Thursday, October 1, 2026
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಸೊನಕನಹಳ್ಳಿ ಗ್ರಾಮದಲ್ಲಿ ಸಾಲಬಾಧೆಯಿಂದ ಮನನೊಂದು 30 ವರ್ಷದ ರೈತ ನೀಲಕಂಠ ರಾಯಪ್ಪ ಗೋಡಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನೀಲಕಂಠ ಅವರು ಒಕ್ಕಲುತನ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಈ ವರ್ಷ ಮಳೆ ಕೊರತೆಯಿಂದಾಗಿ ಬೆಳೆ ಕೈಕೊಟ್ಟಿದ್ದು, ಕೃಷಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಅವರು ಸಾಲದ ಸುಳಿಗೆ ಸಿಲುಕಿದ್ದರು ಎನ್ನಲಾಗಿದೆ. ಸಾಲದ ಭಾರ ತಾಳಲಾರದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಘಟನೆಯಿಂದ ಸೊನಕನಹಳ್ಳಿ ಗ್ರಾಮದಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಘಟನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ, ಕುಟುಂಬಕ್ಕೆ ಅಗತ್ಯ ನೆರವು ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಹಾಗೂ ಅಧಿಕೃತ ತನಿಖೆಯ ವಿವರಗಳು ಲಭ್ಯವಾಗಬೇಕಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಹಲಸಂಗಿಯ ಅನುಭಾವ ಕವಿ ಮಧುರಚೆನ್ನರ ಪುತ್ರ ಸತ್ಯಕಾಮ ಗಲಗಲಿ ಇನ್ನಿಲ್ಲ
ವಿಜಯಪುರ: ಜಿಲ್ಲೆಯ ಹಲಸಂಗಿಯ ಅನುಭಾವ ಕವಿ ಮಧುರಚೆನ್ನರ ಎರಡನೇ ಸುಪುತ್ರ ಸತ್ಯಕಾಮ ಗಲಗಲಿ (95) ಶಿವೈಕ್ಯರಾದರು.
ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ವಲಯದಲ್ಲಿ ಗೌರವ ಪಡೆದಿದ್ದ ಸತ್ಯಕಾಮ ಗಲಗಲಿ ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಗಳು, ಅಭಿಮಾನಿಗಳು ಹಾಗೂ ಹಲಸಂಗಿಯ ನಾಗರಿಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ಅಂತಿಮ ವಿಧಿ- ವಿಧಾನಗಳು ಅ. 3 ರಂದು ಬೆಳಗ್ಗೆ 8.30 ಗಂಟೆಗೆ ಹಲಸಂಗಿಯಲ್ಲಿರುವ ಅವರ ಮನೆಯಲ್ಲಿ ಆರಂಭವಾಗಲಿವೆ. ನಂತರ ಬೆಳಗ್ಗೆ 11.30 ಗಂಟೆಗೆ ಅಂತಿಮ ಯಾತ್ರೆ ಆರಂಭವಾಗಲಿದ್ದು, ಮಧ್ಯಾಹ್ನ 12.30 ಗಂಟೆಗೆ ಹಲಸಂಗಿಯ ರಾಮಾಹಳ್ಳದಲ್ಲಿರುವ ಅವರ ತೋಟದಲ್ಲಿ ಅಂತ್ಯಕ್ರಿಯೆ ಹಾಗೂ ಸಮಾಧಿ ವಿಧಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅವರ ಅಗಲಿಕೆಯಿಂದ ಮಧುರಚೆನ್ನರ ಕುಟುಂಬ ಹಾಗೂ ಹಲಸಂಗಿಯ ಸಾಂಸ್ಕೃತಿಕ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

