Saturday, October 24, 2026

ಅಬ್ದುಲ್ ಹಮೀದ್ ಮುಶ್ರೀಪ್ ರಿಂದ ಬನ್ನಿ ವಿನಿಮಯ

ವಿಜಯಪುರ : ನಗರದ ಗೃಹ ಕಚೇರಿಯಲ್ಲಿ ಬುಧವಾರ ದಸರಾ, ವಿಜಯದಶಮಿ ಅಂಗವಾಗಿ ಜಿಲ್ಲೆಯ ಹಿರಿಯ ಕಾಂಗ್ರೇಸ್ ನಾಯಕರಾದ ಅಬ್ದುಲ್ ಹಮೀದ್ ಮುಶ್ರೀಪ್ ಅವರು ಸರ‍್ವಜನಿಕರೊಂದಿಗೆ ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡರು.

ನಗರವೂ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮುಖಂಡರು, ಗಣ್ಯರು, ಅಭಿಮಾನಿಗಳು, ಕರ‍್ಯರ‍್ತರು ಸೇರಿ ಆಪ್ತರು ಹಾಗೂ ಸ್ನೇಹಿತರೊಂದಿಗೆ ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡು ಶುಭ ಕೋರಿದರು.

ಈ ಸಂರ‍್ಭದಲ್ಲಿ ಜನರ ಉಭಯ ಕುಶಲೋಪರಿ ವಿಚಾರಿಸಿದ ಅವರು ದಸರಾ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಈ ರ‍್ಷ ಮಳೆ ಕೊರತೆ ಹಿನ್ನೆಲೆ ಎಲ್ಲರೂ ಹೆಚ್ಚೆಚ್ಚು ಗಿಡಗಳನ್ನು ನೆಡಬೇಕು. ನೀರನ್ನು ಹಿತಮಿತವಾಗಿ ಬಳಸಬೇಕು ಎಂದು ಸಲಹೆ ನೀಡಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment