Sunday, September 20, 2026

ದಿ.೨೩ ರಂದು ಝೂಲೂಸ್ ಏ. ಗೌಸಿಯಾ ಎಂಬ ಬೃಹತ್ ಶಾಂತಿಯಾತ್ರೆ : ಧರ್ಮಗುರು ಮೌಲಾನಾ ನೌಷಾದ್ ಆಲಂ

 ವಿಜಯಪುರ : ವಿಜಯಪುರದ ಭಾವೈಕ್ಯತೆಯ ಪ್ರತೀಕವಾಗಿರುವ ಹಜರತ್ ಅರ್ಕಾಟ್ ದರ್ಗಾದ ಉರುಸು ಶ್ರದ್ಧಾ ಭಕ್ತಿಯಿಂದ ಜರುಗಲಿದ್ದು, ಇದರಂಗವಾಗಿ ದಿ.೨೩  ರಂದು ಝೂಲೂಸ್ ಏ. ಗೌಸಿಯಾ ಎಂಬ ಬೃಹತ್ ಶಾಂತಿಯಾತ್ರೆ ನಡೆಯಲಿದೆ ಎಂದು ಧರ್ಮಗುರು ಮೌಲಾನಾ ನೌಷಾದ್ ಆಲಂ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಉರುಸು ಅಂಗವಾಗಿ ಅನೇಕ ಸಿದ್ದತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ, ಮಾನವೀಯತೆ, ಶಾಂತಿ, ಸಹೋದರತೆ ತತ್ವ ಸಾರಿದ ಅರ್ಕಾಟ್ ದರ್ಗಾದ ಹಜರತ್ ಸೈಯ್ಯದ್ ನಾ ಅಬ್ದುಲ್ ಷಾ ಖಾದ್ರಿ ಅವರ ಉರುಸಿನಲ್ಲಿ ಹಿಂದೂ ಮುಸ್ಲಿಂ ಬಾಂಧವರು ಸಾವಿರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಹಸಿದವರಿಗೆ ಅನ್ನ, ಆರೋಗ್ಯ ಸಮಸ್ಯೆ ಎದುರಿಸುವವರಿಗೆ ಪಾರಂಪರಿಕ ಆಯುರ್ವೇದ ಔಷಧಿ ದೊರಕುವ ಮೂಲಕ ದವಾ ಹಾಗೂ ದುವಾ ಎರಡು ಇಲ್ಲಿ ಲಭ್ಯ ಎಂದರು.

ಉರುಸು ಅಂಗವಾಗಿ ಶಾಂತಿ ಯಾತ್ರೆ ದಿ.೨೩ ರಂದು ನಡೆಯಲಿದ್ದು, ದರ್ಗಾದ ಪ್ರಸ್ತುತ ಸಜ್ಜಾದೆ ನಷೀನ್ ಹಜರತ್ ಇಕ್ಬಾಲ್ ಪೀರಾ ಹುಸೈನಿ ಹಾಗೂ ಅವರ ಪುತ್ರ ಡಾ.ಸೈಯ್ಯದ್ ತಕೀ ಪೀರಾ ಹುಸೈನಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.

ದಿ.೨೩ ರಂದು ಭವ್ಯ ಯಾತ್ರೆ ಸೊಲ್ಲಾಪೂರ ನಾಕಾದಿಂದ ಆರಂಭಗೊಳ್ಳಲಿದೆ, ಸಾವಿರಾರು ಭಕ್ತರ ಸಮ್ಮುಖದಲ್ಲಿ ಈ ಯಾತ್ರೆ ಶಹಾಪೂರ ದರ್ವಾಜಾ, ಸರಾಫ್ ಬಜಾರ್, ಗಾಂಧಿವೃತ್ತ, ಅತಾವುಲ್ಲಾ ಸರ್ಕಲ್, ಬಡಿಕಮಾನ್, ಜಾಮೀಯಾ ಮಸೀದಿ ಸೇರಿದಂತೆ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ದರ್ಗಾ ತಲುಪಲಿದೆ ಎಂದರು.

ಶಾAತಿಯಾತ್ರೆಗೂ ಮುನ್ನಾ ದಿನ ದಿ.೨೨ ರಂದು ವಿಚಾರ ಸಂಕಿರಣ ನಡೆಯಲಿದ್ದು, ದಿ.೨೩ ರಂದು ಪವಿತ್ರ ಸಂದಲ್ ಕಾರ್ಯಕ್ರಮಗಳು ದರ್ಗಾದ ಆವರಣದಲ್ಲಿ ನಡೆಯಲಿದೆ. ನಂತರ ಮುಷಾಯಿರಾ ಕಾರ್ಯಕ್ರಮಗಳು ಜರುಗಲಿವೆ ಎಂದು ವಿವರಿಸಿದರು. ಉರುಸು ಅಂಗವಾಗಿ ನೆರೆಯ ಮಹಾರಾಷ್ಟç, ಗುಜರಾತ್, ತಮಿಳುನಾಡು, ಕೇರಳ, ಗುಜರಾತ್, ಆಂದ್ರ ಪ್ರದೇಶ ಮೊದಲಾದ ಭಾಗಗಳಿಂದ ಸಾವಿರಾರು ಜನರು ಭಾಗವಹಿಸಲಿದ್ದಾರೆ. 

ಪ್ರಮುಖರಾದ ಡಾ.ಎಂ.ಎಸ್. ಮುಜಾವರ, ಇರಾಪ ಸುನ್ನೆವಾಲೆ, ಮಹೇಪೊಜ ಅಲಿ ಬಾಗವಾನ, ಮೌಲಾನಾ ಹುಸೇನ ರಜ್ವಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, September 19, 2026

ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಕಾಲೇಜು ಪ್ರಾರಂಭ ಕೆಲಸ ಕಾರ್ಯಗಳು ಭರದಿಂದ ಸಾಗಿವೆ : ಡಾ ಜಾನಕಿ ತೊರವಿ


 ವಿಜಯಪುರ : ನಗರದ ಸರಕಾರಿ ಆಸ್ಪತ್ರೆಯಲ್ಲಿ ಇಂದು ಸರಕಾರಿ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತ ಅಧಿಕಾರಿಗಳಾದ ಡಾ ಜಾನಕಿ ತೊರವಿ ಅವರನ್ನು ಭೇಟಿಯಾಗಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಕುರಿತು ಸರಕಾರ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಚರ್ಚಿಸಲಾಯಿತು.

ಆಡಳಿತಾಧಿಕಾರಿಗಳಿಗೆ ಆದಷ್ಟು ಬೇಗನೆ ವೈದ್ಯಕೀಯ ಕಾಲೇಜು ಪ್ರಾರಂಭ ಮಾಡಬೇಕು ಜೊತೆಗೆ ಎಲ್ಲ ಸಿಬ್ಬಂದಿಗಳನ್ನು ಸರಕಾರದಿಂದಲೇ ನೇಮಕಾತಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿಕೊಳ್ಳಲಾಯಿತು.

ಸರಕಾರದ ಹಂತದಲ್ಲಿ ಕಾಲೇಜು ಸ್ಥಾಪನೆಗೆ ಸಂಬಂಧಪಟ್ಟ ಕೆಲಸ ಕಾರ್ಯಗಳು ಭರದಿಂದ ಸಾಗಿವೆ. ಆದಷ್ಟು ಬೇಗನೆ ಕಾಲೇಜು ಪ್ರಾರಂಭ ಮಾಡಲು ಬೇಕಾದ ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ ಡಾ ಜಾನಕಿ ತೊರವಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಹೋರಾಟಗಾರರಾದ ಮಲ್ಲಿಕಾರ್ಜುನ ಬಟಗಿ, ವಿನೋದ ಖೇಡ, ಲಾಯಪ್ಪ ಇಂಗಳೆ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, September 17, 2026

ಸಿಂದಗಿಯಲ್ಲಿ ಹೈದ್ರಾಬಾದ್ ವಿಮೋಚನಾ ದಿನಾಚರಣೆ ಅಕ್ಟೋಬರ್ 3 ರಂದು ಸ್ವಾಮಿ ರಾಮಾನಂದ ತೀರ್ಥರ ಜಯಂತಿ ಸರಕಾರ ಆಚರಿಸಲಿ -ಅಶೋಕ ಅಲ್ಲಾಪುರ


ಸಿಂದಗಿ : ಹೈದ್ರಾಬಾದ್ ಪ್ರಾಂತ ವಿಮೋಚನೆ ಆಗಲು ಮುಖ್ಯ ಕಾರಣಿಕರ್ತರು ಸ್ವಾಮಿ ರಾಮಾನಂದ ತೀರ್ಥರು ವಿಮೋಚನಾ ದಿನದಂದು ಅವರ ಸ್ಮರಣೆ ಮಾಡುವುದು ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಎಂದು ರಾಷ್ಟ್ರ ವೀರ ಸ್ವಾಮಿ ರಾಮಾನಂದ ತೀರ್ಥ ಸೇವಾ ಸಮಿತಿ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.

ಅವರು ಸಿಂದಗಿಯ ಸ್ವಾಮಿ ರಾಮಾನಂದ ತೀರ್ಥರ ಸ್ಮಾರಕದಲ್ಲಿ ರಾಷ್ಟ್ರ ವೀರ ಸ್ವಾಮಿ ರಾಮಾಂನಂದ ತೀರ್ಥ ಸೇವಾ ಸಮಿತಿಯಿಂದ ಹಮ್ಮಿಕೊಂಡಿದ್ದ ಹೈದ್ರಾಬಾದ್ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದ ಸ್ವಾತಂತ್ರ್ಯ ಚಳುವಳಿಗೆ ದೊಡ್ಡ ಕೊಡುಗೆ ನೀಡಿದವರ ಸಾಲಿನಲ್ಲಿ ನಿಲ್ಲುವ ಪ್ರಮುಖ ನಾಯಕರೆಂದರೆ ಸ್ವಾಮಿ ರಾಮಾನಂದ ತೀರ್ಥರಾಗಿದ್ದಾರೆ. ಸರಕಾರ ಅವರ ಜನ್ಮ ದಿನವಾದ ಅಕ್ಟೋಬರ್ 3ರಂದು ಸರ್ಕಾರಿ ಜಯಂತಿಯಾಗಿ ಘೋಷಣೆ ಮಾಡಿ ಆಚರಿಸಿ ಸ್ವಾಮಿ ರಾಮಾನಂದ ತೀರ್ಥರಿಗೆ ಗೌರವಿಸಲ್ಲಿಸಬೇಕು, ಹಾಗೂ ಸಿಂದಗಿ ಯಲ್ಲಿರುವ ಅವರ ಸ್ಮಾರಕವನ್ನು ಅಭಿವೃದ್ಧಿಪಡಿಸಬೇಕೆಂದರು.

ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡ ಪಾಟೀಲ ಹಾಗೂ ಎನ್ ಸುರೇಶಕುಮಾರ ಅವರು ಮಾತನಾಡಿ  ಸಿಂದಗಿಯು ಹೈದ್ರಾಬಾದ್ ಪ್ರಾಂತ ವಿಮೋಚನಾ ಚಳುವಳಿಯ ಕೇಂದ್ರ ಸ್ಥಾನವಾಗಿದೆ. ಸಿಂದಗಿಯಲ್ಲಿ ಜನಸಿದ ಸ್ವಾಮಿ ರಾಮಾನಂದ ತೀರ್ಥರು ಚಳುವಳಿಯ ನೇತೃತ್ವ ವಹಿಸದೆ ಹೋದಲ್ಲಿ ಹೈದ್ರಾಬಾದ್ ಪ್ರಾಂತ ವಿಮೋಚನೆ ಆಗುತ್ತಿರಲಿಲ್ಲ ಅಂತಹ ಮಹಾತ್ಮರಿಗೆ ಗೌರವಿಸುವ ಕೆಲಸ ವಿಜಯಪುರ ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರ ಮಾಡಬೇಕು ಎಂದರು.

ವಿಜಯಪುರ ಜಿಲ್ಲಾ 371 ಜೆ ಹೋರಾಟಗಾರ ಲಾಯಪ್ಪ ಇಂಗಳೆ ಅವರು ಮಾತನಾಡಿ ವಿಜಯಪುರ ಜಿಲ್ಲಾಡಳಿತ ಸಿಂದಗಿ ತಾಲೂಕು ಆಡಳಿತ ಮತ್ತು ರಾಜ್ಯ ಸರಕಾರ ವಿಮೋಚನಾ ದಿನದಂದು ಗೌರವ ಸಲ್ಲಿಸಬೇಕು ಎಂದು ಮನವಿ ಮಾಡಿಕೊಳ್ಳಲಾಗಿತ್ತು ಸರಕಾರ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಅವರಿಗೆ ಗೌರವ ಸಲ್ಲಿಸದೆ  ಅಗೌರವ ತೋರಿಸುವ ಕೆಲಸ ಮಾಡಿದೆ. ಕೂಡಲೇ ಸರಕಾರ ಸ್ವಾಮಿ ರಾಮಾನಂದ ತೀರ್ಥರ ಸಿಂದಗಿಯ ಸ್ಮಾರಕವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಣೆ ಮಾಡಬೇಕು ಜೊತೆಗೆ ಅಕ್ಟೋಬರ್ 3 ರ ಅವರ ಜನ್ಮ ದಿನವನ್ನು ರಾಷ್ಟ್ರೀಯ ದಿನಾಚರಣೆಯಾಗಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಘೋಷಣೆ ಮಾಡಿ ಆಚರಣೆ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹೈದ್ರಾಬಾದ್ ವಿಮೋಚನಾ ಚಳುವಳಿ ಪಿತಾಮಹ ಸ್ವಾಮಿ ಶ್ರೀ ರಾಮಾಂನಂದ ತೀರ್ಥರ ಪ್ರತಿಮೆಗೆ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ  ಸ್ವಾಮಿ ರಾಮಾನಂದ ತೀರ್ಥರ ವಂಶಸ್ಥರಾದ ರಂಗರಾವ ಖೇಡಗಿ, ಸಮಿತಿಯ ಕಾರ್ಯದರ್ಶಿ ಪ್ರದೀಪ ದೇಶಪಾಂಡೆ, 371 ಜೆ ಹೋರಾಟಗಾರರಾದ ವಿನೋದ ಖೇಡ ಕಲ್ಲಪ್ಪ ಶಿವಶರಣ, ಚಂದ್ರಶೇಖರ ಹೊಸಮನಿ,ಬಸವರಾಜ ಕುಂಬಾರ, ಧರ್ಮಣ್ಣ ಗಬಸಾವಳಗಿ, ಬಸನಗೌಡ ಧರ್ಮಗೊಂಡ, ಶಿವಪ್ಪ ಸುಲ್ಪಿ, ಎಮ್ ಎಚ್ ಪಟೇಲ, ರಮೇಶ ದೊಡಮನಿ, ಶಬ್ಬೀರ ಪಟೇಲ ಬಿರಾದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ವಿಜಯಪುರದಲ್ಲಿ ಹೈದ್ರಾಬಾದ್ ವಿಮೋಚನಾ ದಿನಾಚರಣೆ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ನಮ್ಮ ಯುವಜನಾಂಗಕ್ಕೆ ಸ್ಫೂರ್ತಿ : ಜಗದೇವ ಸೂರ್ಯವಂಶಿ

ವಿಜಯಪುರ : ನಗರದ   ವಲ್ಲಭಾಯಿ ಪಟೇಲ ವೃತ್ತದಲ್ಲಿ ವಿಜಯಪುರ ಜಿಲ್ಲಾ 371 (ಜೆ) ಹೋರಾಟ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ  ಸ್ವಾಭಿಮಾನಿ ಸೇನೆ ವತಿಯಿಂದ ಹೈದ್ರಾಬಾದ್ ವಿಮೋಚನಾ ದಿನಾಚರಣೆ ಆಚರಿಸಲಾಯಿತು.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ರಾಜ್ಯಾಧ್ಯಕ್ಷ ಜಗದೇವ ಸೂರ್ಯವಂಶಿ ಅವರು ಮಾತನಾಡಿ  ಆಪರೇಷನ್ ಪೋಲೊ ಮೂಲಕ ಹೈದ್ರಾಬಾದ್ ಪ್ರಾಂತವನ್ನು ಭಾರತದ ಒಕ್ಕೂಟದಲ್ಲಿ ಸೇರಿಸಿದ ಕೀರ್ತಿ ಸರದಾರ ವಲ್ಲಭಾಯಿ ಪಟೇಲ ಅವರಿಗೆ ಸಲ್ಲುತ್ತದೆ. ಅಂತಹ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ನಮ್ಮ ಯುವಜನಾಂಗಕ್ಕೆ ಸ್ಫೂರ್ತಿ ಎಂದು ಹೇಳಿದರು.

ವಿಜಯಪುರ ಜಿಲ್ಲೆಯು ಹೈದ್ರಾಬಾದ್ ರಾಜ್ಯದ ಭಾಗವಾಗಿತ್ತು ಜಿಲ್ಲೆಯ ಸ್ವಾಮಿ ರಾಮಾನಂದ ತೀರ್ಥರು ವಿಮೋಚನಾ ಚಳುವಳಿಯ ನೇತೃತ್ವ ವಹಿಸಿ ವಿಮೋಚನಾ ಚಳುವಳಿಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

371 (ಜೆ ) ಹೋರಾಟಗಾರರಾದ ವಿನೋದ ಖೇಡ, ಕರವೇ ಸ್ವಾಭಿಮಾನಿ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ ಎಮ್ ಆರ್ ಗುರಿಕಾರ ಅವರು ಮಾತನಾಡಿ , ಹೈದ್ರಾಬಾದ್ ಪ್ರಾಂತ ವಿಮೋಚನಾ ಚಳುವಳಿಗೆ  ಜಿಲ್ಲೆಯ ಸಾವಿರಾರು ಜನ ಯೋಧರು ಬಲಿದಾನ ಗೈದಿದ್ದಾರೆ. ಸರ್ದಾರ ಬಸವರಾಜ ನಾಗೂರ , ಸಿದ್ದಗೊಂಡಪ್ಪಗೌಡ‌ ಪಾಟೀಲ, ಸಂಗಯ್ಯ ಹಿರೇಮಠ ಸೇರಿದಂತೆ ಹಲವರು ವಿಮೋಚನಾ ಚಳುವಳಿಗೆ ಅವಿರತವಾಗಿ ಶ್ರಮಿಸಿದ ಫಲವಾಗಿ ಹೈದ್ರಾಬಾದ್ ಪ್ರಾಂಥವು ಭಾರತದ ಒಕ್ಕೂಟ ವ್ಯವಸ್ಥೆಯ ಭಾಗವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ 371 ಜೆ ಹೊರಾಟಗಾರ ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ ಮಾತನಾಡಿ, ವಿಜಯಪುರ ಜಿಲ್ಲೆಯು  ಅಖಂಡ ಹೈದ್ರಾಬಾದ ಪ್ರಾಂತದ ಸ್ವಾತಂತ್ರ್ಯ ಚಳುವಳಿಯ ಹೆಬ್ಬಾಗಿಲಾಗಿದೆ. ಇಲ್ಲಿನ ಚಳುವಳಿಗಾರರು ನೇತೃತ್ವ ವಹಿಸಿದ್ದಕ್ಕಾಗಿ ಹೈದ್ರಾಬಾದ್ ಪ್ರಾಂತ ವಿಮೋಚನೆಗೊಂಡಿದೆ. ವಿಮೋಚನೆ ಚಳುವಳಿಯ ಶ್ರೇಯಸ್ಸು ಸ್ವಾಮಿ ರಾಮಾನಂದ ತೀರ್ಥರಿಗೆ ಸಲ್ಲಬೇಕು ಎಂದು ಹೇಳಿದ ಅವರು ವಿಜಯಪುರ ಜಿಲ್ಲೆಯನ್ನು ಸರ್ಕಾರ 371 ಜೆ ಮೀಸಲಾತಿ ಅಡಿ ಸೇರಿಸಿ ಜಿಲ್ಲೆಯ ಹೈದ್ರಾಬಾದ ವಿಮೋಚನಾ ಚಳುವಳಿಗಾರರಿಗೆ ಗೌರವ ಸಲ್ಲಿಸಬೇಕೆಂದರು.

ಕಾರ್ಯಕ್ರಮದಲ್ಲಿ ಹೋರಾಟಗಾರರಾದ ಮಲ್ಲಿಕಾರ್ಜುನ ಬಟಗಿ, ಅನಿಲ ಇಕ್ಕಡೆ, ಚಂದ್ರಶೇಖರ ಹೊಸಮನಿ, ಮಲ್ಲನಗೌಡ ಬಿರಾದಾರ,ಮಲ್ಲಿಕಾರ್ಜುನ ಲಂಗೋಟಿ, ಅಂಬಣ್ಣ ಗುನ್ನಾಪೂರ, ನೀಲಾಂಬಿಕಾ ಬಿರಾದಾರ , ಈಶ್ವರ ಚಂದ್ರ ಪಡಗಾನೂರ, ಶಂಕರ ಸಾತಪೋತೆ, ಶರಣಪ್ಪ ಕಟ್ಟಿ, ತಿಮ್ಮನಗೌಡ ಪಾಟೀಲ, ರಾಜಕುಮಾರ ಉಪ್ಪಾರ, ಚಿದಾನಂದ ಹಳ್ಳಿ, ವಿಠ್ಠಲ ಕರಿಗಾರ, ಉಮೇಶ ದೊಡಮನಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



Sunday, September 13, 2026

ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ: ಕುಲಸಚಿವ ಸೋಮಲಿಂಗ ಗೆಣ್ಣೂರ


ವಿಜಯಪುರ: ಪುಸ್ತಕಗಳು ನಮ್ಮ ದಿನನಿತ್ಯದ ಗೆಳೆಯರಾಗಬೇಕು, ಪುಸ್ತಕಪ್ರೀತಿಯಿಂದ ಮನುಷ್ಯರೂಪದ ಜೀವಿಯೊಬ್ಬ ನಿಜವಾದ ಮನುಷ್ಯನಾಗಿ ರೂಪುಗೊಳ್ಳುವುದು ಸಾಧ್ಯವಾಗುತ್ತದೆಂದು ಬಾಗಲಕೋಟೆ ವಿಶ್ವವಿದ್ಯಾಲಯದ ಕುಲಸಚಿವರು ಹಾಗೂ ಈ ಹಿಂದಿನ ವಿಜಯಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾಗಿದ್ದ ಸೋಮಲಿಂಗ ಗೆಣ್ಣೂರ ಹೇಳಿದರು. 

ವಿಜಯಪುರದ ನವರಸಪುರದಲ್ಲಿರುವ ತಿಕೋಟಾದ ನೇತ್ರಾಧಿಕಾರಿ ಡಾ. ಪ್ರಕಾಶ ಪರಣಾಕಾರ ಅವರ ಮನೆಯಲ್ಲಿ ನಡೆದ ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಪ್ರತಿಯೊಂದು, ನಿಜವಾದ ಪುಸ್ತಕದ ಒಳಗೂ ನಮ್ಮೊಂದಿಗೆ ಸಂವಾದಕ್ಕೆ ಹಾತೊರೆಯುವ ಒಂದು ವ್ಯಕ್ತಿತ್ವ ಮತ್ತು ಮನಸ್ಸಿದೆ ದಿಕ್ಕು ತಪ್ಪಿಸುವ, ಮೌಢ್ಯಬಿತ್ತುವ ಕಂದಾಚಾರಕ್ಕೆ ದೂಡುವ ಪುಸ್ತಕಗಳ ತಿರಸ್ಕರಿಸಿ, ವೈಚಾರಿಕ ಹಾಗೂ ವೈಜ್ಞಾನಿಕತೆ ಬಿತ್ತುವ ಪುಸ್ತಕಗಳ ಓದಬೇಕು ಎಂದರು.

ಈ ಸಂದರ್ಭ ಡಾ. ಮಹಾಂತೇಶ ಬಿರಾದಾರ ಮಾತನಾಡಿ, ಒಂದು ಪುಸ್ತಕವನ್ನೋದುವುದೆಂದರೆ ಬಸವಣ್ಣನ ಸಮಸಮಾಜವನು ಮುನ್ನಡೆಸುವುದು ಎಂದರ್ಥ. ಅದೊಂದು ಹೊಸ ಅನುಭವ ಹಾಗೂ ಪ್ರಪಂಚದಲ್ಲಿ ಸಹೃದಯರು ಕೈಗೊಳ್ಳುವ ಪರ್ಯಟನವೋ ಅಥವಾ ರಸಯಾತ್ರೆಯೋ ಆಗಿರುತ್ತದೆ ಎಂದರು.

ಕನ್ನಡ ಪುಸ್ತಕ ಪ್ರಾಧಿಕಾರದ ವಿಜಯಪುರ ಜಿಲ್ಲಾ ಗ್ರಂಥಾಲಯ ಜಾಗೃತಿ ಸಮಿತಿ ಸದಸ್ಯ ಪ್ರೊ. ಬಸವರಾಜ ಜಾಲವಾದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪುಸ್ತಕ ಓದುವವನು ಒಂದೇ ಜನ್ಮದಲ್ಲಿ ಸಾವಿರ ಜೀವನ ಕಾಣಬಲ್ಲ, ಆದರೆ ಪುಸ್ತಕ ಓದದವನು ಒಂದು ಹುಟ್ಟಿನಲ್ಲಿ ಕೇವಲ ಒಂದೇ ಜೀವನ ಅನುಭವಿಸಬಲ್ಲ’ ಎಂದು ನೆನಪಿಸಿ, ಬುದ್ಧ, ಬಸವ, ಅಂಬೇಡ್ಕರರೇ ಈ ಜನ್ಮಕೆಷ್ಟು ಪುಸ್ತಕ ಓದಿದ ಬಳಿಕ ಇವನಾರವ, ಇವನಾರವ ಎನ್ನದೇ ಇಂವ ನಮ್ಮಂವ, ಇಂವ ನಮ್ಮವ ಎಂದಾದರೆ ಓದಿದ್ದಕ್ಕೂ ಸಾರ್ಥಕವಾಯಿತು ಎಂದು ಪುಸ್ತಕದ ಮಹತ್ವ ಸಾರಿದರು.

ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಕಕಮರಿ ಗುರುದೇವಾಶ್ರಮದ ಪರಮಪೂಜ್ಯ ಶ್ರೀ ಆತ್ಮಾರಾಮ ಮಹಾಸ್ವಾಮಿಗಳು ಕನ್ನಡ ಪುಸ್ತಕ ಪ್ರಾಧಿಕಾರದವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿ, ಇದೊಂದು ಆದರ್ಶ ಕಾರ್ಯಕ್ರಮ ಪ್ರತಿಯೊಬ್ಬರ ಮನೆಯಲ್ಲೂ ಈ ತರದ ಕಾರ್ಯಕ್ರಮಗಳನ್ನ ಮಾಡಿದಾಗ ಪುಸ್ತಕ ಪ್ರೀತಿಯ ಬಗ್ಗೆ ಒಲವು ಮೂಡುತ್ತದೆ ಹಾಗೂ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಬೇಕೆಂದು ಕರೆಕೊಟ್ಟರು. ಸ್ವಾಮಿಗಳಾದವರ ನಿಜವಾದ ಅಭಿಲಾಶೆಯೂ ಇದೇ ಆಗಿರುತ್ತದೆ. ಸಮಾಜ ಈ ತರದ ಕಾರ್ಯಕ್ರಮ ಹಮ್ಮಿಕೊಂಡು ಕತ್ತಲಿನಿಂದ ಹೊರಬರಲು ಕರೆಕೊಟ್ಟರು.

ಯರಡೋಣದ ಕುಮಾರೇಶ್ವರ ಸ್ವಾಮಿಗಳು, ಪ್ರಗತಿಪರ ರೈತ ಮಲ್ಲಿಕಾರ್ಜುನ ಹಂಜಗಿ, ಶ್ರೀಧರ್ ಮುರಾಳೆ, ಬಾಬೂರಾವ ಮಹಾರಾಜ, ವೀರೇಶ ಹಿರೇಮಠ ವೇದಿಕೆ ಮೇಲಿದ್ದರು.

ಬಸವರಾಜ ಬೆಳಗಲಿ ಸ್ವಾಗತಿಸಿದರು.ಸಿದ್ಧಾರ್ಥ ಪರಣಾಕರ ವಂದಿಸಿದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಕಲ್ಯಾಣ ಕರ್ನಾಟಕ ಸಾರಿಗೆಯ ವಿಜಯಪುರ ವಿಭಾಗದಲ್ಲಿ ಹೈದ್ರಾಬಾದ್ ವಿಮೋಚನಾ ದಿನ ಆಚರಣೆಗೆ ಆಗ್ರಹಿಸಿ ಮನವಿ



ವಿಜಯಪುರ : ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗೀಯ
 ಕಚೇರಿ ಹಾಗೂ ಎಲ್ಲ ಘಟಕಗಳಲ್ಲಿ ಹೈದ್ರಾಬಾದ್ ವಿಮೋಚನಾ ದಿನಾಚರಣೆ (ಕಲ್ಯಾಣ ಕರ್ನಾಟಕ ಉತ್ಸವ ) ಆಚರಿಸಲು ಆಗ್ರಹಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ಎಮ್ ವೈ ಪಾಟೀಲ ಹಾಗೂ ವಿಭಾಗೀಯ ನಿಯಂತ್ರಣಾಧಿಕಾರಿ ದೇವಾನಂದ ಬಿರಾದಾರ ಅವರಿಗೆ ಸಾರಿಗೆ ಅಧಿಕಾರಿ ಮಂಜುನಾಥ ಕೋಟ್ಯಾಳ ಅವರ ಮೂಲಕ ವಿಜಯಪುರ ಜಿಲ್ಲಾ  371 (ಜೆ) ಹೋರಾಟ ಸಮಿತಿಯಿಂದ ಇಂದು ಮನವಿ ಸಲ್ಲಿಸಿದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಲ್ಲ  ವಿಭಾಗಗಳಲ್ಲಿ ಹೈದ್ರಾಬಾದ್ ವಿಮೋಚನಾ ದಿನ (ಕಲ್ಯಾಣ ಕರ್ನಾಟಕ ಉತ್ಸವ) ವನ್ನು ಆಚರಣೆ ಮಾಡುತ್ತ ಬರುತ್ತಿದ್ದಾರೆ.ಈ ಬಾರಿ ವಿಜಯಪುರ  ವಿಭಾಗದ ಕೇಂದ್ರ ಕಚೇರಿ ಸೇರಿದಂತೆ ಎಲ್ಲ ಘಟಕಗಳಲ್ಲಿ ಹೈದ್ರಾಬಾದ್ ವಿಮೋಚನಾ ದಿನ (ಕಲ್ಯಾಣ ಕರ್ನಾಟಕ ಉತ್ಸವ ) ಆಚರಣೆ ಮಾಡಿ ವಿಮೋಚನಾ ಚಳುವಳಿ ನೇತೃತ್ವ ವಹಿಸಿದ 
ಸ್ವಾಮಿ ರಾಮಾನಂದ ತೀರ್ಥರು, ಸರ್ದಾರ ಡಾ ಬಸವರಾಜ ನಾಗೂರು, ಸಿದ್ದಗೊಂಡಪ್ಪಗೌಡ ಪಾಟೀಲ ಅವರು ಸೇರಿದಂತೆ ಈ ಭಾಗದ ಅನೇಕ ಸ್ವಾತಂತ್ರ‍್ಯ  ಹೋರಾಟಗಾರರು ಹಾಗೂ ವಿಮೋಚನಾ ಚಳುವಳಿಯ ಮಹಾನ್ ಚೇತನಗಳಿಗೆ ಗೌರವ ಸಲ್ಲಿಸಬೇಕು ಎಂದು ಹೋರಾಟಗಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಹೋರಾಟಗಾರರಾದ ವಿನೋದ ಖೇಡ ಲಾಯಪ್ಪ ಇಂಗಳೆ ಅನಿಲ ಇಕ್ಕಡೆ, ಗಿರೀಶ ಕಲಘಟಗಿ ಸೇರಿದಂತೆ  ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ವಿಜಯಾನಂದ ಟ್ರಾವೆಲ್ಸ್ ಹೊಸ ದಾಖಲೆ!

 ಸಾರಿಗೆ ಕ್ಷೇತ್ರದಲ್ಲಿ ವಿಜಯಾನಂದ ಟ್ರಾವೆಲ್ಸ್ ಪ್ರೈ.ಲಿ. (ವಿಟಿಪಿಎಲ್) ಹೊಸ ದಾಖಲೆ ಬರೆದಿದೆ. ವೋಲ್ವೋ ಇಂಡಿಯಾ ಸಂಸ್ಥೆ ಮೂಲಕ ಸಿಂಗಲ್ ಆರ್ಡರ್‌ನಲ್ಲಿ 150 ವೋಲ್ವೋ ಬಸ್‌ಗಳನ್ನು ಖರೀದಿಸಿದೆ. ವಿಜಯಾನಂದ ಟ್ರಾವೆಲ್ಸ್ ಪ್ರೈ.ಲಿ.ಗೆ  150 ವೋಲ್ವೋ-9600 ಐಷಾರಾಮಿ ಸ್ಲೀಪರ್ ಕೋಚ್ ಗೋಲ್ಡ್ ಕ್ಲಾಸ್ ಬಸ್‌ಗಳನ್ನು ಹಸ್ತಾಂತರಿಸಿತು. ಈ ಒಪ್ಪಂದವು ಖಾಸಗಿ ಟ್ರಾವೆಲ್ಸ್‌ವೊಂದು ವೋಲ್ವೋ ಬಸ್‌ಗೆ ನೀಡಿದ ಅತಿದೊಡ್ಡ ಆರ್ಡರ್ ಆಗಿದೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ವೋಲ್ವೋ ಸಂಸ್ಥೆಯ ಎಂಡಿ ಮತ್ತು ಸಿಇಒ ಬಿ. ಶ್ರೀನಿವಾಸ್ ಅವರು ವಿಆರ್‌ಎಲ್ ಮೀಡಿಯಾ ಪ್ರೈ.ಲಿ. ವ್ಯವಸ್ಥಾಪಕ ನಿರ್ದೇಶಕ ಡಾ. ಆನಂದ ಸಂಕೇಶ್ವರ ಹಾಗೂ ವಿಜಯಾನಂದ ಟ್ರಾವೆಲ್ಸ್ ಪ್ರೈ.ಲಿ. ವ್ಯವಸ್ಥಾಪಕ ನಿರ್ದೇಶಕ ಶಿವಾ ಸಂಕೇಶ್ವರ ಅವರಿಗೆ ಕೀ ಹಸ್ತಾಂತರಿಸುವ ಮೂಲಕ ಬಸ್‌ಗಳನ್ನು ನೀಡಿದರು. ವೋಲ್ವೋ ಸಂಸ್ಥೆಯ ವಿಇ ವಾಣಿಜ್ಯ ವಾಹನಗಳು ವಿಭಾಗದ ಮುಖ್ಯ ವಾಣಿಜ್ಯ ಅಧಿಕಾರಿ ಎಸ್.ಎಸ್. ಗಿಲ್ ಮತ್ತು ವಿಇ ವಾಣಿಜ್ಯ ವಾಹಗಳ ಇವಿಪಿ ಬಸ್ ವಿಭಾಗದ ಸುರೇಶ್ ಚೆಟ್ಟಿಯಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಆನಂದ ಸಂಕೇಶ್ವರ, 1996ರಲ್ಲಿ ವಿಜಯಾನಂದ ಟ್ರಾವೆಲ್ಸ್ ಆರಂಭವಾಯಿತು. 2007ರಿಂದ ವೋಲ್ವೋ ಕಂಪನಿ ಜತೆ ನಮ್ಮ ಒಪ್ಪಂದವಿದೆ. ಮೊದಲು 20 ಬಸ್‌ಗಳನ್ನು ಖರೀದಿ ಮಾಡಲಾಗಿತ್ತು. 2012ರ ವೇಳೆ 100 ಬಸ್‌ಗಳನ್ನು ಆರ್ಡರ್ ಮಾಡಿದ್ದೇವು. ಈಗ 150 ಬಸ್‌ಗಳನ್ನು ಆರ್ಡರ್ ಮಾಡಿದ್ದೇವೆ. ರಾಜ್ಯ ಮತ್ತು ದೇಶಾದ್ಯಂತ ನಮ್ಮ ನೆಟ್‌ವರ್ಕ್ ಇರುವುದರಿಂದ ಪ್ರಯಾಣಿಕರಿಗೆ ಅತಿ ಉತ್ತಮವಾದುದನ್ನು ನೀಡಲು ಬಯಸುತ್ತೇವೆ ಎಂದರು.
ಇತ್ತೀಚಿನ ದಿನಗಳಲ್ಲಿ ಪ್ರಯಾಣಿಕರು ಬಸ್ ಬುಕ್ ಮಾಡುವ ವೇಳೆಯೇ ಶೌಚಾಲಯದ ವ್ಯವಸ್ಥೆ ಇದೆಯೇ ಎಂಬುದನ್ನು ಕೇಳಿ ಬುಕ್ ಮಾಡುತ್ತಿದ್ದಾರೆ. ಶೌಚಾಲಯದ ವ್ಯವಸ್ಥೆ ಇರುವುದರಿಂದ ಪ್ರಯಾಣ ಅವಧಿ ಕೂಡ ಕಡಿಮೆಯಾಗಲಿದೆ. ಶೌಚಕ್ಕಾಗಿ ಒಂದೆಡೆ ಬಸ್ ನಿಲ್ಲಿಸಿದರೆ ಅರ್ಧ ಗಂಟೆ ಸಮಯ ವ್ಯರ್ಥವಾಗುತ್ತಿತ್ತು. ಈ ಸಮಯ ಉಳಿಯುವುದರಿಂದ ನಿಗದಿತ ಸಮಯಕ್ಕಿಂತ ಮೊದಲೇ ನಿಗದಿತ ಸ್ಥಳವನ್ನು ತಲುಲಿದರೆ, ಪ್ರಯಾಣಿಕರ ಪ್ರಯಾಣದ ಅವಧಿ ಕಡಿಮೆಯಾಗಿ ಬೇಗ ಸ್ಥಳವನ್ನು ತಲುಪಲಿದ್ದಾರೆ ಎಂದರು.

ಅನುಮಾನವೇ ಬೇಡ, ವೋಲ್ವೋ ನೆಕ್ಟ್ ಲೆವೆಲ್: ಶಿವಾ ಸಂಕೇಶ್ವರ
ಎಲ್ಲ ಬಸ್‌ಗಳನ್ನು ಒಂದು ಕಡೆ ನಿಲ್ಲಸಿದರೆ, ವೋಲ್ವೋ ಮತ್ತೊಂದು ಕಡೆ ನಿಲ್ಲಲ್ಲಿದೆ. ವೋಲ್ವೋಗೆ ತನ್ನದೇ ವಿಶೇಷತೆ ಮತ್ತು ಆಕರ್ಷಕ ಹೊರನೋಟವಿದೆ. ಆದ್ದರಿಂದಲೇ ಹೇಳುತ್ತಿದ್ದೇನೆ, ಅನುಮಾನವೇ ಬೇಡ, ವೋಲ್ವೋ ನೆಕ್ಟ್ ಲೆವೆಲ್‌ಗೆ ಇದೆ. ಈ ಮೊದಲು ಸ್ವೀಡನ್‌ನಲ್ಲಿ ಉತ್ಪಾದನೆ ಮಾಡಲಾಗುತ್ತಿತ್ತು. ಈಗ ಹೊಸಕೋಟೆ ಘಟಕದಲ್ಲಿಯೇ ಎಲ್ಲ ಬಸ್‌ಗಳನ್ನು ಉತ್ಪಾದನೆ ಮಾಡಲಾಗುತ್ತಿದೆ ಎಂದು ವಿಜಯಾನಂದ ಟ್ರಾವೆಲ್ಸ್ ಪ್ರೈ.ಲಿ. ವ್ಯವಸ್ಥಾಪಕ ನಿರ್ದೇಶಕ ಶಿವ ಸಂಕೇಶ್ವರ ತಿಳಿಸಿದರು.

ಸುರಕ್ಷತೆ, ವಿಶ್ವಾಸಾರ್ಹತೆಯ ಪಾಲುದಾರಿಕೆ: ಶ್ರೀನಿವಾಸ್
ಈ ಹೂಡಿಕೆಯು ತಂತ್ರಜ್ಞಾನ, ಸುರಕ್ಷತಾ ಇಂಜಿನಿಯರಿಂಗ್ ಮತ್ತು ಸೇವಾ ಪರಿಸರ ವ್ಯವಸ್ಥೆಯಲ್ಲಿ ನಿರಂತರ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ ಎಂದು ವೋಲ್ವೋ ಸಂಸ್ಥೆಯ ಎಂಡಿ ಮತ್ತು ಸಿಇಒ ಬಿ. ಶ್ರೀನಿವಾಸ್ ತಿಳಿಸಿದರು.
ಭಾರತದಲ್ಲಿ ವೋಲ್ವೋ ಬಸ್‌ಗಳ ಅತ್ಯಂತ ಮೌಲ್ಯಯುತ ಮತ್ತು ದೀರ್ಘಕಾಲೀನ ಖಾಸಗಿ ಆಪರೇಟರ್ ಪಾಲುದಾರರಲ್ಲಿ ವಿಜಯಾನಂದ ಟ್ರಾವೆಲ್ಸ್ ಒಂದಾಗಿದೆ. ಈ ಹೆಗ್ಗುರುತು ಆದೇಶವು ದಶಕಗಳಿಂದ ನಿರ್ಮಿಸಲಾದ ನಂಬಿಕೆಗೆ ಪ್ರಬಲ ಸಾಕ್ಷಿಯಾಗಿದೆ. ಪ್ರಯಾಣಿಕರ ಸುರಕ್ಷತೆ, ಸೌಕರ್ಯ ಮತ್ತು ವಿಶ್ವಾಸಾರ್ಹತೆಗೆ ಅತ್ಯುನ್ನತ ಮಾನದಂಡವನ್ನು ನಿಗದಿಪಡಿಸುವ ನಿರ್ವಾಹಕರಿಗೆ ಆದ್ಯತೆಯ ವೇದಿಕೆಯಾಗಲು ನಾವು ಅಪಾರ ಹೆಮ್ಮೆಪಡುತ್ತೇವೆ ಎಂದರು.

ವಿಮಾನ ಮಾದರಿ ಶೌಚಾಲಯ ವ್ಯವಸ್ಥೆ
ಸಾಮಾನ್ಯವಾಗಿ ದೂರದ ಪ್ರಯಾಣದ ವೇಳೆ ಅಗತ್ಯವಾಗಿ ಬೇಕಾಗಿರುವುದು ಶೌಚಾಲಯ. ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳು ಪ್ರಯಾಣಕ್ಕೆ ಶೌಚಾಲಯವಿದ್ದರೆ ಆರಾಯಾಗಿ ಪ್ರಯಾಣ ಮಾಡಬಹುದು. ವೋಲ್ವೋ 9600 ಕೋಚ್‌ನಲ್ಲಿ ವಿಮಾನದಲ್ಲಿರುವಂತೆ ಶೌಚಾಲಯದ ವ್ಯವಸ್ಥೆ ಇದೆ. ಇದರಿಂದ ದೂರದ ಪ್ರಯಾಣಕ್ಕೆ ಹೇಳಿ ಮಾಡಿಸಿದ ಕೋಚ್ ಆಗಿದೆ. ಶೌಚಕ್ಕೆ ಹೋದಾಗಲೂ ಬಸ್ ಕುಲುಕುವುದಿಲ್ಲ. ಮನೆಗಳಲ್ಲಿನ ಶೌಚಕ್ಕೆ ಹೋದಾಗ ಆಗುವ ಅನುಭವವೇ ಇಲ್ಲಿಯೂ ಆಗಲಿದೆ.
ಆರಾಮದಾಯಕ ಸೀಟುಗಳು
ನೂರಾರು ಕಿಮೀ ಪ್ರಯಾಣ ಮಾಡುವುದರಿಂದ ಸ್ಲೀಪರ್ ಕೋಚ್‌ಗಳಲ್ಲಿನ ಸೀಟುಗಳು ಬಹಳ ಮುಖ್ಯ ಪಾತ್ರ ವಹಿಸಲಿವೆ. ಮೃದುವಾದ ಸೀಟುಗಳನ್ನು ಅಳವಡಿಸಲಾಗಿದ್ದು, ಗ್ರಾಹಕರು ತಮ್ಮ ಮನೆಯಲ್ಲಿ ಮಲಗಿರುವ ಭಾವನೆ ಬರಲಿದೆ. ಸೀಟುಗಳು ವಿಶಾಲವಾಗಿದ್ದು, ಎಲ್ಲಿಯೂ ಕಿಷ್ಕಿಂಧೆ ಎನಿಸುವುದಿಲ್ಲ. ನೂರಾರು ಕಿಮೀ ದೂರ ಪ್ರಯಾಣಿಸಿದರೂ ಮೈಕೈ ನೋವು ಬಾರದಂತೆ ಆರಾಮದಾಯಕವಾಗಿರುವಂತೆ ಮಾಡಿರುವುದು ಪ್ರಯಾಣಿಕರ ಆಕರ್ಷಣೆಯಾಗಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

1,000 ಬಡ ವಿದ್ಯಾರ್ಥಿಗಳಿಗೆ ಶ್ರೀರಾಮ್ ಫೈನಾನ್ಸ್ ವಿದ್ಯಾರ್ಥಿವೇತನ


ವಿಜಯಪುರ: ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ವಿಜಯಪುರ ರೀಜನ್ ವತಿಯಿಂದ ನಗರದ ಆನಂದನಗರದಲ್ಲಿರುವ ಭಾವಸಾರ ಕ್ಷತ್ರೀಯ ಮಂಗಲ ಕಾರ್ಯಾಲಯದಲ್ಲಿ ಬೃಹತ್ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 1,000 ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಬಳ್ಳಾರಿ ಜೋನಲ್ ಬಿಸಿನೆಸ್ ಹೆಡ್ ಚೆನ್ನನಗೌಡ ಎಚ್. ಮಾತನಾಡಿ, ಶಿಕ್ಷಣದಿಂದ ಯಾವುದೇ ಮಗು ವಂಚಿತವಾಗಬಾರದು ಎಂಬ ಉದ್ದೇಶದಿಂದ ಸಂಸ್ಥೆ ವಿದ್ಯಾರ್ಥಿವೇತನ ಯೋಜನೆಯನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು.

1974ರಲ್ಲಿ ಆರಂಭಗೊಂಡ ಸಂಸ್ಥೆ, 1979ರಲ್ಲಿ ಶ್ರೀರಾಮ್ ಟ್ರಾನ್ಸ್‌ಪೋರ್ಟ್ ಫೈನಾನ್ಸ್ ಆಗಿ ಕಾರ್ಯನಿರ್ವಹಿಸಿ, ಇದೀಗ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಆಗಿ ದೇಶದ ಪ್ರಮುಖ ಎನ್‌ಬಿಎಫ್‌ಸಿ ಸಂಸ್ಥೆಗಳಲ್ಲಿ ಒಂದಾಗಿ ಬೆಳೆದಿದೆ. ಸಂಸ್ಥಾಪಕ ಪದ್ಮಭೂಷಣ ಆರ್. ತ್ಯಾಗರಾಜನ್ ಅವರ ದೂರದೃಷ್ಟಿಯಂತೆ ಚಾಲಕರು ಹಾಗೂ ಸಣ್ಣ ವ್ಯಾಪಾರಿಗಳನ್ನು ಆರ್ಥಿಕವಾಗಿ ಸಬಲಗೊಳಿಸುವ ಕಾರ್ಯಕ್ಕೆ ಸಂಸ್ಥೆ ಆದ್ಯತೆ ನೀಡಿದೆ ಎಂದು ತಿಳಿಸಿದರು.

ಲಾರಿ ಹಾಗೂ ಟ್ರಕ್ ಚಾಲಕರು, ಕ್ಲೀನರ್‌ಗಳು ತಮ್ಮ ವೃತ್ತಿಯ ನಿಮಿತ್ತ ಸದಾ ಊರೂರು ಸಂಚರಿಸುವುದರಿಂದ ಅವರ ಮಕ್ಕಳ ಶಿಕ್ಷಣಕ್ಕೆ ಯಾವುದೇ ರೀತಿಯ ಅಡಚಣೆಯಾಗಬಾರದು ಎಂಬ ಉದ್ದೇಶದಿಂದ ಈ ವಿದ್ಯಾರ್ಥಿವೇತನ ಯೋಜನೆ ರೂಪಿಸಲಾಗಿದೆ. ವಿಶೇಷವಾಗಿ ಚಾಲಕರ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವ ಮೂಲಕ ಅವರ ವಿದ್ಯಾಭ್ಯಾಸ ಮುಂದುವರಿಸಲು ಸಂಸ್ಥೆ ಪ್ರೋತ್ಸಾಹ ನೀಡುತ್ತಿದೆ. ಇದರ ಜೊತೆಗೆ ಬಡ ಕುಟುಂಬಗಳ ಪ್ರತಿಭಾವಂತ ಮಕ್ಕಳು ಆರ್ಥಿಕ ಸಮಸ್ಯೆಯಿಂದ ಶಿಕ್ಷಣ ಮೊಟಕುಗೊಳಿಸಬಾರದು ಎಂಬ ಆಶಯದಿಂದ ದೇಶಾದ್ಯಂತ ಪ್ರತಿವರ್ಷ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಂಸ್ಥೆ ವಿದ್ಯಾರ್ಥಿವೇತನ ನೀಡುತ್ತಿದೆ ಎಂದರು.

8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ₹4,000 ಹಾಗೂ ಪಿಯುಸಿ 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ₹4,500 ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಕನಿಷ್ಠ ಶೇ.60 ಅಂಕ ಗಳಿಸುವ ಅರ್ಹ ವಿದ್ಯಾರ್ಥಿಗಳಿಗೆ ಈ ನೆರವನ್ನು ನಿರಂತರವಾಗಿ ಒದಗಿಸಲಾಗುತ್ತಿದೆ ಎಂದು ವಿವರಿಸಿದರು.

ಶ್ರೀರಾಮ್ ಫೌಂಡೇಶನ್ ಮೂಲಕ ವಿದ್ಯಾರ್ಥಿವೇತನದ ಜತೆಗೆ ವಿವಿಧ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಕಿವುಡ ಮಕ್ಕಳ ಶಾಲೆ ನಡೆಸುವುದು, ವೃದ್ಧಾಶ್ರಮಗಳ ನಿರ್ವಹಣೆ, ಪರಿಸರ ಸಂರಕ್ಷಣೆಗಾಗಿ ಗಿಡ ನೆಡುವುದು, ಸ್ವಚ್ಛತಾ ಕಾರ್ಯಕ್ರಮಗಳು ಹಾಗೂ ಅಂಧ ಮಕ್ಕಳಿಗೆ ನೆರವು ಸೇರಿದಂತೆ ಹಲವು ಸಾಮಾಜಿಕ ಸೇವಾ ಕಾರ್ಯಗಳನ್ನು ಸಂಸ್ಥೆ ನಡೆಸುತ್ತಿದೆ ಎಂದು ತಿಳಿಸಿದರು.

ಮಸೂತಿಯ ಜಗದೀಶ್ವರ ಹಿರೇಮಠದ ಶ್ರೀ ಮ.ಘ.ಚ. ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದರು.

ಹಿರಿಯ ವೈದ್ಯ ಡಾ. ಎಲ್.ಎಚ್. ಬಿದರಿ ಮಾತನಾಡಿ, ಶ್ರೀರಾಮ್ ಫೈನಾನ್ಸ್ ನೀಡುತ್ತಿರುವ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು, ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಬೇಕು. ಆರ್ಥಿಕ ನೆರವು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ದೊರೆತಿರುವ ಉತ್ತಮ ಅವಕಾಶವಾಗಿದ್ದು, ಪರಿಶ್ರಮ, ಶಿಸ್ತು ಹಾಗೂ ಆತ್ಮವಿಶ್ವಾಸದಿಂದ ಮುನ್ನಡೆದು ಸಮಾಜಕ್ಕೆ ಕೊಡುಗೆ ನೀಡುವ ವ್ಯಕ್ತಿಗಳಾಗಬೇಕು ಎಂದು ಪ್ರೇರೇಪಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ. ಹೊಸೂರ, ವಿಜಯಪುರ ಮಹಾನಗರ ಪಾಲಿಕೆ ಮಹಾಪೌರ ಮಡಿವಾಳಪ್ಪ ಕರಡಿ, ವಿ.ಡಿ.ಎ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಮಹಾನಗರ ಪಾಲಿಕೆ ಸದಸ್ಯೆ ರಶ್ಮಿ ಬಿ. ಕೋರಿ, ಲಾರಿ ಅಸೋಸಿಯೇಶನ್ ಅಧ್ಯಕ್ಷ ಆಸೀಫ್ ಎಲ್. ಬಗಲಿ (ಪಟ್ಟೇಲ), ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಎಚ್.ಆರ್. ಚಿಂಚಲಿ ಭಾಗವಹಿಸಿದ್ದರು.

ವಿಜಯಪುರ ರೀಜನಲ್ ಬಿಸಿನೆಸ್ ಹೆಡ್ ಉಮೇಶ ಬಿರಾದಾರ ಹಾಗೂ ಸಿಬ್ಬಂದಿ ವರ್ಗದವರು ಆಗಮಿಸಿದ ಎಲ್ಲ ಅತಿಥಿ-ಗಣ್ಯರನ್ನು, ವಿದ್ಯಾರ್ಥಿಗಳನ್ನು ಹಾಗೂ ಪಾಲಕರನ್ನು ಸ್ವಾಗತಿಸಿ ಸತ್ಕರಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



Saturday, September 5, 2026

ಅರ್ಜುನ್ ರಾಠೋಡ್ ಅವರನ್ನು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ


ವಿಜಯಪುರ: ಬಂಜಾರ ಸಮಾಜದ ಹಿರಿಯ ನಾಯಕ ಹಾಗೂ ಕಾಂಗ್ರೆಸ್ ಪಕ್ಷದ ಸಕ್ರಿಯ ಮುಖಂಡರಾದ ಶ್ರೀ ಅರ್ಜುನ್ ರಾಠೋಡ್ ಅವರನ್ನು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ವಿಜಯಪುರ ಜಿಲ್ಲಾ ಬಂಜಾರ ಸಮಾಜ ಹಾಗೂ ಕಾಂಗ್ರೆಸ್ ಬಂಜಾರಾ ಕಾರ್ಯಕರ್ತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಸಚಿವ ರುದ್ರಪ್ಪ ಲಮಾಣಿ ಹಾಗೂ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಮಾಜದ ಮುಖಂಡರು ಮುಂದಾಗಿದ್ದಾರೆ.
ಅರ್ಜುನ್ ರಾಠೋಡ್ ಅವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಬಂಜಾರ ಸಮಾಜದ ವಿವಿಧ ಸಮಸ್ಯೆಗಳು, ಹಕ್ಕುಗಳು ಹಾಗೂ ಅಭಿವೃದ್ಧಿ ವಿಚಾರಗಳ ಕುರಿತು ನಿರಂತರವಾಗಿ ಧ್ವನಿ ಎತ್ತಿಕೊಂಡು ಬಂದಿದ್ದಾರೆ. ಅವರು ಬಂಜಾರ ಮಹಾಸಭೆಯ ಅಧ್ಯಕ್ಷರಾಗಿ ಹಾಗೂ ವಿಜಯಪುರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿ ಸಮಾಜ ಮತ್ತು ಪಕ್ಷದ ಸಂಘಟನೆಗೆ ಸೇವೆ ಸಲ್ಲಿಸಿದ್ದಾರೆ ಎಂದು ಮುಖಂಡರು ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಬಂಜಾರ ಸಮಾಜದ ಮತದಾರರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದ್ದು, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಸಮಾಜದ ಮತಗಳು ನಿರ್ಣಾಯಕವಾಗಿವೆ. ಅರ್ಜುನ್ ರಾಠೋಡ್ ಅವರು ಪ್ರಬಲ ಕಾಂಗ್ರೆಸ್ ಆಕಾಂಕ್ಷಿಯಾಗಿದ್ದರೂ ಪಕ್ಷದ ಟಿಕೆಟ್ ದೊರೆಯದ ಸಂದರ್ಭದಲ್ಲಿ ಪಕ್ಷದ ನಿಷ್ಠೆ ತೋರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರ ಪರವಾಗಿ ಸಚಿವ ಎಂ.ಬಿ. ಪಾಟೀಲ ಹಾಗೂ ಅರ್ಜುನ್ ರಾಠೋಡ್ ಅವರ ನೇತೃತ್ವದಲ್ಲಿ ಬಂಜಾರ ಸಮಾಜದ ಬೃಹತ್ ಸಮಾವೇಶ ಆಯೋಜಿಸಿ ಬೆಂಬಲ ನೀಡಲಾಗಿತ್ತು ಎಂದು ಮುಖಂಡರು ಹೇಳಿದ್ದಾರೆ.
ಪಕ್ಷದ ಮೇಲಿನ ನಿಷ್ಠೆ, ಸಮಾಜ ಸೇವೆ, ಸಂಘಟನಾ ಸಾಮರ್ಥ್ಯ ಹಾಗೂ ನಾಯಕತ್ವದ ಅನುಭವವನ್ನು ಪರಿಗಣಿಸಿ ಅರ್ಜುನ್ ರಾಠೋಡ್ ಅವರಿಗೆ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಬಂಜಾರ ಸಮಾಜಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಮನವಿಗೆ ಜಗನು ಮಹಾರಾಜ, ಸೋಮನಿಂಗ್ ಸ್ವಾಮೀಜಿ, ಧನಶಿಂಗ ಮಹಾರಾಜ್, ಗೋಪಾಲ ಮಹಾರಾಜರು, ಅಮರ್ಶಿಂಗ ಮಹಾರಾಜರು, ಸಂಜು ಮಹಾರಾಜರು, ಪ್ರಕಾಶ ಮಹಾರಾಜರು, ಭೀಮಶಿಂಗ ಮಹಾರಾಜರು ಸೇರಿದಂತೆ ಸಮಾಜದ ಧಾರ್ಮಿಕ ಮುಖಂಡರು ಹಾಗೂ ಆಡಿ ರಾಜೇಂದ್ರಪ್ರಸಾದ, ಬಿಬಿ ನಾಯಕ, ರಾಜಪಾಲ ಚವಾಣ್, ಡಿ.ಎಲ್. ಚವಾಣ್, ಶಂಕರ ಚವಾಣ್, ರಾಜು ಜಾಧವ್, ಮಲ್ಲಿಕಾರ್ಜುನ ನಾಯಕ, ಈಶ್ವರ ಜಾಧವ್, ಶೇಖರ ನಾಯ್ಕ್, ಲಿಂಬಾಜಿ ರಾಠೋಡ, ವಾಮನ ಚವಾಣ್, ಮಹಾದೇವ ರಾಠೋಡ, ಎಸ್.ಆರ್. ನಾಯ್ಕ್, ಎಂ.ಎಸ್. ನಾಯಕ್, ಅಶೋಕ ರಾಠೋಡ, ನಾತು ಪವಾರ, ಪದ್ದು ಚವಾಣ್, ಸತೀಶ ನಾಯಕ, ತುಕಾರಾಮ್ ರಾಠೋಡ, ಪ್ರಕಾಶ ರಾಠೋಡ, ಗೋವಿಂದ ರಾಠೋಡ, ಮಿಟ್ಟು ಚವಾಣ್, ಅನಿಲ್ ಚವಾಣ್, ಅಮೇಶಿ ರಾಠೋಡ, ಸುನೀಲ್ ಚವಾಣ್, ರಾಜು ಪವಾರ, ಸುರೇಶ ಪವಾರ ಸೇರಿದಂತೆ ಹಲವು ಸಮಾಜದ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಬಂಜಾರ ಸಮಾಜದ ಹಿತಾಸಕ್ತಿ ಹಾಗೂ ಜಿಲ್ಲೆಯ ರಾಜಕೀಯ ಪ್ರಾತಿನಿಧ್ಯವನ್ನು ಗಮನದಲ್ಲಿಟ್ಟುಕೊಂಡು ಅರ್ಜುನ್ ರಾಠೋಡ್ ಅವರನ್ನು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ವಿಜಯಪುರ ಜಿಲ್ಲಾ ಬಂಜಾರ ಸಮಾಜದ ಮುಖಂಡ ಪ್ರಕಾಶ ಗಂಗಾರಾಮ್ ರಾಠೋಡ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



ಎಂ.ಎಸ್. ಖೇಡ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ವಿಜಯಪುರ: ನಗರದ ಎಂ.ಎಸ್. ಖೇಡ್ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಸಂಸ್ಥೆಯ ಖಜಾಂಚಿ ವಿನೋದ ಎಂ. ಖೇಡ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಅಕ್ಷರ ಕಲಿಸಿ ಜ್ಞಾನವನ್ನು ನೀಡುವವರು ಶಿಕ್ಷಕರು; ಜ್ಞಾನ ನೀಡಿ ಬದುಕಿನ ದಾರಿಯನ್ನು ತೋರಿಸುವವರು ಗುರುಗಳು” ಎಂದು ಶಿಕ್ಷಕರ ಮಹತ್ವವನ್ನು ವಿವರಿಸಿದರು. ನಮ್ಮ ಬದುಕಿಗೆ ದಾರಿದೀಪವಾಗಿ, ಜ್ಞಾನದ ಬೆಳಕನ್ನು ಹರಿಸಿ, ಉತ್ತಮ ಭವಿಷ್ಯ ರೂಪಿಸುವ ಗೌರವಾನ್ವಿತ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವೇ ಶಿಕ್ಷಕರ ದಿನಾಚರಣೆ ಎಂದು ತಿಳಿಸಿದರು. ಇದೇ ವೇಳೆ ಶಿಕ್ಷಕ ಸಮುದಾಯಕ್ಕೆ ಮತ್ತೊಮ್ಮೆ ಶಿಕ್ಷಕರ ದಿನದ ಶುಭಾಶಯಗಳನ್ನು ಕೋರಿದರು.

ಶಾಲೆಯ ಮುಖ್ಯಗುರು ಸೀತಾ ಲಮಾಣಿ ಅವರು ಮಾತನಾಡಿ, “ಮುಗ್ಧ ಮನದಲ್ಲಿ ಅಕ್ಷರ ಬಿತ್ತಿ, ಮಕ್ಕಳ ಭವಿಷ್ಯಕ್ಕೆ ಬೆಳಕನ್ನು ಚೆಲ್ಲಿ, ಸುಂದರ ನಾಡು ಕಟ್ಟುವ ಅದ್ಭುತ ಶಿಲ್ಪಿಗಳು ಶಿಕ್ಷಕರು” ಎಂದು ಶಿಕ್ಷಕರ ಸೇವೆ ಹಾಗೂ ಜವಾಬ್ದಾರಿಯನ್ನು ಕೊಂಡಾಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಶ್ರೀದೇವಿ ಸೊನ್ನದ ಹಾಗೂ ಗಂಗೂಬಾಯಿ ಹಂಗರಗಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರಿಗೆ ಶುಭಾಶಯಗಳನ್ನು ಸಲ್ಲಿಸಲಾಯಿತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ವಿಜಯಪುರ ಜಿಲ್ಲೆಯ 13 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಜೆಡಿಎಸ್ ಆಗ್ರಹ

ವಿಜಯಪುರ: ಜಿಲ್ಲೆಯಲ್ಲಿ ಮಳೆ ಅಭಾವದಿಂದ ತೀವ್ರ ಬರಪರಿಸ್ಥಿತಿ ನಿರ್ಮಾಣವಾಗಿದ್ದು, ವಿಜಯಪುರ ಜಿಲ್ಲೆಯ ಎಲ್ಲಾ 13 ತಾಲೂಕುಗಳನ್ನು ತಕ್ಷಣವೇ ‘ಬರಪೀಡಿತ ತಾಲೂಕುಗಳು’ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಜಾತ್ಯತೀತ ಜನತಾದಳ (ಜೆಡಿಎಸ್) ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಜೆಡಿಎಸ್ ಜಿಲ್ಲಾ ಅಧ್ಯಕ್ಷರಾದ ಮಲ್ಲಿಕಾರ್ಜುನ ಯಂಡಿಗೇರಿ ಅವರ ನೇತೃತ್ವದಲ್ಲಿ ಜಿಲ್ಲಾ ಜೆಡಿಎಸ್ ಕಚೇರಿಯಿಂದ ಮೆರವಣಿಗೆ ಮೂಲಕ ರೈತ ಮುಖಂಡರು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ತೆರಳಿದ ಪ್ರತಿಭಟನಾಕಾರರು ಧರಣಿಗೆ ಬೆಂಬಲ ಸೂಚಿಸಿದರು. ಬಳಿಕ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಮಳೆ ಕೊರತೆಯಿಂದ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ತೀವ್ರವಾಗಿ ಹದಗೆಟ್ಟಿದ್ದು, ಬೆಳೆ ನಷ್ಟದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯ ಎಲ್ಲಾ 13 ತಾಲೂಕುಗಳನ್ನು ಯಾವುದೇ ವಿಳಂಬವಿಲ್ಲದೆ ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

13 ತಾಲೂಕುಗಳಿಗೂ ಬರಪೀಡಿತ ಸ್ಥಾನಮಾನ: ಮಳೆ ಕೊರತೆ ಹಾಗೂ ಬೆಳೆ ನಷ್ಟದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ 13 ತಾಲೂಕುಗಳನ್ನು ತಕ್ಷಣ ಅಧಿಕೃತವಾಗಿ ಬರಪೀಡಿತ ತಾಲೂಕುಗಳೆಂದು ಘೋಷಿಸಬೇಕು. ಬೆಳೆ ಪರಿಹಾರ ಬಿಡುಗಡೆ: ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಬೆಳೆ ಪರಿಹಾರಧನವನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು. ಕುಡಿಯುವ ನೀರು ಮತ್ತು ಮೇವಿನ ವ್ಯವಸ್ಥೆ: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಿಗೆ ಅಗತ್ಯ ಮೇವು ಲಭ್ಯವಾಗುವಂತೆ ತಾಲೂಕುವಾರು ಮೇವಿನ ಬ್ಯಾಂಕ್‌ಗಳನ್ನು ತೆರೆಯಬೇಕು. ಸಾಲ ವಸೂಲಾತಿ ತಡೆ: ಬರಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಕೃಷಿ ಸಾಲ ವಸೂಲಾತಿಯನ್ನು ತಕ್ಷಣ ತಡೆಹಿಡಿದು, ಸಾಲ ಮರುಪಾವತಿಗೆ ಸೂಕ್ತ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಬಿ.ಜಿ. ಪಾಟೀಲ, ಮುಖಂಡರಾದ ಸೋಮವಾರ ಪಾಟೀಲ, ಪಂಚಪ್ಪ ಕಲಬುರ್ಗಿ, ಖಾದ್ರಿ ಇನಾಂದಾರ್, ರಾಜು ಹಿಪ್ಪರಗಿ, ಅಪ್ಸರಾ ಬೇಗಂ ಚಪ್ಪರಬಂದ, ಮಾದೇವಿ ಪಾಟೀಲ, ಶಾಂತಾ ಲಮಾಣಿ, ಪ್ರಕಾಶ ಹಿರೇಕುರುಬರ, ಗುರುನಗೌಡ ಪಾಟೀಲ, ಭಾಗಾಯತ್ ರಾಜು ಹಿರೇಮಠ, ಶಂಕರ್ ಹಾಲಹಳ್ಳಿ, ಮಲ್ಲು ತೊರವಿ, ಮುತ್ತು ಜಂಗಮಶೆಟ್ಟಿ, ಶರಣಗೌಡ ಪಾಟೀಲ, ಬಸವರಾಜ ಹೊನವಾಡ, ಪ್ರಶಾಂತ್ ಕಿನಗಿ ಹಾಗೂ ಪೀರ್ ಗಚ್ಚಿನಮಲ್, ಎಂ ಎನ್ ಪಾಟೀಲ್, ಹುಸೇನ್ ಬಾಗಾಯತ್, ರೇವಣಸಿದ್ಧ ಕುಮಟೆ, ಶಿವಾಜಿ ಸಿಂಗಾಡಿ, ಸೇರಿದಂತೆ ಜೆಡಿಎಸ್ ಪಕ್ಷದ ಜಿಲ್ಲಾ ಮಟ್ಟದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, August 24, 2026

ಖರ್ಗೆಯವರು ಸಾರ್ವಜನಿಕವಾಗಿ ಮಾತನಾಡಿದ ಸ್ಥಳವನ್ನು ಸ್ವಚ್ಛಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ದೇಶದಿಂದ ಗಡಿಪಾರು ಮಾಡಲು ದಸಂಸ ಅಂಬೇಡ್ಕರ್‌ವಾದ ಆಗ್ರಹ

ವಿಜಯಪುರ : ಎಐಸಿಸಿ ರಾಷ್ಟಿçÃಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಸ್ವಚ್ಛಗೊಳಿಸಿದ ಕಿಡಿಗೇಡಿಗಳನ್ನು ದೇಶದಿಂದ ಗಡಿಪಾರು ಮಾಡಲು ಒತ್ತಾಯಿಸಿ ದಸಂಸ ಅಂಬೇಡ್ಕರ್ ವಾದ ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರ ಮೂಲಕ ಗೌರವಾನ್ವಿತ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗೀಯ ಸಂಚಾಲಕರಾದ ಸಂಜು ವೈ ಕಂಬಾಗಿ ಮಾತನಾಡಿ, ಉತ್ತರಾಖಂಡದ ರಾಮಲೀಲಾ, ಮೈದಾನದಲ್ಲಿ ಕಾಂಗ್ರೆಸ್ ರಾಷ್ಟಿçÃಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸ್ಥಳವನ್ನು ಅಲ್ಲಿಯ ಆರ್.ಎಸ್.ಎಸ್. ಹಾಗೂ ಬಿಜೆಪಿ ಕಾರ್ಯಕರ್ತರು ಸ್ವಚ್ಚಗೊಳಿಸಿರುವುದನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕ್ವಾದ ಜಿಲ್ಲಾ ಸಮಿತಿಯು ಉಗ್ರವಾಗಿ ಖಂಡಿಸುತ್ತದೆ. ಡಾ. ಬಾಬಾಸಾಹೇಬ ಅಂಬೇಡ್ಕರ್ ರವರು 1956 ಅಕ್ಟೋಬರ್ 14 ರಂದು ಮನುವಾದದ ವಿರುದ್ಧವಾಗಿ ನಾನು ಹಿಂದು ಧರ್ಮದಲ್ಲಿ ಹುಟ್ಟಿದ್ದೇನೆ ಆದರೆ ಹಿಂದೂ ಧರ್ಮದಲ್ಲಿ ಸಾಯುವುದಿಲ್ಲ ಎಂದು ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಮತ್ತು ಬಾಬಾಸಾಹೇಬ ಅಂಬೇಡ್ಕ್ರ ಅವರು ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಹಕ್ಕು ನೀಡಿದ್ದಾರೆ. ಹಾಗೆಯೇ ಮಲ್ಲಿಕಾರ್ಜುನ ಖರ್ಗೆಯವರು ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾರೆ ಅವರಿಗೆ ಈ ರೀತಿ ಮನುವಾದಿಗಳು ನಡೆಸಿಕೊಳ್ಳುತ್ತಿದ್ದಾರೆ ಇನ್ನು ದೇಶದಲ್ಲಿ ಸಾಮಾನ್ಯರ ಪರಿಸ್ಥಿತಿ ಹೇಗಿದೆ ಎಂಬುವುದು ತಾವು ಅರಿತುಕೊಂಡು ಮಲ್ಲಿಕಾರ್ಜುನ ಖರ್ಗೆಯವರು ಸಾರ್ವಜನಿಕವಾಗಿ ಮಾತನಾಡಿದ ಸ್ಥಳವನ್ನು ಸ್ವಚ್ಛಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶಿವು ಮೇಲಿಮನಿ, ಸವಿತಾ ವಗ್ಗರ, ಚೇತನ ತೊರವಿ, ಮಹಾಂತೇಶ ರಾಠೋಡ, ಸಂಗಮೇಶ ಇರಸೂರ, ಶಶಿಧರ ನಾಯ್ಕೋಡಿ, ಬಸೀರ ತಾಂಬೋಳಿ, ರಾಜು ಮೇತ್ರಿ, ಸುಭಾಸ ಹೊನ್ನಕಂಠಿ, ಸಿದ್ದು ಕಾಂಬಳೆ, ಸುನಂದಾ ದೊಡ್ಡಮನಿ, ಸಾಯಬಣ್ಣ ದಳಪತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, August 18, 2026

ಇಂಡಿ ಶಾಸಕ ಯಶವಂತರಾಯಗೌಡರಿಗೆ 371(ಜೆ ) ಹೋರಾಟ ಸಮಿತಿ ಸದಸ್ಯರ ಮನವಿ


 ಇಂಡಿ :ವಿಜಯಪುರ ಜಿಲ್ಲಾ 371(ಜೆ ) ಹೋರಾಟ ಸಮಿತಿ ಸದಸ್ಯರು ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರಿಗೆ  371(ಜೆ) ಮೀಸಲಾತಿಗೆ ಆಗ್ರಹಿಸಿ ಮನವಿ ಸಲ್ಲಿಸಿದರು.

ಸಂವಿಧಾನದ 371(ಜೆ ) ಗೆ ತಿದ್ದುಪಡಿ ಮಾಡಿ ವಿಜಯಪುರ ಜಿಲ್ಲೆ ಸೇರಿಸಲು ಮುಖ್ಯಮಂತ್ರಿಗಳ ಮನ ಒಲಿಸಿ   ರಾಜ್ಯ ಸರ್ಕಾರದಿಂದ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಿಕೊಡಬೇಕು ಹಾಗೂ ಮೀಸಲಾತಿಗೆ ಸೇರ್ಪಡೆಯಾಗುವವರೆಗೆ ತಾತ್ಕಾಲಿಕವಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸೌಲಭ್ಯಗಳನ್ನು ವಿಜಯಪುರ ಜಿಲ್ಲೆಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ. ಮನವಿ ಸ್ವೀಕರಿಸಿದ  ಶಾಸಕರು ಹೋರಾಟ ಸಮಿತಿ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ 371(ಜೆ) ಮೀಸಲಾತಿ  ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ಹೇಳಿದ್ದಾರೆ.
ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ ಯುವಕರಿಗೆ ನೇಮಕಾತಿಯಲ್ಲಿ ಮೀಸಲಾತಿ,ಕಲ್ಯಾಣ ಕರ್ನಾಟಕ ಭಾಗಕ್ಕೆ ಸಿಗುವ ವಿಶೇಷ ಅನುದಾನ ಸೌಲಭ್ಯ ಸೇರಿದಂತೆ ಜಿಲ್ಲೆಯ 25 ಲಕ್ಷ ಜನರ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ 371(ಜೆ) ತಿದ್ದುಪಡಿ ಮಾಡಿ ವಿಜಯಪುರ ಜಿಲ್ಲೆಗೆ ನ್ಯಾಯ ಒದಗಿಸಬೇಕೆಂದು ಹೋರಾಟಗಾರರು ಇದೆ ಸಂದರ್ಭದಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹೋರಾಟಗಾರರಾದ ವಿನೋದ ಖೇಡ, ಸಂಜೀವಗೌಡ ಪಾಟೀಲ(ಕನ್ನೂರ) ಮಲ್ಲನಗೌಡ ಪಾಟೀಲ (ಬರಟಗಿ) ಲಾಯಪ್ಪ ಇಂಗಳೆ ಚಂದ್ರಶೇಖರ ಹೊಸಮನಿ,ಸೇರಿದಂತೆ
ಹಲವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, August 17, 2026

ನೇಕಾರ ಸಮ್ಮಾನ್ ಯೋಜನೆಗೆ: ಅರ್ಜಿ ಆಹ್ವಾನ

ವಿಜಯಪುರ : 2026-27ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ ಜಿಲ್ಲೆಯ ಅರ್ಹ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ಹಾಗೂ ನೇಕಾರಿಕೆಗೆ ಸಂಬAಧಿಸಿದ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರಿಗೆ ವಾರ್ಷಿಕ ರೂ.5 ಸಾವರ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 23 ಕೊನೆಯ ದಿನವಾಗಿದೆ.

ಪ್ರಸ್ತುತ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಹಾಗೂ ಪಿಎಂಜೆಜೆಬಿವೈ-ಪಿಎAಎಸ್‌ಬಿವೈ ಯೋಜನೆಯಡಿ ನೋಂದಣಿಯಾಗಿರುವ ಅರ್ಹ ನೇಕಾರರು ಸೌಲಭ್ಯ ಪಡೆಯಲು ಅರ್ಹರಾಗಿದ್ದು, ಕಳೆದ ಸಾಲಿನಲ್ಲಿ ನೋಂದಣಿಯಾಗದ ಅರ್ಹ ನೇಕಾರರು ಹೊಸದಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೊಸದಾಗಿ ಅರ್ಜಿ ಸಲ್ಲಿಸುವವರು ಆಧಾರ್, ರೇಷನ್ ಕಾರ್ಡ್, ನೇಕಾರ ಸಮ್ಮಾನ್ ಐಡಿ ಅಥವಾ ಪೆಹಚಾನ್ ಕಾರ್ಡ್, ಆಧಾರ್ ಲಿಂಕ್ ಹೊಂದಿರುವ ಬ್ಯಾಂಕ್ ಪಾಸ್‌ಬುಕ್, ನೇಕಾರರ ಗುರುತಿನ ಚೀಟಿ, ನೇಕಾರಿಕೆ ವೃತ್ತಿಯಲ್ಲಿ ತೊಡಗಿರುವ ಫೋಟೋ ಹಾಗೂ ಪಿಎಂಜೆಜೆಬಿವೈ-ಪಿಎAಎಸ್‌ಬಿವೈ ನೋಂದಣಿ ದಾಖಲೆಗಳ ಪ್ರತಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.9538114434 ,9611297674 ಹಾಗೂ ಅರ್ಹ ನೇಕಾರರು ಸ್ಥಳೀಯ ಕೈಮಗ್ಗ ಅಭಿವೃದ್ಧಿ ನಿಗಮ ಅಥವಾ ನೇಕಾರ ಸಹಕಾರ ಸಂಘಗಳ ಮೂಲಕ, ಇಲ್ಲವೇ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಡಿ.ಐ.ಸಿ. ಕಂಪೌAಡ್, ಶಿಖಾರಖಾನೆಯಲ್ಲಿರುವ ಕಚೆರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಮದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, August 14, 2026

ನಿವೃತ್ತ ಬಿಎಸ್‌ಎನ್‌ಎಲ್ ಸಿಬ್ಬಂದಿ, ರೈತ ಡಿ. ಶ್ರೀ ಶಂಕರಗೌಡ ಗೌಡಪ್ಪಗೌಡ ಬಿರಾದಾರ ನಿಧನ


ವಿಜಯಪುರ: ನಗರದ ನಿವಾಸಿ, ನಿವೃತ್ತ ಟೆಲಿಕಾಂ–ಬಿಎಸ್‌ಎನ್‌ಎಲ್ ಸಿಬ್ಬಂದಿ ಹಾಗೂ ಪ್ರಸಿದ್ಧ ರೈತರಾದ ಡಿ. ಶ್ರೀ ಶಂಕರಗೌಡ ಗೌಡಪ್ಪಗೌಡ ಬಿರಾದಾರ ಅವರು ಶುಕ್ರವಾರ, ಆಗಸ್ಟ್ 14, 2026ರಂದು ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು 1953ರ ಜೂನ್ 1ರಂದು ಜನಿಸಿದ್ದರು.

ಸಮಾಜಮುಖಿ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ ಅವರು ಸರಳ, ಸಜ್ಜನ ಸ್ವಭಾವದವರಾಗಿ ಕುಟುಂಬಸ್ಥರು, ಬಂಧುಗಳು, ಸ್ನೇಹಿತರು ಹಾಗೂ ಸಮಾಜದವರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು. ಅವರ ನಿಧನದಿಂದ ಕುಟುಂಬ ಹಾಗೂ ಬಂಧುಬಳಗದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಮೃತರ ಅಂತ್ಯಕ್ರಿಯೆ ಶನಿವಾರ, ಆಗಸ್ಟ್ 15ರಂದು ಬೆಳಿಗ್ಗೆ ನಡೆಯಲಿದ್ದು, ವಿಜಯಪುರದ ಶಿವನಗಿ ರಸ್ತೆಯ ಸ್ವಗೃಹದಿಂದ ಅಂತಿಮ ಯಾತ್ರೆ ನೆರವೇರಲಿದೆ. ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಹೆಗಡಿಹಾಳದ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ದೊರಕಲಿ ಎಂದು ಬಂಧುಗಳು, ಸ್ನೇಹಿತರು ಮತ್ತು ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Thursday, August 13, 2026

ವಿಜಯಪುರ ಜಿಲ್ಲೆಗೆ 371 ಜೆ ಮೀಸಲಾತಿ ಸೌಲಭ್ಯ ತಕ್ಷಣಕ್ಕೆ ಒದಗಿಸಬೇಕು: ಎಸ್.ಕೆ.ಘಾಟಿ


ಮುದ್ದೇಬಿಹಾಳ : 371 ಜೆ ಮೀಸಲಾತಿ ಅಡಿ ಬಿಟ್ಟು ಹೋದ ವಿಜಯಪುರ ಜಿಲ್ಲೆಗೆ ಕಲ್ಯಾಣ ಕರ್ನಾಟಕ ಮೀಸಲಾತಿಗೆ ಸೇರಿಸಲು ಕೇಂದ್ರ ಸರಕಾಕ್ಕೆ ಶಿಫಾರಸ್ಸು ಕಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ವಿವಿದೋದ್ದೇಶ (ಒಖW), ಗ್ರಾಮೀಣ ಪುನರ್ವಸತಿ (ಗಿಖW), ನಗರ ಪುನರ್ವಸತಿ (UಖW) ರಾಜ್ಯ ಒಕ್ಕೂಟ ಹಾಗೂ ತಾಲೂಕಾ ವಿಕಲಚೇತನರ ಸಂಘ -ಸಂಸ್ಥೆಗಳು ಮುದ್ದೇಬಿಹಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡು ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಶೇಷ ಚೇತನರ ವಿವಿಧೋದ್ದೇಶಗಳ ಒಕ್ಕೂಟದ ತಾಲೂಕಾ ಅಧ್ಯಕ್ಷ ಎಸ್.ಕೆ.ಘಾಟಿಯವರು ಮಾತನಾಡಿ, ಡಾ.ಡಿ.ಎಂ. ನಂಜುಡಪ್ಪ ವರದಿಯ ಪ್ರಕಾರ ರಾಜ್ಯದಲ್ಲಿ ಹಿಂದುಳಿದ ಜಿಲ್ಲೆಗಳಿಗೆ 371 ಜೆ ಮೀಸಲಾತಿ ಒದಗಿಸಲಾಗಿದೆ. ಮೀಸಲಾತಿ ಪಡೆದ ಈಗಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗಿಂತ ಅತ್ಯಂತ ಹಿಂದುಳಿದ ವಿಜಯಪುರ ಜಿಲ್ಲೆಗೆ ಮೀಸಲಾತಿಯಿಂದ ಕೈ ಬಿಟ್ಟಿದ್ದರಿಂದ ದೊಡ್ಡ ಅನ್ಯಾಯವಾಗಿದೆ. ಕೂಡಲೇ ವಿಜಯಪುರ ಜಿಲ್ಲೆಗೆ 371 ಜೆ ಮೀಸಲಾತಿ ಸೌಲಭ್ಯ ತಕ್ಷಣಕ್ಕೆಒದಗಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸುವ ಮೂಲಕ ಅನ್ಯಾಯವನ್ನು ಸರಿಪಡಿಸಿ ಜಿಲ್ಲೆಯ ಜನತೆಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪದವಿದರ ಒಕ್ಕೂಟದ ಮುಖಂಡ ಚಂದ್ರಶೇಖರ ಹೊಸಮನಿ ಮಾತನಾಡಿ, ರಾಜ್ಯದಲ್ಲಿ ಪ್ರತಿಯೊಂದು ವಿಷಯದಲ್ಲಿ ಅನ್ಯಾಯಕ್ಕೊಳಗಾಗುತ್ತಿರುವ ಏಕೈಕ ಜಿಲ್ಲೆ ವಿಜಯಪುರವಾಗಿದೆ. ಅಖಂಡ ಹೈದ್ರಾಬಾದ್ ಪ್ರಾಂತದ ಭಾಗವಾಗಿದ್ದ ವಿಜಯಪುರ ಜಿಲ್ಲೆಯನ್ನು 371ಜೆ ಮೀಸಲಾತಿಯಿಂದ ಹೊರಗಿಡುವ ಮೂಲಕ ಜಿಲ್ಲೆಯ ಜನರಿಗೆ ಅನ್ಯಾಯ ಮಾಡಿದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಜಿಲ್ಲೆಯ ಸಾರಿಗೆ ವ್ಯವಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಡಿ ಇದೆ, ನ್ಯಾಯಾಂಗ ವ್ಯವಸ್ಥೆ ಕೂಡಾ ಕಲ್ಬುರ್ಗಿ ಉಚ್ಛ ನ್ಯಾಯಾಲಯ, ಕರ್ನಾಟಕ ಆಡಳಿತ ಮಂಡಳಿ ಪ್ರಾಧಿಕಾರ, ಪ್ರಾಚ್ಯವಸ್ತು ಇಲಾಖೆ ಸೇರಿದಂತೆ ಹಲವು ಇಲಾಖೆಗಳು ಕಲಬುರಗಿ ವಿಭಾಗದಲ್ಲಿ ಇದ್ದರು ಕೂಡಾ ವಿಜಯಪುರ ಜಿಲ್ಲೆಯನ್ನು 371 ಜೆ ಅಡಿ ಸೇರಿಸದೆ ಇರುವುದು ಖಂಡನೀಯ ಎಂದರು. ಜಿಲ್ಲೆಯ ಶಾಸಕರು, ಸಚಿವರು ಒಗ್ಗಟ್ಟಿನಿಂದ ಕೂಡಲೇ ಜಿಲ್ಲೆಯನ್ನು 371 ಜೆ ಮೀಸಲಾತಿ ಅಡಿ ಸೇರಿಸಿ ಜಿಲ್ಲೆಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರುಗಳಾದ ಈರಣ್ಣ ತಾರನಾಳ, ಬಸವರಾಜ ನಾಯ್ಕೋಡಿ, ಪವಾಡೆಪ್ಪ ಚಲವಾದಿ, ಗುರುರಾಜ ಡಂಬಳ, ಮಂಜುನಾಥ ಬಿರಾದಾರ, ಸುದೀಪ ಚಲವಾದಿ, ಸಂಗಮ್ಮ ಜಂಬಗಿ, ಸಂಗನಗೌಡ ಬಗಲಿ, ಶಶಿಕಾಂತ ಯಾಳಗಿ, ಪ್ರಭುಗೌಡ ಚಿಂಚೋಲಿ, ಮಹಾದೇವ ಮಾದಿನಾಳ, ರುದ್ರಗೌಡ ಜಿ. ಗೌಡರ, ಶಿವಪುತ್ರ ಮೋಟಗಿ, ಉಮೇಶ ಸಾತಿ, ನಾಗೇಶ ಅಮರಾವತಿ, ಬಾಲಪ್ಪ ಬಿಸಲದಿನ್ನಿ, ಅಡಿವೆಪ್ಪ ಪಡಗಾನೂರ, ಎಸ್.ಸಿ.ಮೇಟಿ, ಯಲ್ಲಪ್ಪ ಮಾದರ, ಸಂಗೀತಾ ಕೋಳೂರ ಸೇರಿದಂತೆ ನೂರಾರು ಜನ ಉಪಸ್ಥಿತರಿದ್ದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ವಿಜಯಪುರವನ್ನು 371ಜೆ ಯಿಂದ ಕೈ ಬಿಟ್ಟಿದ್ದು ಏಕೆ ಜಿಲ್ಲೆಯ ಸಚಿವರು ಶಾಸಕರು ಉತ್ತರಿಸಬೇಕು -ವಸಂತ ಭೈರಾಮಡಿ

ಚಡಚಣ :  371 ಜೆ  ಮೀಸಲಾತಿ     ಅಡಿ ಬಿಟ್ಟು ಹೋದ ವಿಜಯಪುರ ಜಿಲ್ಲೆಗೆ ಕಲ್ಯಾಣ ಕರ್ನಾಟಕ ಮೀಸಲಾತಿಗೆ ಸೇರಿಸಲು ಕೇಂದ್ರ ಸರಕಾಕ್ಕೆ ಶಿಫಾರಸ್ಸು ಕಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಚಡಚಣ ತಾಲೂಕು ಘಟಕದ ಮುಖಂಡರು ತಹಶೀಲ್ದಾರ ಅವರ ಮೂಲಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ  ಮನವಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ವಸಂತ ಭೈರಾಮಡಿ ಅವರು ಮಾತನಾಡಿ ಅಖಂಡ ಹೈದ್ರಾಬಾದ್ ಪ್ರಾಂತದ ಭಾಗವಾಗಿದ್ದ ವಿಜಯಪುರ ಜಿಲ್ಲೆಯನ್ನು 371ಜೆ ಮೀಸಲಾತಿಯಿಂದ ಹೊರಗಿಡುವ ಮೂಲಕ ಜಿಲ್ಲೆಯ ಜನರಿಗೆ  ಅನ್ಯಾಯ ಮಾಡಿದ್ದು  ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಮೀಸಲಾತಿಯಿಂದ ಕೈಬಿಟ್ಟಿದ್ದು ಏಕೆ ಎಂಬುದಕ್ಕೆ ಜಿಲ್ಲೆಯ ಸಚಿವರು, ಸಂಸದರು, ಉತ್ತರಿಸಬೇಕು ಆಗ್ರಹಿಸಿದರು.

ಜಿಲ್ಲೆಯ ಸಾರಿಗೆ ವ್ಯವಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಡಿ ಇದೆ,ನ್ಯಾಯಾಂಗ ವ್ಯವಸ್ಥೆ ಕೂಡಾ ಕಲ್ಬುರ್ಗಿ ಉಚ್ಛ ನ್ಯಾಯಾಲಯ ಬರುತ್ತದೆ ಜೊತೆಗೆ ಹಲವು ಇಲಾಖೆಗಳು ಕಲಬುರಗಿ ವಿಭಾಗದಲ್ಲಿ ಇದ್ದರು ಕೂಡಾ ಜಿಲ್ಲೆಯನ್ನು 371 ಜೆ ಅಡಿ ಸೇರಿಸದೆ ಇರುವುದು ಖಂಡನೀಯ ಎಂದರು.

ನಂಜುಂಡಪ್ಪ ವರದಿ ಪ್ರಕಾರ ಆರ್ಥಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಹಿಂದುಳಿದ ವಿಜಯಪುರ ಜಿಲ್ಲೆಗೆ 371 ಜೆ ಪ್ರಾದೇಶಿಕ ಮೀಸಲಾತಿ ಅಡಿ ಸೇರಿಸಲು ಕೂಡಲೇ ಸಚಿವ ಸಂಪುಟದಲ್ಲಿ ನಿರ್ಣಯ ತೆಗೆದುಕೊಂಡು ಭಾರತ ಸರಕಾರಕ್ಕೆ ಶಿಫಾರಸ್ಸು ಕಳಿಸಿ ವಿಜಯಪುರ ಜಿಲ್ಲೆಗೆ ನ್ಯಾಯ ಒದಗಿಸಿಕೊಡಲು ಸಚಿವರು ಶಾಸಕರು ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಹೋರಾಟಗಾರ ಮಲ್ಲುಗೌಡ ಬಿರಾದಾರ ಅವರು  ಮಾತನಾಡಿ 371ಜೆ ಮೀಸಲಾತಿ ವಿಷಯದಲ್ಲಿ ವಿಜಯಪುರ ಜಿಲ್ಲೆಗೆ ಅನುದಾನದ ವಿಷಯದಲ್ಲಿ, ಸರಕಾರಿ ನೌಕರಿ ಮತ್ತು ಶಿಕ್ಷಣದಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದೆ ಕೂಡಲೇ ಜಿಲ್ಲೆಯ ಸಚಿವರು ಶಾಸಕರು ಮೀಸಲಾತಿ ಒದಗಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುರುಗೇಂದ್ರ ಸಿಂಪಿ,ಭೀಮು ಜೀರಂಕಲಗಿ,ಪುಟ್ಟು ತೇಲಿ, ಆನಂದ ಕುರ್ಲಿ,ಉಜ್ವಲ ಡೊಳ್ಳಿ, ಅಂಬರೀಷ ಭೈರಗೊಂಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, June 11, 2026

ಅಭಿವೃದ್ಧಿ ಯೋಜನೆಗಳ ಜಾಗೃತಿ ಪತ್ರಕರ್ತರ ಆದ್ಯ ಕರ್ತವ್ಯ: ಯಡಳ್ಳಿ


ವಿಜಯಪುರ: ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ ಮತ್ತಿತರ ಅಭಿವೃದ್ಧಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಪತ್ರಕರ್ತರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಪತ್ರಕರ್ತರು ಮಕ್ಕಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕಾನಿಪ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಹೇಳಿದರು.

ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಹೈದರಾಬಾದ್‍ನ ಯುನಿಸೆಫ್ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡ ಮಕ್ಕಳ ವಿಷಯಗಳ ಕುರಿತು ಕರ್ನಾಟಕ ರಾಜ್ಯದ ಪತ್ರಕರ್ತರಿಗೆ ಪರಿಚಯ ವಿಷಯದಡಿ ಕಿಶೋಧರ ಆರೋಗ್ಯ ಮತ್ತು ಪೌಷ್ಟಿಕತೆ, ಸಾಂಕ್ರಾಮಿಕವಲ್ಲದ ರೋಗಗಳು, ಆರೋಗ್ಯಕರ ಆಹಾರ ಪದ್ಧತಿ ಹಾಗೂ ರಸ್ತೆ ಸುರಕ್ಷತೆ ಕುರಿತ ಎರಡನೇ ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಪತ್ರಕರ್ತರು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ. ಯುನಿಸೆಫ್ ಮಕ್ಕಳಿಗಾಗಿ ಜಗತ್ತಿನಾದ್ಯಂತ ಸಕ್ರಿಯ ಕೆಲಸ ಮಾಡುತ್ತಿದೆ. ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ ಇನ್ನಿತರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಒಬ್ಬ ಪತ್ರಕರ್ತನಿಗೆ ಈ ಕಾರ್ಯಾಗಾರ ನೀಡುವುದರಿಂದ ಒಂದು ಲಕ್ಷ ಜನರಿಗೆ ಮಾಹಿತಿ ತಲುಪಿಸಿದಂತೆ ಆಗಲಿದೆ. ಒತ್ತಡದ ನಡುವೆಯೂ ನೀವೆಲ್ಲ ಕಾರ್ಯಾಗಾರಕ್ಕೆ ಬಂದಿದ್ದು ಖುಷಿ ತಂದಿದೆ. ಮಾಧ್ಯಮ ಬದಲಾಗಿದೆ. ಆದರೂ ಬದಲಾವಣೆ ಮಾಧ್ಯಮದಿಂದಲೇ ಸಾಧ್ಯ. ಇಂದು ರೀಲ್ಸ್ ಯುಗ ಬಂದಿದೆ. ಜನರಿಗೆ ಕೇಳಿಸಿಕೊಳ್ಳುವ ವ್ಯವಧಾನ ಇಲ್ಲ. ತಪ್ಪು ಮಾಹಿತಿ ನೀಡಿದರೂ ನಾವು ಸರಿಯಾದ ವಿಷಯ ಬರೆಯಬೇಕು ಎಂದರು.

ಎರಡು ದಿನದ ಕಾರ್ಯಾಗಾರ ಬಗ್ಗೆ ಪತ್ರಕರ್ತರು ತಮ್ಮ ಅನುಭವ ಹಂಚಿಕೊಂಡರು.

ಯುನಿಸೆಫ್ ಪ್ರತಿನಿಧಿ ಪ್ರಶೂನ್ ಸೇನ್, ಮೈಸೂರು ವಿವಿಯ ಸ್ವಪ್ನ ಎಂ.ಎಸ್., ಡಾ.ರಾಕೇಶ್, ಮಂಜುನಾಥ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಅಖಿಲ ಕರ್ನಾಟಕ ಜೊತಿಷಿಗಳ ಒಕ್ಕೂಟ : ಅಧ್ಯಕ್ಷರಾಗಿ ಗುರುರಾಜ ಆಚಾರ್ಯ ಆಯ್ಕೆ

 

ಅಖಿಲ ಕರ್ನಾಟಕ ಜೊತಿಷಿಗಳ ಒಕ್ಕೂಟ : ಅಧ್ಯಕ್ಷರಾಗಿ ಗುರುರಾಜ ಆಚಾರ್ಯ ಆಯ್ಕೆ

ವಿಜಯಪುರ : ಅಖಿಲ ಕರ್ನಾಟಕ ಜೊತಿಷಿಗಳ ಒಕ್ಕೂಟದ ನೂತನ ರಾಜ್ಯಾಧ್ಯಕ್ಷರಾಗಿ ವಿಜಯಪುರದ ಶ್ರೀ ಸಾಕ್ಷಿ ಪಂಚಾಂಗ ಕರ್ತ ಗುರುರಾಜ ಆಚಾರ್ಯ ಹೆರಕಲ್ಲ, ಉಪಾಧ್ಯಕ್ಷರಾಗಿ ಚಿದಂಬರ ಪಂಚಾಂಗ ಸಹಾಯಕ ಪಂಚಾಂಗ ಕರ್ತ ಭುಜಂಗಶರ್ಮಾ ವಿ.ಜೋಷಿ ಆಯ್ಕೆಯಾಗಿದ್ದಾರೆ.

ಧಾರವಾಡದಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯಲ್ಲಿ ಸಂಸ್ಥಾಪಕ ಅಧ್ಯಕ್ಷ ಡಾ.ಆನಂದ ಹಂದಿಗೋಳ, ಪೆÇ್ರ.ಶ್ರೀಕಾಂತ ಮಂಗಸೂಳಿ, ವಾಸ್ತು ತಜ್ಞ ಸುರೇಶ ಕೊಪ್ಪರ ಸೇರಿದಂತೆ ನಿರ್ದೇಶಕ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಇದೇ ದಿ.13, ಶನಿವಾರ ದಂದು ನೂತನ ಅಧ್ಯಕ್ಷ-ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ವಿಜಯಪುರದಲ್ಲಿ ನಡೆಯಲಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Friday, June 5, 2026

ಸಾಧಕರನ್ನು ಪ್ರಶಸ್ತಿಗಳು ಹುಡುಕಿಕೊಂಡು ಬರಬೇಕು: ಚನ್ನಪ್ಪ ಕಟ್ಟಿ

ವಿಜಯಪುರ: ಪ್ರಶಸ್ತಿಗಳು ಸಾಧಕರನ್ನು ಹುಡುಕಿಕೊಂಡು ಬರಬೇಕೇ ವಿನಃ ಪ್ರಶಸ್ತಿಗಳ ಬೆನ್ನತ್ತಿ ಅವರು ಹೋಗಬಾರದು ಎಂದು ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಚನ್ನಪ್ಪ ಕಟ್ಟಿ ಹೇಳಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕಲಬುರಗಿಯ ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ, ದಲಿತ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡ ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಪ್ರಶಸ್ತಿಯು ಲೇಖಕರ ಸಾಮಾಜಿ ಜವಾಬ್ದಾರಿಯನ್ನು ಹೆಚ್ಚಿಸುವುದಲ್ಲದೇ ಸಾಧಕರನ್ನು ಪ್ರೋತ್ಸಾಹಿಸಿದಂತಾಗುತ್ತದೆ. ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಈಗಾಗಲೇ ಹಲವು ನಾಡಿನ ಖ್ಯಾತನಾಮ ಹಿರಿಯ ಲೇಖಕರಿಗೆ ಪ್ರಶಸ್ತಿಯನ್ನು ನೀಡಿ, ಅವರನ್ನು ಗೌರವಿಸಿದ್ದು ಕನ್ನಡ ನಾಡು, ನುಡಿಗೆ ಹಿರಿಮೆ ತಂದAತಾಗಿದೆ. ಕಳೆದ ೧೧ ವರ್ಷದ ಹಿಂದೆ ರಾಯಚೂರಿನಲ್ಲಿ ನಡೆದ ಸಮಾರಂಭದಲ್ಲಿ ನನಗೂ ಈ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ಸಂಗತಿ. ಸದ್ಯ ಈ ಪ್ರಶಸ್ತಿಯನ್ನು ಮತ್ತೊಬ್ಬ ಸಾಧಕಿಗೆ ಪ್ರದಾನ ಮಾಡುವ ಭಾಗ್ಯ ದೊರಕಿರುವುದು ಸಂತಸದ ಸಂಗತಿ ಎಂದರು.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ವೆಂಕಟೇಶ ಮಾತನಾಡಿ, ಜವತ್ತಿನ ಜನರ ಬದುಕು ಸಂಕೀರ್ಣವಾಗಿದೆ. ಎಐ ತಂತ್ರಜ್ಞಾನವು ಮನುಷ್ಯನನ್ನು ಆಳುತ್ತಿದೆ. ಮನುಷ್ಯ ತಂತ್ರಜ್ಞಾನದ ಅಡಿಯಾಳಾಗಬಾರದು, ತಂತ್ರಜ್ಞಾನವೇ ಮನುಷ್ಯನ ಅಡಿಯಲ್ಲಿರಬೇಕು ಎಂದು ಹೇಳಿದರು.


ಮುಂಬರುವ ದಿನಗಳಲ್ಲಿ ಜನರು ಒಂದೆಡೆ ಸೇರಿ ಸಾಹಿತ್ಯ ಸಂಗೀತದAತಹ ಸಮಾರಂಭಗಳಿಗೆ ಬರುವುದು ತುಂಬಾ ವಿರಳವಾಗುವುದು. ಒಂದೆಡೆ ಸೇರಿ ಬದುಕಿನ ಕಷ್ಟ, ಸುಖಗಳನ್ನು ಹಂಚಿಕೊಳ್ಳುವ ಕಾಲ ಮರೆಯಾಗುವುದು. ಮನುಷ್ಯ ಒಂಟಿಯಾಗಿ ತಂತ್ರಜ್ಞಾನದ ಜೊತೆಗೆ ಯಾಂತ್ರಿಕ ಜೀವನ ನಡೆಸುತ್ತಾನೆ. ಇದರಿಂದ ಪಾರಾಗಲು ಪ್ರತಿಯೊಬ್ಬರು ಪುಸ್ತಕದೊಂದಿಗೆ ಜೀವನ ನಡೆಸಬೇಕು ಎಂದರು.
ಕಲಬುರಗಿ ವಿವಿಯ ಪ್ರೊ. ಎಚ್.ಟಿ. ಪೋತೆ ಮಾತನಾಡಿ, ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ನಾಡಿನ ಪ್ರತಿಷ್ಠ ಪ್ರಶಸ್ತಿಯಾಗಿದೆ. ನಾಡಿನ ನೈಜಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದು ವಾಡಿಕೆಯಾಗಿದೆ. ಈ ಹಿಂದೆ ಹಲವಾರು ನಾಡಿನ ಗಣ್ಯ ಸಾಹಿತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸದ್ಯ ಸುಜಾತಾ ಚಲವಾದಿ ಅವರಿಗೆ ಪ್ರಶಸ್ತಿ ನೀಡುತ್ತಿರುವುದು ಮಹಿಳಾ ಸಬಲೀಕರಣಕ್ಕೆ ಒತ್ತುನೀಡಿದಂತಾಗಿದೆ. ದಲಿತ ಸಮುದಾಯದ ಮಹಿಳೆಯರು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು.
ಪ್ರೊ. ಮಲ್ಲೇಪುರಂ ವೆಂಕಟೇಶ ಅವರು ೭೫ ನೇ ವರ್ಷಕ್ಕೆ ಕಾಲಿಡುತ್ತಿರುವ ಈ ಸಂದರ್ಭವನ್ನು ಸಾಂಸ್ಕೃತಿಕ ಹಬ್ಬದ ಪ್ರತೀಕವಾಗಿದೆ ಎಂದು ಬಣ್ಣಿಸಿದರು.
ಧಾರವಾಡ ಕರ್ನಾಟಕ ವಿವಿಯ ಪ್ರಾಧ್ಯಾಪಕ ಡಾ. ನಿಂಗಪ್ಪ ಮುದೇನೂರ ಉಪನ್ಯಾಸ ನೀಡಿ ಮಾತನಾಡಿ, ಡಾ. ಸುಜಾತಾ ಚಲವಾದಿ ಅವರ ಪ್ರಮುಖ ಕೃತಿಗಳಾದ ಲಚಮ್ಮವ್ವ ಮತ್ತು ಇತರೆ ಕಥೆಗಳು, ಕೊರಗು, ನಿರ್ಭಯಲ ಬೆರಗು, ಬುದ್ಧ ಇದ್ದನಲ್ಲಿ ಈ ಕೃತಿಗಳಲ್ಲಿರುವ ಸಾಹಿತ್ಯಿಕ ಮೌಲ್ಯಗಳನ್ನು ವಿಮರ್ಶಾತ್ಮಕವಾಗಿ ವಿವರಿಸಿ, ಲೇಖಕಿಯ ಬರಹದ ವಿಸ್ತಾರವನ್ನು ಮತ್ತು ಅವರ ಚಿಂತನಾ ಕ್ರಮವನ್ನು ಪರಿಚಯಿಸಿದರು.
ಇದೇ ಸಂದರ್ಭ ಲೇಖಕಿ ಡಾ. ಸುಜಾತಾ ಚಲವಾದಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಅಧ್ಯಕ್ಷ ಎಂ.ಎನ್. ಮದಭಾವಿ ಅಧ್ಯಕ್ಷತೆ ವಹಿಸಿದ್ದರು.
ಪ್ರೊ. ಮಲ್ಲೇಪುರಂ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ನಾಗರಾಜ, ಅನಿಲ ಹೊಸಮನಿ, ಅಭಿಷೇಕ ಚಕ್ರವರ್ತಿ, ಡಾ. ಎಂ.ಎA. ಪಡಶೆಟ್ಟಿ, ಶ್ರೀಕಾಂತ ಹೊಸಮನಿ, ರವಿ ಕಿತ್ತೂರ ಸೇರಿದಂತೆ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, June 2, 2026

ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ, ವೈದ್ಯಕೀಯ ಶಿಕ್ಷಣ ಖಾತೆ ನೀಡಲು ಆಗ್ರಹ


ವಿಜಯಪುರ : ಮಾಜಿ ಸಚಿವರು ಹಾಗೂ ಬಸವನ ಬಾಗೇವಾಡಿ ಕ್ಷೇತ್ರದ ಜನಪ್ರಿಯ ಶಾಸಕರಾದ ಶಿವಾನಂದ ಎಸ್ ಪಾಟೀಲ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಡಿಸಿಎಂ ಸ್ಥಾನ ನೀಡಿ ವೈದ್ಯಕೀಯ ಶಿಕ್ಷಣ ಖಾತೆಯನ್ನು ನೀಡಬೇಕು ಎಂದು ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಟಾನ ಸಂಚಾಲಕರಾದ ಅನಿಲ ಹೊಸಮನಿ ಹಾಗೂ ಕಾರ್ಯದರ್ಶಿ ಲಾಯಪ್ಪ ಇಂಗಳೆ ಆಗ್ರಹಿಸಿದ್ದಾರೆ.

ಈ ಹಿಂದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ರಾಜ್ಯದ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ಸಲ್ಲಿಸಿದ್ದಾರೆ. ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿ -ಮಕ್ಕಳ ಆಸ್ಪತ್ರೆ, ಟ್ರಾಮಾ ಸೆಂಟರ್ ಸೆಂಟರ್ ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಜೊತೆಗೆ ಜಿಲ್ಲಾ ಆಸ್ಪತ್ರೆಗೆ ತಾಜಬಾವಡಿಯಿಂದ ನೀರಿನ ಸಂಪರ್ಕ ಒದಗಿಸಿ ರಾಜ್ಯದಲ್ಲಿ ಮಾದರಿ ಆಸ್ಪತ್ರೆಯಾಗಿ ಮೇಲದರ್ಜೆಗೆ ಏರಿಸಿದ್ದಾರೆ, ಜೊತೆಗೆ ಜಿಲ್ಲೆಯ ತಾಲೂಕು ಆಸ್ಪತ್ರೆಗಳಲ್ಲಿ ವಿವಿಧ ಮೂಲಭೂತ ಸೌಲಭ್ಯ ಒದಗಿಸಿ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ.

ಹಿಂದಿನ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ, ಕಬ್ಬು ಸಕ್ಕರೆ ಮತ್ತು ಜವಳಿ ಸಚಿವರಾಗಿ ರಾಜ್ಯ ಮತ್ತು ಜಿಲ್ಲೆಯಲ್ಲಿ ಹಲವು ರೈತಪರ, ಜನಪರ ಕೆಲಸ ಕಾರ್ಯಗಳನ್ನು ಮಾಡಿರುವ ಶಿವಾನಂದ ಪಾಟೀಲರಿಗೆ ನೂತನ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಹೈಕಮಾಂಡ್ ಉಪ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಿ ವೈದ್ಯಕೀಯ ಶಿಕ್ಷಣ ಖಾತೆಯನ್ನು ನೀಡಬೇಕು ಎಂದು ಅವರು ಆಗ್ರಹಿಸಿದ ಅವರ ಸುಧೀರ್ಘ ರಾಜಕೀಯ ಅನುಭವ ರಾಜ್ಯದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದ್ದಾರೆ.

Sunday, May 10, 2026

ಮಕ್ಕಳು ತಂದೆ ತಾಯಿಯ ಮಾತು ಕೇಳಿದ್ದರೆ ; ವೃದ್ಧಾಶ್ರಮ ಅನಾಥವಾಗಿರುತ್ತಿದ್ದವು..!

 ಇಂದಿನ ಆಧುನಿಕ ಸಮಾಜದಲ್ಲಿ “ತಾಯಿ ದಿನ”, “ತಂದೆ ದಿನ”, “ಹಿರಿಯರ ದಿನ” ಎಂಬ ವಿಶೇಷ ಆಚರಣೆಗಳು ಬಹಳ ಜನಪ್ರಿಯವಾಗಿವೆ. ಆ ದಿನ ಮಕ್ಕಳಿಂದ ಪೋಷಕರಿಗೆ ಉಡುಗೊರೆಗಳು, ಶುಭಾಶಯಗಳು, ಪ್ರೀತಿಯ ಮಾತುಗಳು, ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಪೋಸ್ಟ್ಗಳು ಹರಿದು ಬರುತ್ತವೆ. ಆದರೆ ಮನಸ್ಸಿಗೆ ನೋವು ಕೊಡುವ ಸತ್ಯ ಏನೆಂದರೆ, ಇದೇ ಪ್ರೀತಿ ಮತ್ತು ಕಾಳಜಿ ಪ್ರತಿದಿನ ತೋರಿಸಲ್ಪಟ್ಟಿದ್ದರೆ, ಇಂದು ನಮ್ಮ ಸಮಾಜದಲ್ಲಿ ಇಷ್ಟು ವೃದ್ಧಾಶ್ರಮಗಳ ಅಗತ್ಯವೇ ಉಂಟಾಗುತ್ತಿರಲಿಲ್ಲ.

 ತಾಯಿ-ತಂದೆಗಳು ಮಕ್ಕಳಿಗಾಗಿ ತಮ್ಮ ಸಂಪೂರ್ಣ ಜೀವನವನ್ನೇ ಅರ್ಪಿಸುತ್ತಾರೆ. ಮಗು ಹುಟ್ಟಿದ ಕ್ಷಣದಿಂದಲೇ ಅವರ ಕನಸು, ಸಂತೋಷ, ಭವಿಷ್ಯ ಎಲ್ಲವೂ ಮಗುವಿನ ಸುತ್ತಲೇ ತಿರುಗುತ್ತವೆ. ತಾಯಿ ತನ್ನ ನಿದ್ರೆಯನ್ನು ಬಿಟ್ಟು ಮಗುವಿನ ಅಳುವಿಗೆ ಸ್ಪಂದಿಸುತ್ತಾಳೆ. ತಂದೆ ತನ್ನ ಆಸೆಗಳನ್ನು ಬದಿಗಿಟ್ಟು ಮಗುವಿನ ವಿದ್ಯಾಭ್ಯಾಸ ಮತ್ತು ಭವಿಷ್ಯಕ್ಕಾಗಿ ದುಡಿಯುತ್ತಾನೆ. ಮಕ್ಕಳಿಗೆ ನೋವಾಗದಂತೆ ತಮ್ಮ ನೋವನ್ನು ಮರೆಮಾಡಿಕೊಳ್ಳುವವರು ಪೋಷಕರು. ಮಗುವಿನ ಒಂದು ನಗು ನೋಡಲು ಸಾವಿರ ಕಷ್ಟಗಳನ್ನು ಸಹಿಸುವ ಮಹಾನ್ ಹೃದಯಗಳು ಅವರದು.

 ಆದರೆ ಕಾಲ ಬದಲಾಗುತ್ತಾ, ಮಕ್ಕಳು ದೊಡ್ಡವರಾದ ನಂತರ ತಮ್ಮದೇ ಜೀವನದಲ್ಲಿ ಬ್ಯುಸಿಯಾಗುತ್ತಾರೆ. ಉದ್ಯೋಗ, ಹಣ, ವೈಭವ, ವೈಯಕ್ತಿಕ ಸ್ವಾತಂತ್ರ‍್ಯ ಇವೆಲ್ಲದರ ನಡುವೆ ಪೋಷಕರಿಗೆ ಸಮಯ ಕೊಡಲು ಮರೆತುಬಿಡುತ್ತಾರೆ. ಕೆಲವು ಮಕ್ಕಳು ವರ್ಷದಲ್ಲಿ ಒಂದು ದಿನ ಮಾತ್ರ “ಅಮ್ಮಾ, ಅಪ್ಪಾ ನೀವು ನನ್ನ ಜಗತ್ತು” ಎಂದು ಹೇಳುತ್ತಾರೆ. ಆದರೆ ಉಳಿದ ದಿನಗಳಲ್ಲಿ ಅವರ ಜೊತೆ ಮಾತನಾಡಲು ಸಹ ಸಮಯ ಕೊಡೋದಿಲ್ಲ. ಈ ಒಂದು ದಿನದ ಪ್ರೀತಿ ಪೋಷಕರ ಮನದ ಖಾಲಿತನವನ್ನು ತುಂಬಲಾರದು.

 ಇಂದು ಅನೇಕ ವೃದ್ಧಾಶ್ರಮಗಳಲ್ಲಿ ವಾಸಿಸುವ ಹಿರಿಯರು ಹಣಕ್ಕಾಗಿ ಅಲ್ಲ, ಪ್ರೀತಿಗಾಗಿ ಕಾಯುತ್ತಿದ್ದಾರೆ. ಅವರಿಗೆ ದುಬಾರಿ ಉಡುಗೊರೆಗಳು ಬೇಕಿಲ್ಲ. “ಊಟ ಮಾಡಿದ್ದೀರಾ?”, “ಔಷಧಿ ತೆಗೆದುಕೊಂಡಿರಾ?”, “ಹೇಗಿದ್ದೀರಾ?” ಎಂದು ಕೇಳುವ ಒಂದು ಆತ್ಮೀಯ ಧ್ವನಿ ಸಾಕು. ಆದರೆ ಈ ಮಾತುಗಳು ಕೇಳಿಸದೇ ಹೋದಾಗ, ಅವರ ಜೀವನದಲ್ಲಿ ಒಂಟಿತನ ಹೆಚ್ಚಾಗುತ್ತದೆ. ಮಕ್ಕಳು ಜೀವಂತವಾಗಿದ್ದರೂ, ಅವರ ನೆನಪುಗಳಲ್ಲಿ ಮಾತ್ರ ಬದುಕುವ ಪರಿಸ್ಥಿತಿ ಬರುತ್ತದೆ.

 ವೃದ್ಧಾಶ್ರಮಗಳ ಗೋಡೆಗಳು ಅನೇಕ ಮೌನ ಕಣ್ಣೀರಿನ ಕಥೆಗಳನ್ನು ಹೇಳುತ್ತವೆ. ಅಲ್ಲಿ ಇರುವ ಪ್ರತಿಯೊಬ್ಬ ತಂದೆ-ತಾಯಿಯ ಕಣ್ಣುಗಳಲ್ಲಿ ಒಂದೇ ಪ್ರಶ್ನೆ ಕಾಣುತ್ತದೆ. “ನಮ್ಮ ಮಕ್ಕಳಿಗಾಗಿ ಬದುಕಿದ್ದ ನಾವು, ಇಂದು ಏಕೆ ಅನಾಥರಂತೆ ಬದುಕಬೇಕು?” ಎಂಬುದು. ಈ ಪ್ರಶ್ನೆ ಕೇವಲ ಅವರದು ಮಾತ್ರವಲ್ಲ; ಅದು ಇಡೀ ಸಮಾಜದ ಮನಸ್ಸನ್ನು ಕಾಡುವ ಪ್ರಶ್ನೆಯಾಗಿದೆ.

 ಪ್ರೀತಿ ಎಂದರೆ ಕೇವಲ ಒಂದು ದಿನದ ಆಚರಣೆ ಅಲ್ಲ. ಅದು ಪ್ರತಿದಿನದ ವರ್ತನೆಯಲ್ಲಿ ಕಾಣಬೇಕು. ಪೋಷಕರ ಜೊತೆ ಕೆಲವು ಕ್ಷಣ ಕಳೆಯುವುದು, ಅವರ ಆರೋಗ್ಯದ ಕಡೆ ಗಮನ ಕೊಡುವುದು, ಅವರ ಮಾತುಗಳನ್ನು ಸಹನೆಯಿಂದ ಕೇಳುವುದು, ಅವರಿಗೆ ಒಂಟಿತನ ಅನ್ನಿಸದಂತೆ ನೋಡಿಕೊಳ್ಳುವುದು ಇವೆಲ್ಲವೇ ನಿಜವಾದ ಪ್ರೀತಿ ಮತ್ತು ಕಾಳಜಿ. ಮಕ್ಕಳು ಈ ಸಣ್ಣ ಸಣ್ಣ ವಿಷಯಗಳನ್ನು ಪ್ರತಿದಿನ ಪಾಲಿಸಿದ್ದರೆ, ಇಂದು ಅನೇಕ ವೃದ್ಧಾಶ್ರಮಗಳು ಖಾಲಿಯಾಗುತ್ತಿದ್ದವು.

 ಬಾಲ್ಯದಲ್ಲಿ ಮಗು ನಡೆಯಲು ಕಲಿತಾಗ ತಂದೆ ಕೈ ಹಿಡಿದಿದ್ದ. ಇಂದು ವಯಸ್ಸಾದ ತಂದೆ ನಡೆಯಲು ಕಷ್ಟಪಟ್ಟಾಗ ಮಗ ಕೈ ಹಿಡಿಯಬೇಕು. ತಾಯಿ ಬಾಲ್ಯದಲ್ಲಿ ಮಗು ತಿನ್ನದೇ ಇದ್ದರೆ ಕಥೆ ಹೇಳಿ ಊಟ ಮಾಡಿಸುತ್ತಿದ್ದಳು. ಇಂದು ಅದೇ ತಾಯಿಗೆ ಸಮಯಕ್ಕೆ ಔಷಧಿ ಕೊಡುವುದು ಮಗುವಿನ ಕರ್ತವ್ಯ. ಜೀವನದ ನಿಜವಾದ ಅರ್ಥ ಇದೇ ಪೋಷಕರು ನಮ್ಮನ್ನು ನೋಡಿಕೊಂಡAತೆ, ನಾವು ಅವರ ವಯಸ್ಸಿನಲ್ಲಿ ಅವರನ್ನು ನೋಡಿಕೊಳ್ಳಬೇಕು.

 ಹಿರಿಯರು ಮನೆಯ ಭಾರವಲ್ಲ; ಅವರು ಮನೆಯ ಆಶೀರ್ವಾದ. ಅವರ ಅನುಭವ ಜೀವನದ ದಾರಿ ತೋರಿಸುವ ದೀಪ. ಅವರ ಸಾನ್ನಿಧ್ಯ ಮನೆಯ ಶಾಂತಿ ಮತ್ತು ಸಂಸ್ಕೃತಿಯ ಸಂಕೇತ. ಅವರನ್ನು ದೂರ ಮಾಡುವ ಸಮಾಜ ಯಾವತ್ತೂ ಸಂಪೂರ್ಣ ಸಂತೋಷ ಕಂಡುಕೊಳ್ಳಲು ಸಾಧ್ಯವಿಲ್ಲ.

 ಒಂದು ದಿನದ ಪ್ರೀತಿಯನ್ನು ಪ್ರದರ್ಶಿಸುವುದಕ್ಕಿಂತ ಪ್ರತಿದಿನ ಅವರ ಜೊತೆ ನಿಂತು ಬದುಕುವುದು ಮುಖ್ಯ. ಪೋಷಕರಿಗೆ ಬೇಕಾಗಿರುವುದು ದೊಡ್ಡ ಉಡುಗೊರೆಗಳಲ್ಲ, ಪ್ರೀತಿಯಿಂದ ತುಂಬಿದ ಕೆಲವು ಕ್ಷಣಗಳು. ಮಕ್ಕಳು ಪ್ರತಿದಿನ ಕಾಳಜಿ ತೋರಿಸಿದರೆ, ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗುವುದಷ್ಟೇ ಅಲ್ಲ, ಪೋಷಕರ ಕಣ್ಣೀರಿನ ಜಾಗದಲ್ಲಿ ಸಂತೋಷ ಕಾಣಿಸಿಕೊಳ್ಳುತ್ತದೆ. ಯಾಕೆಂದರೆ ತಾಯಿ-ತಂದೆಗಳಿಗೆ ಬೇಕಾಗಿರುವುದು “ವಿಶೇಷ ದಿನದ ಗೌರವವಲ್ಲ… ಜೀವನಪೂರ್ತಿ ಇರುವ ಆತ್ಮೀಯತೆ.”

ವಿಶೇಷ ವರದಿ : ಕಲ್ಲಪ್ಪ ಶಿವಶರಣ, 7207279187

11-05-2026 EE DIVASA KANNADA DAILY NEWS PAPER

Sunday, May 3, 2026

ವಿಜಯಪುರ ಕರ್ನಾಟಕದ ಸಾಂಸ್ಕೃತಿಕ ನಗರವಾಗಿದೆ : ಡಾ. ಕುಶಾಲ ಬರಗೂರು

ವಿಜಯಪುರ: ಕಾವ್ಯಕ್ಕೆ ಸಂಗೀತ ಮತ್ತು ದೃಶ್ಯದ ಸ್ಪರ್ಶ ನೀಡಿದರೆ ಜನಮನ ತಲುಪುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯರಾದ ಡಾ. ಕುಶಾಲ ಬರಗೂರು ಹೇಳಿದರು. 

ಅವರು ನಗರದ ಗಾನಬನದ ಶ್ರೀಗುರು ಕುಮಾರೇಶ್ವರ ಸಂಗೀತ ಮಹಾವಿದ್ಯಾಲಯದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ಹಾಗೂ ಸಿದ್ಧರಾಮೇಶ್ವರ ಟೆಲಿಫಿಲಂ ಆಶ್ರಯದಲ್ಲಿ ಹಮ್ಮಿಕೊಂಡ ಸೋಮು ಹಿಪ್ಪರಗಿ ಅವರ ‘ವಿಜಯಪುರ’ ಕನ್ನಡ ಅಲ್ಬಮ್ ಸಾಂಗ್ ಲೋಕಾರ್ಪಣೆ ಹಾಗೂ ವರ್ತಮಾನ ಕಾವ್ಯ ಸಿಂಚನ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಹಿತ್ಯದ ಓದು ವ್ಯಕ್ತಿಯ ಚಿಂತನೆಯ ಹರಿವನ್ನು ಹೆಚ್ಚಿಸುವುದರ ಜೊತೆಗೆ ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ದಿವ್ಯ ಶಕ್ತಿಯಾಗಿದೆ. ಕವಿತೆ ಗಟ್ಟಿಗೊಳ್ಳಲು ಅಧ್ಯಯನ ಅಗತ್ಯವಾಗಿದೆ. ಕವಿ ಸೋಮು ಅವರ ವಿಜಯಪುರ ಸಾಂಸ್ಕೃತಿಕ ಪರಂಪರೆ ಸಾರುವ ಸಾಹಿತ್ಯವನ್ನು ದೃಶ್ಯಗಳಲ್ಲಿ ಸೆರೆ ಹಿಡಿದಿರುವ ನಿರ್ದೇಶಕ ಸುನೀಲಕುಮಾರ ಸುಧಾಕರ ಅವರ ಕ್ರಿಯಾಶೀಲತೆಗೆ ವಿಜಯಪುರ ಅಲ್ಬಮ್ ಸಾಂಗ್ ಹಿಡಿದ ಕೈಗನ್ನಡಿಯಾಗಿದೆ ಆ ಮೂಲಕ ವಿಜಯಪುರ ಕರ್ನಾಟಕದ ಸಾಂಸ್ಕೃತಿಕ ನಗರವಾಗಿದೆ ಎಂದರು.

ಅಲ್ಬಮ್ ಸಾಂಗ ಬಿಡುಗಡೆಗೊಳಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ದಾಕ್ಷಾಯಣಿ ಹುಡೇದ ಮಾತನಾಡಿ, ಇತಿಹಾಸ ಎಲ್ಲರನ್ನು ಕರೆದುಕೊಂಡು ಹೋಗುವ ಸಂದೇಶಗಳನ್ನು ಹೇಳುತ್ತದೆ. ಸಾಮರಸ್ಯದ ನೆಲೆಗಳನ್ನು ಹುಡುಕುತ್ತಾ ಹೋಗುವ ಸಂದರ್ಭದಲ್ಲಿ ಪರಸ್ಪರ ಒಬ್ಬರನ್ನೊಬ್ಬರು ಬೆಸೆಯುವ ಅಲ್ಬಮ್ ಸಾಂಗ್ ಬಿಡುಗಡೆ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾದುದು ಎಂದರು.

ಈ ಸಂದರ್ಭದಲ್ಲಿ ಅತಿಥಿಗಳಾಗಿ ಆಗಮಿಸಿದ ಸಂಶೋಧಕ ಲಾಯಪ್ಪ ಇಂಗಳೆ ಮಾತನಾಡಿ, ವಿಜಯಪುರದಲ್ಲಿ ಎರಡು ಗುಮ್ಮಟಗಳಿವೆ. ಒಂದು ಭೌತಿಕ ಗೋಳ ಗುಮ್ಮಟ ಇನ್ನೊಂದು ಬೌದ್ಧಿಕ ವಚನ ಗುಮ್ಮಟ, ಭೌತಿಕ ಗುಮ್ಮಟವು ಪ್ರವಾಸಿಗರನ್ನು ತನ್ನತ್ತ ಸೆಳೆದರೆ, ಬೌದ್ಧಿಗ ವಚನ ಗುಮ್ಮಟವು ನಿರಂತರವಾಗಿ ಶರಣರ ಸಂದೇಶಗಳ ಮೂಲಕ ಎಲ್ಲರನ್ನು ಎಚ್ಚರಿಸುತ್ತಿವೆ. ವಿಶ್ವಗುರು ಬಸವಣ್ಣನವರ ವಚನ ಸಂದೇಶಗಳನ್ನು ಮಾನವ ಕುಲಕ್ಕೆ ದಾರಿದೀಪವಾಗಿವೆ. ಜನ ಬಯಸುವ ರೀತಿಯಲ್ಲಿ ನಾವು ಸಾಹಿತ್ಯವನ್ನು ಹೇಳುವ ಪರಿ ಬದಲಿಸಿಕೊಳ್ಳಬೇಕಿದೆ ಜನ ದೃಶ್ಯ ಮಾಧ್ಯಮದತ್ತ ವಾಲುತ್ತಿರುವಾಗ ಸಾಹಿತ್ಯಕ್ಕೆ ಸಂಗೀತ ಮತ್ತು ದೃಶ್ಯದ ಅಳವಡಿಕೆ ಇಂದಿನ ಕಾಲದಲ್ಲಿ ಅಗತ್ಯವಾಗಿದೆ ಆ ನಿಟ್ಟಿನಲ್ಲಿ ಸೋಮು ಮತ್ತು ಅವರ ತಂಡದ ಪ್ರಯತ್ನ ಅಭಿನಂದನಾರ್ಹವಾದುದು ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯರಾದ ರಾಜೇಶ್ವರಿ ಮೋಪಗಾರ ಮಾತನಾಡಿ, ಚಿತ್ರ ಕಲಾವಿದರು ತಮ್ಮ ಲಲಿತ ಕಲೆಗಳ ಮೂಲಕ ಭಾವನೆಗಳನ್ನು ಕಟ್ಟಿಕೊಟ್ಟರೆ ಕವಿ ಸಾಹಿತ್ಯದ ಮೂಲಕ ಭಾವನೆಗಳನ್ನು ಅಭಿವ್ಯಕ್ತಗೊಳಿಸುತ್ತಾನೆ. ಚಲನಚಿತ್ರ ನಿರ್ದೇಶಕ ಭಾವನೆಗಳಿಗೆ ಜೀವ ತುಂಬುವ ಕೆಲಸ ಮಾಡುತ್ತಾನೆ. ಪ್ರಸ್ತುತ ಸಂದರ್ಭದಲ್ಲಿ ವಿಜಯಪುರ ಕನ್ನಡ ಅಲ್ಬಮ್ ಸಾಂಗ್ ಉದಾಹರಣೆಯಾಗಿದೆ ಎಂದರು.

ಈ ಸಂದರ್ಭ ಕವಿ ಸೋಮು ಹಿಪ್ಪರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಕವಿಗೋಷ್ಠಿಯಲ್ಲಿ ಗೀತಾ ಸನದಿ, ಮುರುಗೇಶ ಸಂಗಮ, ಭೀಮರಾವ ಉಪ್ಪಾರ, ಭರತಕುಮಾರ ಎಚ್.ಟಿ., ಕಲ್ಲಪ್ಪ ಶಿವಶರಣ, ಲಕ್ಷಿö್ಮÃ ಗೋಡೆಕರ, ಪ್ರಶಾಂತ ಬಿಳೆಭಾವಿ, ಜಯಶ್ರೀ ಚಲವಾದಿ, ಮಲ್ಲಿಕಾರ್ಜುನ ನಾಟೀಕಾರ, ಧಾನೇಶ್ವರಿ ಆಲಾಳೆ, ಶಿವಾಜಿ ಮೋರೆ, ರೇಣುಕಾ ಕೋಟ್ಯಾಳ ಅವರು ತಮ್ಮ ಸ್ವರಚಿತ ಕವಿತೆಗಳನ್ನು ವಾಚಿಸಿದರು.


ಇದೇ ಸಂದರ್ಭ ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟಗಾರರಾದ ನೀಲಾಂಬಿಕಾ ಕಟ್ಟಿಮನಿ, ಶಿವರಂಜಿನಿ ಉಪ್ಪಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 

ಶ್ರೀ ಗುರು ಕುಮಾರೇಶ್ವರ ಸಂಗೀತ ಮಹಾವಿದ್ಯಾಲಯದ ಗಾನ ಬನದ ಪಂಡಿತ ತೋಂಟದಾರ್ಯ ಕವಿಗವಾಯಿಗಳು ವೇದಿಕೆಯಲ್ಲಿ ಇದ್ದರು. 

ಕಾರ್ಯಕ್ರಮದಲ್ಲಿ ಅಲ್ಬಾಮ್ ಸಾಂಗ್ ನಲ್ಲಿ ಅಭಿನಯಿಸಿದ ಕಲಾವಿದರು ಹಾಗೂ ಗಾನಬದನ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಮಲಾಬಾಯಿ ಹಿಪ್ಪರಗಿ, ಲಕ್ಷಿö್ಮÃ ಸೇಜಾಳ, ದುಂಡಮ್ಮ ಹಿಪ್ಪರಗಿ, ರಾಮನಗೌಡ ಚೌಧ್ರಿ, 

ಶ್ರೀಕಾಂತ ಮೆಂಡೆಗಾರ, ಭೀಮರಾಯ ಕುಂಟೋಜಿ, ಪ್ರಕಾಶ ಚೌಧ್ರಿ, ಆನಂದ ಕುಂಟೋಜಿ, ಎ.ಎಚ್.ಕೊಳಮಲಿ, ಶರಣಗೌಡ ಪಾಟೀಲ, ಉಮೇಶ ಶಿವಶರಣ, ದೀಪಕ ಶಿಂಧೆ, ಸೋಮಶೇಖರ ಕುರ್ಲೆ, ವಿನೋದ ಪಟ್ಟಣದ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉಮೇಶ ಶಿವಶರಣ ಸ್ವಾಗತಿಸಿದರು. ಮುರುಗೇಶ ಸಂಗಮ ನಿರೂಪಿಸಿದರು. ಕಲ್ಲಪ್ಪ ಶಿವಶರಣ ವಂದಿಸಿದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Friday, May 1, 2026

ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಅವರ ಕೊಡುಗೆ ಅನನ್ಯ : ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ


ಸಿಂದಗಿ: ಸಿಂದಗಿ ನಗರದಲ್ಲಿ ಬಿದಿಯುದ್ಧಕ್ಕೂ ರಸ್ತೆ ಗುಂಡಿ, ಕಸ ಹಾಗೆಯೇ ಇದೆ. ಇದೆಲ್ಲವನ್ನು ಬರುವ ಸಮಯದಲ್ಲಿ ಗಮನಿಸಿದ್ದನ್ನು ನೋಡಿದರೆ ನಗರವು ಅಶುಚಿತ್ವ ಮತ್ತು ಗುಂಡಿಗಳಿAದ ಕುಡಿದೆ ಎಂದು ತಿಳಿಯುತ್ತದೆ. ಇದರ ಕುರಿತಾಗಿ ತಾಲೂಕು ದಂಡಾಧಿಕಾರಿ ಹಾಗೂ ಪೌರಾಯುಕ್ತರಿಗೆ ಕ್ರಮಕೈಗೊಳ್ಳು ವಂತೆ ಮೇಲಾಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಕಾರ್ಯಕ್ರಮದ ಮುಖ್ಯ ಅತಿಥಿ ಸ್ಥಾನವನ್ನು ವಹಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಎಂದರು.  

ಸಿಂದಗಿ ನಗರದ ವಿಜಯಪುರ ರಸ್ತೆಯಲ್ಲಿರುವ ಮಾಂಗಲ್ಯ ಭವನದಲ್ಲಿ ಸಿಂದಗಿಯ ಡಾ.ಚನ್ನಪ್ಪ ಕಟ್ಟಿ ಅಭಿನಂದನ ಸಮಿತಿ ಹಮ್ಮಿಕೊಂಡ ಅಭಿನಂದನ ಸಮಾರಂಭ ನೆಲೆ ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮದ ಮುಖ್ಯ ಅತಿಥಿ ಸ್ಥಾನವನ್ನು ವಹಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಮಾತನಾಡಿ, ಆಂಗ್ಲ ಪ್ರಾಧ್ಯಾಪಕರರಾಗಿ ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಅವರ ಕೊಡುಗೆ ಅನನ್ಯ. ಕಥೆ, ಕಾವ್ಯ, ಸಂಶೋಧನೆ, ಜೀವನ ಚರಿತ್ರೆ ಮತ್ತು ಅನುವಾದದ ಮೂಲಕ ಸಾಹಿತ್ಯದ ಕೃಷಿಯನ್ನು ಮಾಡಿ ಅಮೋಘ ಸಾಧನೆ ಮಾಡಿದ್ದಾರೆ. ಅವರ ಈ ಅವಿರತ ಪರಿಶ್ರಮದಿಂದಲೇ ಇಂದು ಅವರು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಒದಗಿ ಬಂದಿದ್ದು ಸಿಂದಗಿ ನೆಲೆಗೆ ಹೆಮ್ಮೆಯ ಗರಿ. ಒಟ್ಟಿನಲ್ಲಿ ಡಾ.ಚನ್ನಪ್ಪ ಕಟ್ಟಿ ಅವರ ಬದುಕು, ಬರಹ ಮತ್ತು ಆಡಳಿತ ಕಾರ್ಯವೈಖರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ಗರಿಮೆಯನ್ನು ಹೆಚ್ಚಿಸಿದ್ದಾರೆ ಎಂದರು.

  ಈ ವೇಳೆ ನೆಲೆ ಅಭಿನಂದನ ಗ್ರಂಥವನ್ನು ಬಿಡುಗಡೆಗೊಳಿಸಿದ ಬೆಂಗಳೂರಿನ ಸಂಸ್ಕೃತಿ ಚಿಂತಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, ನೆಲೆ ಎನ್ನುವ ಹೆಸರೇ ಚನ್ನಪ್ಪ ಕಟ್ಟಿ ಅವರ ಅಸ್ಮಿತೆ. ಅವರ ಇಡೀ ಬದುಕು ಮತ್ತು ಸಾಹಿತ್ಯ ಚಟುವಟಿಕೆಗೆ ಒಂದು ನೆಲೆ ಸಿಕ್ಕಿರುವುದೇ ಈ ನೆಲೆ ಎನ್ನುವ ಶಬ್ದ ಅವರ ವ್ಯಕ್ತಿತ್ವದ ಗುಣವಾಗಿದೆ. ಸ್ವಾಹಿತ ಮತ್ತು ಸಮಾಜ ಹಿತಕ್ಕಾಗಿ ಕಾರ್ಯ ಮಾಡಿದಾಗ ಮಾತ್ರ ಅದು ಸತ್ಯ ಶುದ್ಧ ಕಾಯಕ. ೫ ಭಾಗಗಳಾಗಿ ಈ ಕೃತಿಯನ್ನು ರಚನೆ ಮಾಡಲಾಗಿದೆ. 

ಇದು ನೆಲೆ ೧೦೦ರೊಳಗಿನ ಒಂದಲ್ಲ. ಇದೊಂದು ವಿಶೇಷ ಅಭಿನಂದನಾ ಗ್ರಂಥವಾಗಿದೆ. ಅಕ್ಷರ ಮಾಧ್ಯಮ ಆಚೆಗಿನ ಮಾತುಗಳನ್ನು ಕಥೆಯ ರೂಪದಲ್ಲಿ ತರಲಾಗಿದೆ ಎಂದರು. 

ಇದೇ ಸಂದರ್ಭದಲ್ಲಿ ವಿಜಯಪುರದ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ.ಎಂ.ಎಸ್.ಮದಭಾವಿ ಅಭಿನಂದನಾ ನುಡಿಗಳನ್ನಾಡಿದರು. ಡಾ.ಅರವಿಂದ ಮನಗೂಳಿ, ಅಭಿನಂದನ ಗ್ರಂಥದ ಗೌರವ ಸಂಪಾದಕ ಡಾ.ಶ್ರೀರಾಮ ಇಟ್ಟಣ್ಣವರ ಮಾತನಾಡಿ ದರು. ಮಾಜಿ ವಿಪ ಸದಸ್ಯ ಅರುಣ ಶಹಾಪುರ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಗಮೇಶ ಮೇತ್ರಿ ಸಂಪಾದಿಸಿದ ಅಮೋಘಸಿದ್ಧ ಜನಪದ ಮಹಾಕಾವ್ಯ ಸಾಂಸ್ಕೃತಿಕ ಮುಖಾಮುಖಿ ಗ್ರಂಥವನ್ನು ಮಾಜಿ ಶಾಸಕ ರಮೇಶ ಭೂಸನೂರ ಮತ್ತು ಚನ್ನಪ್ಪ ಕಟ್ಟಿ ಅವರ ವಿಮರ್ಶಾ ಸಂಕಲನ ಒಕ್ಕಣೆಯನ್ನು ವಿಪ ಮಾಜಿ ಸದಸ್ಯ ಅರುಣ ಶಹಾಪೂರ ಬಿಡುಗಡೆಗೊಳಿ ಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತ ವೀರಶೈವ ಶಿವಾ ಚಾರ್ಯ ಸಂಸ್ಥೆ ರಾಷ್ಟ್ರೀಯ ಅಧ್ಯಕ್ಷರು, ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾ ರ್ಯರು, ಸಮ್ಮುಖವನ್ನು ಹಾಲುಮತ ಗುರುಪೀಠ ಅಗತೀರ್ಥದ ಸರೂರದ ರೇವಣಸಿದ್ದೇಶ್ವರ ಶಾಂತಮ ಯ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು. 

ಸಮಾರಂಭದಲ್ಲಿ ವಿಜಯಪುರ ಲೋಕಾಯುಕ್ತ ಎಸ್‌ಪಿ ಟಿ.ಮಲ್ಲೇಶ, ಪ್ರಧಾನ ಸಂಪಾದಕ ಡಾ.ಎಂ.ಎA. ಪಡಶೆಟ್ಟಿ, ಡಾ.ಸಂಗಮೇಶ ಮೇತ್ರಿ, ಡಾ.ಚನ್ನಪ್ಪ ಕಟ್ಟಿ, ಪತ್ನಿ ಸರೋಜಾ ಕಟ್ಟಿ, ಎಂ.ಎಸ್.ಹೈಯ್ಯಾಳಕರ, ಶಿವಪ್ಪ ಗವಸಾಯಿ, ಬಿ.ಎಸ್.ಹಣಮಶೆಟ್ಟಿ, ಚಿದಂಬರ ಬಂಡಗಾರ, ಡಾ.ರವಿ. ಗೋಲಾ, ಡಾ.ಶರಣಬಸವ ಜೋಗುರ, ಶಿವಾನಂದ ಕಲಬುರ್ಗಿ ಸೇರಿದಂತೆ ಅವರ ಗೆಳೆಯರ ಬಳಗ, ಶಿಷ್ಯ ಬಗಳ ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೂ ಪೂರ್ವದಲ್ಲಿ: ಬೆಳಿಗ್ಗೆ ೧೦ಗಂಟೆಗೆ ಡಾ.ಚನ್ನಪ್ಪ ಕಟ್ಟಿ ಸಾಹಿತ್ಯ ಮುಖಾಮುಖಿ ವಿಚಾರ ಸಂಕಿರಣವನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಮಕ್ಕಳ ಸಾಹಿತಿಗಳಾದ ಹ.ಮ.ಪೂಜಾರ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಅಥಣಿಯ ಕತೆಗಾರ ಕಾದಂಬರಿಕಾರ ಡಾ.ಬಾಳಾಸಾಹೇಬ ಲೋಕಾಪುರ ಅವರು ಡಾ.ಚನ್ನಪ್ಪ ಕಟ್ಟಿ ಅವರ ಕತೆಯ ಕುರಿತು ಮಾತನಾಡಿದರು. ಬೆಂಗಳೂರಿನ ವಿಮರ್ಶಕಿ ಎನ್.ಆರ್.ಲಲಿತಾಂಬಾ ಕಟ್ಟಿ ಅವರ ಕಾವ್ಯ ಕುರಿತು, ತಿಪಟೂರಿನ ಅನುವಾದಕ ಬರಹಗಾರ ಎಸ್. ಗಂಗಾಧರಯ್ಯ ಅನುವಾದ ಕುರಿತು, ಹಂಪಿ ಕನ್ನಡ ವಿಶ್ವವಿದ್ಯಾಯದ ಸಂಶೋಧಕ ಡಾ.ಎಫ್.ಟಿ.ಹಳ್ಳಿಕೇರಿ ಅವರು ಕಟ್ಟಿ ಸಂಶೋಧನೆ ಕುರಿತಾಗಿ ಮಾತನಾಡಿ ದರು. ಮುಖ್ಯ ಅತಿಥಿಗಳಾಗಿ ವಿಜಯಪುರದ ಚಾಣಕ್ಯ ಕರಿಯರ ಅಕಾಡೆಮಿ ಸಂಸ್ಥಾಪಕ ಎನ್.ಎಂ.ಬಿರಾದಾರ ಸೇರಿದಂತೆ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಶ್ರಮಜೀವಿಗಳಿಗೆಂದೇ ಮೀಸಲಾದ ದಿನ ಕಾರ್ಮಿಕರ ದಿನ : ಸಿದ್ರಾಮ ಕಾಸೆ


 ಕಾರ್ಮಿಕರು ಜಗತ್ತಿನ ಆಸ್ತಿ. ಕಾರ್ಮಿಕರಿಲ್ಲದ ಜಗತ್ತನ್ನು ಊಹಿಸುವುದಕ್ಕೇ ಸಾಧ್ಯವಿಲ್ಲ. ಇಂತಹ ಶ್ರಮಜೀವಿಗಳನ್ನು ಗೌರವಿಸುವ, ಅವರ ಸೇವೆಯನ್ನು ಸ್ಮರಿಸುವ ದಿನವಾಗಿ ಪ್ರತಿವರ್ಷ `ಅಂತಾರಾಷ್ಟ್ರೀಯ ಕಾರ್ಮಿಕರ ದಿನ'ವನ್ನು ಆಚರಿಸಲಾಗುತ್ತದೆ ಎಂದು ರವಿ ಇಂಡಸ್ಟ್ರೀಸ್ ಮಾಲೀಕರಾದ ಸಿದ್ರಾಮ ಕಾಸೆ ಹೆಳಿದರು.

ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕ  ದಿನಾಚರಣೆ ನಿಮಿತ್ಯವಾಗಿ ಕಾರ್ಮಿಕರಿಗೆ ಸಿಹಿ ವಿತರಿಸಿ ಶಾಲು ಹೊದಿಸಿ ಸನ್ಮಾನಿಸದ ಸಂದರ್ಭದಲ್ಲಿ ಅವರು ಮಾತನಾಡಿದರು. 


ಮೇ 1 ಅಂತಾರಾಷ್ಟ್ರೀಯ ಕಾರ್ಮಿಕರ ದಿನ. ಇದು ಶ್ರಮಜೀವಿಗಳಿಗೆಂದೇ ಮೀಸಲಾದ ದಿನ. ಪ್ರತಿಯೊಂದು ಕ್ಷೇತ್ರದಲ್ಲೂ ಶ್ರಮಪಟ್ಟು ದುಡಿಯುವ ಕೆಲಸಗಾರರು ದೇಶ, ರಾಜ್ಯದ ಅಭಿವೃದ್ಧಿಗೆ ಹೆಗಲು ಕೊಡುತ್ತಾರೆ. ಇಂತಹ ಶ್ರಮಜೀವಿಗಳ ಪ್ರಯತ್ನ, ಕೆಲಸದಲ್ಲಿಯೇ ದೇಶದ ಅಭಿವೃದ್ಧಿಯಡಗಿದೆ. ಹೀಗೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುವ ಕಾರ್ಮಿಕರ ಶ್ರಮ ಮತ್ತು ಸೇವೆಯನ್ನು ಗೌರವಿಸುವ, ಅವರ ಸೇವೆಗೆ ಕೃತಜ್ಞತೆ ಸಲ್ಲಿಸುವ ನಮ್ಮ ಕರ್ತವ್ಯವಾಗಿದೆ ಎಂದರು.

ನೇತಾ, ಬಡಕನ, ಬುಲಾಯಿ, ಗೋಪಾಲ ಕಾರ್ಮಿಕರಿಗೆ ಸನ್ಮಾನಿಸಲಾಯಿತು. 

ಇದೇ ಸಂದರ್ಭದಲ್ಲಿ ಬಸವರಾಜ ಮಲಘಾಣ, ಉಮೇಶ ಶಿವಶರಣ, ಸುರೇಶ ಜಾಧವ, ಶ್ರೀನಿವಾಸ ವಾಘ್ಮೋರೆ, ಶ್ರೀಕಾಂತ ಬಂಡಿವಡ್ಡರ, ಭೀಮಶಿ, ಗೋವಿಂದ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸಾಹಿತ್ಯದ ಕಿನ್ನುರಿ ನುಡಿಸಿದ ಡಾ.ಚನ್ನಪ್ಪ ಕಟ್ಟಿ ಅವರಿಗೆ "ನೆಲೆ" ಅಭಿನಂದನಾ ಗ್ರಂಥ ಸಮರ್ಪಣೆ:


ಸೃಜನಶೀಲತೆಯೇ ಜೀವಾಳವಾಗಿಸಿಕೊಂಡ ಕನ್ನಡದ ಅಪರೂಪದ ಲೇಖಕರಲ್ಲಿ ಡಾ. ಚನ್ನಪ್ಪ ಕಟ್ಟಿ ಅವರು ಕೂಡಾ ಒಬ್ಬರು, ಸಿಂದಗಿ ಎಂಬ 'ಅರೆ ನಗರಿ' ಯಲ್ಲಿ ನೆಲೆ ನಿಂತು, ಕಾವ್ಯದ ಮೂಲಕ  ಸಾಹಿತ್ಯದ ಯಾನವನ್ನು ಪ್ರಾರಂಭಿಸಿ ಕಥೆ, ವಿಮರ್ಶೆ, ಸಂಶೋಧನೆ, ಜೀವನ ಚರಿತ್ರೆ, ಸಂಪಾದನೆ, ಅನುವಾದ ಹೀಗೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಅನೂಹ್ಯವಾದ ಕಾರ್ಯ ಮಾಡಿ ಮೌನ ಸಾಧಕರಾದ ಡಾ. ಚನ್ನಪ್ಪ ಕಟ್ಟಿ ಅವರು ಅಪ್ಪಟ ಗ್ರಾಮೀಣ ಪ್ರತಿಭೆ, ತಮ್ಮ ಗ್ರಾಮ ಬದುಕಿನ ಸಶಕ್ತ ಅನುಭವಗಳಿಗೆ ಸಾಹಿತ್ಯದ ಆಧುನಿಕ ಚಿಂತನಾ ದಾರಿಯನ್ನು ತಂದು ಜೋಡಿಸುವ ಮೂಲಕ ಬರಹಕ್ಕೆ ಹೊಸ ಮೆರುಗನ್ನು ತಂದುಕೊಟ್ಟವರು.

ಸಿಂದಗಿಯ ನಿವಾಸಿಯಾದ ಡಾ. ಚನ್ನಪ್ಪ ಕಟ್ಟಿ ಅವರು ಮೂಲತಃ ಗದಗ ಜಿಲ್ಲೆಯ ರೋಣ ತಾಲೂಕಿನ ಕೊನೆಯ ಸಣ್ಣ ಹಳ್ಳಿ ಹಿರೇಹಾಳ ಗ್ರಾಮದವರು, ಕೃಷಿಯನ್ನೇ ಅವಲಂಬಿಸಿದ ಕನಕಪ್ಪ ಮತ್ತು ವೆಂಕವ್ವ ನವರ ಆರನೆಯ ಮಗನಾಗಿ ಮೇ 1, 1956 ರಲ್ಲಿ ಜನಿಸಿ ಅಲ್ಲಿಯೇ ಪ್ರಾಥಮಿಕ ಶಿಕ್ಷಣ, ಬಾದಾಮಿಯಲ್ಲಿ ಮಾಧ್ಯಮಿಕ ಮತ್ತು ಪದವಿಪೂರ್ವ ಶಿಕ್ಷಣವನ್ನು ಪಡೆದು ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪದವಿ, 1979 ರಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಭಾಷಾ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿ ಅದೇ ವರ್ಷವೇ ಸಿಂದಗಿಯ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಜಿ. ಪಿ ಪೋರವಾಲ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಸೇವೆಯನ್ನು ಪ್ರಾರಂಭಿಸಿದರು ನಂತರ ಅದೇ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾಗಿರುವರು, ಒಟ್ಟು ಮೂವತ್ತೇಳು ವರ್ಷಗಳ ಕಾಲ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ವಿಷಯವನ್ನು ಮನ ಮುಟ್ಟುವಂತೆ ಪಾಠ ಮಾಡಿ ಸಾವಿರಾರು ವಿದ್ಯಾರ್ಥಿಗಳಿಗೆ ಪೂಜ್ಯ ಗುರುಗಳಾಗಿ, ಮಾರ್ಗದರ್ಶಕರಾಗಿ ಇವತ್ತಿಗೂ ಶಿಷ್ಯ ಬಳಗವನ್ನು ಪ್ರೋತ್ಸಾಹಿಸುತ್ತಲೇ ಸಾಗಿದ್ದಾರೆ.

ಡಾ. ಚನ್ನಪ್ಪ ಕಟ್ಟಿ ಅವರದ್ದು ಸುಖೀ ಹಾಗೂ ಸುಂದರ ಕುಟುಂಬ, 1985 ರಲ್ಲಿ ಸರೋಜಾ ಅವರನ್ನು ಬಾಳ ಸಂಗಾತಿಯಾಗಿ ಸ್ವೀಕರಿಸಿದರು, ಸಚಿನ್ ಮತ್ತು ಸುಮಾ ಎಂಬ ಇಬ್ಬರು ಮಕ್ಕಳನ್ನು ಪಡೆದ ಚನ್ನಪ್ಪ ಕಟ್ಟಿ ಹಾಗೂ ಸರೋಜಾ ಅವರು ಇಂದು ಅಜ್ಜ ಅಜ್ಜಿಯಾಗಿ ಮೊಮ್ಮಕ್ಕಳಾದ ಧೃತಿ ಮತ್ತು ಅವ್ಯುಕ್ತ ರವರೊಂದಿಗೆ ಕಾಲ ಕಳೆಯುತ್ತಿದ್ದಾರೆ.


ಸಾಹಿತ್ಯದ ವಾತಾವರಣವೇ ಇಲ್ಲದ ಕುಟುಂಬದ ಪರಿಸರದಲ್ಲಿ ಬೆಳೆದ ಬಂದ ಕಟ್ಟಿ ಅವರಿಗೆ ಪಾಠ ಹೇಳಿಕೊಟ್ಟ ಗುರುಗಳು  ಸಾಹಿತ್ಯದ ದಾರಿಗೆ ಕರೆದುಕೊಂಡು ಬಂದರೆ, ಅಣ್ಣ ನ ಉಸ್ತುವಾರಿಕೆ ಉನ್ನತ ಶಿಕ್ಷಣ ನೀಡಿತು, ಧಾರವಾಡದ ಗಾಳಿ ಸಾಹಿತ್ಯದ ರುಚಿ ತೋರಿಸಿತು , ಸಿಂದಗಿಯ ಜಾನಪದ ಹಾಗೂ ಸಂಶೋಧನೆಯಲ್ಲಿ ತೊಡಗಿಸಿಕೊಂಡ ಡಾ. ಎಂ ಎಂ ಪಡಶೆಟ್ಟಿ ಅಪರಿಮಿತ ಗೆಳೆಯರಾಗಿ ದೊರೆತು ಸಾಹಿತ್ಯವು ಹುಲುಸಾಗಿ ಬೆಳೆಯಲು ಸಾಧ್ಯವಾಯಿತು.


ಬಂಡಾಯ ಸಾಹಿತ್ಯ ಚಳವಳಿಯ ಸಂದರ್ಭದಲ್ಲಿ ಗೆಳೆಯರಾದ ನಾಗೇಶ್ ರಾಂಪೂರ ಅವರೊಂದಿಗೆ ಸೇರಿಕೊಂಡು " ಎರಡು ಸೆಲೆ, ಒಂದು ನೆಲೆ " ಕವನ ಸಂಕಲನ ಪ್ರಕಟಿಸಿ ಆಧುನಿಕ ಬದುಕಿಗೆ ಮುಖ ಮಾಡಿರುವ ಮನುಷ್ಯನ ಒಳ ತುಮುಲಗಳನ್ನು ತೆರದು ತೋರುವ ಪ್ರಯತ್ನಕ್ಕೆ ಮುನ್ನುಡಿ ಬರೆದರು,                  " ಇಂಡಿಯಾದಲ್ಲಿ", " ನೆನಪುಗಳು ಸಾಯುವುದಿಲ್ಲ", " ಸೂರ್ಯನಿಗೆ ಸಾವ ನೋಡಲು ಬೇಸರವಿಲ್ಲ", " ಬೇರು - ಚಿಗುರು" , " ಓಡುವ ಪಾದ, ಕಾಡುವ ಸರಪಳಿ" ಕವಿತಾ ಸಂಕಲನಗಳಲ್ಲಿ ' ಸಾಮಾಜಿಕ ನ್ಯಾಯಕ್ಕಾಗಿ ಸದಾ ಹಂಬಲಿಸುವ ತಮ್ಮ ಧ್ವನಿಯನ್ನು ಮಾರ್ದನಿಸುವಂತೆ ಚಿತ್ರಿಸಿರುವುದನ್ನು ಕಾಣಬಹುದಾಗಿದೆ  " ಹೇಳಲೇಬೇಕಾದುದನ್ನು ಹೇಳುವ ಸಲುವಾಗಿ, ಹೇಳಲಾಗದನ್ನು ಹೇಳಿಯೇ ತೀರುವ ಸಲುವಾಗಿ "  ಬರೆಯುವೆ ಎನ್ನುವ ಅವರ ಮಾತು ಆಪ್ತವೆಸುತ್ತದೆ.


ಕಾವ್ಯದೊಳಗಿದ್ದು ಕಥೆಯ ಕಡೆಗೆ ಕಣ್ಣು ಹಾಯಿಸಿದ ಕಟ್ಟಿ ಅವರು " ಮುಳುಗಡೆ ಮತ್ತು ಇತರ ಕಥೆಗಳು", " ಬೆಂಕಿ ಇರದ ಬೆಳಕು", ಹಾಗೂ " ಏಕತಾರಿ" ಕಥಾ ಸಂಕಲನಗಳ ಮೂಲಕ ಗ್ರಾಮೀಣ ಪರಿಸರ, ಅಲ್ಲಿನ ಸಂಘರ್ಷ, ಶೋಷಣೆ, ಶ್ರೀಮಂತಿಕೆಯ ಅಮಲು, ಹೆಣ್ಣೆ ಮಕ್ಕಳ ಅಸಹಾಯಕತೆ, ಜಗಳ ಈರ್ಷೆ, ಹಾದರ, ಮಹಿಳೆಯರ ದಿಟ್ಟತನ, ಪ್ರೀತಿ- ಪ್ರಣಯ- ಸಂಬಂಧ ಗಳ ಕುರಿತಾಗಿ ಗಾಢವಾಗಿ ಪರಿಣಾಮ ಬೀರುವ ಹಾಗೆ ಕಾವ್ಯಾತ್ಮಕ ಭಾಷೆಯಲ್ಲಿ ರೂಪಿತಗೊಂಡ ಕಥೆಗಳು ಕನ್ನಡದ ಕಥನ ಲೋಕವನ್ನು ಇನ್ನಷ್ಟು ವಿಸ್ತರಿಸಿ ಮನುಷ್ಯ ಸಂಬಂಧಗಳನ್ನು ಹಾಗೂ ಸಮುದಾಯದ ಧಾರಣ ಶಕ್ತಿಯ ಮೇಲಿರುವ ವಿಶ್ವಾಸ ಮತ್ತು ನಂಬಿಕೆಗಳನ್ನು ಮತ್ತಷ್ಟು ಗಟ್ಟಿಗೊಳಿಸಿವೆ ಹೀಗಾಗಿ ಕಟ್ಟಿ ಅವರ ಕಥೆಗಳನ್ನು ಓದಲು ಓದುಗ ಹಾಗೂ ವಿಮರ್ಶಕ ಒಟ್ಟಿಗೆ  ಕಾತುರತೆಯಿಂದ ಕಾಯುವರು.


ಸಾಹಿತ್ಯ ಮತ್ತು ಸಾಂಸ್ಕೃತಿಕಯ ಕುರಿತಾಗಿ ತೀವ್ರ ತುಡಿತ ಹೊಂದಿರುವ ಕಟ್ಟಿ ಅವರು "ಸಾರಣೆ", " ಕುಯಿಲು", " ಶಬ್ದ ಸೋಪಾನ", " ಒಕ್ಕಣೆ", ವಿಮರ್ಶಾ ಕೃತಿಗಳ ಮೂಲಕವೂ ತಮ್ಮ ಓದಿನ ಹರವನ್ನು ಬಿಚ್ಚಿಟ್ಟು,  ಕಾವ್ಯ, ಕಥೆಗಳು ಹಾಗೂ ಸೃಜನಶೀಲ ಆಶೆಯದ ಬರಹದ ಒಳ ಸುಳಿವುಗಳ ಮರ್ಮ ಹೇಗಿರಬೇಕೆಂಬುದರ ಕುರಿತಾಗಿ ಚರ್ಚಿಸಿ ಕನ್ನಡ ವಿಮರ್ಶೆಗೆ ಹೊಸತಾದ ದಾರಿಯೊಂದನ್ನು  ರೂಪಿಸಿಕೊಟ್ಟಿರುವರು.

" ಚೆನ್ನುಡಿ" - ಮುನ್ನುಡಿ ಬೆನ್ನುಡಿ ಅಭಿಪ್ರಾಯಗಳ ಸಂಕಲನ, " ಕಸವರಮೆಂಬುದು" - ವೈಚಾರಿಕ ಲೇಖನಗಳ ಸಂಕಲನ, " ಬಬಲೇಶ್ವರ ಶಾಂತವೀರ ಪಟ್ಟಾಧ್ಯಕ್ಷರು", " ಇಟಗಿ ಶ್ರೀ ಭೀಮಾಂಬಿಕೆ" - ಜೀವನ ಚರಿತ್ರೆಗಳು, " ನೆನಹು ಮಂದಾರ" - ವ್ಯಕ್ತಿಗಳ ಕಿರು ಜೀವನ ಚರಿತ್ರೆಗಳು ಈ ಕೃತಿಗಳ ಮೂಲಕ ಡಾ. ಚನ್ನಪ್ಪ ಕಟ್ಟಿ ಕನ್ನಡದ ಸಾಂಸ್ಕೃತಿಕ ಲೋಕದ ಕಾಳಜಿಯನ್ನು ಎತ್ತಿ ತೋರಿಸಿದ್ದಾರೆ 

ಕಾವ್ಯ, ಕಥೆ ಹಾಗೂ ವಿಮರ್ಶಾಯಲ್ಲಿ ದಾಪುಗಾಲು ಇಡುತ್ತಲೇ ಡಾ. ಕಟ್ಟಿ ಅವರು ಸಂಶೋಧನಾ ಕ್ಷೇತ್ರಕ್ಕೂ ತಮ್ಮ " ಅಮೋಘಸಿದ್ದ ಪರಂಪರೆ " ಸಂಶೋಧನಾ ಕೃತಿಯ ಮೂಲಕ ಹೊಸ ಬೆಳಕನ್ನು ತಂದು ಚೆಲ್ಲಿರುವರು, ಸಂಶೋಧಕರಿಗೆ ಮಾದರಿಯಾದ ಈ ಮಹಾಪ್ರಬಂಧ ಅಕ್ಷರ ಇತಿಹಾಸದ ಹೊರಗಿರುವ ಸಿದ್ದರ, ಸಂತರ, ಅನುಭಾವಿಗಳ ಹಾಗೂ ಆರೂಢರ ಪರಂಪರೆಗಳ ಅಧ್ಯಯನಕ್ಕೆ ಮಾರ್ಗಿ ಆಗಿದೆ 

" ಅಮೋಘಸಿದ್ದ ಜನಪದ ಮಹಾಕಾವ್ಯ", " ಕುರುಬ ಮಹಿಳೆ", " ಕುರುಬ ಸಮುದಾಯದ: ವಿದೇಶಿ ವಿದ್ವಾಂಸರ ಅಧ್ಯಯನಗಳು", " ಸೀತಾಳ ಬಿಂದಿಗೆ " ಈ ಕೃತಿಗಳು ಡಾ. ಚನ್ನಪ್ಪ ಕಟ್ಟಿ ಅವರು ಹಾಲುಮತ ಸಂಬಂಧಿ ಕೃತಿಗಳು,  ಸಾಹಿತ್ಯ ಸಮ್ಮೇಳನದ, ಸಂಘ ಸಂಸ್ಥೆಗಳ ಸ್ಮರಣಯ ಗ್ರಂಥಗಳನ್ನು  ಹಾಗೂ ನಾಡಿನ ಹತ್ತಾರು ಹಿರಿಯ ಲೇಖಕರ ಅಭಿನಂದನಾ ಗ್ರಂಥಗಳಿಗೂ ಕೂಡಾ ಸಂಪಾದಕರಾಗಿ ಅಮೂಲ್ಯವಾದ ಕೃತಿಗಳನ್ನು ಈ ನಾಡಿಗೆ ನೀಡಿರುವುದು ಸ್ಮರಣೀಯವಾಗಿದೆ.

ಸೃಜನಶೀಲತೆಯನ್ನು ಕಾಪಿಟ್ಟುಕೊಂಡ ಡಾ. ಚನ್ನಪ್ಪ ಕಟ್ಟಿ ಅವರಿಗೆ ಹೊಸತೇನಾದರೂ ನೀಡಬೇಕೆಂಬ ಹಂಬಲ ಯಾವತ್ತೂ ಅವರಲ್ಲಿ ಜಂಗಮತ್ವವನ್ನು ಪಡೆದುಕೊಂಡದೆ ಇದಕ್ಕೆ ಸಾಕ್ಷಿ ಎಂಬಂತೆ ಅವರ ಅನುವಾದ ಕೃತಿಗಳಾದ " ಸ್ಕಾರ್ಲೆಟ್ ಪ್ಲೇಗ ( ಕಾದಂಬರಿ), " ಯುದ್ಧ ಕಾಲದ ಹುಡುಗಿಯರು" ( ಕಥಾ ಸಂಕಲನ), " ಮೃತ್ಯು ಮುಟ್ಟದ ಮುನ್ನ "( ಸಾವ ಧೇನಿಸುವ ಕವಿತೆಗಳು), " ಕುವರಿಯಾದೊಡೆ ಕುಂದೇನು?" ( ಏಳು ಏಕಾಂಕ ನಾಟಕಗಳು) ಕೃತಿಗಳು ವೈವಿಧ್ಯಮಯ ಸಾಂಸ್ಕೃತಿಕ ಲೋಕವನ್ನು ಕಟ್ಟಿಕೊಡುವಲ್ಲಿ ಸಫಲತೆಯನ್ನು ಸಾಧಿಸಿವೆ.

ರಾಜಧಾನಿಯಿಂದ ಐದುನೂರಾದ ಮೂವತ್ತು ಹಾಗೂ ಸಾಂಸ್ಕೃತಿಕ ನಗರಿ ಧಾರವಾಡದಿಂದ ಎರಡು ನೂರದಾ ಐವತ್ತು ಕಿಲೋಮೀಟರ್ ದೂರದಲ್ಲಿರುವ ಸಿಂದಗಿ ಪಟ್ಟಣದಲ್ಲಿ ಠಿಕಾಣಿ ಹೂಡಿದ ಚನ್ನಪ್ಪ ಕಟ್ಟಿ ಅವರು ಡಾ. ಎಂ ಎಂ ಪಡಶೆಟ್ಟಿ ಹಾಗೂ ನಾಗೇಶ್ ರಾಂಪೂರ ಅವರೊಂದಿಗೆ ಸೇರಿಕೊಂಡು ಸಿಂದಗಿಯ ಸಾಂಸ್ಕೃತಿಕ ಚಹರೆಯನ್ನು ಬದಲಿಸಿ, ನೆಲೆ ಪ್ರಕಾಶನ ಸಂಸ್ಥೆಯನ್ನು ಹುಟ್ಟು ಹಾಕಿ ಎಪ್ಪತ್ತಕ್ಕೂ ಹೆಚ್ಚು ವೈವಿಧ್ಯಮಯ ಪುಸ್ತಕಗಳನ್ನು ಪ್ರಕಟಿಸಿ ಕಿರಿಯ ಲೇಖಕರನ್ನು ಸಾಹಿತ್ಯ ಕ್ಷೇತ್ರಕ್ಕೆ ಪರಿಚಯಿಸಿ ಕೊಡುವಲ್ಲಿ ಸಫಲರಾಗಿದ್ದಾರೆ, ಬೋಧನೆ, ಬರವಣಿಗೆ ಮತ್ತು ಆಡಳಿತ ವನ್ನು ತಮ್ಮ ಪ್ರಾಮಾಣಿಕ ನಡೆಯ ಮೂಲಕ ನ್ಯಾಯ ಒದಗಿದ ಕಟ್ಟಿ ಅವರದು ಬಹುಮುಖ ವ್ಯಕ್ತಿತ್ವ , ಯಾವಾಗಲೂ ಗೋಜು ಮತ್ತು ಗದ್ದಲಗಳ ಆಚೆ ನಿಂತು ತಮ್ಮ ನಿತಾಂತ ಸಂಯಮದಿಂದ ಪ್ರತಿಯೊಂದನ್ನು ಅವಲೋಕಿಸಿ ನಿರ್ಣಯಿಸುವ ಇವರ ನಡೆ ನಿಧಾನವಾದರೂ ಪ್ರಧಾನವಾಗಿದೆ. 

ಡಾ. ಚನ್ನಪ್ಪ ಕಟ್ಟಿ ಅವರು ಇದುವರೆಗೂ ಸುಮಾರು ನಾಲವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದು ಎಲ್ಲಾ ಕೃತಿಗಳು ಕನ್ನಡ ನಾಡಿಗೆ ವೈವಿಧ್ಯಮಯ ಸಾಂಸ್ಕೃತಿಕ ಲೋಕವನ್ನು ಪರಿಚಯಿಸಿಕೊಟ್ಟಿವೆ, ಡಾ. ಕಟ್ಟಿ ಅವರು ತಮ್ಮ ಕಾವ್ಯ ಭಾಷೆಯ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಹೊಸ ಧ್ವನಿಯೊಂದನ್ನು ತಂದು ಸೇರಿಸಿದ್ದಾರೆ ಎಂದು ವಿಮರ್ಶಕರು ಗುರುತಿಸಿದ್ದಾರೆ. 

ಚನ್ನಪ್ಪ ಕಟ್ಟಿ ಅವರ ಸಾಹಿತ್ಯದ ಈ ಸುದೀರ್ಘ ಪಯಣದ ಹಾದಿಯಲ್ಲಿ ಕಟ್ಟಿ ಅವರನ್ನು - ಜಯತೀರ್ಥ ರಾಜಪುರೋಹಿತ ದತ್ತಿನಿಧಿ ಸಣ್ಣ ಕಥಾ ಸ್ಪರ್ಧೆಯಲ್ಲಿ ಚಿನ್ನದ ಪದಕ, ಸಂಕ್ರಮಣ ಕಾವ್ಯ ಪ್ರಶಸ್ತಿ, ಎಚ್ ಎಂ ಟಿ ಕಥಾ ಪ್ರಶಸ್ತಿ, ಮಲ್ಲೇಪುರಂ ಜಿ. ವೆಂಕಟೇಶ ಸಾಂಸ್ಕೃತಿಕ ಪ್ರತಿಷ್ಠಾನದ ಬಿ. ಶ್ಯಾಮಸುಂದರ ಪ್ರಶಸ್ತಿ, ರತ್ನಾಕರವರ್ಣಿ - ಮುದ್ದಣ ಕಾವ್ಯ ಪ್ರಶಸ್ತಿ, ಅಮ್ಮ ಪ್ರಶಸ್ತಿ, ಬೆಟದೂರು ಅಮರಮ್ಮ ಚೆನ್ನಬಸಪ್ಪ ಪ್ರಶಸ್ತಿ, ಡಾ. ಬೆಸಗರಹಳ್ಳಿ ರಾಮಣ್ಣ ಕಥಾ ಪ್ರಶಸ್ತಿ, ಕರ್ನಾಟಕ ಜಾನಪದ ಅಕಾಡೆಮಿಯ ಪುಸ್ತಕ ಬಹುಮಾನ, ಡಾ. ಬಸವರಾಜ ಕಟ್ಟಿಮನಿ ಕಥಾ ಪ್ರಶಸ್ತಿ, ಸ್ವಾಭಿಮಾನಿ ಕನ್ನಡ ಬಳಗ ಪುಸ್ತಕ ಬಹುಮಾನ, ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ, " ಊರ್ಧರೇತ" ಕಿರು ಚಲನಚಿತ್ರದ ಕಥೆಗೆ ಉತ್ತರ ಕರ್ನಾಟಕ ಇಂಟರ್ ನ್ಯಾಷನಲ್ ಶಾರ್ಟ್ ಫಿಲ್ಮ್ ಫೆಸ್ಟಿವಲ್ 2022 ಟೆಲೆ ಫಿಲ್ಮ್ ಬೆಸ್ಟ್ ಸ್ಟೋರಿ ಅವಾರ್ಡ್ ಗಳು ಹುಡುಕಿಕೊಂಡು ಬಂದಿವೆ.

ಸಿಂದಗಿ ನೆಲೆ ಪ್ರಕಾಶನ ಸಂಸ್ಥೆಯ ಸಂಸ್ಥಾಪಕ ಸದಸ್ಯರಾಗಿ , ವಿಜಯಪುರದ ಕಲಬುರಗಿ ಫೌಂಡೇಶನ್ ದ ಸದಸ್ಯ, ಹಲಸಂಗಿ ಪ್ರತಿಷ್ಠಾನದ ಸದಸ್ಯ, ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸದಸ್ಯರಾಗಿ ಕನ್ನಡ ಭಾಷೆಯನ್ನು ನವೀನವಾಗಿ ಕಟ್ಟುವಲ್ಲಿ ನಿರಂತರತೆಯನ್ನು ಕಾಯ್ದುಕೊಂಡಿರುವರು ಎಲ್ಲಕ್ಕೂ ಮಣಿಮುಕುಟದಂತೆ ಸದ್ಯ ಕರ್ನಾಟಕದ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಬೆಂಗಳೂರು ವಲಯದಲ್ಲಿ ಉತ್ತರ ಕರ್ನಾಟಕದ ಸಿಂದಗಿಯ ಸೊಗಡನ್ನು ತಮ್ಮ ಬರಹ ಮಾತು ಮತ್ತು ಆಡಳಿತದ ಮೂಲಕ ಸಾದರ ಪಡಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.

ಒಟ್ಟಾರೆ ಡಾ. ಚನ್ನಪ್ಪ ಕಟ್ಟಿ ಅವರ ಬದುಕು, ಬರಹ ಮತ್ತು ಆಡಳಿತದ ಹರಿವು ಕರ್ನಾಟಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕವನ್ನು ಸಮೃದ್ಧಗೊಳಿಸಿವೆ, ಇವರ ಚಿಂತನೆ ಮತ್ತು ವಿಚಾರಗಳು, ಕಾರ್ಯವೈಖರಿ ಹೊಸ ಬರಹಗಾರರಿಗೆ ಹೊಸ ವಿವೇಕವನ್ನು ತುಂಬುವ ಈ ಸಂದರ್ಭದಲ್ಲಿಯೇ ಅವರಿಗೀಗ ಎಪ್ಪತ್ತು ವರ್ಷ ಈ ಸಂದರ್ಭದಲ್ಲಿ ಅವರ ಶಿಷ್ಯ ಬಳಗ ಮತ್ತು ಅಭಿಮಾನಿಗಳು ಸೇರಿ  ಸಿಂದಗಿಯಲ್ಲಿ ಇದೇ ಮೇ 1 ನೇ ತಾರೀಖಿನಂದು "ನೆಲೆ" ಎನ್ನುವ ಅಭಿನಂದನಾ ಗ್ರಂಥ ಅರ್ಪಿಸುವ ಮೂಲಕ ಅವರ ಎಪ್ಪತ್ತನೇಯ ವರ್ಷದ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ.

                                                                            -    ಮನು ಪತ್ತಾರ, ಕಲಕೇರಿ

                                                                                    ವಿಜಯಪುರ

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.