ಈ ದಿವಸ ವಾರ್ತೆ ವಿಜಯಪುರ: ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಗದಗ ವಿಜಯಪುರದಲ್ಲಿ ಬೆಳ್ಳಿ ಸಂಭ್ರಮದ ನಿಮಿತ್ಯ ಕಂದಗಲ್ಲ ಹನುಮಂತರಾಯ ರಂಗಮAದಿರದಲ್ಲಿ ಜುಲೈ 29 ಹಾಗೂ 30 -2023 ರಂದು ಎರಡು ದಿನಗಳ ಕಾಲ ನಡೆಯುವ ಅಖಿಲ ಭಾರತ 10ನೇ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮಳಿಗೆ ಹಾಕಲು ಪ್ರಕಾಶಕರು,ಲೇಖಕರು ಹಾಗೂ ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 22 ರ ಒಳಗಾಗಿ ಒಂದು ಪುಸ್ತಕ ಮಳಿಗೆಗೆ 1000-/ ರೂಪಾಯಿ ನೀಡಿ ನೊಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧ್ಯಕ್ಷ ಬಸವರಾಜ ಜಾಲವಾದಿ ಮೊ: 9449292062 ಹಾಗೂ ಸಮ್ಮೇಳನದ ಸಹ ಸಂಯೋಜಕರಾದ ಉಮೇಶ ಶಿವಶರಣ ಮೊ: 9900378892 ಅವರನ್ನು ಸಂಪರ್ಕಿಸಲು ರಾಜ್ಯಾಧ್ಯಕ್ಷರಾದ ಡಾ. ಅರ್ಜುನ ಗೊಳಸಂಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Saturday, July 15, 2023
Friday, July 14, 2023
Thursday, July 13, 2023
Wednesday, July 12, 2023
Tuesday, July 11, 2023
Monday, July 10, 2023
ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಟಿ.ಭೂಬಾಲನ ಅಧಿಕಾರ ಸ್ವೀಕಾರ
ಈ ದಿವಸ ವಾರ್ತೆ
ವಿಜಯಪುರ : ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ 2015ರ ಬ್ಯಾಚ್‍ನ ಐಎಎಸ್ ಅಧಿಕಾರಿ ಟಿ.ಭೂಬಾಲನ್ ಅವರು ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಸೋಮವಾರ ಅಧಿಕಾರ ಸ್ವೀಕರಿಸಿದರು. ವಿಜಯಪುರ ನಿರ್ಗಮಿತ ಜಿಲ್ಲಾಧಿಕಾರಿಗಳಾದ ವಿಜಯಮಹಾಂತೇಶ ದಾನಮ್ಮನವರ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಬರಮಾಡಿಕೊಂಡು, ಹೂಗುಚ್ಛ ನೀಡಿ ಸ್ವಾಗತಿಸಿ, ಸೋಮವಾರ ಅಧಿಕಾರ ಹಸ್ತಾಂತರಿಸಿದರು.
3 ವರ್ಷಗಳ ಕಾಲ ಬಾಗಲಕೋಟ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದ ಟಿ.ಭೂಬಾಲನ್ ಅವರು ವಿಜಯಪುರ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆಯಾಗಿದ್ದು, ಈ ಹಿಂದೆ ಬೀದರ ಮತ್ತು ದಾವಣಗೆರೆಯಲ್ಲಿ ಪ್ರೊಬೆಷನರಿಯಾಗಿ ಹಾಗೂ ಹರಪನಹಳ್ಳಿ ಮತ್ತು ಉಡುಪಿಯಲ್ಲಿ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ನಂತರ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ, ಸ್ಮಾರ್ಟ ಸಿಟಿ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಚುನಾವಣಾ ಸಂದರ್ಭದಲ್ಲಿ ಬೆಳಗಾವಿ ವಿಶೇಷ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.



