Sunday, April 12, 2026

ಬುದ್ಧ ಬಸವ ಅಂಬೇಡ್ಕರ್ ಅಗ್ರಗಣ್ಯ ಸಾಲಿನಲ್ಲಿ ನಿಲ್ಲುವ ಸಮಾಜ ಸುಧಾರಕರು -ಮಹೇಶ ಪೋದಾರ

ವಿಜಯಪುರ : ಬುದ್ಧ ಬಸವ ಡಾ ಬಿ ಆರ್ ಅಂಬೇಡ್ಕರ್ ಅವರು ಭಾರತ ದೇಶದ ಸಮಾಜ ಸುಧಾರಕರಲ್ಲಿ ಅಗ್ರಗಣ್ಯ ಸಾಲಿನಲ್ಲಿ ನಿಲ್ಲುತ್ತಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶರಾದ ಮಹೇಶ ಪೋದಾರ ಹೇಳಿದರು.

ವಿಜಯಪುರ :ಅವರು ವಿಜಯಪುರ ನಗರದ ದರಾಬಾರ್ ಪ್ರೌಢ ಶಾಲೆ ಮೈದಾನದಲ್ಲಿ ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಏಪ್ರಿಲ್ 10ರಿಂದ 14ರ ವರೆಗೆ 5ದಿನಗಳ ಕಾಲ ಹಮ್ಮಿಕೊಂಡಿರುವ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ಅಂಗವಾಗಿ ಬಸವೇಶ್ವರ ವೃತ್ತದಿಂದ ವೇದಿಕೆ ವರೆಗೆ ನಡೆದ ಮೆರವಣಿಗೆಗೆ ಚಾಲನೆ ಕೊಟ್ಟು ಮಾತನಾಡಿದರು.


ಮೆರವಣಿಗೆ ನೇತೃತ್ವ ವಹಿಸಿ ವಿದ್ಯಾರಣಿ ತುಂಗಳ ಅವರು ಮಾತನಾಡಿ ಮಹಿಳೆಯರು ಇಂದು ಅರಿವಿಲ್ಲದೆ ಅನುಭವಿಸುತ್ತಿರುವ ಸ್ವಾತಂತ್ರ್ಯಕ್ಕೆ ಡಾ ಬಿ ಆರ್ ಅಂಬೇಡ್ಕರ್ ಅವರು ಕಾರಣವಾಗಿದ್ದರೆ  ನಾವು ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ಸಾಗಬೇಕಿದೆ ಎಂದು ಹೇಳಿದರು.
ಜಾಥಾಕ್ಕೆ ಚಾಲನೆ ನೀಡಿ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಮಗು ಯಾದವಾಡ ಹಾಗೂ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ವಿ ಸಿ ನಾಗಠಾಣ ಮಾತನಾಡಿ ಬುದ್ದ ಬಸವ ಅಂಬೇಡ್ಕರ್ ಹೆಸರಲ್ಲಿ ಪುಸ್ತಕ ಮೇಳ ಹಮ್ಮಿಕೊಂಡಿರುವುದು ಸ್ವಾಗತಾರ್ಹವಾದುದು.
ಮೆರವಣಿಗೆಯುದ್ಧಕ್ಕೂ ಬುದ್ದ ಬಸವ ಅಂಬೇಡ್ಕರ್ ಹಾಗೂ ಬಸವಾದಿ ಶರಣರಿಗೆ ಜಯಘೋಷ ಮೊಳಗಿದವು.
ಮೆರವಣಿಗೆಯಲ್ಲಿ ಚಂದ್ರಶೇಖರ  ಗಂಟೆಪ್ಪಗೋಳ, ನಾಗರಾಜ ಲಂಬು, ಬಸವರಾಜ ಸೂಳಿಬಾವಿ, ಅನಿಲ ಹೊಸಮನಿ, ಚೆನ್ನು ಕಟ್ಟಿಮನಿ, ಸುರೇಶ ಬಿಜಾಪುರ, ಜಗದೇವ ಸೂರ್ಯವಂಶಿ, ಬಸನಗೌಡ ಹರನಾಳ ,ದಾನೇಶ ಅವಟಿ, ಜೆ ಎಸ್ ಪಾಟೀಲ, ನೀಲಾಂಬಿಕಾ ಬಿರಾದಾರ , ಪ್ರಭುಗೌಡ ಪಾಟೀಲ, ಸಂಘರ್ಷ ಹೊಸಮನಿ , ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ,  ಶರಣು ಕಿರಣಗಿ, ಅಕ್ಷಯ ಅಜಮನಿ, ಗೌಡಪ್ಪ ಬಡಿಗೇರ ಸೇರಿ ನೂರಾರು ಜನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಬಸವಣ್ಣ ಜಗತ್ತಿನ ಮೊದಲ ಪ್ರಜಾಪ್ರಭುತ್ವವಾದಿಯಾಗಿದ್ದಾರೆ : ಡಾ ಎಚ್ ಎಸ್ ಅನುಪಮಾ


(ಹರ್ಡೇಕರ ಮಂಜಪ್ಪ, ಡಾ ಫ.ಗು ಹಳಕಟ್ಟಿ, ಕುಮಾರ ಕಕ್ಕಯ್ಯ ಪೋಳ ವೇದಿಕೆ) ವಿಜಯಪುರ : ಶರಣ ಸಂಕುಲ ಅಂದರೆ ಜಾತಿ ವರ್ಣ ರಹಿತವಾಗಿ ಎಲ್ಲರನ್ನು ಒಳಗೊಳ್ಳುವಿಕೆಯಾಗಿದೆ ನುಡಿಯಲ್ಲಿ ಒಂದಾಗಿರುವ ಬಸವಾದಿ ಶರಣರ ತತ್ವಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕಾಗಿದೆ ಜಗತ್ತಿನಲ್ಲಿ ಕಾಯಕದ ಹೆಸರಲ್ಲಿ ಇರುವ ಏಕೈಕ ಧರ್ಮವೆಂದರೆ ಶರಣ ಧರ್ಮ, ಬಸವಣ್ಣ ಜಗತ್ತಿನ ಮೊದಲ ಪ್ರಜಾಪ್ರಭುತ್ವವಾದಿಯಾಗಿದ್ದಾರೆ, ಸಮಾಜಕ್ಕೆ ಇಂದು ಬಸವಾದಿ ಶರಣರ ಸಮಾಜಕ್ಕೆ ಅನಿವಾರ್ಯವಾಗಿದೆ ಹಿರಿಯ ಸಾಹಿತಿ ಡಾ. ಎಚ್.ಎಸ್. ಅನುಪಮಾ ಅವರು ಹೇಳಿದರು.

ಅವರು ವಿಜಯಪುರ ನಗರದ ದರಾಬಾರ್ ಪ್ರೌಢ ಶಾಲೆ ಮೈದಾನದಲ್ಲಿ ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಏಪ್ರಿಲ್ 10ರಿಂದ 14ರ ವರೆಗೆ 5ದಿನಗಳ ಕಾಲ ಹಮ್ಮಿಕೊಂಡಿರುವ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದಲ್ಲಿ ಮೂರನೇ ದಿನದ ಮೊದಲ ಗೋಷ್ಠಿ ಬಸವಾನುಯಾಯಿಗಳ ಸಮಾವೇಶದಲ್ಲಿ ಮುಖ್ಯ ಉಪನ್ಯಾಸ ನೀಡಿ ಮಾತನಾಡಿದರು.
ವಚನ ಪಿತಾಮಹ ಫ ಗು ಹಳಕಟ್ಟಿ ತಮ್ಮ ಮನೆ ಮಾರಿ ಬಸವಾದಿ ಶರಣರ ವಚನಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಣೆ ಮಾಡಿ ಶರಣ ಸಾಹಿತ್ಯವನ್ನು ನಮಗೆ ಕೊಟ್ಟಿದ್ದಾರೆ ಅವರ ತ್ಯಾಗ ನಮಗೆಲ್ಲ ಸ್ಫೂರ್ತಿಯಾಗಿದೆ ಎಂದರು.
ಆಧುನಿಕ ಸಾಹಿತ್ಯದಲ್ಲಿ ಕುಮಾರ ಕಕ್ಕಯ್ಯ ಪೋಳ ಕಾವ್ಯ ನಾಮದಲ್ಲಿ ಸಾಹಿತ್ಯ ರಚನೆ ಮಾಡಿ ಸಮಾಜದ ಅಂಕುಡೊಂಕು ತಿದ್ದಿದ ಬಿ ಎಸ್  ಪೋಳ ನಮಗೆ ಮಾದರಿಯಾಗಿದ್ದಾರೆ ಶರಣರ ಮಾರ್ಗದಲ್ಲಿ ನಾವು ಸಾಗಬೇಕಾದರೆ ಮೊದಲು ಪ್ರತಿಯೊಬ್ಬರೂ ತಮ್ಮ ಜಾತಿ ವರ್ಗವನ್ನು ಮರೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಹಿರಿಯ ಸಾಹಿತಿ ಜೆ ಎಸ್ ಪಾಟೀಲ ಅವರು ಮಾತನಾಡಿ ಕರ್ನಾಟಕದಲ್ಲಿ ಬ್ರಾಹ್ಮಣೇತರ ಚಳುವಳಿ ನೇತೃತ್ವ ವಹಿಸಿಕೊಂಡವರು ಡಾ ಫ.ಗು ಹಳಕಟ್ಟಿಯವರು ಅದನ್ನು ನಮ್ಮ ಇತಿಹಾಸಕಾರರು ಮರೆತ್ತಿದ್ದಾರೆ ಎಂದು ಹೇಳಿದರು.

ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ವಿ ಸಿ ನಾಗಠಾಣ ಅವರು ಮಾತನಾಡಿ ಅಂಬೇಡ್ಕರ್ ಅವರು ಸಾಕಷ್ಟು ಅಧ್ಯಯನ ಮಾಡಿ ಭಾರತದಲ್ಲಿ ಜನ್ಮ ತಳೆದ ಬೌದ್ಧ ಧರ್ಮ ಸ್ವೀಕಾರ ಮಾಡಿದ್ದಾರೆ, ಬುದ್ಧ ಬಸವ ಅಂಬೇಡ್ಕರ್ ಸಮಾನತೆಗಾಗಿ  ಹೋರಾಟ ಮಾಡಿದ್ದಾರೆ ಮೂರು ಜನ ದಾರ್ಶನಿಕರು  ಮಾನವ ಜನಾಂಗಕ್ಕೆ ಮಾದರಿಯಾಗಿದ್ದಾರೆ ಬಸವಣ್ಣನ ಕಾಯಕ ತತ್ವ ಅಳವಡಿಸಿಕೊಂಡರೆ ದೇಶಕ್ಕೆ ಕಾಡುತ್ತಿರು ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತದೆ ಎಂದು ಹೇಳಿದರು.
ಭಾರತೀಯ ಬೌದ್ದ ಮಹಾಸಭಾದ ಕಾರ್ಯದರ್ಶಿ ಬಸವರಾಜ ಹೋಳ್ಕರ್ ಅವರು ಮಾತನಾಡಿ
ಸಮಾಜದಲ್ಲಿನ ಅಸಮಾನತೆ ಅಂಧಕಾರ ಅಳಸಿ ಹಾಕಲು ಇಂದು ಪುಸ್ತಕ ಮೇಳಗಳ ಅವಶ್ಯಕತೆಯಿದೆ ಎಂದರು.
ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸನಗೌಡ ಹರನಾಳ ಅವರು ಮಾತನಾಡಿ ಅಂಬೇಡ್ಕರ್ ಮತ್ತು ಫ. ಗು ಹಳಕಟ್ಟಿ ಅವರು ಬಸವಣ್ಣನಷ್ಟೇ ಕೆಲಸ ಮಾಡಿದ್ದಾರೆ, ಅವರ ಹೆಸರಲ್ಲಿ ನಡೆಯುತ್ತಿರುವ ಪುಸ್ತಕ ಮೇಳದಲ್ಲಿ ಪ್ರತಿಯೊಬ್ಬರು ಪುಸ್ತಕ ಖರೀದಿ ಮಾಡುವ ಮೂಲಕ ಜ್ಞಾನದ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ರಾಷ್ಟ್ರೀಯ ಬಸವ ಸೈನ್ಯ ಅಧ್ಯಕ್ಷ ಶಂಕರಗೌಡ ಬಿರಾದಾರ ಅವರು ಮಾತನಾಡಿದರು
ಚಂದ್ರಶೇಖರ ಗಂಟೆಪ್ಪಗೋಳ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಕುಡಿಸಿಕೊಂಡು ಮೇ ಸಾಹಿತ್ಯ ಬಳಗದವರು ಪುಸ್ತಕ ಮೇಳ ವೈಚಾರಿಕ ಕಾರ್ಯಕ್ರಮ ಹಮ್ಮಿಕೊಂಡಿರುವುದು  ಔಚಿತ್ಯವಾಗಿದೆ ಎಂದು ಹೇಳಿದರು.
ವೇದಿಕೆಯಲ್ಲಿ ನಾಗರಾಜ ಲಂಬು, ಜಗದೇವ ಸೂರ್ಯವಂಶಿ, ಅಭಿಷೇಕ ಚಕ್ರವರ್ತಿ, ದಾನೇಶ ಅವಟಿ, ಜಂಬುನಾಥ ಕಂಚ್ಯಾಣಿ, ಮಿಲನಕುಮಾರ ನಾಮದಾರ, ಪ್ರಭುಗೌಡ ಪಾಟೀಲ ಇದ್ದರು.
ಕಾರ್ಯಕ್ರಮದಲ್ಲಿ ಬಸವರಾಜ ಸೂಳಿಬಾವಿ, ಅನಿಲ ಹೊಸಮನಿ, ಚೆನ್ನು ಕಟ್ಟಿಮನಿ, ವೈ ಎಸ್ ಗುಣಕಿ, ಸಂಘರ್ಷ ಹೊಸಮನಿ, ಸುರೇಶ ಬಿಜಾಪುರ, ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ, ಶಿವು ಕಟ್ಟಿಮನಿ, ಬೋಗೇಶ ಸೋಲಾಪುರ, ಅಪ್ಪಸಾಹೇಬ ಯರನಾಳ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.