ವಿಜಯಪುರ : ಹೈದ್ರಾಬಾದ್ ವಿಮೋಚನಾ ಚಳುವಳಿ ಪಿತಾಮಹ ರಾಷ್ಟ್ರವೀರ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್ 3 ರಂದು ರಾಜ್ಯಾಧ್ಯಂತ ಎಲ್ಲ ಶಾಲಾ ಕಾಲೇಜು ಹಾಗೂ ಸರಕಾರಿ ಕಚೇರಿಗಳಲ್ಲಿ ಸರಕಾರದಿಂದ ಜಯಂತಿ ಆಚರಣೆ ಮಾಡಲು ಆಗ್ರಹಿಸಿ ವಿಜಯಪುರ ಜಿಲ್ಲಾ ಸಂಘ ಸಂಸ್ಥೆಗಳ ಒಕ್ಕೂಟದವತಿಯಿಂದ ವಿಜಯಪುರ ಜಿಲ್ಲಾಧಿಕಾರಿ ಕೆ ಆನಂದ ಅವರ ಮೂಲಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂಬಿ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಸಂಘ -ಸಂಸ್ಥೆಗಳ ಒಕ್ಕೂಟದ ಮುಖಂಡರಾದ ವಿನೋದ ಖೇಡ ಅವರು ಸ್ವಾಮಿ ರಾಮಾನಂದ ತೀರ್ಥರೆಂದು ಹೆಸರುವಾಸಿಯಾದ ವೆಂಕಟರಾವ ಖೇಡಗೀಕರ ಅವರು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ 3 ಅಕ್ಟೋಬರ್ 1903 ಜನಿಸಿದ ಅವರು ಭಾರತದ ಸ್ವಾತಂತ್ರö್ಯ ಸಂಗ್ರಾಮ ಹಾಗೂ ಹೈದರಾಬಾದ್ ಸಂಸ್ಥಾನದ ವಿಮೋಚನಾ ಹೋರಾಟದ ಮಹಾನಾಯಕರಾಗಿ ಸಲ್ಲಿಸಿರುವ ಸೇವೆ ಅಮೋಘವಾಗಿದೆ. ರಾಜ್ಯ ಸರಕಾರ ಅವರ ಜನ್ಮದಿನವಾದ ಅಕ್ಟೋಬರ್ 3ನ್ನು ಸರಕಾರಿ ಜಯಂತಿಯಾಗಿ ಆಚರಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡ ಪಾಟೀಲ ಮುಖಂಡ ಅನಿಲ ಇಕ್ಕಡೆ ಅವರು ಮಾತನಾಡಿ ಹೈದರಾಬಾದ್ ರಾಜ್ಯ ಕಾಂಗ್ರೆಸ್ ನೇತೃತ್ವ ವಹಿಸಿ, ಪ್ರಾಣದ ಹಂಗು ತೊರೆದು ಹೋರಾಡಿದ ಮಹಾನ್ ಕ್ರಾಂತಿಕಾರಿ ಹಾಗೂ ವೀರ ಸನ್ಯಾಸಿ ಸ್ವಾಮಿ ರಾಮಾನಂದ ತೀರ್ಥರಾಗಿದ್ದಾರೆ ಅವರ ಸತ್ಯಾಗ್ರಹ ಮತ್ತು ಅಪ್ರತಿಮ ನಾಯಕತ್ವದ ಫಲವಾಗಿ ಕಲ್ಯಾಣ ಕರ್ನಾಟಕ ಸೇರಿದಂತೆ ಇಡೀ ಹೈದರಾಬಾದ್ ಪ್ರಾಂತ್ಯವು ಭಾರತ ಒಕ್ಕೂಟಕ್ಕೆ ಸೇರ್ಪಡೆಯಾಗಲು ಸಾಧ್ಯವಾಗಿದೆ ಸರಕಾರ ಅವರ ಜನ್ಮ ದಿನವನ್ನು ಸರಕಾರಿ ಜಯಂತಿಯಾಗಿ ಆಚರಣೆ ಮಾಡಿ ಗೌರವ ಸಲ್ಲಿಸಬೇಕು ಎಂದರು.
ಈ ಸಂದರ್ಭ ವಿಜಯಪುರ ಜಿಲ್ಲಾ 371 ಜೆ ಹೋರಾಟಗಾರ ಇತಿಹಾಸ ಸಂಶೋಧಕ ಲಾಯಪ್ಪ ಇಂಗಳೆ ಅವರು ಮಾತನಾಡಿ, ಹೈದ್ರಾಬಾದ್ ವಿಮೋಚನಾ ಚಳುವಳಿಯ ಅಗ್ರಗಣ್ಯ ನಾಯಕರಾದ ಸ್ವಾಮಿ ರಾಮಾನಂದ ತೀರ್ಥರು ಶಿಕ್ಷಣ ತಜ್ಞರಾಗಿ, ಕಾರ್ಮಿಕ ನಾಯಕರಾಗಿ ಹಾಗೂ ಸಮಾಜದ ಹಿಂದುಳಿದ ವರ್ಗಗಳ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನೇ ಧಾರೆಯೆರೆದು ರಾಷ್ಟ್ರವೀರ ಎಂದು ಹೆಸರುವಾಸಿಯಾಗಿದ್ದಾರೆ. ಅಂತಹ ಧೀಮಂತ ನಾಯಕರ ದೇಶಭಕ್ತಿ ಮತ್ತು ಆದರ್ಶಗಳು ಇಂದಿನ ಯುವ ಪೀಳಿಗೆಗೆ ಅತ್ಯಂತ ಪ್ರೇರಣಾದಾಯ ಕವಾಗಿವೆ ಆಂಧ್ರಪ್ರದೇಶ, ತೆಲಂಗಾಣ ಸರಕಾರಗಳು ಸ್ವಾಮಿ ರಾಮಾನಂದ ತೀರ್ಥರ ಹೆಸರಲ್ಲಿ ಸ್ಮಾರಕ, ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಿ ಅವರನ್ನು ಗೌರವಿಸುವ ಕಾರ್ಯ ಮಾಡಿವೆ. ಮಹಾರಾಷ್ಟ್ರ ಸರಕಾರವು ನಾಂದೇಡದಲ್ಲಿ ಸ್ವಾಮಿ ರಾಮಾನಂದ ತೀರ್ಥ ಮರಾಠವಾಡ ವಿಶ್ವವಿದ್ಯಾಲಯವನ್ನು ಸ್ಥಾಪಿಸಿ ಅವರು ದೇಶದ ಸ್ವಾತಂತ್ರö್ಯ ಚಳುವಳಿಗೆ ನೀಡಿದ ಕೊಡುಗೆಯನ್ನು ಗೌರವಿಸಿದೆ ಎಂದು ಹೇಳಿದ ಅವರು ಸರಕಾರದ ವತಿಯಿಂದ ಅವರ ಜಯಂತಿಯನ್ನು ಆಚರಿಸಿ ಅವರ ಸೇವೆಯನ್ನು ಸ್ಮರಿಸುವ ಕಾರ್ಯ ಸರಕಾರ ಮಾಡಬೇಕು ಎಂದು ಹೇಳಿದರು.
ಮುಖಂಡರಾದ ಅಶೋಕ ಅಲ್ಲಾಪುರ ಜಗದೇವ ಸೂರ್ಯವಂಶಿ, ಎನ್ ಸುರೇಶಕುಮಾರ ಅವರು ಮಾತನಾಡಿ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜನಸಿ ಹೈದರಾಬಾದ್ ವಿಮೋಚನಾ ಚಳುವಳಿ ನೇತೃತ್ವ ವಹಿಸಿದ ಅಗ್ರಗಣ್ಯ ನಾಯಕರಾದ ಸ್ವಾಮಿ ರಾಮಾನಂದ ತೀರ್ಥರ ಜನ್ಮಸ್ಥಳ ಸಿಂದಗಿಯಲ್ಲಿರುವ ರಾಷ್ಟ್ರವೀರ ಸ್ವಾಮಿ ರಾಮಾನಂದ ತೀರ್ಥರ ವೀರಸೌಧವನ್ನು ರಾಷ್ಟ್ರೀಯ ಸ್ಮಾರಕವಾಗಿ ಅಭಿವೃದ್ಧಿಪಡಿ ಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜೆಲ್ಲೆಯ ಸಂಘ -ಸಂಸ್ಥೆಗಳ ಮುಖಂಡರಾದ ಮಲ್ಲನಗೌಡ ಪಾಟೀಲ (ಬರಟಗಿ ), ಪ್ರದೀಪ ದೇಶಪಾಂಡೆ, ಕಲ್ಲಪ್ಪ ಶಿವಶರಣ, ಅಂಬಣ್ಣ ಗುನ್ನಾಪುರ, ರಾಜು ತಡಲಗಿ, ಸಂತೋಷ ಕಲಗುಡಿ, ರಾಜು ಕುಮಟಗಿ, ಆರ್.ಎಂ.ಮಣೂರ, ಅಶೋಕ ಚೋಳಕೆ, ಅಯೂಬಖಾನ ನದಾಫ್,ಮೊಹ್ಮದ್ ಬಾಗವಾನ, ಎಂ ಎಂ ಹಂಗರಗಿ, ಸಂಗನಗೌಡ ಪಾಟೀಲ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
.jpg)
.jpeg)