Tuesday, October 27, 2026

ಮಹಾನಗರ ಪಾಲಿಕೆಯ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಅ. 29ರಂದು ರೈತ ಭಾರತ ಪಕ್ಷದಿಂದ ಪ್ರತಿಭಟನೆ

ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ರೈತ ಭಾರತ ಪಕ್ಷ (ರಿ), ಕರ್ನಾಟಕ ವತಿಯಿಂದ ಅ. 29ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮುಖಂಡ ಮಲ್ಲಿಕಾರ್ಜುನ ಬಿ. ಕೆಂಗನಾಳ ತಿಳಿಸಿದ್ದಾರೆ.

ನಗರದ ಜಲನಗರದ ಬುದ್ಧ ವಿಹಾರದಿಂದ ನ್ಯಾಯಾಲಯದ ಮಾರ್ಗವಾಗಿ ಮಹಾನಗರ ಪಾಲಿಕೆ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಅಂದು ಬೆಳಗ್ಗೆ 11ರಿಂದ ಸಂಜೆ 5ರವರೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇ-ಸ್ವತ್ತು ಹಾಗೂ ಆಸ್ತಿ ಪಹಣಿ ದಾಖಲೆಗಳನ್ನು ತ್ವರಿತವಾಗಿ ಒದಗಿಸಬೇಕು. ಕಟ್ಟಡ ನಿರ್ಮಾಣಕ್ಕೆ ಅನುಮತಿ ಹಾಗೂ ಕಟ್ಟಡ ಪೂರ್ಣಗೊಂಡ ಪ್ರಮಾಣಪತ್ರವನ್ನು ಸಕಾಲದಲ್ಲಿ ನೀಡಬೇಕು. ಎಲ್ಲ ಮಾದರಿಯ ವಿದ್ಯುತ್ ಸಂಪರ್ಕಗಳನ್ನು ಒದಗಿಸಲು ಹೆಸ್ಕಾಂಗೆ ಸೂಕ್ತ ಸೂಚನೆ ನೀಡಬೇಕು. ವಿವಿಧ ಬಡಾವಣೆಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವಲ್ಲಿ ಎದುರಾಗುತ್ತಿರುವ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಬೇಕು. ಎನ್.ಎ. ಅನುಮೋದಿತ ಬಡಾವಣೆಗಳಲ್ಲಿ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಬೇಕು.ಹಗಲಿನಲ್ಲಿಯೂ ಉರಿಯುತ್ತಿರುವ ಬೀದಿದೀಪಗಳ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕು.
ಬೀದಿನಾಯಿಗಳು ಹಾಗೂ ಬೀಡಾಡಿ ದನಗಳಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಕಟ್ಟಡ ನಿರ್ಮಾಣಕ್ಕೆ ಗ್ರೌಂಡ್ ಪ್ಲಸ್ ಆರು ಮಹಡಿಗಳವರೆಗೆ ಅನುಮತಿ ನೀಡುವ ಕುರಿತು ಕ್ರಮ ಕೈಗೊಳ್ಳಬೇಕು. ಬಾಗಲಕೋಟೆ ರಸ್ತೆ ಹಾಗೂ ಮನಗೂಳಿ ರಸ್ತೆಗಳ ಅಗಲೀಕರಣಕ್ಕೆ ಕ್ರಮ ವಹಿಸಬೇಕು.
ನಗರದ ಮೂಲಸೌಕರ್ಯ ಅಭಿವೃದ್ಧಿ, ಕಟ್ಟಡ ಪರವಾನಗಿ ಪ್ರಕ್ರಿಯೆಯ ಸರಳೀಕರಣ ಹಾಗೂ ಸಾರ್ವಜನಿಕರ ದೈನಂದಿನ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಸಂಬAಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸುವುದು ಪ್ರತಿಭಟನೆಯ ಉದ್ದೇಶವಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ರೈತ ಭಾರತ ಪಕ್ಷವು ರೈತರು ಮತ್ತು ಸೈನಿಕರ ಹಿತಾಸಕ್ತಿಗಾಗಿ ಸ್ಥಾಪನೆಯಾಗಿದೆ ಎಂದು ತಿಳಿಸಿರುವ ಪಕ್ಷದ ಮುಖಂಡರು, ರೈತ ಸಂಘಟನೆಗಳು, ಜನಪರ ಸಾಮಾಜಿಕ ಸಂಘಟನೆಗಳು ಹಾಗೂ ಕನ್ನಡಪರ ಹೋರಾಟದ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
ಸೀರೆ, ಕುಕ್ಕರ್, ಮದ್ಯ, ಹಣ ಹಾಗೂ ಕುಟುಂಬ ರಾಜಕಾರಣದ ಆಮಿಷಗಳನ್ನು ತಿರಸ್ಕರಿಸಿ, ನೀರು, ಶಿಕ್ಷಣ ಮತ್ತು ಆರೋಗ್ಯದಂತಹ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡುವಂತೆ ಪ್ರಕಟಣೆಯಲ್ಲಿ ಕರೆ ನೀಡಲಾಗಿದೆ.
ದಿನಾಂಕ: 29-10-2026, ಗುರುವಾರ  ಜಲನಗರದ ಬುದ್ಧ ವಿಹಾರದಿಂದ ನ್ಯಾಯಾಲಯದ ಮಾರ್ಗವಾಗಿ ಮಹಾನಗರ ಪಾಲಿಕೆ ಕಚೇರಿವರೆಗೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ 9986399453, 7259402056 ಸಂಪರ್ಕಿಸಲು ಕೋರಿದ್ದಾರೆ.
ನಗರದ ಸಮಸ್ಯೆಗಳ ಪರಿಹಾರಕ್ಕಾಗಿ ನಡೆಯಲಿರುವ ಪ್ರತಿಭಟನೆಯಲ್ಲಿ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಳ್ಳುವಂತೆ ರೈತ ಭಾರತ ಪಕ್ಷದ ವತಿಯಿಂದ ವಿನಂತಿಸಲಾಗಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.