ವಿಜಯಪುರ : ಮಹರ್ಷಿ ವಾಲ್ಮೀಕಿ ಅವರು ಆದಿಕವಿಯಾಗಿ ರಾಮಾಯಣದಂತಹ ಮಹಾನ್ ಕಾವ್ಯವನ್ನು ರಚಿಸುವ ಮೂಲಕ ಭಾರತೀಯ ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಗೆ ಅಪಾರ ಕೊಡುಗೆ ನೀಡಿದ್ದಾರೆ. ರಾಮಾಯಣದಲ್ಲಿನ ಆದರ್ಶಗಳು, ಜೀವನ ಮೌಲ್ಯಗಳು ಹಾಗೂ ಮಾನವೀಯ ಸಂದೇಶಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿವೆ ಎಂದು ನಾಗಠಾಣ ಕ್ಷೇತ್ರದ ಶಾಸಕ ವಿಠ್ಠಲ ಕಟಕಧೊಂಡ ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹರ್ಷಿ ವಾಲ್ಮೀಕಿ ವಿರಚಿತ ರಾಮಾಯಣವು ಭಾರತೀಯ ಸಾಹಿತ್ಯ ಲೋಕದ ಅಮೂಲ್ಯ ಕೃತಿಯಾಗಿದೆ. ಇದು ಕೇವಲ ಮಹಾಕಾವ್ಯವಲ್ಲ; ಮಾನವೀಯ ಸಂಬAಧಗಳು, ಕರ್ತವ್ಯನಿಷ್ಠೆ, ತ್ಯಾಗ, ಸತ್ಯ, ಧರ್ಮ, ಸಹೋದರತ್ವ ಹಾಗೂ ಆದರ್ಶ ಜೀವನದ ಮೌಲ್ಯಗಳನ್ನು ಪರಿಚಯಿಸುವ ಮಹಾನ್ ಗ್ರಂಥವಾಗಿದೆ. ಹೀಗಾಗಿಯೇ ರಾಮಾಯಣದ ಸಂದೇಶಗಳು ಹಲವು ತಲೆಮಾರುಗಳಿಂದ ಜನರನ್ನು ಪ್ರೇರೇಪಿಸುತ್ತಿವೆ ಎಂದರು.
ಮಹನೀಯರ ಜಯಂತಿಗಳನ್ನು ಆಚರಿಸುವ ಉದ್ದೇಶ ಅವರ ಜೀವನ ಸಾಧನೆಗಳನ್ನು ಸ್ಮರಿಸುವುದಕ್ಕೆ ಮಾತ್ರ ಸೀಮಿತವಾಗಬಾರದು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಅನುಷ್ಠಾನಗೊಳಿಸಬೇಕು. ಇಂತಹ ಆಚರಣೆಗಳು ವಿವಿಧ ಸಮುದಾಯಗಳ ಜನರನ್ನು ಒಗ್ಗೂಡಿಸುವುದರೊಂದಿಗೆ ಸಾಮಾಜಿಕ ಸಾಮರಸ್ಯ, ಸಮಾನತೆ ಹಾಗೂ ಪರಸ್ಪರ ಗೌರವದ ಮನೋಭಾವವನ್ನು ಬೆಳೆಸಲು ಪೂರಕವಾಗಿವೆ. ಮಹನೀಯರ ಚಿಂತನೆ ಮತ್ತು ಸಂದೇಶಗಳನ್ನು ಯುವಜನತೆಗೆ ಪರಿಚಯಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವ ಉದ್ಧೇಶ ಹೊಮದಲಾಗಿದೆ ಎಂದು ತಿಳಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಮಾತನಾಡಿ, ಶ್ರದ್ಧೆ, ಆಸಕ್ತಿ ಮತ್ತು ಪರಿಶ್ರಮದ ಮೂಲಕ ಮಹಾನ್ ಸಾಧಕನಾಗಲು ಸಾಧ್ಯವಿದೆ. ಯುವಕರು ತಮ್ಮ ಗುರಿಯನ್ನು ಸ್ಪಷ್ಟವಾಗಿ ನಿರ್ಧರಿಸಿಕೊಂಡು ಅದನ್ನು ಸಾಧಿಸಲು ನಿರಂತರವಾಗಿ ಪ್ರಯತ್ನಿಸಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಲು ಶಿಕ್ಷಣ, ಜ್ಞಾನ, ತಾಳ್ಮೆ, ಅಭ್ಯಾಸ ಹಾಗೂ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಯಶಸ್ಸು ಪಡೆಯಲು ಜೀವನದಲ್ಲಿ ನಿರ್ದಿಷ್ಟ ಸಮಯ ಮೀಸಲಿಟ್ಟು ಸತತ ಪ್ರಯತ್ನ ಮಾಡಬೇಕು. ಪ್ರತಿಯೊಬ್ಬರೂ ಆತ್ಮಗೌರವದೊಂದಿಗೆ ಬದುಕುವುದನ್ನು ಕಲಿಯಬೇಕು ಎಂದು ಹೇಳಿದರು. ಮಹರ್ಷಿ ವಾಲ್ಮೀಕಿ ಅವರು ತೋರಿಸಿಕೊಟ್ಟ ಸನ್ಮಾರ್ಗದಲ್ಲಿ ನಡೆದು, ಸತ್ಯ ಪಥ ಅನುಸರಿಸಬೇಕು. ಉತ್ತಮ ಮಾರ್ಗದಲ್ಲಿ ನಡೆದಾಗ ಜೀವನದಲ್ಲಿ ಸಾರ್ಥಕತೆ ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ವಿಜಯಪುರ ಉಪ ವಿಭಾಗಾಧಿಕಾರಿ ಜುಫಿಶಾನ್ ಹಕ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಅನೇಕ ಅವಕಾಶಗಳು ದೊರೆಯುತ್ತವೆ. ಅವುಗಳನ್ನು ಗುರುತಿಸಿ ಸದುಪಯೋಗಪಡಿಸಿಕೊಂಡಾಗ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಗುರು-ಹಿರಿಯರ ಸಲಹೆ, ಮಾರ್ಗದರ್ಶನ ಪಡೆದು ತಮ್ಮ ಜೀವನವನ್ನು ಸುಂದರವಾಗಿ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ಉಪನ್ಯಾಸ ನೀಡಿದ ಪದ್ಮಾವತಿ ಸಿಂಗಾರಿ ಅವರು ಮಹರ್ಷಿ ವಾಲ್ಮೀಕಿ ಅವರ ಜೀವನ, ಸಾಹಿತ್ಯಕ ಸಾಧನೆ ಹಾಗೂ ರಾಮಾಯಣದ ಮಹತ್ವದ ಕುರಿತು ವಿವರಿಸಿದರು. ಸಂಸ್ಕೃತ ಭಾಷೆಯ ವೈಶಿಷ್ಟ್ಯವನ್ನು ಜಗತ್ತಿಗೆ ಪರಿಚಯಿಸುವಲ್ಲಿ ವಾಲ್ಮೀಕಿ ಅವರ ಕೃತಿಗಳು ಮಹತ್ವದ ಪಾತ್ರ ವಹಿಸಿವೆ ಎಂದು ಹೇಳಿದರು. ಜ್ಞಾನ, ಅಧ್ಯಯನ, ಶ್ರದ್ಧೆ, ಭಕ್ತಿ ಮತ್ತು ಆಸಕ್ತಿ ಇದ್ದಾಗ ಮಾತ್ರ ಸಾಹಿತ್ಯ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯ. ಯುವಕರು ಜೀವನದಲ್ಲಿ ಸಹೋದರತ್ವ, ಭ್ರಾತೃತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ವಿವಿಧ ಭಾಷೆಗಳ ಅಧ್ಯಯನವು ಜ್ಞಾನವೃದ್ಧಿ ಮತ್ತು ಸಂವಹನ ಕೌಶಲ್ಯಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ವೀರರ ಚರಿತ್ರೆ ಹಾಗೂ ಮಹನೀಯರ ಸಾಧನೆಗಳನ್ನು ಸ್ಮರಿಸುವುದರ ಜೊತೆಗೆ ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಏಕಲವ್ಯನ ಕಥೆಯನ್ನು ಆಧರಿಸಿದ ಸೂತ್ರದ ಗೊಂಬೆಗಳ ನಾಟಕ ಪ್ರದರ್ಶಿಸಲಾಯಿತು. ವಿವಿಧ ವೇಷಭೂಷಣಗಳನ್ನು ಧರಿಸಿದ ಮಕ್ಕಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿ ಪುರಸ್ಕೃತ ಸಾಧಕರನ್ನೂ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೊಡೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ,ಡಿವೈಎಸ್ಪಿ ನಾಗರಾಜ, ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಎಸ್.ಎಂ. ಪಾಟೀಲ, ಮಳಸಿದ್ದ ನಾಯ್ಕೊಡಿ, ಅಡಿವೆಪ್ಪ ಸಾಲಗಲ್, ರವಿ ಬಿಸನಾಳ, ಮಲ್ಲಿಕಾರ್ಜುನ ಬಟಗಿ , ಸುರೇಶ ಘೋಣಸಗಿ, ಚೆನ್ನು ಕಟ್ಟಿಮನಿ, ಸಿದ್ದು ರಾಯಣ್ಣವರ, ರವೀಂದ್ರ ಬಂಥನಾಳ, ವಿದ್ಯಾವತಿ ಅಂಕಲಗಿ, ಸೋಮು ರಣದೇವಿ, ಪೀರಪ್ಪ ಹಾದಿಮನಿ, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಣಗಿ, ಅಶೋಕ ಕಡಿಮನಿ, ವಿಠ್ಠಲ ವಡ್ಡರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕ್ರೈಸ್ತ ವಸತಿ ಶಾಲೆಗಳ ಪ್ರಚಾರ್ಯರು, ನಿಲಯಪಾಲಕರು ಹಾಗೂ ವಿದ್ಯಾರ್ಥಿಗಳು ಸೇರಿದಂತ ಸಿಬ್ಬಂದಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆಗೆ ಲೋಕಸಭಾ ಸದಸ್ಯ ರಮೇಶ ಜಿಗಜಿಣಗಿ ಹಾಗೂ ವಿವಿಧ ಗಣ್ಯರು ಚಾಲನೆ ನೀಡಿದರು. ಮೆರವಣಿಗೆಯು ನಗರದ ಪ್ರಮುಖ ವೃತ್ತಗಳ ಮೂಲಕ ಸಾಗಿಬಂದು ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಸಮಾವೇಶಗೊಂಡಿತು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

.jpeg)