ಚಡಚಣ : 371 ಜೆ ಮೀಸಲಾತಿ ಅಡಿ ಬಿಟ್ಟು ಹೋದ ವಿಜಯಪುರ ಜಿಲ್ಲೆಗೆ ಕಲ್ಯಾಣ ಕರ್ನಾಟಕ ಮೀಸಲಾತಿಗೆ ಸೇರಿಸಲು ಕೇಂದ್ರ ಸರಕಾಕ್ಕೆ ಶಿಫಾರಸ್ಸು ಕಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಚಡಚಣ ತಾಲೂಕು ಘಟಕದ ಮುಖಂಡರು ತಹಶೀಲ್ದಾರ ಅವರ ಮೂಲಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ವಸಂತ ಭೈರಾಮಡಿ ಅವರು ಮಾತನಾಡಿ ಅಖಂಡ ಹೈದ್ರಾಬಾದ್ ಪ್ರಾಂತದ ಭಾಗವಾಗಿದ್ದ ವಿಜಯಪುರ ಜಿಲ್ಲೆಯನ್ನು 371ಜೆ ಮೀಸಲಾತಿಯಿಂದ ಹೊರಗಿಡುವ ಮೂಲಕ ಜಿಲ್ಲೆಯ ಜನರಿಗೆ ಅನ್ಯಾಯ ಮಾಡಿದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಮೀಸಲಾತಿಯಿಂದ ಕೈಬಿಟ್ಟಿದ್ದು ಏಕೆ ಎಂಬುದಕ್ಕೆ ಜಿಲ್ಲೆಯ ಸಚಿವರು, ಸಂಸದರು, ಉತ್ತರಿಸಬೇಕು ಆಗ್ರಹಿಸಿದರು.
ಜಿಲ್ಲೆಯ ಸಾರಿಗೆ ವ್ಯವಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಡಿ ಇದೆ,ನ್ಯಾಯಾಂಗ ವ್ಯವಸ್ಥೆ ಕೂಡಾ ಕಲ್ಬುರ್ಗಿ ಉಚ್ಛ ನ್ಯಾಯಾಲಯ ಬರುತ್ತದೆ ಜೊತೆಗೆ ಹಲವು ಇಲಾಖೆಗಳು ಕಲಬುರಗಿ ವಿಭಾಗದಲ್ಲಿ ಇದ್ದರು ಕೂಡಾ ಜಿಲ್ಲೆಯನ್ನು 371 ಜೆ ಅಡಿ ಸೇರಿಸದೆ ಇರುವುದು ಖಂಡನೀಯ ಎಂದರು.
ನಂಜುಂಡಪ್ಪ ವರದಿ ಪ್ರಕಾರ ಆರ್ಥಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಹಿಂದುಳಿದ ವಿಜಯಪುರ ಜಿಲ್ಲೆಗೆ 371 ಜೆ ಪ್ರಾದೇಶಿಕ ಮೀಸಲಾತಿ ಅಡಿ ಸೇರಿಸಲು ಕೂಡಲೇ ಸಚಿವ ಸಂಪುಟದಲ್ಲಿ ನಿರ್ಣಯ ತೆಗೆದುಕೊಂಡು ಭಾರತ ಸರಕಾರಕ್ಕೆ ಶಿಫಾರಸ್ಸು ಕಳಿಸಿ ವಿಜಯಪುರ ಜಿಲ್ಲೆಗೆ ನ್ಯಾಯ ಒದಗಿಸಿಕೊಡಲು ಸಚಿವರು ಶಾಸಕರು ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಹೋರಾಟಗಾರ ಮಲ್ಲುಗೌಡ ಬಿರಾದಾರ ಅವರು ಮಾತನಾಡಿ 371ಜೆ ಮೀಸಲಾತಿ ವಿಷಯದಲ್ಲಿ ವಿಜಯಪುರ ಜಿಲ್ಲೆಗೆ ಅನುದಾನದ ವಿಷಯದಲ್ಲಿ, ಸರಕಾರಿ ನೌಕರಿ ಮತ್ತು ಶಿಕ್ಷಣದಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದೆ ಕೂಡಲೇ ಜಿಲ್ಲೆಯ ಸಚಿವರು ಶಾಸಕರು ಮೀಸಲಾತಿ ಒದಗಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುರುಗೇಂದ್ರ ಸಿಂಪಿ,ಭೀಮು ಜೀರಂಕಲಗಿ,ಪುಟ್ಟು ತೇಲಿ, ಆನಂದ ಕುರ್ಲಿ,ಉಜ್ವಲ ಡೊಳ್ಳಿ, ಅಂಬರೀಷ ಭೈರಗೊಂಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:
Post a Comment