Monday, April 6, 2026
ಐದು ದಿನ ಬೃಹತ್ ಐತಿಹಾಸಿಕ ಪುಸ್ತಕ ಮೇಳ : ಸೂಳಿಭಾವಿ
ವಿಜಯಪುರ: ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಏ.10 ರಿಂದ ಐದು ದಿನಗಳ ಕಾಲ ಬುದ್ಧ, ಬಸವ ಹಾಗೂ ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳವನ್ನು ಪ್ರಥಮ ಬಾರಿಗೆ ಹಮ್ಮಿಕೊಳ್ಳಲಾಗುತಿದ್ದು, ಈ ಮೇಳದ ಸಕಲ ಸಿದ್ಧತೆ ಭರದಿಂದ ಸಾಗುತ್ತಿದೆ ಎಂದು ಲಡಾಯಿ ಪ್ರಕಾಶನದ ಮುಖ್ಯಸ್ಥ, ಪ್ರಗತಿಪರ ಚಿಂತಕ ಬಸವರಾಜ ಸೂಳಿಭಾವಿ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ಹಾಗೂ ದಲಿತ, ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಈ ಮೇಳ ಏರ್ಪಡಿಸಿದ್ದು, ಸ್ವರಚಿತ ಪುಸ್ತಕಗಳಗಳೊಂದಿಗೆ ಸಾಹಿತಿಗಳ ಜಾಥಾ ಅಪೂರ್ವ ರೀತಿಯಲ್ಲಿ ನಡೆಯಲಿದ್ದು, ಸಾಹಿತಿಗಳೇ ಈ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಏ.10 ರಂದು ಮಧ್ಯಾಹ್ನ 12 ಕ್ಕೆ ಡಿಎಸ್‌ಎಸ್ ರಾಜ್ಯ ಸಂಚಾಲಕ ಮಾವಳ್ಳಿ ಶಂಖರ ಪುಸ್ತಕ ಮೇಳಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ಅಧ್ಯಕ್ಷತೆ ವಹಿಸಲಿದ್ದಾರೆ, ಮುಂಬೈನ ಖ್ಯಾತ ಲೇಖಕ ಜಿ.ವಿ. ಪವಾರ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದರು.
ಮಧ್ಯಾಹ್ನ 3 ಕ್ಕೆ ಸಾಮಾಜಿಕ ಬದ್ಧತೆ - ಪತ್ರಕರ್ತನಾಗಿ ಅನುಭವಗಳು ಎಂಬ ವಿಚಾರಗೋಷ್ಠಿ ನಡೆಯಲಿದ್ದು, ಹಿರಿಯ ಪತ್ರಕರ್ತ ಬಿ.ಎಂ. ಹನೀಫ್, ಚಂದ್ರಕಾAತ ವಡ್ಡು ವಿಚಾರ ಮಂಡಿಸಲಿದ್ದು, ಹಿರಿಯ ಪತ್ರಕರ್ತ ರಫೀ ಭಂಡಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಏ.11 ರಂದು ಶಿಕ್ಷಕ ದಂಪತಿಗಳ ಮೆರವಣಿಗೆ ಎಂಬ ವಿನೂತನ ಕಾರ್ಯಕ್ರಮ ನಡೆಯಲಿದ್ದು, ಸಾವಿತ್ರಿಬಾಯಿ ಫುಲೆ ಮಾರ್ಗದಿಂದ ಪುಸ್ತಕ ಮೇಳದ ಸ್ಥಳದವರೆಗೆ ಈ ಮೆರವಣಿಗೆ ನಡೆಯಲಿದೆ, ಮಧ್ಯಾಹ್ನ 12 ಕ್ಕೆ ಖ್ಯಾತ ಚಿಂತಕಿ ಡಾ.ಮೀನಾಕ್ಷಿ ಬಾಳಿ ದಿಕ್ಸೂಚಿ ಭಾಷಣ ಮಂಡಲಿಸದ್ದಾರೆ. ಸಂಜೆ 4 ಕ್ಕೆ ಲೇಖಕರೊಂದಿಗೆ ಸಂವಾದ ನಡೆಯಲಿದೆ, ಸಂಜೆ 6 ಕ್ಕೆ ಕವಿಗೋಷ್ಠಿ ನಡೆಯಲಿದೆ ಎಂದರು.
ಏ.12 ರಂದು ಬಸವಾದಿ ಶರಣರ ವಚನಗಳ ಪವಿತ್ರ ಕಟ್ಟುಗಳ ಮೆರವಣಿಗೆ ನಡೆಯಲಿದೆ, ನಂತರ ನಡೆಯಲಿರುವ ಉಪನ್ಯಾಸ ಕಾರ್ಯಕ್ರಮದಲ್ಲಿ ಖ್ಯಾತ ಚಿಂತಕಿ ಡಾ.ಎಚ್. ಅನುಪಮಾ ವಿಶೇಷ ಉಪನ್ಯಾಸ ನೀಡಲಿದ್ದಾರೆ, ನಂತರ ಮುದ್ರಣ ಗುಮ್ಮಟ ಎಂಬ ಪುಸ್ತಕ ಬಿಡುಗಡೆ ಹಾಗೂ ಪ್ರಶಸ್ತಿ ಪ್ರದಾನ, ಛಾಯಾಚಿತ್ರಗಳ ಪ್ರದರ್ಶನ ನಡೆಯಲಿದೆ. ಏ.13 ರಂದು ಕಾಕಾ ಕಾರಖಾನೀಸರ ಸ್ಮರಣೆ ನಡೆಯಲಿದ್ದು, ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ ಉಪನ್ಯಾಸ ಮಂಡಿಸಲಿದ್ದಾರೆ ಎಂದರು.
ಏ.14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಅರ್. ಅಂಬೇಡ್ಕರ್ ಜಯಂತ್ಯುತ್ಸವ ನಡೆಯಲಿದ್ದು, ಖ್ಯಾತ ಚಿಂತಕ ಶಿವಸುಂದರ ಪ್ರಧಾನ ಭಾಷಣ ಮಂಡಿಸಲಿದ್ದಾರೆ ಎಂದರು.
ಮುಖAಡರಾದ ರಾಜಶೇಖರ ಯಡಹಳ್ಳಿ, ಅನಿಲ್ ಹೊಸಮನಿ, ಡಾ.ದೊಡ್ಡಣ್ಣ ಭಜಂತ್ರಿ, ಚೆನ್ನು ಕಟ್ಟಿಮನಿ ಇತರರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಪೊಲೀಸ್ ದೂರು ಪ್ರಾಧಿಕಾರಕ್ಕೆ ಪ್ರತಿ ಜಿಲ್ಲೆಯಿಂದ ನಾಗರಿಕ ಸಮಾಜದಿಂದ ಕನಿಷ್ಟ 5 ಜನ ಸದಸ್ಯರ ನೇಮಕ ಮಾಡಿಕೊಳ್ಳಲು ಆಗ್ರಹ
ಈ ದಿವಸ ವಾರ್ತೆ
ವಿಜಯಪುರ : ಪೊಲೀಸ್ ದೂರು ಪ್ರಾಧಿಕಾರದ ಜಿಲ್ಲಾ ಸಮಿತಿಗೆ ಕನಿಷ್ಟ 5 ಜನ ಸದಸ್ಯರ ನೇಮಕ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯ ಅಧಿಕಾರಿ ಆರ್. ಮಹಾದೇವ ಅವರ ಕಚೇರಿ ತೆರಳಿ ಪೊಲೀಸ್ ದೂರು ಪ್ರಾಧಿಕಾರ ಆಯ್ಕೆ ನಿಯೋಗದ ಸದಸ್ಯರು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಕಾಸೌಧದ ಹಮ್ಮಿಕೊಂಡ ಸಭೆಯನ್ನು ಉದ್ದೇಶಿಸಿ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ನಾಗರಿಕ ಸಮಾಜಕ್ಕೆ ನ್ಯಾಯಸಿಗಬೇಕಾದರೆ ಒಬ್ಬರನ್ನೆ ತೆಗೆದುಕೊಂಡರೆ ನೊಂದವರಿಗೆ ನ್ಯಾಯ ಸಿಗುವುದು ದೂರದ ಮಾತಾಗಿದೆ. ಆದ್ದರಿಂದ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 5 ಜನ ನಾಗರಿಕ ಸಮಾಜವನ್ನು ತೆಗೆದುಕೊಳ್ಳಬೇಕು ಮಾನ್ಯ ಮುಖ್ಯಮಂತ್ರಿಗಳಿಗೆ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ಸಭೆ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಪರಶುರಾಮ ಶಿವಶರಣ ಮಾತನಾಡಿ, ರಾಜ್ಯದಲ್ಲಿ ತುಳಿತಕ್ಕೆ ಒಳಗಾದ ಶೋಷಿತ, ದಲಿತ ಹಿಂದುಳಿದ, ಅಲ್ಪಸಂಖ್ಯಾರಿಗೆ, ಧ್ವನಿ ಇಲ್ಲದವರಿಗೆ ನ್ಯಾಯ ಸಿಗಬೇಕಾದರೆ ಕನಿಷ್ಠ 5 ಜನರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರಿಗಳಿಗೆ ನಾಗರೀಕ ಸೇವಾ ಸಮಾಜದಿಂದ ಅರ್ಹ ಸದಸ್ಯರನ್ನು ಸಂದರ್ಶನ ಮಾಡಿರುವುದು ಸ್ವಾಗತಾರ್ಹ. ಆದರೆ ಪೊಲೀಸ್ ದೂರು ಪ್ರಾಧಿಕಾರದ ಸಮಿತಿಗೆ ಜಿಲ್ಲಾ ವಾರು ನಾಗರಿಕ ಸಮಾಜದಿಂದ ಕೇವಲ ಓರ್ವ ಸದಸ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ. ಇದು ಸಮಂಜಸ ಅಲ್ಲ. ಆದ್ದರಿಂದ ಪ್ರತಿ ಜಿಲ್ಲೆಯಿಂದ ಜಿಲ್ಳಾ ಮಟ್ಟದ ಪೊಲೀಸ್ ದೂರು ಪ್ರಾಧಿಕಾರಕ್ಕೆ ಕನಿಷ್ಠ 5 ಜನರನ್ನು ಆಯ್ಕೆ ಮಾಡಿಕೊಳ್ಳಬೇಕು. ಏಕೆಂದರೆ, ಪೊಲೀಸ್ ಇಲಾಖೆ ಸಿಬ್ಬಂಧಿ ಅಧಿಕಾರಿಗಳಿಂದ ದೌರ್ಜನ್ಯಕ್ಕೆ, ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿ ಕೊಡುವುದು ದೂರದ ಮಾತು.
ಈ ಸಂದರ್ಭದಲ್ಲಿ ಹರಿಕೃಷ್ಣ ರಾವ, ಬಸರಾಜ ಮೈಸೂರು, ಸಬಿ ಐ.ಆರ್., ಎಂ. ಮಹದೇವಸಾಬ, ದೀಪಕ ಟಿ, ನಾಗರಾಜ ಆರ್., ಮಂಜು ಟಿ, ಶ್ರೇಯಶ ಕುಮಾರ, ಎಸ್. ಮಲ್ಲೇಶಪ್ಪ ಸೇರಿದಂತೆ ರಾಜ್ಯದ ಎಲ್ಲ 70 ಜನ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
.jpg)

