Monday, March 2, 2026
Sunday, March 1, 2026
ರಕ್ತದಾನ ಜೀವ ಉಳಿಸುವ ಪುಣ್ಯದ ಕಾರ್ಯ
ಮುದೋಳ : ಜನ್ಮದಿನದಂದು ರಕ್ತದಾನ ಮಾಡುವುದು ಒಂದು ಶ್ರೇಷ್ಠ ಮತ್ತು ಅರ್ಥಪೂರ್ಣ ಆಚರಣೆಯಾಗಿದೆ. ಇದು ಕೇವಲ ಒಂದು ಕೇಕ್ ಕತ್ತರಿಸುವ ಸಮಾರಂಭವಾಗಿರದೆ ಬೇರೆಯವರ ಜೀವ ಉಳಿಸುವ ಪುಣ್ಯದ ಕಾರ್ಯವಾಗಿದೆ. ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬಹುದು ಮತ್ತು ರಕ್ತದಾನವು ಕನಿಷ್ಠ ಮೂರು ಜೀವಗಳನ್ನು ಉಳಿಸಲು ಸಹಾಯ ಮಾಡುತ್ತದೆ. ಇಂತಹ ಕಾರ್ಯ ಮುಧೋಳ ತಾಲೂಕಿನ ನಿಂಗಾಪುರ ಗ್ರಾಮದ ಶಿಕ್ಷಕ ಶ್ರೀಶೈಲ ಜಂಬಗಿ ಅವರು ಜನ್ಮ ದಿನದ ಪ್ರಯುಕ್ತ ಶ್ರೀ ವೀರಭದ್ರೇಶ್ವರ ರಕ್ತ ಕೇಂದ್ರದಲ್ಲಿ ರಕ್ತದಾನ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಬ್ಲಡ್ ಬ್ಯಾಂಕ ಟೆಕ್ನಿಷಿಯನ್‌ಗಳಾದ ಪವಿತ್ರ ಕೌಜಲಗಿ, ವಿಜಯಲಕ್ಷ್ಮೀ ಗೊಳಸಂಗಿ, ಅಕ್ಷಯಕುಮಾರ ದಳವಾಯಿ, ಈ ದಿವಸ ಕನ್ನಡ ದಿನ ಪತ್ರಿಕೆ ಸಂಪಾದಕ ಉಮೇಶ ಶಿವಶರಣ ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
