ವಿಜಯಪುರ : ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾಲಯಕ್ಕೆ ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊAಡಿದ್ದು, ಜನವರಿ 14 ರವರೆಗೆ ಪ್ರವೇಶ ಪಡೆದುಕೊಳ್ಳಬಹುದಾಗಿದೆ ಎಂದು ಕಲಬುರ್ಗಿ ಕೇಂದ್ರಿಯ ವಿವಿ ಹಿಂದಿ ವಿಭಾಗದ ಪ್ರಾಧ್ಯಾಪಕ ಪ್ರೊ.ಗಣೇಶ ಪವಾರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ವಿಶ್ವವಿದ್ಯಾಲಯದಲ್ಲಿ ಹಲವಾರು ಕೋರ್ಸ್ಗಳ ಅಧ್ಯಯನ ಅವಕಾಶವಿದ್ದು, ಇಂಗ್ಲಿಷ್, ಹಿಂದಿ, ಕನ್ನಡ, ಭಾಷಾಶಾಸ್ತ್ರ, ಜಾನಪದ ಮತ್ತು ಬುಡಕಟ್ಟು ಅಧ್ಯಯನ, ಅರ್ಥಶಾಸ್ತ್ರ, ಇತಿಹಾಸ, ಸಾರ್ವಜನಿಕ ಆಡಳಿತ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ,
ಪ್ರವಾಸೋದ್ಯಮ - ಪ್ರಯಾಣ ನಿರ್ವಹಣೆ, ಮನೋವಿಜ್ಞಾನ, ಭುಗೋಳಶಾಸ್ತç, ಭೂವಿಜ್ಞಾನ, ಗಣಿತ ಮೊದಲಾದ ಕೋರ್ಸ್ಗಳ ಪ್ರವೇಶ ಜೊತೆಗೆ ಎಂ.ಟೆಕ್ ಪವರ್ ಆ್ಯಂಡ್ ಎನರ್ಜಿ ಸೋರ್ಸಸ್ ಇಂಜಿನಿಯರಿAಗ್, ಆರ್‌ಎಫ್ ಮೈಕ್ರೋವೇವ್ ಇಂಜಿನಿಯರಿAಗ್‌ನಲ್ಲಿ ಅಧ್ಯಯನಕ್ಕೆ ಅವಕಾಶವಿದೆ, ಹಿಂದೂಸ್ತಾನಿ ಶಾಸ್ತಿçÃಯ ಸಂಗೀತದಲ್ಲಿ ಎಂಪಿಎ, ಇನ್ಸುö್ಯಟ್ರುö್ಯಮೆಂಟಲ್ ಸಂಗೀತದಲ್ಲಿ ಎಂಪಿಎ, ಸಸ್ಯಶಾಸ್ತç, ಪ್ರಾಣಿ ಶಾಸ್ತç ಹೀಗೆ ಅನೇಕ ಕೋರ್ಸ್ಗಳ ಅಧ್ಯಯನಕ್ಕೆ ಅವಕಾಶವಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಶೇ.8 ರಷ್ಟು ಮೀಸಲಾತಿ ಕಲ್ಪಿಸಲಾಗುತ್ತಿದೆ, ಕರ್ನಾಟಕದಾದ್ಯಂತ 16 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದರು. ಎಂ.ಟೆಕ್‌ನ ಶೇ.50 ರಷ್ಟು ಸೀಟುಗಳನ್ನು ಸಿಯುಇಟಿ ಮೂಲಕ ಹಾಗೂ ಶೇ.50 ರಷ್ಟು ಸೀಟುಗಳನ್ನು ಗೇಟ್ ಮೂಲಕ ಭರ್ತಿ ಮಾಡಲಾಗುತ್ತಿದೆ ಎಂದರು.
ಹೆಲ್ಪ್ ಡೆಸ್ಕ್ : ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ತೊಂದರೆ ಎದುರಿಸಿದರೆ ಅದರ ನಿವಾರಣೆಗಾಗಿ ವಿಶೇಷ ಹೆಲ್ಪ್ಡೆಸ್ಕ್ ಸ್ಥಾಪಿಸಲಾಗಿದೆ. ತೊಂದರೆ ಎದುರಿಸುವ ವಿದ್ಯಾರ್ಥಿಗಳು 011-40759000 ಅಥವಾ 011-69227700 ಸಂಪರ್ಕಿಸಬಹುದಾಗಿದೆ, ಅಲ್ಲಿ ತಂತ್ರಜ್ಞರು ಸೂಕ್ತವಾದ ಮಾರ್ಗದರ್ಶನ ನೀಡಲಿದ್ದಾರೆ. ಅಥವಾ ಜಾಲತಾಣದ ವಿಳಾಸ Www.nta.ac.in https://exams.nta.nic.in/cuet-pg/ ನೊಂದಿಗೆ ಸಂಪರ್ಕ ಸಾಧಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಳ್ಳಬಹುದಾಗಿದೆ ಎಂದು ವಿವರಿಸಿದರು. ಸಂಪೂರ್ಣ ಪುವೇಶ ಪ್ರಕ್ರಿಯೆಯು ಆನ್‌ಲೈನ್ ಮೂಲಕ ನಡೆಯುತ್ತದೆ, ಆದ್ದರಿಂದ ಅಭ್ಯರ್ಥಿಗಳು ಭವಿಷ್ಯದ ಸಂವಹನಕ್ಕಾಗಿ ಅರ್ಜಿಯಲ್ಲಿ ಸರಿಯಾದ ಇಮೇಲ್ ಮತ್ತು ಫೋನ್ ಸಂಖ್ಯೆಯನ್ನು ನಮೂದಿಸಬೇಕು ಎಂದು ಕೋರಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

