ಸುರಪುರ: ತಾಲೂಕು ಕಾನೂನು ಸೇವಾ ಸಮಿತಿ, ಸುರಪುರ ಹಾಗೂ ಅರುಂಧತಿ ಕಾನೂನು ಮಹಾವಿದ್ಯಾಲಯದ ಸಂಯುಕ್ತ ಆಶಯದಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಕರಡಕಲ್ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುರಪುರದ ಪೆನಲ್ ವಕೀಲರಾದ ಜ್ಯೋತಿ ಎಲ್. ನಾಯಕ್ ಅವರು ಮಾತನಾಡಿ, ವರದಕ್ಷಿಣೆ ನೀಡುವುದು ಮತ್ತು ಪಡೆಯುವುದು ಕಾನೂನುಬದ್ಧವಾಗಿ ಅಪರಾಧವಾಗಿದ್ದು, ಸಮಾಜದಲ್ಲಿ ವರದಕ್ಷಿಣೆ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಹೇಳಿದರು.
ಕಾನೂನು ವಿದ್ಯಾರ್ಥಿ ರವಿ ಜೋಗುರು ಮಾತನಾಡಿ, ಯುವಜನತೆ ವರದಕ್ಷಿಣೆ ರಹಿತ ವಿವಾಹಕ್ಕೆ ಬದ್ಧರಾಗಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ಮತ್ತು ಬೆಂಬಲ ನೀಡುವ ಮೂಲಕ ಸಮಾನತೆ ಹಾಗೂ ಸ್ವಾಭಿಮಾನದ ಸಮಾಜ ನಿರ್ಮಿಸಬೇಕು ಎಂದು ಕರೆ ನೀಡಿದರು.
“ಹೆಣ್ಣು ಹೊರೆಯಲ್ಲ, ನಮ್ಮ ಹೆಮ್ಮೆ. ವರದಕ್ಷಿಣೆ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಗುರಿಯಾಗಬೇಕು” ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ಸಾರಲಾಯಿತು.
ಈ ಸಂದರ್ಭದಲ್ಲಿ ಅರುಂಧತಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಲಕ್ಷ್ಮೇಶ್ ಪೂಜಾರಿ, ಎಸ್‌ಡಿಎ ನವೀನ್ ಕುಮಾರ್ ಹಾಗೂ ಕಾನೂನು ವಿದ್ಯಾರ್ಥಿಗಳಾದ ಮಹೇಶ್ ಟಿ.ಎಚ್., ಕರಿಷ್ಮಾ, ದೇವಕಮ್ಮ, ನಂದಿನಿ, ಅಶ್ವಿನಿ, ದೇವರಾಜ್, ಶಂಕರ್ ಗೌಡ, ಭೀಮಶಂಕರ್, ಪ್ರಕಾಶ ಶೀಳಗಿ, ಮಲ್ಲಿಕಾರ್ಜುನ್, ಹಸನ್ ಸಾಬ್, ಸಚಿನ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:
Post a Comment