಚ್., ಶ್ರೀಕಾಂತ ಕೊಂಡಗೂಳಿ, ಸಿದ್ರಾಮ ಹಳ್ಳೂರ, ಲಕ್ಷ್ಮಣ ಕಂಬಾಗಿ, ಸುಶೀಲ ಮಿಣಜಗಿ, ಜ್ಯೋತಿ ಮಿಣಜಗಿ, ಕಾವೇರಿ ರಜಪೂತ, ಸುನೀತಾ ಮೋರೆ, ಮೀನಾಕ್ಷಿ ಸಿಂಗೆ, ಬಾಬುರಾವ್ ಬೀರಕಬ್ಬಿ, ರೇಷ್ಮಾ ಕಟ್ಟಿಮನಿ, ಟೀನಾ ಜೆವರಲ್, ಫಾದರ್ ಕೆವಿನ್, ದಸ್ತಗಿರ್ ಉಕ್ಕಲಿ, ಅಬ್ದುಲ್ ರೆಹಮಾನ್ ನಾಸಿರ್, ಚಂದ್ರಶೇಖರ ಘಂಟೆಪ್ಪಗೋಳ, ಫಯಾಜ್ ಕಲಾದಗಿ, ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ ಇತರರು ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು
