Friday, October 30, 2026

ಜವಳಿ ಉದ್ಯಮಿದಾರರಿಗೆ ರಫ್ತು ಪ್ರೋತ್ಸಾಹನ ಕಾರ್ಯಾಗಾರ ನಂ.3 ರಂದು

ಈ ದಿವಸ ವಾರ್ತೆ

ವಿಜಯಪುರ: ಕೈಮಗ್ಗ ಮತ್ತು ಜವಳಿ ಇಲಾಖೆಯು ಜಿಲ್ಲಾ ಪಂಚಾಯತ್ ವಿಜಯಪುರ ಹಾಗೂ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ (ರುಡ್‌ಸೆಟ್) ವಿಜಯಪುರ ಇವರ ಸಹಯೋಗದಲ್ಲಿ ಜವಳಿ ವಲಯದ ಉದ್ಯಮಿದಾರರಿಗಾಗಿ ಒಂದು ದಿನದ ರಫ್ತು ಪ್ರೋತ್ಸಾಹನ ಕಾರ್ಯಾಗಾರವನ್ನು ನ.3ರಂದು ಮಂಗಳವಾರ ಆಯೋಜಿಸಿದೆ.

ನಗರದ ರುಡ್‌ಸೆಟ್ ಸಂಸ್ಥೆಯ ಆವರಣದಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಕಾರ್ಯಾಗಾರ ನಡೆಯಲಿದೆ.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶ್ರೀ ಭರತ್ ಬಿ. ಅಧ್ಯಕ್ಷತೆ ವಹಿಸಲಿದ್ದು, ಬೆಳಗಾವಿ ಪಶ್ಚಿಮ ವಲಯದ ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಶಿವರಾಜ್ ಆರ್. ಕುಲಕರ್ಣಿ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಮುಕುಂದ ಝಳಕಿ, ಸಿಡಾಕ್ ಜಂಟಿ ನಿರ್ದೇಶಕಿ ಸುಪ್ರಿತಾ ಬಳ್ಳಾರಿ, ಧಾರವಾಡ ರಾಯಾಪುರದ ಕೇಂದ್ರೀಯ ರೇಷ್ಮೆ ಮಂಡಳಿಯ ಹಿರಿಯ ವಿಜ್ಞಾನಿ ಡಾ. ವಿರಾಜ್, ವಿಜಯಪುರ ಜಿಲ್ಲಾ ಅಗ್ರಗಣೀಯ ಬ್ಯಾಂಕ್‌ನ ಸಿದ್ದಯ್ಯ ಬಿ., ವಿಜಯಪುರ ವಿಭಾಗದ ಅಂಚೆ ಅಧೀಕ್ಷಕ ಮಹಾಂತೇಶ ತೊಗರಿ, ಧಾರವಾಡದ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಉಪನಿರ್ದೇಶಕ ಮಲ್ಲಿಕಾರ್ಜುನ, ವಿಜಯಪುರ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ಇಲಾಖೆಯ ಉಪನಿರ್ದೇಶಕ ಸುಭಾಷ್‌ಚಂದ್ರ ಪಾಟೀಲ ಹಾಗೂ ಬೆಂಗಳೂರಿನ ರಫ್ತು ಸಲಹೆಗಾರ್ತಿ ಡಾ. ನಾಗವೇಣಿ ಸಿ. ಭಾಗವಹಿಸಲಿದ್ದಾರೆ.

ಜವಳಿ ಉದ್ಯಮಗಳ ಉತ್ಪನ್ನಗಳಿಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅವಕಾಶ ಕಲ್ಪಿಸುವುದು, ರಫ್ತು ಪ್ರಕ್ರಿಯೆ, ಮಾರುಕಟ್ಟೆ ಸಂಪರ್ಕ ಹಾಗೂ ಉದ್ಯಮದ ಬೆಳವಣಿಗೆಗೆ ಪೂರಕವಾದ ಮಾಹಿತಿ ಮತ್ತು ಮಾರ್ಗದರ್ಶನ ನೀಡುವುದು ಕಾರ್ಯಾಗಾರದ ಉದ್ದೇಶವಾಗಿದೆ.

ಜವಳಿ ವಲಯದ ಉದ್ಯಮಿದಾರರು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ವಿಜಯಪುರ ಜಿಲ್ಲಾ ಸಹಾಯಕ ನಿರ್ದೇಶಕ ಸತೀಶ ಕಾಪಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಇಂಡಿ ಶಾಖಾ ಕಾಲುವೆಯ ಕೊನೆಯ ಅಂಚಿನವರೆಗೆ ನೀರು ತಲುಪಿಸಲು ಸಮನ್ವಯದಿಂದ ಕಾರ್ಯನಿರ್ವಹಿಸಿ ನ.3ರಿಂದ 12ರವರೆಗೆ ನೀರು ಹರಿವು, ಸೋರಿಕೆ ತಡೆ-ಕಾಲುವೆ ದುರಸ್ತಿ ಹಾಗೂ ಪೊಲೀಸ್ ನಿಗಾಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ


ವಿಜಯಪುರ :  ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಮುಂಗಾರು ಹಂಗಾಮಿನ ಕೊನೆಯ ಹಂತದ ನೀರು ಹರಿಸುವ ಪ್ರಕ್ರಿಯೆ ನವೆಂಬರ್ 3ರಿಂದ 12ರವರೆಗೆ ನಡೆಯಲಿದ್ದು, ಇಂಡಿ ಶಾಖಾ ಕಾಲುವೆಯ ಕೊನೆಯ ಅಂಚಿನವರೆಗೂ ಸಮರ್ಪಕವಾಗಿ ನೀರು ತಲುಪಿಸಲು ಸಂಬAಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚಿಸಿದರು.

 ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನವೆಂಬರ್ 3ರಿಂದ 12ರವರೆಗೆ ಕಾಲುವೆ ಜಾಲದ ಮೂಲಕ ನೀರು ಹರಿಸಲಾಗುತ್ತಿರುವುದರಿಂದ ನಿಗದಿತ ಪ್ರಮಾಣದ ನೀರು ಕಾಲುವೆಯ ಕೊನೆಯ ಭಾಗದ ರೈತರಿಗೂ ತಲುಪುವಂತೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ನೀರು ಹರಿಸುವ ಸಂದರ್ಭದಲ್ಲಿ ಕಾಲುವೆಗಳಲ್ಲಿ ಎಲ್ಲಿಯೇ ಸೋರಿಕೆ ಅಥವಾ ಹಾನಿ ಕಂಡುಬAದರೂ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ನೀರು ಪೋಲಾಗದಂತೆ ಮುನ್ನೆಚ್ಚರಿಕೆ ವಹಿಸಿ, ಸಮರ್ಪಕ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.

 ಇಂಡಿ ಶಾಖಾ ಕಾಲುವೆಯ ಸುಮಾರು 172 ಕಿ.ಮೀ. ವ್ಯಾಪ್ತಿಯ ಕೊನೆಯ ಅಂಚಿನವರೆಗೆ ನೀರು ತಲುಪಿಸುವುದು ಪ್ರಮುಖ ಆದ್ಯತೆಯಾಗಿದ್ದು, ಮಧ್ಯದಲ್ಲಿ ಅನಧಿಕೃತವಾಗಿ ನೀರು ಎತ್ತುವುದು ಹಾಗೂ ನೀರಿನ ಹರಿವಿಗೆ ಅಡ್ಡಿಯಾಗುವ ಚಟುವಟಿಕೆಗಳನ್ನು ತಡೆಯಬೇಕು. ಕಾಲುವೆಯ ಕೊನೆಯ ಹಂತದವರೆಗೂ ನಿಗದಿತ ಪ್ರಮಾಣದಲ್ಲಿ ನೀರು ತಲುಪುವಂತೆ ನಿರಂತರ ನಿಗಾ ವಹಿಸಬೇಕು ಎಂದು ಸೂಚಿಸಿದರು.

 ನೀರು ಹರಿಸುವ ಅವಧಿಯಲ್ಲಿ ಅಧಿಕಾರಿಗಳು ವಾಚ್ ಆ್ಯಂಡ್ ವಾರ್ಡ್ ವ್ಯವಸ್ಥೆ ಕಲ್ಪಿಸಿ, ಕಾಲುವೆ ಜಾಲದ ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾ ವಹಿಸಬೇಕು. ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ನಿಗಾ ಕೈಗೊಳ್ಳಬೇಕು. ಇಂಡಿ ಉಪವಿಭಾಗದ ಡಿವೈಎಸ್ಪಿ ಸೇರಿದಂತೆ ಕೆಂಭಾವಿ, ಸಿಂದಗಿ ಮತ್ತಿತರ ಸಂಬAಧಿತ ಪೊಲೀಸ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ನೀರಿನ ಸಮರ್ಪಕ ಹರಿವಿಗೆ ಅಗತ್ಯ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.

 ಬಿಡುಗಡೆಯಾದ ನೀರು ನಿಗದಿತ ಮಾರ್ಗದಲ್ಲಿ ಯಾವುದೇ ಅಡಚಣೆಯಿಲ್ಲದೆ ಕೊನೆಯ ಭಾಗವನ್ನು ತಲುಪುವಂತೆ ನೀರಾವರಿ ಮತ್ತು ಪೊಲೀಸ್ ಇಲಾಖೆಗಳು ಜಂಟಿಯಾಗಿ ಕಾರ್ಯನಿರ್ವಹಿಸಬೇಕು. ಇದು ಮುಂಗಾರು ಹಂಗಾಮಿನ ಕೊನೆಯ ಹಂತದ ನೀರು ಹರಿಸುವ ಅವಧಿಯಾಗಿರುವುದರಿಂದ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಎಲ್ಲ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ,ಇAಡಿ ಉಪ ವಿಭಾಗಾಧಿಕಾರಿಗಳಾದ ಚಿದಾನಂದ ಗುರುಸ್ವಾಮಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿಗಳಾದ ಬದ್ರುದ್ದಿನ್ ಸೌದಾಗರ್,ಹೆಸ್ಕಾಂನ ಅಧಿಕ್ಷಕ ಅಭಿಯಂತರರಾದ ಸಿದ್ದಪ್ಪ ಬಿಂಜಗೇರಿ,ರಾAಪುರ ವಿಭಾಗ ಕಾರ್ಯ ನಿರ್ವಾಹಕ ಅಭಿಯಂತರ ಯು.ಪಿ.ಸೋನಾವಣೆೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು,ಕೆಬಿಜೆ ಎನ್.ಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಕ್ಕಳ ಮೇಲಿನ ಲೈಂಗಿಕ ಶೋಷಣೆ, ಬಾಲ್ಯ ವಿವಾಹ ತಡೆಗೆ ಜಾಗೃತಿ ಕಾರ್ಯಕ್ರಮ

ಸುರಪುರ: ಮಕ್ಕಳ ಮೇಲಿನ ಲೈಂಗಿಕ ಶೋಷಣೆ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಕ್ಕಳಲ್ಲಿ ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.

ತಾಲೂಕಿನ ದೇವಿಕೇರಾ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಅರುಂಧತಿ ಕಾನೂನು ಮಹಾವಿದ್ಯಾಲಯ, ಸುರಪುರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ, ಸುರಪುರ ಇವರ ಸಹಯೋಗದಲ್ಲಿ ಮಕ್ಕಳ ಮೇಲಿನ ಲೈಂಗಿಕ ಶೋಷಣೆ ಮತ್ತು ಬಾಲ್ಯ ವಿವಾಹ ತಡೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದಿಂದ ರಕ್ಷಣೆ, ಬಾಲ್ಯ ವಿವಾಹದಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಇಂತಹ ಘಟನೆಗಳನ್ನು ತಡೆಗಟ್ಟಲು ಕಾನೂನಿನಲ್ಲಿರುವ ಅವಕಾಶಗಳ ಕುರಿತು ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ಯಾವುದೇ ರೀತಿಯ ಶೋಷಣೆ ಅಥವಾ ಬಾಲ್ಯ ವಿವಾಹದ ಸಂದರ್ಭ ಎದುರಾದಲ್ಲಿ ಮೌನವಾಗಿರದೆ ಸಂಬAಧಪಟ್ಟವರ ಗಮನಕ್ಕೆ ತರುವಂತೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ಶಂಕರಗೌಡ ಬಿ. ಹಿರೇಗೌಡ ಮುನುಮುಟಗಿ, ಮಹೇಶ ಟಿ.ಎಚ್. ವನಕೇರಿ ದಿವಾಲಗುಡ್ಡ, ದೇವರಾಜ ನಾಡಗೌಡ ಕಿರದಳ್ಳಿ, ಭಾರತಿ ಹಿರೇಮಠ ಗುಡದೂರು, ಅರುಂಧತಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಲಕ್ಷ್ಮೇಶ ಪೂಜಾರಿ ಹಾಗೂ ಸರಕಾರಿ ಪ್ರೌಢಶಾಲೆ ದೇವಿಕೇರಾದ ಮುಖ್ಯ ಶಿಕ್ಷಕಿ ಮಹಾದೇವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.