ವಿಜಯಪುರ : ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗೀಯ
ಕಚೇರಿ ಹಾಗೂ ಎಲ್ಲ ಘಟಕಗಳಲ್ಲಿ ಹೈದ್ರಾಬಾದ್ ವಿಮೋಚನಾ ದಿನಾಚರಣೆ (ಕಲ್ಯಾಣ ಕರ್ನಾಟಕ ಉತ್ಸವ ) ಆಚರಿಸಲು ಆಗ್ರಹಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ಎಮ್ ವೈ ಪಾಟೀಲ ಹಾಗೂ ವಿಭಾಗೀಯ ನಿಯಂತ್ರಣಾಧಿಕಾರಿ ದೇವಾನಂದ ಬಿರಾದಾರ ಅವರಿಗೆ ಸಾರಿಗೆ ಅಧಿಕಾರಿ ಮಂಜುನಾಥ ಕೋಟ್ಯಾಳ ಅವರ ಮೂಲಕ ವಿಜಯಪುರ ಜಿಲ್ಲಾ 371 (ಜೆ) ಹೋರಾಟ ಸಮಿತಿಯಿಂದ ಇಂದು ಮನವಿ ಸಲ್ಲಿಸಿದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಲ್ಲ ವಿಭಾಗಗಳಲ್ಲಿ ಹೈದ್ರಾಬಾದ್ ವಿಮೋಚನಾ ದಿನ (ಕಲ್ಯಾಣ ಕರ್ನಾಟಕ ಉತ್ಸವ) ವನ್ನು ಆಚರಣೆ ಮಾಡುತ್ತ ಬರುತ್ತಿದ್ದಾರೆ.ಈ ಬಾರಿ ವಿಜಯಪುರ ವಿಭಾಗದ ಕೇಂದ್ರ ಕಚೇರಿ ಸೇರಿದಂತೆ ಎಲ್ಲ ಘಟಕಗಳಲ್ಲಿ ಹೈದ್ರಾಬಾದ್ ವಿಮೋಚನಾ ದಿನ (ಕಲ್ಯಾಣ ಕರ್ನಾಟಕ ಉತ್ಸವ ) ಆಚರಣೆ ಮಾಡಿ ವಿಮೋಚನಾ ಚಳುವಳಿ ನೇತೃತ್ವ ವಹಿಸಿದ
ಸ್ವಾಮಿ ರಾಮಾನಂದ ತೀರ್ಥರು, ಸರ್ದಾರ ಡಾ ಬಸವರಾಜ ನಾಗೂರು, ಸಿದ್ದಗೊಂಡಪ್ಪಗೌಡ ಪಾಟೀಲ ಅವರು ಸೇರಿದಂತೆ ಈ ಭಾಗದ ಅನೇಕ ಸ್ವಾತಂತ್ರ‍್ಯ ಹೋರಾಟಗಾರರು ಹಾಗೂ ವಿಮೋಚನಾ ಚಳುವಳಿಯ ಮಹಾನ್ ಚೇತನಗಳಿಗೆ ಗೌರವ ಸಲ್ಲಿಸಬೇಕು ಎಂದು ಹೋರಾಟಗಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಹೋರಾಟಗಾರರಾದ ವಿನೋದ ಖೇಡ ಲಾಯಪ್ಪ ಇಂಗಳೆ ಅನಿಲ ಇಕ್ಕಡೆ, ಗಿರೀಶ ಕಲಘಟಗಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:
Post a Comment