Friday, October 30, 2026

ಜವಳಿ ಉದ್ಯಮಿದಾರರಿಗೆ ರಫ್ತು ಪ್ರೋತ್ಸಾಹನ ಕಾರ್ಯಾಗಾರ ನಂ.3 ರಂದು

ಈ ದಿವಸ ವಾರ್ತೆ

ವಿಜಯಪುರ: ಕೈಮಗ್ಗ ಮತ್ತು ಜವಳಿ ಇಲಾಖೆಯು ಜಿಲ್ಲಾ ಪಂಚಾಯತ್ ವಿಜಯಪುರ ಹಾಗೂ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ (ರುಡ್‌ಸೆಟ್) ವಿಜಯಪುರ ಇವರ ಸಹಯೋಗದಲ್ಲಿ ಜವಳಿ ವಲಯದ ಉದ್ಯಮಿದಾರರಿಗಾಗಿ ಒಂದು ದಿನದ ರಫ್ತು ಪ್ರೋತ್ಸಾಹನ ಕಾರ್ಯಾಗಾರವನ್ನು ನ.3ರಂದು ಮಂಗಳವಾರ ಆಯೋಜಿಸಿದೆ.

ನಗರದ ರುಡ್‌ಸೆಟ್ ಸಂಸ್ಥೆಯ ಆವರಣದಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಕಾರ್ಯಾಗಾರ ನಡೆಯಲಿದೆ.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶ್ರೀ ಭರತ್ ಬಿ. ಅಧ್ಯಕ್ಷತೆ ವಹಿಸಲಿದ್ದು, ಬೆಳಗಾವಿ ಪಶ್ಚಿಮ ವಲಯದ ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಶಿವರಾಜ್ ಆರ್. ಕುಲಕರ್ಣಿ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಮುಕುಂದ ಝಳಕಿ, ಸಿಡಾಕ್ ಜಂಟಿ ನಿರ್ದೇಶಕಿ ಸುಪ್ರಿತಾ ಬಳ್ಳಾರಿ, ಧಾರವಾಡ ರಾಯಾಪುರದ ಕೇಂದ್ರೀಯ ರೇಷ್ಮೆ ಮಂಡಳಿಯ ಹಿರಿಯ ವಿಜ್ಞಾನಿ ಡಾ. ವಿರಾಜ್, ವಿಜಯಪುರ ಜಿಲ್ಲಾ ಅಗ್ರಗಣೀಯ ಬ್ಯಾಂಕ್‌ನ ಸಿದ್ದಯ್ಯ ಬಿ., ವಿಜಯಪುರ ವಿಭಾಗದ ಅಂಚೆ ಅಧೀಕ್ಷಕ ಮಹಾಂತೇಶ ತೊಗರಿ, ಧಾರವಾಡದ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಉಪನಿರ್ದೇಶಕ ಮಲ್ಲಿಕಾರ್ಜುನ, ವಿಜಯಪುರ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ಇಲಾಖೆಯ ಉಪನಿರ್ದೇಶಕ ಸುಭಾಷ್‌ಚಂದ್ರ ಪಾಟೀಲ ಹಾಗೂ ಬೆಂಗಳೂರಿನ ರಫ್ತು ಸಲಹೆಗಾರ್ತಿ ಡಾ. ನಾಗವೇಣಿ ಸಿ. ಭಾಗವಹಿಸಲಿದ್ದಾರೆ.

ಜವಳಿ ಉದ್ಯಮಗಳ ಉತ್ಪನ್ನಗಳಿಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅವಕಾಶ ಕಲ್ಪಿಸುವುದು, ರಫ್ತು ಪ್ರಕ್ರಿಯೆ, ಮಾರುಕಟ್ಟೆ ಸಂಪರ್ಕ ಹಾಗೂ ಉದ್ಯಮದ ಬೆಳವಣಿಗೆಗೆ ಪೂರಕವಾದ ಮಾಹಿತಿ ಮತ್ತು ಮಾರ್ಗದರ್ಶನ ನೀಡುವುದು ಕಾರ್ಯಾಗಾರದ ಉದ್ದೇಶವಾಗಿದೆ.

ಜವಳಿ ವಲಯದ ಉದ್ಯಮಿದಾರರು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ವಿಜಯಪುರ ಜಿಲ್ಲಾ ಸಹಾಯಕ ನಿರ್ದೇಶಕ ಸತೀಶ ಕಾಪಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment