Saturday, September 5, 2026

ಅರ್ಜುನ್ ರಾಠೋಡ್ ಅವರನ್ನು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ


ವಿಜಯಪುರ: ಬಂಜಾರ ಸಮಾಜದ ಹಿರಿಯ ನಾಯಕ ಹಾಗೂ ಕಾಂಗ್ರೆಸ್ ಪಕ್ಷದ ಸಕ್ರಿಯ ಮುಖಂಡರಾದ ಶ್ರೀ ಅರ್ಜುನ್ ರಾಠೋಡ್ ಅವರನ್ನು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ವಿಜಯಪುರ ಜಿಲ್ಲಾ ಬಂಜಾರ ಸಮಾಜ ಹಾಗೂ ಕಾಂಗ್ರೆಸ್ ಬಂಜಾರಾ ಕಾರ್ಯಕರ್ತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಸಚಿವ ರುದ್ರಪ್ಪ ಲಮಾಣಿ ಹಾಗೂ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಮಾಜದ ಮುಖಂಡರು ಮುಂದಾಗಿದ್ದಾರೆ.
ಅರ್ಜುನ್ ರಾಠೋಡ್ ಅವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಬಂಜಾರ ಸಮಾಜದ ವಿವಿಧ ಸಮಸ್ಯೆಗಳು, ಹಕ್ಕುಗಳು ಹಾಗೂ ಅಭಿವೃದ್ಧಿ ವಿಚಾರಗಳ ಕುರಿತು ನಿರಂತರವಾಗಿ ಧ್ವನಿ ಎತ್ತಿಕೊಂಡು ಬಂದಿದ್ದಾರೆ. ಅವರು ಬಂಜಾರ ಮಹಾಸಭೆಯ ಅಧ್ಯಕ್ಷರಾಗಿ ಹಾಗೂ ವಿಜಯಪುರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿ ಸಮಾಜ ಮತ್ತು ಪಕ್ಷದ ಸಂಘಟನೆಗೆ ಸೇವೆ ಸಲ್ಲಿಸಿದ್ದಾರೆ ಎಂದು ಮುಖಂಡರು ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಬಂಜಾರ ಸಮಾಜದ ಮತದಾರರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದ್ದು, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಸಮಾಜದ ಮತಗಳು ನಿರ್ಣಾಯಕವಾಗಿವೆ. ಅರ್ಜುನ್ ರಾಠೋಡ್ ಅವರು ಪ್ರಬಲ ಕಾಂಗ್ರೆಸ್ ಆಕಾಂಕ್ಷಿಯಾಗಿದ್ದರೂ ಪಕ್ಷದ ಟಿಕೆಟ್ ದೊರೆಯದ ಸಂದರ್ಭದಲ್ಲಿ ಪಕ್ಷದ ನಿಷ್ಠೆ ತೋರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರ ಪರವಾಗಿ ಸಚಿವ ಎಂ.ಬಿ. ಪಾಟೀಲ ಹಾಗೂ ಅರ್ಜುನ್ ರಾಠೋಡ್ ಅವರ ನೇತೃತ್ವದಲ್ಲಿ ಬಂಜಾರ ಸಮಾಜದ ಬೃಹತ್ ಸಮಾವೇಶ ಆಯೋಜಿಸಿ ಬೆಂಬಲ ನೀಡಲಾಗಿತ್ತು ಎಂದು ಮುಖಂಡರು ಹೇಳಿದ್ದಾರೆ.
ಪಕ್ಷದ ಮೇಲಿನ ನಿಷ್ಠೆ, ಸಮಾಜ ಸೇವೆ, ಸಂಘಟನಾ ಸಾಮರ್ಥ್ಯ ಹಾಗೂ ನಾಯಕತ್ವದ ಅನುಭವವನ್ನು ಪರಿಗಣಿಸಿ ಅರ್ಜುನ್ ರಾಠೋಡ್ ಅವರಿಗೆ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಬಂಜಾರ ಸಮಾಜಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಮನವಿಗೆ ಜಗನು ಮಹಾರಾಜ, ಸೋಮನಿಂಗ್ ಸ್ವಾಮೀಜಿ, ಧನಶಿಂಗ ಮಹಾರಾಜ್, ಗೋಪಾಲ ಮಹಾರಾಜರು, ಅಮರ್ಶಿಂಗ ಮಹಾರಾಜರು, ಸಂಜು ಮಹಾರಾಜರು, ಪ್ರಕಾಶ ಮಹಾರಾಜರು, ಭೀಮಶಿಂಗ ಮಹಾರಾಜರು ಸೇರಿದಂತೆ ಸಮಾಜದ ಧಾರ್ಮಿಕ ಮುಖಂಡರು ಹಾಗೂ ಆಡಿ ರಾಜೇಂದ್ರಪ್ರಸಾದ, ಬಿಬಿ ನಾಯಕ, ರಾಜಪಾಲ ಚವಾಣ್, ಡಿ.ಎಲ್. ಚವಾಣ್, ಶಂಕರ ಚವಾಣ್, ರಾಜು ಜಾಧವ್, ಮಲ್ಲಿಕಾರ್ಜುನ ನಾಯಕ, ಈಶ್ವರ ಜಾಧವ್, ಶೇಖರ ನಾಯ್ಕ್, ಲಿಂಬಾಜಿ ರಾಠೋಡ, ವಾಮನ ಚವಾಣ್, ಮಹಾದೇವ ರಾಠೋಡ, ಎಸ್.ಆರ್. ನಾಯ್ಕ್, ಎಂ.ಎಸ್. ನಾಯಕ್, ಅಶೋಕ ರಾಠೋಡ, ನಾತು ಪವಾರ, ಪದ್ದು ಚವಾಣ್, ಸತೀಶ ನಾಯಕ, ತುಕಾರಾಮ್ ರಾಠೋಡ, ಪ್ರಕಾಶ ರಾಠೋಡ, ಗೋವಿಂದ ರಾಠೋಡ, ಮಿಟ್ಟು ಚವಾಣ್, ಅನಿಲ್ ಚವಾಣ್, ಅಮೇಶಿ ರಾಠೋಡ, ಸುನೀಲ್ ಚವಾಣ್, ರಾಜು ಪವಾರ, ಸುರೇಶ ಪವಾರ ಸೇರಿದಂತೆ ಹಲವು ಸಮಾಜದ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಬಂಜಾರ ಸಮಾಜದ ಹಿತಾಸಕ್ತಿ ಹಾಗೂ ಜಿಲ್ಲೆಯ ರಾಜಕೀಯ ಪ್ರಾತಿನಿಧ್ಯವನ್ನು ಗಮನದಲ್ಲಿಟ್ಟುಕೊಂಡು ಅರ್ಜುನ್ ರಾಠೋಡ್ ಅವರನ್ನು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ವಿಜಯಪುರ ಜಿಲ್ಲಾ ಬಂಜಾರ ಸಮಾಜದ ಮುಖಂಡ ಪ್ರಕಾಶ ಗಂಗಾರಾಮ್ ರಾಠೋಡ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



ಎಂ.ಎಸ್. ಖೇಡ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ವಿಜಯಪುರ: ನಗರದ ಎಂ.ಎಸ್. ಖೇಡ್ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಸಂಸ್ಥೆಯ ಖಜಾಂಚಿ ವಿನೋದ ಎಂ. ಖೇಡ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಅಕ್ಷರ ಕಲಿಸಿ ಜ್ಞಾನವನ್ನು ನೀಡುವವರು ಶಿಕ್ಷಕರು; ಜ್ಞಾನ ನೀಡಿ ಬದುಕಿನ ದಾರಿಯನ್ನು ತೋರಿಸುವವರು ಗುರುಗಳು” ಎಂದು ಶಿಕ್ಷಕರ ಮಹತ್ವವನ್ನು ವಿವರಿಸಿದರು. ನಮ್ಮ ಬದುಕಿಗೆ ದಾರಿದೀಪವಾಗಿ, ಜ್ಞಾನದ ಬೆಳಕನ್ನು ಹರಿಸಿ, ಉತ್ತಮ ಭವಿಷ್ಯ ರೂಪಿಸುವ ಗೌರವಾನ್ವಿತ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವೇ ಶಿಕ್ಷಕರ ದಿನಾಚರಣೆ ಎಂದು ತಿಳಿಸಿದರು. ಇದೇ ವೇಳೆ ಶಿಕ್ಷಕ ಸಮುದಾಯಕ್ಕೆ ಮತ್ತೊಮ್ಮೆ ಶಿಕ್ಷಕರ ದಿನದ ಶುಭಾಶಯಗಳನ್ನು ಕೋರಿದರು.

ಶಾಲೆಯ ಮುಖ್ಯಗುರು ಸೀತಾ ಲಮಾಣಿ ಅವರು ಮಾತನಾಡಿ, “ಮುಗ್ಧ ಮನದಲ್ಲಿ ಅಕ್ಷರ ಬಿತ್ತಿ, ಮಕ್ಕಳ ಭವಿಷ್ಯಕ್ಕೆ ಬೆಳಕನ್ನು ಚೆಲ್ಲಿ, ಸುಂದರ ನಾಡು ಕಟ್ಟುವ ಅದ್ಭುತ ಶಿಲ್ಪಿಗಳು ಶಿಕ್ಷಕರು” ಎಂದು ಶಿಕ್ಷಕರ ಸೇವೆ ಹಾಗೂ ಜವಾಬ್ದಾರಿಯನ್ನು ಕೊಂಡಾಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಶ್ರೀದೇವಿ ಸೊನ್ನದ ಹಾಗೂ ಗಂಗೂಬಾಯಿ ಹಂಗರಗಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರಿಗೆ ಶುಭಾಶಯಗಳನ್ನು ಸಲ್ಲಿಸಲಾಯಿತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ವಿಜಯಪುರ ಜಿಲ್ಲೆಯ 13 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಜೆಡಿಎಸ್ ಆಗ್ರಹ

ವಿಜಯಪುರ: ಜಿಲ್ಲೆಯಲ್ಲಿ ಮಳೆ ಅಭಾವದಿಂದ ತೀವ್ರ ಬರಪರಿಸ್ಥಿತಿ ನಿರ್ಮಾಣವಾಗಿದ್ದು, ವಿಜಯಪುರ ಜಿಲ್ಲೆಯ ಎಲ್ಲಾ 13 ತಾಲೂಕುಗಳನ್ನು ತಕ್ಷಣವೇ ‘ಬರಪೀಡಿತ ತಾಲೂಕುಗಳು’ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಜಾತ್ಯತೀತ ಜನತಾದಳ (ಜೆಡಿಎಸ್) ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಜೆಡಿಎಸ್ ಜಿಲ್ಲಾ ಅಧ್ಯಕ್ಷರಾದ ಮಲ್ಲಿಕಾರ್ಜುನ ಯಂಡಿಗೇರಿ ಅವರ ನೇತೃತ್ವದಲ್ಲಿ ಜಿಲ್ಲಾ ಜೆಡಿಎಸ್ ಕಚೇರಿಯಿಂದ ಮೆರವಣಿಗೆ ಮೂಲಕ ರೈತ ಮುಖಂಡರು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ತೆರಳಿದ ಪ್ರತಿಭಟನಾಕಾರರು ಧರಣಿಗೆ ಬೆಂಬಲ ಸೂಚಿಸಿದರು. ಬಳಿಕ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಮಳೆ ಕೊರತೆಯಿಂದ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ತೀವ್ರವಾಗಿ ಹದಗೆಟ್ಟಿದ್ದು, ಬೆಳೆ ನಷ್ಟದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯ ಎಲ್ಲಾ 13 ತಾಲೂಕುಗಳನ್ನು ಯಾವುದೇ ವಿಳಂಬವಿಲ್ಲದೆ ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

13 ತಾಲೂಕುಗಳಿಗೂ ಬರಪೀಡಿತ ಸ್ಥಾನಮಾನ: ಮಳೆ ಕೊರತೆ ಹಾಗೂ ಬೆಳೆ ನಷ್ಟದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ 13 ತಾಲೂಕುಗಳನ್ನು ತಕ್ಷಣ ಅಧಿಕೃತವಾಗಿ ಬರಪೀಡಿತ ತಾಲೂಕುಗಳೆಂದು ಘೋಷಿಸಬೇಕು. ಬೆಳೆ ಪರಿಹಾರ ಬಿಡುಗಡೆ: ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಬೆಳೆ ಪರಿಹಾರಧನವನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು. ಕುಡಿಯುವ ನೀರು ಮತ್ತು ಮೇವಿನ ವ್ಯವಸ್ಥೆ: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಿಗೆ ಅಗತ್ಯ ಮೇವು ಲಭ್ಯವಾಗುವಂತೆ ತಾಲೂಕುವಾರು ಮೇವಿನ ಬ್ಯಾಂಕ್‌ಗಳನ್ನು ತೆರೆಯಬೇಕು. ಸಾಲ ವಸೂಲಾತಿ ತಡೆ: ಬರಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಕೃಷಿ ಸಾಲ ವಸೂಲಾತಿಯನ್ನು ತಕ್ಷಣ ತಡೆಹಿಡಿದು, ಸಾಲ ಮರುಪಾವತಿಗೆ ಸೂಕ್ತ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಬಿ.ಜಿ. ಪಾಟೀಲ, ಮುಖಂಡರಾದ ಸೋಮವಾರ ಪಾಟೀಲ, ಪಂಚಪ್ಪ ಕಲಬುರ್ಗಿ, ಖಾದ್ರಿ ಇನಾಂದಾರ್, ರಾಜು ಹಿಪ್ಪರಗಿ, ಅಪ್ಸರಾ ಬೇಗಂ ಚಪ್ಪರಬಂದ, ಮಾದೇವಿ ಪಾಟೀಲ, ಶಾಂತಾ ಲಮಾಣಿ, ಪ್ರಕಾಶ ಹಿರೇಕುರುಬರ, ಗುರುನಗೌಡ ಪಾಟೀಲ, ಭಾಗಾಯತ್ ರಾಜು ಹಿರೇಮಠ, ಶಂಕರ್ ಹಾಲಹಳ್ಳಿ, ಮಲ್ಲು ತೊರವಿ, ಮುತ್ತು ಜಂಗಮಶೆಟ್ಟಿ, ಶರಣಗೌಡ ಪಾಟೀಲ, ಬಸವರಾಜ ಹೊನವಾಡ, ಪ್ರಶಾಂತ್ ಕಿನಗಿ ಹಾಗೂ ಪೀರ್ ಗಚ್ಚಿನಮಲ್, ಎಂ ಎನ್ ಪಾಟೀಲ್, ಹುಸೇನ್ ಬಾಗಾಯತ್, ರೇವಣಸಿದ್ಧ ಕುಮಟೆ, ಶಿವಾಜಿ ಸಿಂಗಾಡಿ, ಸೇರಿದಂತೆ ಜೆಡಿಎಸ್ ಪಕ್ಷದ ಜಿಲ್ಲಾ ಮಟ್ಟದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.