Saturday, November 22, 2025
ಕನ್ನಡ ಪುಸ್ತಕ ಪ್ರಾಧಿಕಾರ ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ಸದಸ್ಯರಾಗಿ ಸಾಹಿತಿ, ಪತ್ರಕರ್ತ ಪರಶುರಾಮ ಶಿವಶರಣ ನೇಮಕ
ಈ ದಿವಸ ಕನ್ನಡ ದಿನ ಪತ್ರಿಕೆ ವಿಜಯಪುರ
ವಿಜಯಪುರ: ಕನ್ನಡ ಪುಸ್ತಕ ಪ್ರಾಧಿಕಾರದ ಮನೆ ಮನೆ ಗ್ರಂಥಾಲಯ ಜಾಗೃತಿ ಸಮಿತಿ ಸದಸ್ಯರಾಗಿ ನಗರದ ಸಾಹಿತಿ, ಪತ್ರಕರ್ತ ಪರಶುರಾಮ ಶಿವಶರಣ ಅವರನ್ನು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಪರಶುರಾಮ ಶಿವಶರಣ ಅವರ ‘ಜೀವಪೀಠ’ ಕೃತಿ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅರಳು ಪ್ರಶಸ್ತಿ ಪಡೆದಿದೆ, ರಾಣಿಬಗೀಚ ಕಥಾ ಸಂಕಲನ, ವಾರ ನೋಟ ಅಂಕಲನ ಸಂಕಲನ, ನೀಲಿ ಮಿಂಚು ಕರ್ನಾಟಕ ಸರ್ಕಾರ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟವಾಗಿದೆ. ಇವರ ಕಾದಂಬರಿ ಜೀವಯಂತ್ರ ಯೋನಿ, ಕಥಾ ಸಂಕಲನ ಹುಳಿ ಮಜ್ಜಿಗೆ, ಕವನ ಸಂಕಲನ ಕಾಡು ಕವಿತೆ ಮುದ್ರಣ ಅಂಚಿನಲ್ಲಿವೆ.
ಅದರಂತೆ ಸಾಮಾಜಿಕ ಕಾಳಜಿಯನ್ನು ಮೈಗೂಡಿಸಿಕೊಂಡು ಬದ್ಧತೆಯಿಂದ, ಜವಾಬ್ದಾರಿ, ನಿರ್ಭೀಡೆಯಿಂದ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ನಿಟ್ಟಿನಲ್ಲಿ ಪತ್ರಕರ್ತರಾಗಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ದೀನ ದಲಿತರ, ಶೋಷಿತರ, ನೊಂದವರ, ನಿರ್ಗತಿಕರ, ಅನ್ಯಾಯ ದೌರ್ಜನ್ಯಕ್ಕೆ ಒಳಗಾದವರ ಧ್ವನಿಯಾಗಿ ವಿಶೇಷ ವರದಿಗಳನ್ನು ಮಾಡಿ ಸಮಾಜ ಹಾಗೂ ಸರ್ಕಾರವನ್ನು ಎಚ್ಚರಿಸುತ್ತಿದ್ದಾರೆೆ. ಪರಶುರಾಮ ಅವರ ಸಮಾಜ ಮುಖಿ, ಜನಮುಖಿ ಹಲವು ವಿಶೇಷ ವರದಿಗಳು ವಿಧಾನ ಸೌಧದ ಅಧಿವೇಶನದಲ್ಲಿ ಪ್ರತಿಧ್ವನಿಸಿ ಸರ್ಕಾರದ ಗಮನ ಸೆಳೆದಿದ್ದು, ಹಲವು ಪ್ರಶಸ್ತಿಗಳು ಅರಿಸಿ ಬಂದಿವೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
