ವಿಜಯಪುರ: ವಿಜಯಪುರ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಶ್ರೀಮತಿ ಅಪ್ಪರಾ ಬೇಗಂ ಚಪ್ಪರಬಂದ ಅವರನ್ನು ನೇಮಕ ಮಾಡಲಾಗಿದೆ.
ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಅಪ್ಪುಗೌಡ ಪಾಟೀಲ, ವಿಜಯಪುರ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಯಂಡಿಗೇರಿ ಹಾಗೂ ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೀಮನಗೌಡ (ರಾಜುಗೌಡ) ಪಾಟೀಲ್ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ಮಾಡಲಾಗಿದೆ ಎಂದು ರಾಜ್ಯ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರಾದ ರಶ್ಮಿ ರಾಮೇಗೌಡ ಅವರು ನೇಮಕಾತಿ ಆದೇಶದಲ್ಲಿ ತಿಳಿಸಿದ್ದಾರೆ.
ಅಪ್ಸರಾ ಚಪ್ಪರಾಬೇಗಂ ಚಪ್ಪರಬಂದ ಅವರು ಈಗಾಗಲೇ ಜಿಲ್ಲಾ ಪಂಚಾಯ ಸದಸ್ಯರಾಗಿ ಹಾಗೂ ಜಿಪಂ ಅಧ್ಯಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಗಳನ್ನು ಪರಿಗಣಿಸಿ ಈ ಹುದ್ದೆಯನ್ನು ನೀಡಲಾಗಿದೆ.
ಜಿಲ್ಲೆಯಲ್ಲಿ ಜೆಡಿಎಸ್ ಮಹಿಳಾ ಘಟಕವನ್ನು ಸಂಘಟಿಸಿ ಬಲಪಡಿಸುವುದು, ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸುವುದು ಮತ್ತು ವಿವಿಧ ಸಮುದಾಯಗಳ ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತೆಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಸಂಘಟನೆಯನ್ನು ಪರಿಣಾಮಕಾರಿಯಾಗಿ ಬೆಳೆಸುವ ಜವಾಬ್ದಾರಿಯನ್ನು ನೂತನ ಅಧ್ಯಕ್ಷರಿಗೆ ವಹಿಸಲಾಗಿದೆ.
ಪಕ್ಷದ ಮಹಿಳಾ ಘಟಕವನ್ನು ಜಿಲ್ಲಾದ್ಯಂತ ಬಲಪಡಿಸುವ ನಿಟ್ಟಿನಲ್ಲಿ ಅಪ್ಪರಾ ಬೇಗಂ ಚಪ್ಪರಬಂದ ಅವರು ಕಾರ್ಯೋನ್ಮುಖರಾಗುವ ನಿರೀಕ್ಷೆಯನ್ನು ನೇಮಕಾತಿ ಆದೇಶದಲ್ಲಿ ವ್ಯಕ್ತಪಡಿಸಲಾಗಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:
Post a Comment