Friday, October 23, 2026

ಅ. 24 ರಂದು ಬೃಹತ್ ಮುಸ್ಲಿಂ ಸಮಾವೇಶ


 


ವಿಜಯಪುರ : ಜಿಲ್ಲೆಯಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ಸಂಬಂಧಿಸಿದಂತೆ ಇದೇ ದಿ.24 ರಂದು ಹಜ್ ಭವನ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಸಮಿತಿ ವಿಜಯಪುರ ವತಿಯಿಂದ  ಜಿಲ್ಲಾ ಅಲ್ಪಸಂಖ್ಯಾತ (ಮುಸ್ಲಿಂ) ಬೃಹತ್  ಸಮಾವೇಶ ಹಮ್ಮಿಕೊಳ್ಳಲಾಗಿದೆ.

ವಿಜಯಪುರ ನಗರದ ರಹೀಮ್ ನಗರ ರಸ್ತೆಯಲ್ಲಿರುವ ಸೂರಜ್ ಪಂಕ್ಷನ್ ಹಾಲ್ ನಲ್ಲಿ ಶನಿವಾರ ಸಾಯಂಕಾಲ 4 ಗಂಟೆಗೆ ಸಮಾವೇಶ ಜರುಗಲಿದೆ. ಪ್ರಮುಖವಾಗಿ ಮುಂಬರುವ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಅವಕಾಶ(ಟಿಕೆಟ್) ಕಲ್ಪಿಸುವಂತೆ ಎಲ್ಲ ರಾಜಕೀಯ ಪಕ್ಷಗಳ ಮೇಲೆ ಒತ್ತಡ ಹೇರುವ ಕುರಿತಾಗಿ ಚರ್ಚೆ ನಡೆಯಲಿದ್ದು ಮುಸ್ಲಿಂ ಸಮುದಾಯದ ಎಲ್ಲ ಬಾಂಧವರು ಭಾಗವಹಿಸಬೇಕು ಎಂದು ಹಜ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment