Sunday, January 25, 2026

26-01-2026 EE DIVASA KANNADA DAILY NEWS PAPER

ಸಮಾಜದ ಸುವ್ಯವಸ್ಥೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ವ್ಯಕ್ತಿಗಳಲ್ಲಿ ರಫೀ ಭಂಡಾರಿ ಕೂಡ ಒಬ್ಬರಾಗಿದ್ದಾರೆ : ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು

ವಿಜಯಪುರ:  ಗ್ರಾಮೀಣ ಪ್ರದೇಶಗಳ ಅನೇಕ ಮೂಲಭೂತ ಸಮಸ್ಯೆಗಳನ್ನು ಗುರುತಿಸಿ, ಸಮಾಜದ ಸುವ್ಯವಸ್ಥೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ವ್ಯಕ್ತಿಗಳಲ್ಲಿ ರಫೀ ಭಂಡಾರಿ ಕೂಡ ಒಬ್ಬರಾಗಿದ್ದಾರೆ ಎಂದು ಬೆಂಗಳೂರಿನ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದರು.

ಇಲ್ಲಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತ ಪತ್ರಕರ್ತ ರಫೀ ಭಂಡಾರಿ ಅಭಿನಂದಾನ ಸಮಿತಿ ವಿಯಯಪುರ ಇವರ ಸಹಯೋಗದಲ್ಲಿ ರವಿವಾರ ಆಯೋಜಿಸಿದ್ದ “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ ಮತ್ತು ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ದತ್ತಿನಿ಼ಧಿ ಉಪನ್ಯಾಸ ಸ್ಥಾಪನೆ ಘೋಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತವು ಅಪಾರ ಭಾಷಾ ವೈವಿಧ್ಯತೆಯನ್ನು ಹೊಂದಿರುವ ದೇಶವಾಗಿದ್ದು, ವಿವಿಧ ಭಾಷೆಗಳ ಮೂಲಕ ಅನೇಕ ಸಮುದಾಯಗಳು ಹಾಗೂ ಸಮಾಜಗಳ ಬೆಳವಣಿಗೆಯಲ್ಲಿ ಪತ್ರಿಕೋದ್ಯಮ ಮಹತ್ವದ ಪಾತ್ರ ವಹಿಸಿದೆ. ಆದರೆ, ಗ್ರಾಮೀಣ ಸಮಸ್ಯೆಗಳು ಇನ್ನೂ ಸಮರ್ಪಕವಾಗಿ ಮುಖ್ಯವಾಹಿನಿಗೆ ಬರದೇ ಉಳಿದಿವೆ ಎಂಬುದು ಆತಂಕಕಾರಿ ಸಂಗತಿಯಾಗಿದೆ ಎಂದರು. ಈ ಹಿನ್ನೆಲೆಗಳಲ್ಲಿ ಭಾಷಾ ಪತ್ರಿಕೋದ್ಯಮವು ಕೇವಲ ಸುದ್ದಿಯನ್ನು ನೀಡುವ ಮಾಧ್ಯಮವಾಗಿರದೆ, ಸಂಸ್ಕೃತಿ, ಭಾಷೆ ಮತ್ತು ಆಚಾರ-ವಿಚಾರಗಳನ್ನು ಪ್ರತಿನಿಧಿಸುವ ಪ್ರಮುಖ ವೇದಿಕೆಯಾಗಬೇಕು. ಪತ್ರಿಕೋದ್ಯಮವನ್ನು ಒಂದು ಉದ್ಯಮವಾಗಿ ಮಾತ್ರ ನೋಡದೆ, ಸಮಾಜದ ಒಳಿತಿಗಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವ ನೈತಿಕ ಕರ್ತವ್ಯವನ್ನು ಮಾಧ್ಯಮಗಳು ನಿರ್ವಹಿಸಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಇಂದಿನ ಮಾಧ್ಯಮ ಕ್ಷೇತ್ರದಲ್ಲಿ ಹಲವಾರು ಪತ್ರಿಕೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಂದು ಪತ್ರಿಕೆಯೂ ಸಮಾಜದ ಸುವ್ಯವಸ್ಥೆ ಮತ್ತು ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡೇ ಕೆಲಸ ಮಾಡುತ್ತಿದೆ. ಈ ಸಾಧನೆಗಳ ಹಿಂದೆ ಅನೇಕ ವ್ಯಕ್ತಿಗಳ ಅಪ್ರತಿಮ ಪರಿಶ್ರಮ ಅಡಗಿದೆ.  ಅಂತಹ ರೂವಾರಿಗಳಲ್ಲಿ ಒಬ್ಬರಾದ ರಫೀ ಭಂಡಾರಿ ಅವರು ಅನೇಕ ಮಹತ್ವದ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಇಂತಹ ಮಾದರಿ ನಾಯಕರು ಪತ್ರಿಕೋದ್ಯಮ ಕ್ಷೇತ್ರಕ್ಕೆ ದಾರಿದೀಪವಾಗಿದ್ದು, ಇತರರಿಗೆ ಪ್ರೇರಣೆಯಾಗಿ ನಿಲ್ಲುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ ಮಾತನಾಡಿ, ಇಡೀ ವ್ಯವಸ್ಥೆ ಸರಿಯಾದ ದಾರಿಯಲ್ಲಿ ಸಾಗಬೇಕಾದರೆ, ಯೋಗ್ಯ ವ್ಯಕ್ತಿಗಳನ್ನು ಗುರುತಿಸಿ ಉತ್ತೇಜಿಸುವುದು ಅತ್ಯಗತ್ಯವಾಗಿದೆ. ಈ ಅರ್ಥದಲ್ಲಿ ರಫೀ ಭಂಡಾರಿ ಅವರಂತಹ ಪತ್ರಕರ್ತರು ಸಂಪೂರ್ಣ ಪತ್ರಿಕೋದ್ಯಮ ಸಮುದಾಯಕ್ಕೆ ದಾರಿದೀಪರಾಗಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಮಾತನಾಡಿ, ರಫೀ ಭಂಡಾರಿ ಅವರು ಕೈಗೊಂಡಿರುವ ಕೆಲಸ ಕಾರ್ಯಗಳು ಸಮಾಜ, ವಿಶ್ವವಿದ್ಯಾನಿಲಯ ಹಾಗೂ ಜಿಲ್ಲೆಯಂತಹ ಅನೇಕ ಕ್ಷೇತ್ರಗಳ ಸಮಗ್ರ ಬೆಳವಣಿಗೆಗೆ ಸಹಕಾರಿಯಾಗಿದ್ದು, ಸಮಾಜವನ್ನು ಮುನ್ನಡೆಸುವ ಗುಣ ಅವರಲ್ಲಿ ಅಡಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎ.ಎಂ.ಖಾನ್ ಮಾತನಾಡಿ, ಮಾಧ್ಯಮ ರಂಗಕ್ಕೆ ನೀಡಿದ ಸೇವೆ ಹಾಗೂ ಉರ್ದು ಭಾಷೆಗಳ ಬೆಳವಣಿಗೆಗೆ ಸಲ್ಲಿಸಿದ ಕೊಡುಗೆ ಮತ್ತು ಜನಸಾಮಾನ್ಯರಿಗೆ ಮಾಡಿದ ಸೇವೆಗಳು ಅಪಾರ ಶ್ರೇಷ್ಠತೆಯನ್ನು ಪಡೆದಿವೆ. ಇಂತಹ ವ್ಯಕ್ತಿಗಳ ಸಂಖ್ಯೆ ಪತ್ರಿಕಾರಂಗದಲ್ಲಿ ಇನ್ನಷ್ಟು ಹೆಚ್ಚಾಗಬೇಕು. ಪತ್ರಿಕೋದ್ಯಮದಲ್ಲಿ ಇವರ ಸೇವೆ ಇತರರಿಗೆ ಮಾರ್ಗದರ್ಶನವಾಗಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಮಾತನಾಡಿ, ಉತ್ತರ ಕರ್ನಾಟಕದ ಬರಡು ಭೂಮಿ ವಿಜಯಪುರದಲ್ಲಿ ಮಹಿಳಾ ವಿಶ್ವವಿದ್ಯಾನಿಲಯ ಸ್ಥಾಪನೆಯಗಲು ಹಾಗೂ ಈ ಭಾಗದ ಎಲ್ಲಾ ಹೆಣ್ಣುಮಕ್ಕಳು ಉನ್ನತ ಶಿಕ್ಷಣಕ್ಕೆ ಹಾಗೂ ಮಹಿಳಾ ವಿವಿಯ ಅಭಿವೃದ್ಧಿಗೆ ಕಾರಣಿಕರ್ತರಾಗಿರುವ ಬಹುಮುಖ ವ್ಯಕ್ತಿತ್ವದ ಗುಣವನ್ನು ಹೊಂದಿರುವ ರಫೀ ಭಂಡಾರಿ ಅವರು ನಮ್ಮ ಸಮಾಜದ ಒಬ್ಬ ಮಾದರಿ ವ್ಯಕ್ತಿಯಾಗಿದ್ದಾರೆ. ಸಾಮಾಜಿಕ, ಶಿಕ್ಷೆಣಿಕ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಹಲವಾರು ಕಾರ್ಯಗಳನ್ನ ಮಾಡುವ ಮೂಲಕ  ಸಮಾಜದ ಸಾಕಷ್ಟು ಸಮಸ್ಯೆಗಳಿಗೆ ಪತ್ರಿಕೋದ್ಯಮ ಮೂಲಕ ಪರಿಹಾರಗಳನ್ನ ಒದಗಿಸುವ ಕಾರ್ಯವನ್ನು ಮಾಡಿದ್ದಾರೆ.. ಮಹಿಳಾ ಸಬಲೀಕರಣ, ಮಾನವ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಅಂತಹ ವ್ಯಕ್ತಿತ್ವ ಹೊಂದಿರುವ ಜೊತೆಗೆ ನಾವಿರುವುದು ನಮ್ಮ ಭಾಗ್ಯ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪತ್ರಕರ್ತ ರಫೀ ಭಂಡಾರಿ ಮಾತನಾಡಿ, ಅಚ್ಚು ಮೊಳೆಗಳಿಂದ ಆರಂಭಿಸಿದ ನನ್ನ ಪಯಣ ಇಂದು ನನನ್ನು ಇಲ್ಲಿ ತನಕ ತಂದು ನಿಲ್ಲಿಸಿದೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಹಾಗೂ ಸನ್ಮಾನವು ನನಗೆ ಇನ್ನಷ್ಟು ಉತ್ಸಾಹ ಮತ್ತು ಪ್ರೇರಣೆಯನ್ನು ನೀಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸಿ, ಸಮಾಜಕ್ಕೆ ಹೆಚ್ಚಿನ ಕೊಡುಗೆ ನೀಡುವೆನು ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರಿನ ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ್ ಮಾತನಾಡಿ, ರಫೀ ಭಂಡಾರಿ ಅವರು ವಿವಿಧ ಕ್ಷೇತ್ರಗಳಲ್ಲಿನ ಸಮಸ್ಯೆಗಳನ್ನು ಸೂಕ್ಷ್ಮವಾಗಿ ಗುರುತಿಸಿ, ಅವುಗಳ ಪರಿಹಾರಕ್ಕಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಾರೆ. ಅವರ ಅಪ್ರತಿಮ ಶ್ರಮ ಹಾಗೂ ಸಹಯೋಗ ಅತ್ಯಂತ ಮಹತ್ವದ್ದಾಗಿದೆ. ಅವರ ಬರವಣಿಗೆ ಇಡೀ ಜಿಲ್ಲೆಗೆ ಪ್ರಸ್ತುತವಾಗಿದ್ದು, ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗುತ್ತಿದೆ. ಮುಂಬರುವ ಯುವಕರು ಹಾಗೂ ಎಲ್ಲಾ ಪತ್ರಕರ್ತರು ಜಾತ್ಯಾತೀತತೆಯನ್ನು ಅಳವಡಿಸಿಕೊಂಡು, ಭಾರತ ದೇಶದ ಸಮಗ್ರ ಅಭಿವೃದ್ಧಿಗಾಗಿ ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ವೇದಿಕೆ ಮೇಲಿನ ಗಣ್ಯರು ಪುಸ್ತಕ  ಬಿಡುಗಡೆಗೊಳಿಸಿದರು. ವಸೀಮ ಭಂಡಾರಿ ಹಾಗೂ ನಾಲ್ಕು ಸಹೋದರರಿಂದ ಪತ್ರಕರ್ತ ರಫೀ ಭಂಡಾರಿ ದತ್ತಿನಿಧಿ ಉಪನ್ಯಾಸ ಸ್ಥಾಪನೆ ಘೋಷಣೆ ಮಾಡಿ ಮತ್ತು ಚಕ್ ಹಸ್ತಾಂತರಿಸಿದರು. ವೇದಿಕೆ ಮೇಲಿನ ಗಣ್ಯರಿಂದ ಮೌಲಾನಾ ಅಜಾದ್ ರಾಷ್ಟಿçÃಯ ಉರ್ದು ವಿಶ್ವವಿದ್ಯಾಲಯ ಹೈದರಾಬಾದ್ ಇವರಿಂದ ಸ್ಮರಣಿಕೆ ಸಮರ್ಪಣೆ.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಡೈಲಿ ಸಾಲಾರ್ ದಿನಪತ್ರಿಕೆಯ ಸಂಪಾದಕ ಅಸ್ಜದ್ ನವಾಜ್, ಬೆಂಗಳೂರಿನ ರಾಷ್ಟಿçÃಯ ಸಹಾರಾ ದಿನಪತ್ರಿಕೆಯ ಸಂಪಾದಕ ಎನ್.ಹಮೀದಿ, ಬಿಎಲ್‌ಡಿಇ ಸಂಸ್ಥೆಯ ಸಾರ್ವಜನಿಕ ಸಂಪಕಾಧಿಕಾರಿ ಡಾ.ಮಹಾಂತೇಶ ಬಿರಾದಾರ, ವಿಜಯಪುರದ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್, ಹಿರಿಯ ಪತ್ರಕರ್ತ ಗೋಪಾಲ ನಾಯಕ್, ಆಲ್ ಅಮೀನ್ ಚಾರಿಟೇಬಲ್ ಫಂಡ್ ಟ್ರಸ್ಟ್ನ ಟ್ರಸ್ಟಿ ರಿಯಾಜ್ ಫಾರೂಕಿ, ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಸಲಾವುದ್ದೀನ್ ಪುಣೇಕರ್ ಹಾಗೂ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎ.ಎಸ್.ಪಾಟೀಲ್, ನಜೀಬ್ ಭಕ್ಷಿ, ವಸೀಮ್ ಭಂಡಾರಿ ಮತ್ತು ಕಲೀಮ ನಾಯಕ, ಜಿಲ್ಲೆಯ ಎಲ್ಲ ಪತ್ರಕರ್ತರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.  
ಕಾರ್ಯಕ್ರಮದಲ್ಲಿ ಹಾಫೀಸ್  ವಕೀಲ್ ಅಹ್ಮದ್ ಸಾಬ್ ಕುರಾನ್ ಪಠಣ ಮಾಡಿದರು. ಹಿರಿಯ ಪತ್ರಕರ್ತ ಬಾಬುರಾವ ಕುಲಕರ್ಣಿ ಪ್ರಾರ್ಥನಾ ಗೀತೆ ಹಾಡಿದರು. ಅಭಿನಂದನಾ ಸಮಿತಿಯ ಅಧ್ಯಕ್ಷ ಎಸ್.ಎಂ.ಪಾಟೀಲ್ ಗಣಿಹಾರ ಸ್ವಾಗತಿಸಿದರು. ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಪ್ರಾಸ್ತವಿಕವಾಗಿ ಮಾತನಾಡಿದರು. ಮೌಲಾನಾ ಆಜಾದ್ ಉರ್ದು ವಿಶ್ವವಿದ್ಯಾಲಯದ ಪ್ರೊ.ಮುಸ್ತಾಕ್ ಪಟೇಲ್ ಅಭಿನಂದನಾ ನುಡಿಗಳನ್ನಾಡಿದರು. ಉಪಾಧ್ಯಕ್ಷ ಅಶೋಕ ಯೆಡಹಳ್ಳಿ ವಂದಿಸಿದರು. ಹುಬ್ಬಳಿಯ ಡೆಕ್ಕನ್ ಹೆರಾಲ್ಡ್ ಹಿರಿಯ ಉಪಸಂಪಾದಕಿ ಶಾಹಿನ್ ಮೊಕಾಶಿ  ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Sunday, January 18, 2026

19-01-2026 EE DIVASA KANNADA DAILY NEWS PAPER

ನಮ್ಮೂರ ಜಾತ್ರೆಯಲ್ಲಿ ಜನಮಸೂರೆಗೊಂಡ ಬಾಲ ಪ್ರತಿಭೆ ಮೇಘನಾಳ ಭರತ ನಾಟ್ಯ

ವಿಜಯಪುರ : ಶ್ರೀ ಸಿದ್ಧೇಶ್ವರ ಸಂಸ್ಥೆ ಸಂಕ್ರಮಣ ಮಹೋತ್ಸವ ನಿಮಿತ್ಯ ಶ್ರೀ ಸಿದ್ಧೇಶ್ವರ ದೇವಸ್ಥಾನದ ಮುಖ್ಯವೇದಿಕೆಯಲ್ಲಿ ಮೇಘಾ ಮೆಲೋಡಿ ವಿಜಯಪುರ ವತಿಯಿಂದ ನಡೆಸಿಕೊಟ್ಟ ರಸಮಂಜರಿ ಕಾರ್ಯಕ್ರಮದಲ್ಲಿ ಬಾಲ ಪ್ರತಿಭೆ ಕುಮಾರಿ ಮೇಘನಾ ಶಿವಶರಣ ಭರತ ನಾಟ್ಯ ಪ್ರದರ್ಶನವು ಜನಸೊರೆಮನಗೊಂಡಿತು.

ವೇದಿಕೆಯಲ್ಲಿ ಸಾಹಿತಿ ಸಂಗಮೇಶ ಬದಾಮಿ, ಡಾ. ಸೋಮಶೇಖರ ವಾಲಿ, ಸಾಹೇಬಗೌಡ ಬಸರಕೋಡ, ಬಸವರಾಜ ಒಂಟಗೋಡಿ, ಪ್ರಶಾಂತ ಚೌಧರಿ, ವಿರೇಶ ವಾಲಿ, ಸಂತೋಷ ತಳಕೇರಿ, ಚಿದಾನಂದ ಚಲವಾದಿ, ಸುನೀಲ ಚಲವಾದಿ, ಮೇಘಾ ಮೆಲೋಡಿ ತಂಡದ ನಾಯಕ, ಗಾಯಕ, ಚಿತ್ರನಟ ಮಹೇಶ ಶಿವಶರಣ, ಮಾಡಿವಾಳ ಗಾಯಕರು, ಪ್ರೀತಿ, ಅಜಯ, ಮಹಾಂತೇಶ, ರಾಜೇಶ, ಗಾಯಕ ಜಗದೀಶ ಮಣೂರ, ಮಲ್ಲಿಕಾರ್ಜುನ ತಳವಾರ, ಉಮೇಶ, ಭೀಮರಾಯ, ಸುನೀಲ, ಅಶ್ವಿನಿ ಸೇರಿದಂತೆ ಮುಂತಾದವರು ಇದ್ದರು.

Wednesday, January 14, 2026

15-01-2026 EE DIVASA KANNADA DAILY NEWS PAPER

ಜ.27 ರಂದು ವಿಜಯಪುರದಲ್ಲಿ ಉದ್ಯೋಗ ಮೇಳ


ವಿಜಯಪುರ: ಜ.27ರಂದು ನಗರದ ದರ್ಬಾರ ಶಾಲೆಯ ಆವರಣದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಾತ ಕಂಪನಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಜಿಲ್ಲೆಯ ನೀರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸುವ ನೀಟ್ಟಿನಲ್ಲಿ ಅಂತ್ಯತ ಅಚ್ಚುಕಟ್ಟಾಗಿ ಮೇಳವನ್ನು ಆಯೋಜಿಸಬೇಕೆಂದು ಜಿಲ್ಲಾ ಕೌಶಲ್ಯ ಸಮಿತಿಯ ಅಧ್ಯಕ್ಷರಾದÀ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಉದ್ಯೋಗ ಮೇಳದ ಆಯೋಜನೆಯ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಯುವನಿಧಿ ಸೌಲಭ್ಯ ಪಡೆಯುತ್ತಿರುವ 15000ಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ವಾಟ್ಸಾಪ್ ಹಾಗೂ ಎಸ್.ಎಂ.ಎಸ್ ಮೂಲಕ ಮುಂಚಿತವಾಗಿ ತಿಳಿಸುವ ವ್ಯವಸ್ಥೆ ಮಾಡಿಕೊಳ್ಳಬೇಕು.ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗದಾತರು ನೋಂದಣಿ ಕಾರ್ಯಕ್ಕೆ ಕ್ರಮವಹಿಸಬೇಕು. ಉದ್ಯೋಗಾಕಾಂಕ್ಷಿಗಳು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೋಂದಣಿಗಾಗಿ ಸೃಜಿಸಲಾದ ಪೋರ್ಟಲ್ ಅಥವಾ ಲಿಂಕ್ ಬಗ್ಗೆ ವ್ಯಾಪಕ ಪ್ರಚಾರಗೊಳಿಸಬೇಕು. ಜಿಲ್ಲಾದಾದ್ಯಂತ ಇರುವ ವಿವಿಧ ಕಾಲೇಜುಗಳಿಗೆ ಮಾಹಿತಿ ನೀಡಬೇಕು ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳಿಗೆ ಮುಂಚಿತವಾಗಿ ಹಾಗೂ ಮೇಳದ ದಿನ ನೋಂದಣಿಗೆ ಅವಕಾಶ ಕಲ್ಪಿಸಬೇಕು. 

ಉದ್ಯೋಗ ಮೇಳದ ಸ್ಥಳ,ವಿಳಾಸ ವಿವರ ಹಾಗೂ ಕೌಂಟರ್ ಸೇರಿದಂತೆ ಅಗತ್ಯ ಮಾಹಿತಿ ನೀಡಬೇಕು, ಉದ್ಯೋಗ ಮೇಳದಲ್ಲಿ ಭಾಗವಹಿಸಲು 130 ಉದ್ಯೋಗದಾತ ಕಂಪನಿಗಳು ಆಗಮಿಸುವ ಸಂಭವವಿರುವ ಹಿನ್ನೆಲೆಯಲ್ಲಿ ಆಯಾ ಕಂಪನಿಯ ಸಂದರ್ಶನ ಕೊಠಡಿ ಸೇರದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದರು. ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವವರಿಗೆ ನೋಂದಣಿ ಶುಲ್ಕ ಇಲ್ಲದೇ ಇರುವುದರಿಂದ ಹೆಚ್ಚು ಅಭ್ಯರ್ಥಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಈ ಬಗ್ಗೆ ಸ್ಥಳೀಯ ಕಸ ವಿಲೇವಾರಿ ವಾಹನ ಮೂಲಕ, ಕರಪತ್ರ, ಬ್ಯಾನರ್ ಹಾಗೂ ಸಾಮಾಜಿಕ ಜಾಲತಾಣಗಳು ಸೇರಿದಂತೆ ವಿವಿಧ ಪ್ರಚಾರ ಮಾಧ್ಯಮದ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಈ ಸಂಧರ್ಭ ಕೌಶಲ್ಯ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ವೇತಾ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯP ಮೆಕ್ಕಳಕಿ, ಜಿಲ್ಲಾ ನಗರಾಭಿವೃÈದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದಿನ ಸೌದಾÀಗರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಸಂಪತ್ ಗುಣಾರಿ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಉಮಾಶ್ರೀ ಕೋಳಿ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆ ಅಧಿಕಾರಿಗಳಾದ ಮಹಾತೇಂಶ ಬಾಗೇವಾಡಿ ವಿಜಯಪುರ ಜಿಲ್ಲಾ ಕೈಗಾರಿಕೋದ್ಯಮಿಗಳ ಅಸೋಷಿಯೇಶನ್ ಅಧ್ಯಕ್ಷರಾದ ಎಸ್.ವಿ. ಪಾಟೀಲ, ಜಿಲ್ಲಾ ಸಣ್ಣ ಕೈಗಾರಿಕಾಗಳ ಅಧ್ಯಕ್ಷರಾದ ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಜಾನುವಾರು ಜಾತ್ರೆ: ತೊರವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ

ವಿಜಯಪುರ : ಜಾನುವಾರ ಜಾತ್ರೆಯ ಅಂಗವಗಿ ನಗರದ ತೊರವಿಯಲ್ಲಿ ನಡೆಯುತ್ತಿರುವ ಜಾನುವಾರ ಜಾತ್ರಾ ಸ್ಥಳಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿ ಜಾತ್ರೆಯ ಸುಸೂತ್ರ ನಿರ್ವಹಣೆಗಾಗಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು. 

ಸಂಕ್ರಮಣ ಜಾತ್ರೆಯ ಹಿನ್ನೆಲೆಯಲ್ಲಿ ಜಾನುವಾರ ಜಾತ್ರೆ ಆಯೋಜಿಸಲಾಗುತ್ತಿದ್ದು, ಇದೇ ಜ.10 ರಿಂದ ಆರಂಭಗೊAಡಿದ್ದು, ಈ ಸಂದರ್ಭ ಯಾವುದೇ ಸಮಸ್ಯೆಯುಂಟಾಗದAತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವುದನ್ನು ಹಾಗೂ ಜಾತ್ರೆಗೆ ಆಗಮಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಸುಗಮ ರಸ್ತೆ ಹಾಗೂ ಸಾರಿಗೆ ವ್ಯವಸ್ಥೆ, ಜಾನುವಾರಗಳಿಗೆ ಕುಡಿಯುವ ನೀರು ಒದಗಿಸುವುದು ಪಶುವೈದ್ಯಾಧಿಕಾರಿಗಳು ಜಾತ್ರೆಯ ಸಂದರ್ಭದಲ್ಲಿ ಅಗತ್ಯ ಮುಂಜಾಗ್ರತೆ ತೆಗೆದುಕೊಂಡಿರುವ ಕುರಿತು ಮಾಹಿತಿ ಪಡೆದುಕೊಂಡರು.

ಆAಬುಲೆನ್ಸ್, ವೈದ್ಯಕೀಯ ಸೌಲಭ್ಯ ಸೇರಿದಂತೆ ಯಾವುದೇ ಕೊರತೆ ಉಂಟಾಗದAತೆ ಅಚ್ಚುಕಟ್ಟಾಗಿ ಜಾನುವಾರ ಜಾತ್ರೆ ವ್ಯವಸ್ಥಿತವಾಗಿ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಇದೇ ಸಂದರ್ಭದಲ್ಲಿ ನಡೆದಿರುವ ಜಾನುವಾರುಗಳ ಬಹುಮಾನ ಆಯ್ಕೆ ಮಾನದಂಡಗಳAತೆ ಆಯ್ಕೆ ಪ್ರಕ್ರಿಯೆ ನಡೆಸುವಂತೆ ಸೂಚಿಸಿದರು. ಈ ಬಾರಿ ಜಾತ್ರೆಗೆ ಸುಮಾರು ಐದು ಸಾವಿರ ಜಾನುವಾರಗಳು ಆಗಮಿಸಿದ್ದು, ಅವುಗಳ ಪೈಕಿ ಈವರೆಗೆ 1500 ಜಾನುವಾರುಗಳು ಮಾರಾಟವಾಗಿರುವ ಹಾಗೂ ಬಹುಮಾನ ವಿತರಣೆ ಕುರಿತ ಮಾಹಿತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಅಲ್ಲಾಭಕ್ಷ ಬಿಜಾಪುರ ಮಾಹಿತಿ ನೀಡಿದರು. 

ಈ ಸಂದರ್ಭ ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಅಶೋಕ ಗೋಣಸಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಅಕ್ಕಪಡೆ ಯೋಜನೆಗೆ ಸಂಚಾರಿ ವಾಹನಕ್ಕೆ ಚಾಲನೆ ಮಹಿಳೆ–ಮಕ್ಕಳ ಸುರಕ್ಷತೆಗಾಗಿ ವಿನೂತನ ಕ್ರಮ


ವಿಜಯಪುರ:  ಮಹಿಳೆ ಮತ್ತು ಮಕ್ಕಳ ಸುರಕ್ಷತೆ, ಘನತೆ ಹಾಗೂ ಸಬಲೀಕರಣದ ಉದ್ದೇಶದಿಂದ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಡಿ.22 ರಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ ಅವರು ಚಾಲನೆ ನೀಡಿದ್ದರು. ಈ ಸಂದರ್ಭದಲ್ಲಿ ಶಾಸಕರಾದ ವಿಠ್ಠಲ ಕಟಕಧೋಂಡ ಹಾಗೂ ಅಶೋಕ ಮನಗೂಳಿ, ಸಂಸದರಾದ ರಮೇಶ ಜಿಗಜಿಣಗಿ, ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಈ ಸಂದರ್ಭದಲ್ಲಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷö್ಮಣ ನಿಂಬರಗಿ ಅವರು ಜ.14ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ನಡೆದ ಅಕ್ಕಪಡೆ ಯೋಜನೆಯ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿ, ಅಕ್ಕಪಡೆ ಯೋಜನೆಯು ರಾಜ್ಯಾದ್ಯಂತ ಅನುಷ್ಠಾನಗೊಂಡಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ ಅಕ್ಕಪಡೆ ಸಿಬ್ಬಂದಿಗಳು ಎರಡು ಪಾಳಿಯಲ್ಲಿ (ಶಿಪ್ಟ್) ಕಾರ್ಯನಿರ್ವಹಿಸುತ್ತಿದ್ದು, ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳ ಮೇಲಿನ ಶೋಷಣೆ ಹಾಗೂ ದೌರ್ಜನ್ಯದ ಸಂದರ್ಭದಲ್ಲಿ ತಕ್ಷಣ ರಕ್ಷಣೆ ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಮುಖ್ಯಮಂತ್ರಿಗಳು ಈ ವಿನೂತನ ಯೋಜನೆಗೆ ಈಗಾಗಲೇ ರಾಜ್ಯದಾದ್ಯಂತ ಚಾಲನೆ ನೀಡಿರುತ್ತಾರೆ ಎಂದು ಹೇಳಿದರು.

 ಸಹಾನುಭೂತಿ ಮತ್ತು ಸಮುದಾಯ ಸೇವೆಯ ಆಶಯದೊಂದಿಗೆ ಕಾರ್ಯನಿರ್ವಹಿಸುವ ಅಕ್ಕಪಡೆ, ಸಮಾಜದಲ್ಲಿ ಸ್ಪಂದಿಸುವ ಸುರಕ್ಷತಾ ಘಟಕವಾಗಿಯೂ ಶೈಕ್ಷಣಿಕ ಶಕ್ತಿಯಾಗಿಯೂ ಕೆಲಸ ಮಾಡಲಿದೆ. ಶಾಲೆ ಮತ್ತು ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಕುರಿತು, ಶಿಕ್ಷಣದ ಮಹತ್ವ, ಆತ್ಮವಿಶ್ವಾಸ, ಬಾಲ್ಯ ವಿವಾಹ ತಡೆ, ಪೋಕ್ಸೋ ಕಾಯ್ದೆ, ವಿವಿಧ ಸಹಾಯವಾಣಿ ಸೇವೆಗಳು ಹಾಗೂ ಇತರೆ ಯೋಜನೆಗಳ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಇದರಿಂದ ಕಾನೂನಿನ ರಕ್ಷಣೆಯೊಂದಿಗೆ ಭಯಮುಕ್ತ ವಾತಾವರಣ ನಿರ್ಮಾಣವಾಗಲಿದೆ ಎಂದು ಹೇಳಿದರು. ವಿಜಯಪುರ ನಗರದಲ್ಲಿ ಸಂತೆ, ದೇವಸ್ಥಾನ, ಜಾತ್ರೆ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ನೀಡುವಂತೆ ಅಕ್ಕಪಡೆ ಸಿಬ್ಬಂದಿಗಳಿಗೆ ಸೂಚನೆ ನೀಡಲಾಯಿತು. ಅಕ್ಕಪಡೆಗೆ ಪ್ರತ್ಯೇಕ ವಾಹನದ ಸೌಲಭ್ಯವಿದ್ದು, ಅದರಲ್ಲಿ ಪೊಲೀಸ್ ಇಲಾಖೆಯ ಓರ್ವ ವಾಹನ ಚಾಲಕರು ಹಾಗೂ ಓರ್ವ್ಬ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ನಿಯೋಜಿತರಾಗಿರುತ್ತಾರೆ ಎಂದು ತಿಳಿಸಿದರು.

 ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ದೀಪಾಕ್ಷಿ ಜಾನಕಿ, ಪೊಲೀಸ್ ಇನ್ಸ್ಪೆಕ್ಟರ್ ವಿಠ್ಠಲ ಕೊಕಟನೂರ, ಜಿಲ್ಲಾ ಮಿಷನ್ ಸಂಯೋಜಕರಾದ ಭಾರತಿ ಹೊನ್ನಳ್ಳಿ ಹಾಗೂ ಅಕ್ಕಪಡೆ ಸಿಬ್ಬಂದಿ ಉಪಸ್ಥಿತರಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಅಧಿಕಾರಿ ದೀಪಾ ಕಾಳೆ ಅವರು ಪ್ರಕಟಣಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Tuesday, January 13, 2026

14-01-2026 EE DIVASA KANNADA DAILY NEWS PAPER

ಶಾಸಕ ಯತ್ನಾಳ ಅವರಿಂದ ಫಲಪುಷ್ಪ ಪ್ರದರ್ಶನ-ತೋಟಗಾರಿಕೆ ಅಭಿಯಾನ ಉದ್ಘಾಟನೆ ವಿವಿಧ ಹೂ-ಹಣ್ಣು ತರಕಾರಿಯಲ್ಲಿ ಅರಳಿದ ಕಲಾಕೃತಿಗಳು : ನೋಡುಗರ ಹೃನ್ಮನ ಸೆಳೆಯುತ್ತಿದೆ

 ವಿಜಯಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಹಾಗೂ ಜಿಲ್ಲಾ ಹಾಪ್‌ಕಾಮ್ಸ್ ಇವರ ಸಹಯೋಗದೊಂದಿಗೆ ಇದೇ ಜನವರಿ 13ರಿಂದ 15ರವರೆಗೆ ನಗರದ ಸ್ಟೇಶನ ರಸ್ತೆಯಲ್ಲಿರುವ ಬಸವವನ ಆವರಣದಲ್ಲಿ ಹಮ್ಮಿಕೊಂಡ ಫಲಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನಕ್ಕೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಿ, ಎಲ್ಲ ಮಳಿಗೆಗಳನ್ನು ವೀಕ್ಷಣೆ ಮಾಡಿದರು. 

 ಫಲಪುಸ್ಪ ಪ್ರದರ್ಶನ ನೋಡುಗರ ಕಣ್ಮನ ಸೆಳೆಯುತ್ತಿವೆ. ವಿವಿಧ ಹೂ-ಹಣ್ಣು ಹಾಗೂ ತರಕಾರಿಗಳಿಂದ ನಿರ್ಮಿಸಲಾದ ಅಪರೂಪದ ಕಲಾಕೃತಿಗಳು ಜನಾಕರ್ಷಣೆಯವಾಗಿವೆ. ಒಂದಕ್ಕಿAತ ಒಂದು ವಿಭಿನ್ನ ಆಲೋಚನೆ, ಸೃಜನಶೀಲತೆ ಹಾಗೂ ನೈಸರ್ಗಿಕ ಸೌಂದರ್ಯವನ್ನು ಸೃಷ್ಟಿಸುವ ಸನ್ನಿವೇಶ ಈ ಪ್ರದರ್ಶನದಲ್ಲಿ ವೀಕ್ಷಿಸಬಹುದಾಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ಪಡೆಯುತ್ತಿದೆ. 


 ಪ್ರದರ್ಶನದಲ್ಲಿ ಹೂವಿನಲ್ಲಿ ಅರಳಿದ ಗೋಲಗುಮ್ಮಟ, ಗಿಡದಲ್ಲಿ ಕುಳಿತ ನಾಟ್ಯ ಮಯೂರಿ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ಹೂವಿನಲ್ಲಿ ಮೂಡಿಬಂದ ಡಾಲ್ಫಿನ್, ಪುಷ್ಪ ಮಾರಾಟಕ್ಕೆ ಬಂದ ಪುಷ್ಪಲತಾ ಚಿತ್ರ, ನೀರಿನಿಂದ ಹೊರಬಂದ ಹಂಸ ಸೇರಿದಂತೆ ಮುಂತಾದ ಕಲಾಕೃತಿಗಳು ಗಮನ ಸೆಳೆಯುತ್ತಿವೆ. 

 ಜಿಲ್ಲೆಯ ಹೆಮ್ಮೆಯನ್ನು ಹೆಚ್ಚಿಸಿದ ಭೌಗೋಳಿಕ ಮಾನ್ಯತೆ ಪಡೆದ ಇಂಡಿ ಲಿಂಬೆ, ವಿವಿಧ ಬಗೆಯ ಹೂಗಳಿಂದ ನಿರ್ಮಾಣವಾದ ಕಲಾ ಕೃತಿಗಳು, ಆರೋಗ್ಯ ಸಂದೇಶವನ್ನು ಸಾರುವ ಹಣ್ಣುಗಳ ಕಲಾಕೃತಿ, ತರಕಾರಿಯಲ್ಲಿ ಸೃಷ್ಟಿಸಿದ ಮಹಾಪುರುಷರ ಆಕೃತಿಗಳನ್ನು ಪ್ರದರ್ಶನದಲ್ಲಿ ಕಾಣಬಹುದಾಗಿದೆ. 

 ಸಿಂಪಿಯಲ್ಲಿ ಅರಳಿದ ಹಣ್ಣು, ಹೂವಿನಲ್ಲಿ ಅರಳಿದ ಅಳಿಲು, ಹಸಿ ಈರುಳ್ಳಿಯಲ್ಲಿ ಉದ್ಭವಿಸಿದ ತೋಟದ ಮನೆ, ಕಲಾಕೃತಿಗಳು ಕಲಾವಿದರ ವೈವಿಧ್ಯಮಯ ಕಲ್ಪನೆಗೆ ಸಾಕ್ಷಿಕರಿಸಿವೆ. ಧಾನ್ಯಬೀಜಗಳಿಂದ ನಿರ್ಮಿಸಿದ ಕಲಾ ಕೃತಿಗಳಲ್ಲಿ ಸಿರಿಧಾನ್ಯದಲ್ಲಿ ಮೂಡಿಬಂದ ಸ್ವಾಮಿವಿವೇಕಾನಂದರು, ರಾಜಗಿರಿ ಬೀಜಗಳಿಂದ ಮೂಡಿಬಂದ ಜಾಂಬವAತ ಆಕರ್ಷಣೀಯವಾಗಿವೆ. 

 ಕುಟುಂಬ ಸಮೇತರಾಗಿ ಪ್ರದರ್ಶನ ವೀಕ್ಷಣೆಗೆ ಬಂದವರು ಸೆಲ್ಪಿ ತೆಗೆದುಕೊಂಡು ಆನಂದಿಸಬಹುದಾಗಿದೆ. ಮನರಂಜನೆ ಮತ್ತು ನಾವಿನ್ಯತೆಯನ್ನು ಮೇಳೈಸಿದಂತೆ ಪ್ರದರ್ಶನಕ್ಕೆ ಆಗಮಿಸಿದವರಿಗೆ ಜೋಡಿ ಸೆಲ್ಫಿ ಪಾಯಿಂಟ್, ಪಕ್ಷಿ ಸೆಲ್ಫಿ ಫಾಯಿಂಟ್‌ಗಳನ್ನು ಈ ಪ್ರದರ್ಶನದಲ್ಲಿ ರೂಪಿಸಲಾಗಿದೆ. ಒಟ್ಟಾರೆ ಈ ಪ್ರದರ್ಶನದಲ್ಲಿ ಪ್ರಕೃತಿ, ಕಲೆ, ಆರೋಗ್ಯ, ಸಾಮಾಜಿಕ ಸಂದೇಶ ಸೇರಿದಂತೆ ಎಲ್ಲವನ್ನು ಒಂದೂಗುಡಿಸಿ ವಿಜಯಪುರದ ಸಾಂಸ್ಕೃತಿಕ ವೈಭವಕ್ಕೆ ಹೊಸ ಆಯಾಮ ನೀಡಿದೆ.

 ಶಾಲಾ ಮಕ್ಕಳಿಗೆ ತೋಟಗಾರಿಕೆ ವಿಷಯಗಳ ಕುರಿತು ಹೆಚ್ಚಿನ ಅಧ್ಯಯನಕ್ಕಾಗಿ ಜಿಲ್ಲೆಯ ರೈತರು ಬೆಳೆದ ಎಲ್ಲ ಬಗೆಯ ಹಣ್ಣು, ತರಕಾರಿ ಹಾಗೂ ಪುಷ್ಪಗಳ ಪ್ರದರ್ಶನ ಏರ್ಪಡಿಸಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ, ನಾಗರಿಕರಿಗೆ, ಗೃಹಿಣಿಯರಿಗೆ ಬೋನ್ಸಾಯ ಗಿಡಗಳ ಬೇಸಾಯ, ಅಣಬೆ ಬೇಸಾಯ, ಕೈತೋಟ, ಸಾವಯವ ಕೃಷಿಗೆ ಉತ್ತೇಜನ ನೀಡಲು ಪ್ರದರ್ಶಿಸಲಾಗಿದೆ. ರೈತರಿಗೆ ಮಾಹಿತಿ ನೀಡಲು ತೋಟಗಾರಿಕೆ ಸೇವಾ ಕೇಂದ್ರ, ವಿವಿಧ ಯಂತ್ರೋಪಕರಣ, ಹನಿ ನೀರಾವರಿ ಉಪಕರಣಗಳು ಹಾಗೂ ಇತರ ಪರಿಕರ ಮಳಿಗೆಗಳನ್ನು ಸ್ಥಾಪಿಸಲಾಗಿದೆ. 

 ಜಿಲ್ಲೆಯ ತೋಟಗಾರಿಕೆ ಬೆಳೆಗಾರರಿಗೆ ದ್ರಾಕ್ಷಿ, ದಾಳಿಂಬೆ ಮತ್ತು ಡ್ರಾö್ಯಗನ್ ಫ್ರೂಟ್ ಬೆಳೆಗಳಲ್ಲಿ ಹವಾಮಾನ ಅಧಾರಿತ ಸಮಗ್ರ ಬೇಸಾಯ ಪದ್ಧತಿ, ಜೇನು ಸಾಕಾಣಿಕೆ ತರಬೇತಿ ಹಾಗೂ ತಾಳೆ ಬೆಳೆಯಲ್ಲಿ ಸುಧಾರಿತ ಬೇಸಾಯ ಕ್ರಮಗಳ ಕುರಿತು ಈ ಪ್ರದರ್ಶನದಲ್ಲಿ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ಈ ಪ್ರದರ್ಶನದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಸಂಕ್ರಾAತಿ ಹಬ್ಬಕ್ಕೆ ಬೇಕಾಗುವ ಹಣ್ಣು ಹಂಪಲುಗಳನ್ನು ರೈತರಿಂದ ನೇರವಾಗಿ ಸಾರ್ವಜನಿಕರಿಗೆ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರತಿ ದಿನ ಸಂಜೆ ವಿವಿಧ ಕಲಾ ತಂಡ, ಶಾಲಾ ಕಾಲೇಜ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪ್ರತಿ ಬೆಳಿಗ್ಗೆ 9-30 ರಿಂದ 8-30ರವರೆಗೆ ಪ್ರದರ್ಶನ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಅಪರೂಪದ ಪ್ರದರ್ಶನದಲ್ಲಿ ಭಾಗವಹಿಸಿ ವೀಕ್ಷಣೆ ಮಾಡುವಂತೆ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರಾಹುಲ ಭಾವಿದೊಡ್ಡಿ ಮನವಿ ಮಾಡಿಕೊಂಡಿದ್ದಾರೆ. 

 ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಬಿ.ಎಸ್.ಕವಲಗಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಸೇರಿದಂತೆ, ರೈತ ಮುಖಂಡರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



Friday, January 9, 2026

10-01-2026 EE DIVASA KANNADA DAILY NEWS PAPER

ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ವಿಜಯಪುರ :  ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ  ಎಂದು ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.   

 ಅವರು ಇಂದು ವಿಜಯಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವಿಜಯಪುರ  ಜಿಲ್ಲೆ ವತಿಯಿಂದ ವಿಜಯಪುರ ದ ವಿ. ಬಿ ಶಾಲಾ ಆವರಣದಲ್ಲಿ  ಆಯೋಜಿಸಲಾಗಿದ್ದ ವಿಜಯಪುರ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ದಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ ನಂತರ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೇರೆವೇರಿಸಿ  ಮಾತನಾಡಿದರು.

ದೇವರಾಜ  ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ  ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ  ಜನತೆಗೆ ಮುಖ್ಯಮಂತ್ರಿ  ಸಿದ್ದರಾಮಯ್ಯ ಕೃತಜ್ಞತೆಗಳನ್ನು ಅರ್ಪಿಸಿದರು. 

ವಿಜಯಪುರದ ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ  ಆರು ಕ್ಷೇತ್ರಗಳನ್ನು ಗೆದ್ದಿದ್ದು, ಚುನಾವಣೆಯಲ್ಲಿ 135  ಕ್ಷೇತ್ರಗಳಲ್ಲಿ ಗೆಲ್ಲಬೇಕಾದರೆ ವಿಜಯಪುರ ಜನರ ಆಶೀರ್ವಾದ ಬಹಳ ಮುಖ್ಯ ಎಂದರು. 45 ವರ್ಷಗಳಿಂದ ಇಡೀ ರಾಜ್ಯ ಸುತ್ತಾಡಿದ್ದು, ವಿಜಯಪುರ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದಾರೆ ಎಂದರು.

82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ 730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ  ವಿಜಯಪುರ ಜಿಲ್ಲೆಯಲ್ಲಿ 800 ಕ್ಕೂ ಹೆಚ್ಚು ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. 82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ 730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಾಗಿದೆ. ರಾಣಿ ಚನ್ನಮ್ಮ ಪ್ರತಿಮೆ ಲೋಕಾರ್ಪಣೆ ಸೇರಿದಂತೆ  ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ ಎಂದರು . 

ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್ :  ಈ ಭಾಗದಲ್ಲಿ  ಸೈಕ್ಲಿಸ್ಟ್ ಗಳಿಗಾಗಿ , ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್ ನ್ನು ಸ್ಥಾಪಿಸಲಾಗಿದೆ ಎಂದರು. 

ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ : ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು  ಸ್ಥಾಪನೆಯಾಗಬೇಕೆಂದು ಹಿಂದಿನ ಸರ್ಕಾರ ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಬೇಕೆಂದು ಚಿಂತಿಸಿತ್ತು. ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು. 

ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು ಈ ಪೈಕಿ 22 ಸರ್ಕಾರಿ  ವೈದ್ಯಕೀಯ ಕಾಲೇಜುಗಳಿವೆ. ಉಳಿದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದರು. 

160 ಕೋಟಿ ವೆಚ್ಚದ ಮೇಲ್ಸೇತುವೆ: ಬಸನಗೌಡ ಯತ್ನಾಳ್ ಅವರು ಅನೇಕ ಬೇಡಿಕೆಗಳನ್ನು ಇಟ್ಟಿದ್ದು, ಕನಕದಾಸ ವೃತ್ತದಿಂದ ಅಂಬೇಡ್ಕರ್ ಹಾಗೂ ಶಿವಾಜಿ ವೃತ್ತದವರೆಗೆ  160 ಕೋಟಿ ವೆಚ್ಚದ ಮೂರು ಕಿಮೀ  ಮೇಲ್ಸೇತುವೆ ಮಾಡಬೇಕೆಂದು ಮನವಿ ಮಾಡಿದ್ದು ಅದನ್ನು ನೆರವೇರಿಸಲಾಗುವುದು ಎಂದು ಆಶ್ವಾಸನೆ ನೀಡಿದರು. 

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ್, ಸಚಿವ ಶಿವಾನಂದ ಪಾಟೀಲ್, ಶಾಸಕ, ಬಸನಗೌಡ ಯತ್ನಾಳ್, ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Thursday, January 8, 2026

ಉಚ್ಚ ನ್ಯಾಯಾಲಯದಲ್ಲಿ ಸರಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ನ್ಯಾಯ ಸಿಗುವ ವಿಶ್ವಾಸ ಕೆಂಗನಾಳ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳರಿAದ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ವಿಜಯಪುರ : ಜಿಲ್ಲೆಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಮಾಡಲು ಒತ್ತಾಯಿಸಿ ನಡೆದ ಹೋರಾಟವನ್ನು ರಾಜ್ಯ ಸರಕಾರ ಕಡೆಗಣಿಸಿದ್ದರಿಂದ ರಾಜ್ಯ ಸರಕಾರದ ಧೋರಣೆ ವಿರುದ್ಧ ಜಿಲ್ಲೆಗೆ ಸರಕಾರದಿಂದಲೇ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಲು ಆಗ್ರಹಿಸಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಡಿಸೆಂಬರ್ ತಿಂಗಳಲ್ಲೇ ಸಲ್ಲಿಸಲಾಗಿದೆ ಎಂದು ಅರ್ಜಿದಾರ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರಕಾರ ಜಿಲ್ಲೆಯ ಜನರ ಬೇಡಿಕೆಯು ಸಾರ್ವಜನಿಕ ಹಿತಾಸಕ್ತಿಯ ಬೇಡಿಕೆಯಾಗಿದೆ. ಸಾರ್ವಜನಿಕರಿಗೆ ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡ ಬೇಕಾಗಿರುವುದು ಪ್ರಜಾಪ್ರಭುತ್ವ ಸರಕಾರದ ಸಂವಿಧಾನಬದ್ದ ಕರ್ತವ್ಯವಾಗಿದೆ.

ಸರಕಾರ ತನ್ನ ಕರ್ತವ್ಯ ನಿರ್ವಹಿಸಲು ಸಂಪೂರ್ಣ ವಿಫಲವಾಗಿದೆ. ಶಾಸಕಾಂಗ ಮತ್ತು ಕಾರ್ಯಾಂಗಗಳು ವಿಫಲವಾಗಿರುವುದನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ನ್ಯಾಯಾಂಗದ ಗಮನಕ್ಕೆ ತರಲಾಗಿದೆ, ಭಾರತ ಸರಕಾರ ಮತ್ತು ಕರ್ನಾಟಕ ಸರಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ಸರಕಾರದ ಕಾರ್ಯದರ್ಶಿ ವಿಜಯಪುರ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಕಾನೂನು ಬದ್ದ ನೋಟೀಸ್ ನೀಡಿ ವಿಜಯಪುರ ಜಿಲ್ಲೆಗೆ ಉದ್ದೇಶಿತ ಪಿ ಪಿ ಪಿ ಮಾದರಿಯ ಖಾಸಗೀಕರಣ ಕೈಬಿಡಲು ಒತ್ತಾಯಿಸುತ್ತಿರುವ ಜನರ ಬೇಡಿಕೆ ಕುರಿತು ಸ್ಪಷ್ಟ ಅಭಿಪ್ರಾಯ ಕೇಳಲಾಗಿದೆ. ಜೊತೆಗೆ ರಾಜ್ಯ ಸರಕಾರದಿಂದ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಮಾಡುವ ಕುರಿತು ಹಾಗೂ ಕೇಂದ್ರ ಸರಕಾರದಿಂದ ಏಮ್ಸ್ ಸ್ಥಾಪನೆ ಮಾಡುವ ಕುರಿತು ಲಿಖಿತ ಸ್ಪಷ್ಟನೆ ಕೇಳಲಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಉಚ್ಚ ನ್ಯಾಯಾಲಯದ ಮುಂದೆ ಲಿಖಿತ ಉತ್ತರ ನೀಡಬೇಕಾಗಿದೆ.

ಕರ್ನಾಟಕ ಉಚ್ಚ ನ್ಯಾಯಾಲಯವು ಜಿಲ್ಲೆಯ ಜನರ ಬೇಡಿಕೆಗೆ ನ್ಯಾಯ ಒದಗಿಸುವ ವಿಶ್ವಾಸವಿದೆ ಎಂದು ಅರ್ಜಿದಾರ ಹಾಗೂ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Monday, January 5, 2026

ಹಿರಿಯ ಪತ್ರಕರ್ತ ಅನೀಲ ಹೊಸಮನಿ ಸೇರಿದಂತೆ ವಿವಿಧ ಹೋರಾಟಗಾರರನ್ನು ಬಿಡುಗಡೆಗೊಳಿಸುವಂತೆ ಪತ್ರಕರ್ತರ ಒತ್ತಾಯ

ವಿಜಯಪುರ : ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಹಿರಿಯ ಪತ್ರಕರ್ತ ಅನೀಲ ಹೊಸಮನಿ ಸೇರಿದಂತೆ ವಿವಿಧ ಹೋರಾಟಗಾರರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಪತ್ರಕರ್ತರು ಅಪರ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಹಿರಿಯ ಪತ್ರಕರ್ತ ಯೂಸೂಫ್ ನೇವಾರ ಮಾತನಾಡಿ, ಪತ್ರಕರ್ತ ಅನೀಲ ಹೊಸಮನಿ ಕಳೆದ ಹಲವರು ವರ್ಷಗಳಿಂದ ಪತ್ರಿಕೋದ್ಯಮ, ಸಾಮಾಜಿಕ ಹೋರಾಟದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ, ಅನೇಕ ಸಾಮಾಜಿಕ ಹೋರಾಟಗಳಿಗೆ ಧ್ವನಿಯಾಗಿದ್ದಾರೆ, ಒಬ್ಬ ಅಪೂರ್ವ ವ್ಯಕ್ತಿತ್ವದ ಹಿರಿಯ ಪತ್ರಕರ್ತರಿಗೆ ಅಗೌರವ ತೋರಿ ಜೈಲಿಗೆ ಕಳುಹಿಸಿರುವುದು ಸರಿಯಲ್ಲ, ಅದು ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ, ಜನರಿಗಾಗಿ ನಡೆದ ಹೋರಾಟ, ಕೂಡಲೇ ಅನೀಲ ಹೊಸಮನಿ ಸೇರಿದಂತೆ ಹೋರಾಟಗಾರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ಹಿರಿಯ ಪತ್ರಕರ್ತ ಪರಶುರಾಮ ಶಿವಶರಣ ಮಾತನಾಡಿ, ಹಿರಿಯ ಪತ್ರಕರ್ತ ಅನೀಲ ಹೊಸಮನಿ ಒಬ್ಬ ಶ್ರೇಷ್ಠ ಸಾಹಿತಿ ಕೂಡಾ ಹೌದು, ಅನೇಕ ಪುಸ್ತಕಗಳ ರಚನೆ, ಮಹತ್ವದ ಕೃತಿಗಳ ಅನುವಾದ ಮಾಡಿದ್ದಾರೆ, ಅನೇಕ ಜನಪರ ಹೋರಾಟಗಳಿಗೆ ಮಾರ್ಗದರ್ಶಕರಾಗಿದ್ದಾರೆ, ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆಯಾದರೆ ಬಡ, ಮಧ್ಯಮ ವರ್ಗದ ಮಕ್ಕಳು ವೈದ್ಯಕೀಯ ಶಿಕ್ಷಣಕ್ಕೆ ಅನುಕೂಲವಾಗಲಿದೆ ಎಂಬ ಕಾರಣಕ್ಕೆ ಈ ಮಹತ್ವದ ಹೋರಾಟ ವಿಜಯಪುರದಲ್ಲಿ ನಡೆದಿದೆ, ಈ ಹೋರಾಟದಲ್ಲಿ ಭಾಗಿಯಾದ ಹೋರಾಟಗಾರರನ್ನು ಬಂಧಿಸಿರುವುದು ಸರಿಯಲ್ಲ, ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
ಪತ್ರಕರ್ತರಾದ ಖ್ವಾಜಾ ಪಟೇಲ್, ಕಲ್ಲು ಶಿವಶರಣ, ನವೀದ್‌ಅಂಜುಮ್, ಸಂತೋಷ ಮಲಘಾಣಕರ, ಅಬ್ಬಾಸಲಿ ಬಸರಗಿ, ಮೊಹ್ಮದ್ ಎಹಕಾಮ್ ಕರ್ಜಗಿ, ಶಖೀಲ್ ಅಹ್ಮದ್ ಗೋಡೆಸವಾರ, ರಜಾಕ್ ಇನಾಮದಾರ, ಮಕ್ಸೂದ್ ಅಹ್ಮದ್ ಚೌಧರಿ, ಝೈದ್ ಇನಾಮದಾರ, ಸೂಫಿಯಾನ ಮುಲ್ಲಾ, ಇರ್ಫಾನ್ ಬೀಳಗಿ ಮೊದಲಾದವರು ಪಾಲ್ಗೊಂಡಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Friday, January 2, 2026

ವಿಜಯಪುರದಲ್ಲಿ ಪೂಜ್ಯ ಸ್ವಾಮೀಜಿಗಳ ಜೊತೆ ಪೊಲೀಸರ ವರ್ತನೆ ಖಂಡನಾರ್ಹ: ಕೇಶವ ಪ್ರಸಾದ್

 

ಈ ದಿವಸ ವಾರ್ತೆ

ವಿಜಯಪುರ: ವಿಜಯಪುರ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಗುರುವಾರ 106 ದಿನ ಹಾಗೂ ಅಹೋರಾತ್ರಿ ಧರಣಿಗೆ 17 ದಿನವಾಗಿದೆ. ಈ ಹೋರಾಟ ಶಾಂತ ರೀತಿಯಲ್ಲಿ ನಡೆಯುತ್ತಿದ್ದು ಈ ಹೋರಾಟಕ್ಕೆ ಜೆಲ್ಲೆಯಾದ್ಯಂತ  ಪಕ್ಷಾತೀತ, ಜಾತ್ಯಾತೀತ ಬೆಂಬಲ ವ್ಯಕ್ತವಾಗಿದೆ. ಜನವರಿ 9 ರಂದು ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಗಮನ ಸೆಳೆಯಲು ಹೋರಾಟದ ತೀವ್ರತೆ ಹೆಚ್ಚಿದೆ. ಇದೇ ಕಾರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಪ್ರತಿಭಟನಾಕಾರರು ಧರಣಿಗೆ ಮುಂದಾಗಿದ್ದಾರೆ. ಈ ಸಂದರ್ಭಲ್ಲಿ ಹುಣಿಶ್ಯಾಳ ಗ್ರಾಮದ ಶ್ರೀ ಸಂಗನಬಸವ ಸ್ವಾಮೀಜಿ ಅವರ ಮೈಮೇಲಿನ ಬಟ್ಟೆ ಹಿಡಿದು ಎಳೆದೊಯ್ಯಲು ಯತ್ನಿಸಿದ್ದು ಪೊಲೀಸರ ಅತಿರೇಕದ ವರ್ತನೆ ಎಂದು ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್ ಅವರು ಖಂಡಿಸಿದ್ದಾರೆ.

ಪ್ರತಿಭಟನಾಕಾರರ ಮನವೊಲಿಸಿ ಹೋರಾಟ ನಿಯಂತ್ರಿಸದೇ ಏಕಾಏಕಿ ಹೋರಾಟಗಾರರ ಮೇಲೆ ಬಲ ಪ್ರಯೋಗ ಮಾಡಿರುವುದು ತೀವ್ರ ಕಳವಳದ ಸಂಗತಿ. ಪೂಜ್ಯ ಸ್ವಾಮೀಜಿಗಳ ಜೊತೆ ಪೊಲೀಸರ ಈ ವರ್ತನೆ ಖಂಡನಾರ್ಹ ಎಂದು ಅವರು ತಿಳಿಸಿದ್ದಾರೆ.

ನಿನ್ನೆ ರಾತ್ರಿ ಪೂಜ್ಯ ಸ್ವಾಮೀಜಿಗಳನ್ನು ಹಾಗೂ ಹೋರಾಟಗಾರರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುವುದು ನ್ಯಾಯಸಮ್ಮತವಲ್ಲ. ಪ್ರತಿಭಟನೆ ಜನರ ಮೂಲಭೂತ ಹಕ್ಕು. ಈ ಹೋರಾಟಗಾರರು ಆಸ್ತಿ ನಷ್ಟಮಾಡಿ, ಬೆಂಕಿ ಹಚ್ಚಿ, ಕಲ್ಲು ತೂರಿ ಪ್ರತಿಭಟನೆ ಮಾಡುತ್ತಿರಲಿಲ್ಲ, ಇಂಥಹ ಸಂದರ್ಭದಲ್ಲಿ ಜಿಲ್ಲಾ ಪೊಲೀಸರು ತೀವ್ರ ಕ್ರಮಕ್ಕೆ ಮುಂದಾಗಿರುವುದು ಖಂಡನಾರ್ಹ ಎಂದಿದ್ದಾರೆ.

ಈ ಅಚಾತುರ್ಯ  ಘಟನೆಗೆ ಕಾರಣರಾದ ಸಂಬಂಧಿಸಿದ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು ತಮ್ಮ ಹಠ ಬಿಟ್ಟು ಪ್ರತಿಭಟನಾಕಾರರ ಜೊತೆ ಮಾತನಾಡಿ, ಅವರು ಸರಕಾರಿ ವೈದ್ಯಕೀಯ ಕಾಲೇಜನ್ನು ಖಂಡಿತ ಮಾಡುವೆ ಎಂದು ನೀಡಿರುವ ಆಶ್ವಾಸನೆಯನ್ನು ಪುನರುಚ್ಚರಿಸಿ ಪರಿಸ್ಥಿತಿ ಶಾಂತಗೊಳಿಸಲಿ ಎಂದು ಆಗ್ರಹಿಸುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.