ವಿಜಯಪುರ : ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಹಿರಿಯ ಪತ್ರಕರ್ತ ಅನೀಲ ಹೊಸಮನಿ ಸೇರಿದಂತೆ ವಿವಿಧ ಹೋರಾಟಗಾರರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಪತ್ರಕರ್ತರು ಅಪರ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಹಿರಿಯ ಪತ್ರಕರ್ತ ಯೂಸೂಫ್ ನೇವಾರ ಮಾತನಾಡಿ, ಪತ್ರಕರ್ತ ಅನೀಲ ಹೊಸಮನಿ ಕಳೆದ ಹಲವರು ವರ್ಷಗಳಿಂದ ಪತ್ರಿಕೋದ್ಯಮ, ಸಾಮಾಜಿಕ ಹೋರಾಟದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ, ಅನೇಕ ಸಾಮಾಜಿಕ ಹೋರಾಟಗಳಿಗೆ ಧ್ವನಿಯಾಗಿದ್ದಾರೆ, ಒಬ್ಬ ಅಪೂರ್ವ ವ್ಯಕ್ತಿತ್ವದ ಹಿರಿಯ ಪತ್ರಕರ್ತರಿಗೆ ಅಗೌರವ ತೋರಿ ಜೈಲಿಗೆ ಕಳುಹಿಸಿರುವುದು ಸರಿಯಲ್ಲ, ಅದು ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ, ಜನರಿಗಾಗಿ ನಡೆದ ಹೋರಾಟ, ಕೂಡಲೇ ಅನೀಲ ಹೊಸಮನಿ ಸೇರಿದಂತೆ ಹೋರಾಟಗಾರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.ಹಿರಿಯ ಪತ್ರಕರ್ತ ಪರಶುರಾಮ ಶಿವಶರಣ ಮಾತನಾಡಿ, ಹಿರಿಯ ಪತ್ರಕರ್ತ ಅನೀಲ ಹೊಸಮನಿ ಒಬ್ಬ ಶ್ರೇಷ್ಠ ಸಾಹಿತಿ ಕೂಡಾ ಹೌದು, ಅನೇಕ ಪುಸ್ತಕಗಳ ರಚನೆ, ಮಹತ್ವದ ಕೃತಿಗಳ ಅನುವಾದ ಮಾಡಿದ್ದಾರೆ, ಅನೇಕ ಜನಪರ ಹೋರಾಟಗಳಿಗೆ ಮಾರ್ಗದರ್ಶಕರಾಗಿದ್ದಾರೆ, ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆಯಾದರೆ ಬಡ, ಮಧ್ಯಮ ವರ್ಗದ ಮಕ್ಕಳು ವೈದ್ಯಕೀಯ ಶಿಕ್ಷಣಕ್ಕೆ ಅನುಕೂಲವಾಗಲಿದೆ ಎಂಬ ಕಾರಣಕ್ಕೆ ಈ ಮಹತ್ವದ ಹೋರಾಟ ವಿಜಯಪುರದಲ್ಲಿ ನಡೆದಿದೆ, ಈ ಹೋರಾಟದಲ್ಲಿ ಭಾಗಿಯಾದ ಹೋರಾಟಗಾರರನ್ನು ಬಂಧಿಸಿರುವುದು ಸರಿಯಲ್ಲ, ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
ಪತ್ರಕರ್ತರಾದ ಖ್ವಾಜಾ ಪಟೇಲ್, ಕಲ್ಲು ಶಿವಶರಣ, ನವೀದ್‌ಅಂಜುಮ್, ಸಂತೋಷ ಮಲಘಾಣಕರ, ಅಬ್ಬಾಸಲಿ ಬಸರಗಿ, ಮೊಹ್ಮದ್ ಎಹಕಾಮ್ ಕರ್ಜಗಿ, ಶಖೀಲ್ ಅಹ್ಮದ್ ಗೋಡೆಸವಾರ, ರಜಾಕ್ ಇನಾಮದಾರ, ಮಕ್ಸೂದ್ ಅಹ್ಮದ್ ಚೌಧರಿ, ಝೈದ್ ಇನಾಮದಾರ, ಸೂಫಿಯಾನ ಮುಲ್ಲಾ, ಇರ್ಫಾನ್ ಬೀಳಗಿ ಮೊದಲಾದವರು ಪಾಲ್ಗೊಂಡಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:
Post a Comment