ವಿಜಯಪುರ : ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಮುಂಗಾರು ಹಂಗಾಮಿನ ಕೊನೆಯ ಹಂತದ ನೀರು ಹರಿಸುವ ಪ್ರಕ್ರಿಯೆ ನವೆಂಬರ್ 3ರಿಂದ 12ರವರೆಗೆ ನಡೆಯಲಿದ್ದು, ಇಂಡಿ ಶಾಖಾ ಕಾಲುವೆಯ ಕೊನೆಯ ಅಂಚಿನವರೆಗೂ ಸಮರ್ಪಕವಾಗಿ ನೀರು ತಲುಪಿಸಲು ಸಂಬAಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನವೆಂಬರ್ 3ರಿಂದ 12ರವರೆಗೆ ಕಾಲುವೆ ಜಾಲದ ಮೂಲಕ ನೀರು ಹರಿಸಲಾಗುತ್ತಿರುವುದರಿಂದ ನಿಗದಿತ ಪ್ರಮಾಣದ ನೀರು ಕಾಲುವೆಯ ಕೊನೆಯ ಭಾಗದ ರೈತರಿಗೂ ತಲುಪುವಂತೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ನೀರು ಹರಿಸುವ ಸಂದರ್ಭದಲ್ಲಿ ಕಾಲುವೆಗಳಲ್ಲಿ ಎಲ್ಲಿಯೇ ಸೋರಿಕೆ ಅಥವಾ ಹಾನಿ ಕಂಡುಬAದರೂ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ನೀರು ಪೋಲಾಗದಂತೆ ಮುನ್ನೆಚ್ಚರಿಕೆ ವಹಿಸಿ, ಸಮರ್ಪಕ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.
ಇಂಡಿ ಶಾಖಾ ಕಾಲುವೆಯ ಸುಮಾರು 172 ಕಿ.ಮೀ. ವ್ಯಾಪ್ತಿಯ ಕೊನೆಯ ಅಂಚಿನವರೆಗೆ ನೀರು ತಲುಪಿಸುವುದು ಪ್ರಮುಖ ಆದ್ಯತೆಯಾಗಿದ್ದು, ಮಧ್ಯದಲ್ಲಿ ಅನಧಿಕೃತವಾಗಿ ನೀರು ಎತ್ತುವುದು ಹಾಗೂ ನೀರಿನ ಹರಿವಿಗೆ ಅಡ್ಡಿಯಾಗುವ ಚಟುವಟಿಕೆಗಳನ್ನು ತಡೆಯಬೇಕು. ಕಾಲುವೆಯ ಕೊನೆಯ ಹಂತದವರೆಗೂ ನಿಗದಿತ ಪ್ರಮಾಣದಲ್ಲಿ ನೀರು ತಲುಪುವಂತೆ ನಿರಂತರ ನಿಗಾ ವಹಿಸಬೇಕು ಎಂದು ಸೂಚಿಸಿದರು.
ನೀರು ಹರಿಸುವ ಅವಧಿಯಲ್ಲಿ ಅಧಿಕಾರಿಗಳು ವಾಚ್ ಆ್ಯಂಡ್ ವಾರ್ಡ್ ವ್ಯವಸ್ಥೆ ಕಲ್ಪಿಸಿ, ಕಾಲುವೆ ಜಾಲದ ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾ ವಹಿಸಬೇಕು. ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ನಿಗಾ ಕೈಗೊಳ್ಳಬೇಕು. ಇಂಡಿ ಉಪವಿಭಾಗದ ಡಿವೈಎಸ್ಪಿ ಸೇರಿದಂತೆ ಕೆಂಭಾವಿ, ಸಿಂದಗಿ ಮತ್ತಿತರ ಸಂಬAಧಿತ ಪೊಲೀಸ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ನೀರಿನ ಸಮರ್ಪಕ ಹರಿವಿಗೆ ಅಗತ್ಯ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.
ಬಿಡುಗಡೆಯಾದ ನೀರು ನಿಗದಿತ ಮಾರ್ಗದಲ್ಲಿ ಯಾವುದೇ ಅಡಚಣೆಯಿಲ್ಲದೆ ಕೊನೆಯ ಭಾಗವನ್ನು ತಲುಪುವಂತೆ ನೀರಾವರಿ ಮತ್ತು ಪೊಲೀಸ್ ಇಲಾಖೆಗಳು ಜಂಟಿಯಾಗಿ ಕಾರ್ಯನಿರ್ವಹಿಸಬೇಕು. ಇದು ಮುಂಗಾರು ಹಂಗಾಮಿನ ಕೊನೆಯ ಹಂತದ ನೀರು ಹರಿಸುವ ಅವಧಿಯಾಗಿರುವುದರಿಂದ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಎಲ್ಲ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ,ಇAಡಿ ಉಪ ವಿಭಾಗಾಧಿಕಾರಿಗಳಾದ ಚಿದಾನಂದ ಗುರುಸ್ವಾಮಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿಗಳಾದ ಬದ್ರುದ್ದಿನ್ ಸೌದಾಗರ್,ಹೆಸ್ಕಾಂನ ಅಧಿಕ್ಷಕ ಅಭಿಯಂತರರಾದ ಸಿದ್ದಪ್ಪ ಬಿಂಜಗೇರಿ,ರಾAಪುರ ವಿಭಾಗ ಕಾರ್ಯ ನಿರ್ವಾಹಕ ಅಭಿಯಂತರ ಯು.ಪಿ.ಸೋನಾವಣೆೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು,ಕೆಬಿಜೆ ಎನ್.ಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:
Post a Comment