ವಿಜಯಪುರ: ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್ ಆಫ್ ಬಿಜಾಪುರ ಪರಿವಾರ ಆಶ್ರಯದಲ್ಲಿ ಮಹಾನಗರ ಪಾಲಿಕೆ ವಾರ್ಡ್ ನಂ.4ರ ಸದಸ್ಯರಾದ ರಾಜು ಚವ್ಹಾಣ, ವಿ.ಡಿ.ಎ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ ಹಾಗೂ ಡಾ.ಎಂ.ಬಿ.ಪಾಟೀಲ ನಗರ ಸಿ ಬ್ಲಾಕ್‌ನ ಸರ್ವ ಸದಸ್ಯರ ಸಹಯೋಗದೊಂದಿಗೆ ಉದ್ಯಾನದಲ್ಲಿ ಸಸಿ ನೆಡುವ ಕಾರ್ಯಕ್ರಮವು ಮಾ.7 ರಂದು ಸಂಜೆ 4 ಗಂಟೆಗೆ ವಿಜಯಪುರದ ಡಾ.ಎಂ.ಬಿ.ಪಾಟೀಲ ನಗರ ಸಿ ಬ್ಲಾಕ್‌ನಲ್ಲಿ ಜರುಗಲಿದೆ. ವಿಜಯಪುರ ಲಯನ್ಸ್ ಕ್ಲಬ್ ಆಫ್ ಬಿಜಾಪುರ ಪರಿವಾರದ ಅಧ್ಯಕ್ಷ ಚಿದಾನಂದ ನಿಂಬಾಳ ಅಧ್ಯಕ್ಷತೆ ವಹಿಸಲಿದ್ದು, ಮಹಾನಗರ ಪಾಲಿಕೆಯ ಆಯುಕ್ತ ವಿಜಯ ಮೆಕ್ಕಳಕಿ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಶ್ರೀ ತುಳಸಿಗಿರೀಷ ಫೌಂಡೇಶನ್ ಸಂಸ್ಥಾಪಕ ಹಾಗೂ ಖ್ಯಾತ ಮದುಮೇಹ ತಜ್ಞ ಡಾ.ಬಾಬುರಾಜೇಂದ್ರ ನಾಯಕ ಆಗಮಿಸುವರು ಎಂದು ಲಯನ್ಸ್ ಪರಿವಾರದ ಸಂಸ್ಥಾಪಕ ಹಾಗೂ ಕಾರ್ಯಕ್ರಮದ ಸಂಚಾಲಕ ಡಾ.ಅಶೋಕಕುಮಾರ ಜಾಧವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಲಯನ್ಸ್ ಪರಿವಾರ ಕಾರ್ಯದರ್ಶಿ ವಿದ್ಯಾ ಕೊಟೆನ್ನವರ, ಖಜಾಂಚಿ ಪುಷ್ಪಾ ಮಹಾಂತಮಠ, ಕಾರ್ಯಕ್ರಮದ ಸಹ ಸಂಚಾಲಕ ಸಿದ್ದರಾಮ ಪೂಜಾರಿ ಸೇರಿದಂತೆ ಲಯನ್ಸ್ ಕ್ಲಬ್ ಆಫ್ ಬಿಜಾಪುರ ಪರಿವಾರದ ಸರ್ವ ಸದಸ್ಯರು, ಡಾ.ಎಂ.ಬಿ.ಪಾಟೀಲ ನಗರದ ಸಿ ಬ್ಲಾಕ್ ಬಡಾವಣೆಯ ಸರ್ವ ಸದಸ್ಯರು ಕಾರ್ಯಕ್ರಮಕ್ಕೆ ಸ್ವಾಗತಿಸಿ, ಯಶಸ್ವಿಗೊಳಿಸುವಂತೆ ಕೋರಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment