ವಿಜಯಪುರ : ಇತ್ತೀಚೆಗೆ ಬೆಳಗಾವಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡ ಕಲಾ ಪ್ರತಿಭೋತ್ಸವದಲ್ಲಿ ಶಾಸ್ತ್ರೀಯ ಸಂಗೀತ ಪ್ರಕಾರದಲ್ಲಿ ಬಾಲ ಪ್ರತಿಭೆ ಕು. ಸಮೀರ ಶೇಖ ಅವರು ವಲಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿ, ರಾಜ್ಯ ಮಟ್ಟದ ಕಲಾಪ್ರತಿಭೋತ್ಸವಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆ ವಿಜಯಪುರ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಬಾಲ ಪ್ರತಿಭೆಗೆ ಬೆಂಗಳೂರಿನಲ್ಲಿ ನಡೆಯುವ ಕಲಾ ಪ್ರತಿಭೋತ್ಸವದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿ ಆಹ್ವಾನಿಸಿದ್ದಾರೆ.
2025-26 ನೇ ಸಾಲಿನ ರಾಜ್ಯ ಮಟ್ಟದ ಕಲಾ ಪ್ರತಿಭೋತ್ಸವದ ಉದ್ಘಾಟನಾ ಕಾರ್ಯಕ್ರಮವನ್ನು ದಿನಾಂಕ: 13-02-2026 ರಂದು ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರಿನ ಕನ್ನಡ ಭವನದ ನಯನ ಕಲ್ಯಾಣ ಕನ್ನಡ ಮತ್ತು ಸಂಸ್ಕøತಿ ಇಲಾಖಾ ಸಚಿವರು ಉದ್ಘಾಟಿಸಲಿರುವ ಕಾರ್ಯಕ್ರಮದಲ್ಲಿ ಕು. ಸಮೀರ ಶೇಖರವರು ತಮ್ಮ ಶಾಸ್ತ್ರೀಯ ಸಂಗೀತದ ಕಲೆ ಪ್ರದರ್ಶನವನ್ನು ಪ್ರಸ್ತುತ ಪಡಿಸಲಿದ್ದಾರೆ.
ರಾಜ್ಯ ಮಟ್ಟದ ಕಲಾಪ್ರತಿಭೋತ್ಸವವನ್ನು ಇದೇ 2026ರ ಪೆಭ್ರುವರಿ 13 ಮತ್ತು 14 ರಂದು ಬೆಳಿಗ್ಗೆ 10.30 ಗಂಟೆಗೆ ಕನ್ನಡ ಭವನದ ನಯನ ಸಭಾಂಗದಲ್ಲಿ ಭಾಗವಹಿಸಬೇಕೆಂದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಬೆಳಗಾವಿ ವಿಭಾಗದ ಬೆಳಗಾವಿ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆ ಕು. ಸಮೀರ ಬಾಲಪ್ರತಿಭೆಗೆ ಪಾಲಕರಾದ ಎಲ್.ಬಿ.ಶೇಖಮಾಸ್ತರ್, ಬಾಬು ಶೇಖ, ಕು. ತನ್ವೀರ ಸೇರಿದಂತೆ ಬಂದು ಬಳಗದವರು ಶುಭ ಹಾರೈಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:
Post a Comment