Saturday, September 26, 2026

ಪ್ರವಾಸೋದ್ಯಮದಿಂದ ಉದ್ಯೋಗಾವಕಾಶ ಸೃಷ್ಟಿ ಕಾನೂನು, ಸುವ್ಯವಸ್ಥೆ ಎಡಿಜಿಪಿ -ಆರ್. ಹಿತೇಂದ್ರ ವಿಜಯಪುರದಲ್ಲಿ ಆಕರ್ಷಕ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಐತಿಹಾಸಿಕ ಸ್ಮಾರಕಗಳ ಸ್ವಚ್ಛತೆಗೆ ಸ್ವಚ್ಛತಾ ಹೀ ಸೇವಾ ಆಂದೋಲನ ಇಬ್ರಾಹಿA ರೋಜಾದಲ್ಲಿ ಕಲಾವಿದರಿಗೆ ಆಕರ್ಷಕ ಚಿತ್ರಕಲಾ ಶಿಬಿರ


ವಿಜಯಪುರ : ವಿಜಯಪುರದ ಐತಿಹಾಸಿಕ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವುದರಿಂದ ಜಿಲ್ಲೆಯ ಆರ್ಥಿಕತೆಗೆ ಬಲ ಬರುವುದಲ್ಲದೇ, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ಹೇಳಿದರು.

ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026ರ ಅಂಗವಾಗಿ ಡಿಜಿಟಲ್ ಕಾರ್ಯಸೂಚಿ ಮತ್ತು ಕೃತಕ ಬುದ್ಧಿಮತ್ತೆ ಬಳಸಿ ಪ್ರವಾಸೋದ್ಯಮದ ಮರುಸೃಷ್ಟಿ ಎಂಬ ಧ್ಯೇಯಯವಾಕ್ಯದೊಂದಿಗೆ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಪುರಾತತ್ವ, ವಸ್ತುಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ, ಕೂಡಗಿ ಎನ್.ಟಿ.ಪಿ.ಸಿ ಕೂಡಗಿ, ಹೋಟೆಲ್ ಅಸೋಸಿಯೇಷನ್ ವಿಜಯಪುರ ಹಾಗೂ ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಗರದ ಐತಿಹಾಸಿಕ ಆನಂದ ಮಹಲ್ ಸ್ಮಾರಕದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಗರದಲ್ಲಿರುವ ಸ್ಮಾರಕಗಳಿಂದಾಗಿ ವಿಜಯಪುರ ವಿಶ್ವ ಪ್ರಸಿದ್ಧಿ ಪಡೆದಿದೆ.ಪ್ರವಾಸಿಗರನ್ನು ಆಕರ್ಷಿಸಿ, ಈ ಕ್ಷೇತ್ರದಲ್ಲಿ ವಿಪುಲ ಉದ್ಯೋಗಾವಕಾಶಗಳು ತೆರೆದುಕೊಳ್ಳಲಿವೆ ಎಂದರು.

ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಮಾತನಾಡಿ, ವಿಜಯಪುರ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಮಾರಕಗಳ ಸಂರಕ್ಷಣೆ, ಸೌಂದರ್ಯೀಕರಣ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ವಿವಿಧ ಯೋಜನೆಗಳ ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.ಸ್ವದೇಶ ದರ್ಶನ ಯೋಜನೆ-2.0ರಡಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಸ್ಮಾರಕ ದತ್ತು ಯೋಜನೆಯಡಿ ಐತಿಹಾಸಿಕ ತಾಜಬಾವಡಿ ಸ್ಮಾರಕವನ್ನು ಟಾಟಾ ಕನ್ಸಲ್ಟೆನ್ಸಿ ಫೌಂಡೇಷನ್ ಹಾಗೂ ವರ್ಲ್ಡ್ ಮಾನ್ಯುಮೆಂಟ್ ಫಂಡ್ಸ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದ ಅವರು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದಲೂ ಜಿಲ್ಲೆಯ ವಿವಿಧ ಸ್ಮಾರಕಗಳ ಸಂರಕ್ಷಣಾ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯ ಪ್ರವಾಸಿ ತಾಣಗಳ ಸಮಗ್ರ ಮಾಹಿತಿಯನ್ನು ಒಳಗೊಂಡ ಆ್ಯಪ್ ಸಿದ್ಧಪಡಿಸಲಾಗಿದ್ದು, ಪ್ರವಾಸಿಗರಿಗೆ ಅಗತ್ಯ ಮಾಹಿತಿಯನ್ನು ಸುಲಭವಾಗಿ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮದ ಮಹತ್ವ ಹಾಗೂ ಐತಿಹಾಸಿಕ ಪರಂಪರೆಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಎನ್‌ಟಿಪಿಸಿ ಕೂಡಗಿ ಸಂಸ್ಥೆಯ ಸಂತೋಷ್ ತಿವಾರಿ ಮಾತನಾಡಿ, ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಕಲಾ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವ ಅಗತ್ಯವಿದೆ ಎಂದ ಅವರು, ಕಲಾವಿದರು ರಚಿಸಿದ ಕಲಾಕೃತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಆನಂದ ಮಹಲ್ ಸ್ಮಾರಕದ ಆವರಣದಲ್ಲಿ ಸ್ವಚ್ಛತಾ ಹೀ ಸೇವಾ ಆಂದೋಲನದಡಿ ಸ್ಮಾರಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಅರವಿಂದ ಹೂಗಾರ ಅವರು ಚಾಲನೆ ನೀಡಿದರು.

ಜೊತೆಗೆ ಎನ್.ಟಿ.ಪಿ.ಸಿ ಕೂಡಗಿ ಮತ್ತು ಕ್ಯಾನವಾಸ್ ಆರ್ಟ್ ಫೌಂಡೇಶನ್ ಸಹಯೋಗದಲ್ಲಿ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ ಆವರಣದಲ್ಲಿ ಹಿರಿಯ ಹಾಗೂ ಉದಯೋನ್ಮುಖ ಕಲಾವಿದರಿಗಾಗಿ ಆಕರ್ಷಕ ಚಿತ್ರಕಲಾ ಶಿಬಿರ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಸ್ವತಃ ಕಲಾಕೃತಿ ಬಿಡಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಎನ್‌ಟಿಪಿಸಿ ಕಾರ್ಪೊರೇಟ್ ಸಂಪರ್ಕಾಧಿಕಾರಿ ಪೂಜಾ ಪಾಂಡೆ, ಡಿಜಿಎಂ ಜಯದೀಪ ತುಶಾರ, ಎಎಸ್ಐ ಸಹಾಯಕ ಸಂರಕ್ಷಣಾಧಿಕಾರಿ ವಿಜಯಕುಮಾರ, ಎಚ್.ಆರ್. ಮುಖ್ಯಸ್ಥ ಎಸ್.ವಿ.ಡಿ. ರವಿಕುಮಾರ, ಹೋಟೆಲ್ ಅಸೋಸಿಯೇಷನ್ ಕಾರ್ಯದರ್ಶಿ ವಿಜಯಕುಮಾರ ದೋಣಿ, ಡಿ.ಪಿ. ಜಾಧವ್, ಪೀಟರ್ ಅಲೆಕ್ಸಾಂಡರ್, ಅಮೀನ ಹುಲ್ಲೂರ, ಬಿ.ಎಲ್.ಡಿ.ಇ ಸಂಸ್ಥೆಯ ಪ್ರೊ. ವೈ. ತಮ್ಮಣ್ಣ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿ ಲಾರೆನ್ಸ್, ಮಹಾನಗರ ಪಾಲಿಕೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ, ಪ್ರವಾಸಿ ಮಾರ್ಗದರ್ಶಿಗಳು, ಇಲಾಖೆಯ ಅಧಿಕಾರಿಗಳು, ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಪ್ರವಾಸೋÃದ್ಯಮ ಇಲಾಖೆಯ ಉಪನಿರ್ದೇಶಕರು ಅರವಿಂದ ಹೂಗಾರ ಸ್ವಾಗತಿಸಿದರು. ಕಲಾವಿದ ರಮೇಶ ಚವ್ಹಾಣ ನಿರೂಪಿಸಿದರು.

ಚಿತ್ರಕಲಾ ಶಿಬಿರದಲ್ಲಿ ಕಲಾವಿದರಾದ ಪಿ.ಎಸ್. ಕಡೇಮನಿ, ವಿದ್ಯಾಧರ ಸಾಲಿ, ಬಿ.ಎಸ್. ಪಾಟೀಲ, ವಿ.ವಿ. ಹಿರೇಮಠ, ರಮೇಶ ಚವ್ಹಾಣ, ಶಿವಣ್ಣ ಗೊಳಸಂಗಿ, ಎ.ಎಸ್. ಕಾಖಂಡಕಿ, ಜಿ.ಎಸ್. ಭೂಸಗೊಂಡ, ಶಿವು ಹೂಗಾರ, ಸವಿತಾ ಮಾನೆ, ವಿಶ್ವನಾಥ್ ಹಂಡಿ, ಶಿವಾನಂದ ಅಥಣಿ, ಸಿದ್ದು ಬಳೂಲಗಿಡದ, ಮಲ್ಲಿಕಾರ್ಜುನ್ ಚಿಂಚೋಳಿ, ರಾಘವೇಂದ್ರ ಪಾಟೀಲ, ಕೃಷ್ಣ ಬಡಿಗೇರ, ಗಂಗಾಧರ ಮಾಯಾಚಾರಿ, ಅಮಿತ ಕಮ್ಮಾರ, ವಿಶ್ವನಾಥ್ ಎಚ್.ಎಂ., ಶ್ರೀಶೈಲ ಹೂಗಾರ, ಗಿರಿಜಾ ಬಿರಾದಾರ, ಆನಂದ್ ಹೂಗಾರ, ಅಶೋಕ ನೆಲ್ಲಗಿ, ಜಿ.ವಿ. ಹಂಪಣ್ಣವರ ಹಾಗೂ ವೈಷ್ಣವಿ ಚವ್ಹಾಣ ಸೇರಿದಂತೆ 25ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸ್ವಾಮಿ ರಾಮಾನಂದ ತೀರ್ಥರ ಜನ್ಮ ಸ್ಮಾರಕ ವೀರಸೌಧಕ್ಕೆ ಅಧಿಕಾರಿಗಳ ಭೇಟಿ

ಸಿಂದಗಿ : ಹೈದ್ರಾಬಾದ್ ವಿಮೋಚನಾ ಚಳುವಳಿ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್ 3 ರಂದು ಸರಕಾರಿ ಜಯಂತಿ ಆಚರಣೆ ಹಾಗೂ ಅವರ ಜನ್ಮ ಸ್ಮಾರಕ ವೀರಸೌಧ ಅಭಿವೃದ್ಧಿಪಡಿಸಲು ಇಂದು  ವಿಜಯಪುರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಹಾಗೂ ಅಧಿಕಾರಿಗಳು  ಸ್ಮಾರಕಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಸಂಘ -ಸಂಸ್ಥೆಗಳ ಒಕ್ಕೂಟದ ಮುಖಂಡ  , ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡ ಪಾಟೀಲ ಅವರು ಮಾತನಾಡಿ ಹೈದ್ರಾಬಾದ್ ವಿಮೋಚನಾ ಚಳುವಳಿ ನಾಯಕ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನ ಅಕ್ಟೋಬರ್ 3 ರ ಒಳಗೆ ಸ್ಮಾರಕವನ್ನು ಅಭಿವೃದ್ಧಿಪಡಿಸಿ ಸರಕಾರದಿಂದಲೇ ಜಯಂತಿ ಆಚರಣೆ ಮಾಡಿ ರಾಮಾನಂದ ತೀರ್ಥರಿಗೆ ಗೌರವ ಸಲ್ಲಿಸಬೇಕು ಎಂದು ಮನವಿ ಮಾಡಿದರು.

ಹೈದ್ರಾಬಾದ್ ವಿಮೋಚನಾ ಚಳುವಳಿ ಪಿತಾಮಹ ಸ್ವಾಮಿ ರಾಮಾಂನಂದ ತೀರ್ಥರ ಜನ್ಮ ದಿನವಾದ ಅಕ್ಟೋಬರ್ 3ರಂದು ಸರಕಾರಿ ಜಯಂತಿ ಆಚರಣೆ ಮಾಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾ ಸಂಘ -ಸಂಸ್ಥೆಗಳ ಒಕ್ಕೂಟದ ಮುಖಂಡರು ಹೋರಾಟಗಾರರಾದ ವಿನೋದ ಖೇಡ, ಲಾಯಪ್ಪ ಇಂಗಳೆ,ಅನಿಲ ಇಕ್ಕಡೆ, ಎನ್ ಸುರೇಶಕುಮಾರ ಸೇರಿದಂತೆ ಹಲವು ಮುಖಂಡರ ನೇತೃತ್ವದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ ಬಿ ಪಾಟೀಲ,  ಜಿಲ್ಲಾಧಿಕಾರಿ  ಆನಂದ ಕೆ  ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ  ಮನವಿ ಸಲ್ಲಿಸಿ  ಆಗ್ರಹಿಸಿದ್ದರು. ಜೊತೆಗೆ ಸೆಪ್ಟೆಂಬರ್ 17ರಂದು ವೀರಸೌಧದಲ್ಲಿ ವಿಜಯಪುರ ಜಿಲ್ಲಾ 371 ಜೆ ಹೋರಾಟ ಸಮಿತಿಯಿಂದ ಹೈದ್ರಾಬಾದ್ ವಿಮೋಚನಾ ದಿನ ಆಚರಿಸಿದ್ದರು.

ಸ್ಮಾರಕ ವೀಕ್ಷಣೆ ಮಾಡಿದ ಸಂತೋಷ ಭೋವಿ ಅವರು ಸರಕಾರದಿಂದ ಜಯಂತಿ ಆಚರಣೆ ಹಾಗೂ ವೀರಸೌಧದ ಅಭಿವೃದ್ಧಿಗೆ ಸರಕಾರದಿಂದ ಅಗತ್ಯ ಕ್ರಮತೆಗೆದುಕೊಳ್ಳಲು ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ರವಿ ಶಿರಗುಪ್ಪಿ,ಸ್ವಾಮಿ ರಾಮಾನಂದ ತೀರ್ಥರ ವಂಶಸ್ಥರಾದ ರಂಗರಾವ ಖೇಡಗಿಕರ, ಅಶೋಕ ಅಲ್ಲಾಪುರ, ಪ್ರದೀಪ ದೇಶಪಾಂಡೆ,ಶಂಕರ ಕಡಗೂಡ,ಪ್ರಕಾಶ ಹಿರೇಕುರಬರ,ರಂಗನಾಥ ತೋರ್ಪೆ,  ಸೇರಿದಂತೆ ನಗರಸಭೆ ಮತ್ತು ಸ್ಥಳೀಯ ಅಧಿಕಾರಿಗಳು ಉಪಸ್ಥಿತರಿದ್ದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ತಾರರಾಗಿ ಎಸ್.ಎಸ್. ಖಾದ್ರಿಇನಾಮದಾರ ನೇಮಕ

ವಿಜಯಪುರ: ವಿಜಯಪುರ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ತಾರರಾಗಿ ಹಿರಿಯ ಪಕ್ಷದ ಮುಖಂಡ ಎಸ್.ಎಸ್. ಖಾದ್ರಿಇನಾಮದಾರ ಅವರನ್ನು ನೇಮಕ ಮಾಡಲಾಗಿದೆ.

ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಅವರು ನೇಮಕಾತಿ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಖಾದ್ರಿಇನಾಮದಾರ ಅವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ತಾರರನ್ನಾಗಿ ನೇಮಕ ಮಾಡಿದ್ದಾರೆ.


ಪಕ್ಷದ ಸಂಘಟನೆ, ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಯ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿಜಯಪುರ ಜಿಲ್ಲೆಯಲ್ಲಿ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ನೇಮಕಾತಿ ಆದೇಶದಲ್ಲಿ ಆಶಯ ವ್ಯಕ್ತಪಡಿಸಲಾಗಿದೆ.

37 ವರ್ಷಗಳ ರಾಜಕೀಯ ಅನುಭವ ಹೊಂದಿರುವ ಎಸ್.ಎಸ್. ಖಾದ್ರಿಇನಾಮದಾರ ಅವರು ಸಿವಿಲ್ ಎಂಜಿನಿಯರಿAಗ್‌ನಲ್ಲಿ ಡಿಪ್ಲೊಮಾ (ಆ.ಅ.ಇ) ಪದವಿ ಪಡೆದಿದ್ದು, ಅವರು 1992ರಲ್ಲಿ ಜಿಲ್ಲಾ ವಿದ್ಯಾರ್ಥಿ ಜನತಾದಳದ ಉಪಾಧ್ಯಕ್ಷರಾಗಿ, 1994ರಲ್ಲಿ ಜಿಲ್ಲಾ ಯುವ ಜನತಾದಳದ ಸಂಘಟನಾ ಕಾರ್ಯದರ್ಶಿಯಾಗಿ, 1997 ರಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ, 1998ರಲ್ಲಿ ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಹಾಗೂ 2000ರಲ್ಲಿ ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.

2008 ರಿಂದ 2022 ರ ವರೆಗೆ ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ತಾರರಾಗಿ ನೇಮಕಗೊಂಡಿರುವ ಅವರು ಪಕ್ಷದ ಸಂಘಟನೆಗೆ ಮತ್ತಷ್ಟು ಚುರುಕು ನೀಡುವ ನಿರೀಕ್ಷೆ ವ್ಯಕ್ತವಾಗಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.