Saturday, October 24, 2026

ಶಾಹು ನಗರದಲ್ಲಿ ಶ್ರೀಮತಿ ಭಾರತಿ ಮಹೇಂದ್ರಕರ ನಿಧನ

ವಿಜಯಪುರ: ನಗರದ ಶಾಹು ನಗರ ನಿವಾಸಿ ಶ್ರೀಮತಿ ಭಾರತಿ ಗಂ. ವಿಜಯಕುಮಾರ ಮಹೇಂದ್ರಕರ (ವಯಸ್ಸು 52) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಮೃತರು ಪತಿ ವಿಜಯಕುಮಾರ ಮಹೇಂದ್ರಕರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಗಳು ಹಾಗೂ ಹಿತೈಷಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿ ಆಹ್ವಾನ

ವಿಜಯಪುರ: ಕರ್ನಾಟಕ ರಕ್ಷಣಾ ವೇದಿಕೆ, ವಿಜಯಪುರ ಜಿಲ್ಲಾ ಘಟಕದ ನೇತೃತ್ವದಲ್ಲಿ ನವೆಂಬರ್ 1 ರಂದು ಸಂಜೆ 6 ಗಂಟೆಗೆ ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ಮಾರುಕಟ್ಟೆ ಪ್ರಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಆಯೋಜಿಸಲಾಗಿದೆ.

ಸಮಾರಂಭದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಜಿಲ್ಲೆಯ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಅರ್ಹ ಸಾಧಕರು ಪ್ರಶಸ್ತಿಗೆ ತಮ್ಮ ಹೆಸರುಗಳನ್ನು ಸಲ್ಲಿಸಬಹುದಾಗಿದೆ.

ಆಸಕ್ತ ಸಾಧಕರು ಅಕ್ಟೋಬರ್ 31, 2026ರ ಸಂಜೆ 4 ಗಂಟೆಯೊಳಗೆ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷರಾದ ರವಿ ಕಿತ್ತೂರು (ಮೊ. 9241414899) ಅಥವಾ ಕಾರ್ಯದರ್ಶಿ ಸುರೇಶ ಬಿಜಾಪುರ (ಮೊ. 9886076555) ಅವರನ್ನು ಸಂಪರ್ಕಿಸಿ ತಮ್ಮ ವಿವರಗಳನ್ನು ಸಲ್ಲಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಕೋರಲಾಗಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಅಬ್ದುಲ್ ಹಮೀದ್ ಮುಶ್ರೀಪ್ ರಿಂದ ಬನ್ನಿ ವಿನಿಮಯ

ವಿಜಯಪುರ : ನಗರದ ಗೃಹ ಕಚೇರಿಯಲ್ಲಿ ಬುಧವಾರ ದಸರಾ, ವಿಜಯದಶಮಿ ಅಂಗವಾಗಿ ಜಿಲ್ಲೆಯ ಹಿರಿಯ ಕಾಂಗ್ರೇಸ್ ನಾಯಕರಾದ ಅಬ್ದುಲ್ ಹಮೀದ್ ಮುಶ್ರೀಪ್ ಅವರು ಸರ‍್ವಜನಿಕರೊಂದಿಗೆ ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡರು.

ನಗರವೂ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮುಖಂಡರು, ಗಣ್ಯರು, ಅಭಿಮಾನಿಗಳು, ಕರ‍್ಯರ‍್ತರು ಸೇರಿ ಆಪ್ತರು ಹಾಗೂ ಸ್ನೇಹಿತರೊಂದಿಗೆ ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡು ಶುಭ ಕೋರಿದರು.

ಈ ಸಂರ‍್ಭದಲ್ಲಿ ಜನರ ಉಭಯ ಕುಶಲೋಪರಿ ವಿಚಾರಿಸಿದ ಅವರು ದಸರಾ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಈ ರ‍್ಷ ಮಳೆ ಕೊರತೆ ಹಿನ್ನೆಲೆ ಎಲ್ಲರೂ ಹೆಚ್ಚೆಚ್ಚು ಗಿಡಗಳನ್ನು ನೆಡಬೇಕು. ನೀರನ್ನು ಹಿತಮಿತವಾಗಿ ಬಳಸಬೇಕು ಎಂದು ಸಲಹೆ ನೀಡಿದರು.