Saturday, September 2, 2023

03-09-2023 EE DIVASA KANNADA DAILY NEWS PAPER

ರಾಘವೇಂದ್ರ ಮಹಾಸ್ವಾಮಿಗಳ ಆರಾಧಾನಾ ಮಹೋತ್ಸವ


 ವಿಜಯಪುರ : ವಿಜಯಪುರದ ದಿವಟಗೇರಿಗಲ್ಲಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸನ್ನಿಧಾನದಲ್ಲಿ ಶ್ರೀ ರಾಘವೇಂದ್ರ ಮಹಾಸ್ವಾಮಿಗಳ ಆರಾಧಾನಾ ಮಹೋತ್ಸವ ಪ್ರಯುಕ್ತ ಉತ್ತರಾರಾಧನೆ ಭಕ್ತಿಪರ‍್ವಕವಾಗಿ ನಡೆಯಿತು.

ಕರ‍್ಯಕ್ರಮದ ಅಂಗವಾಗಿ ಬೆಳಿಗ್ಗೆ ಸುಪ್ರಭಾತ ಆರಂಭವಾಯಿತು, ನಂತರ ರಥಾಂಗಹವನ, ಶ್ರೀ ಹರಿ ವಾಯುಸ್ತುತಿ ಪುನಶ್ಚರಣ, ಸಪ್ತಕಹವನ, ಶ್ರೀ ಗುರು ಸ್ತೊçÃತ್ರ ಅಷ್ಟೋತ್ತರ ಶತ:ಪಠಣ ಪರ‍್ವಕ ಭಕ್ತಿಭಾವದಿಂದ ನಡೆಯಿತು.

ನಂತರ ಶ್ರೀ ಗುರುಸಾರ್ವಭೌಮರಿಗೆ ಕ್ಷೀರಾಭಿಷೇಕ, ಮಹಾ ಪಂಚಾಮೃತ ಅಭೀಷೇಕ ಸಲ್ಲಿಸಲಾಯಿತು. ಪಲ್ಲಕ್ಕಿ ಸೇವೆ, ರಜತ ರಥೋತ್ಸವ ವೈಭವದಿಂದ ನಡೆಯಿತು. ನಂತರ ಅಷ್ಟಾವಧಾನ ಸೇವೆ, ಮಹಾಮಂಗಳಾರತಿ, ಮಂತ್ರಪುಷ್ಪ, ಸ್ವಸ್ತಿವಾಚನ, ಶ್ರೇಯ: ಪ್ರರ‍್ಥನೆ ನೆರವೇರಿತು. ನಂತರ ಮಹಾಪೂಜೆ, ನೈವೇದ್ಯ ಸರ‍್ಪಣೆ ಹಾಗೂ ಮಹಾಮಂಗಳಾರತಿ ನಡೆಯಿತು.

ಪ್ರಕಾಶ್ ಅಕ್ಕಲಕೋಟ, ಅಪ್ಪಣ್ಣಾಚಾರ್ಯ, ಡಿ.ಜಿ. ಹರಿದಾಸ್,  ನಾರಾಯಣ ಕುಲಕರ್ಣಿ, ವೆಂಕಟೇಶ್ ಖಾಸನಿಸ್, ಗೋವಿಂದರಾಜ ದೇಶಪಾಂಡೆ ,ವಿಜಯ ಜೋಶಿ ವಿಕಾಸ್ ಪದಕಿ, ರಾಕೇಶ್ ಕುಲಕರ್ಣಿ, ಶ್ರೀಹರಿ ಕುಲಕರ್ಣಿ, ವೆಂಕಟೇಶ್ ಗುಡಿ, ಉಮೇಶ ಕುಲಕರ್ಣಿ ಪಾಲ್ಗೊಂಡಿದ್ದರು.

ಅಖಂಡ ಕರ್ನಾಟಕ: ಉತ್ತರ/ದಕ್ಷಿಣ ಎಂಬ ತಾರತಮ್ಯ ಇಲ್ಲ ಬರಗಾಲ ಘೋಷಣೆ: ಸೆ.4 ರಂದು ತೀರ್ಮಾನ ಮುಖ್ಯಮಂತ್ರಿ ಸಿದ್ದರಾಮಯ್ಯ

 

ಈ ದಿವಸ ವಾರ್ತೆ

ವಿಜಯಪುರ :  ಕೃಷ್ಣಾ  ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷ್ಣೆಗೆ ಇಂದು ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಆಲಮಟ್ಟಿಯ ಸಂಗ್ರಹಣೆ ಮಟ್ಟ 519.6 ಮೀಟರ್ ಅಡಿ ಇದೆ. ಅದರ ಒಟ್ಟು ಸಂಗ್ರಹಣೆ 123.08 ಟಿ.ಎಂಸಿ. ಒಂದು ಟಿಎಂಸಿ ನೀರು ಎಂದರೆ 11 ಸಾವಿರ ಕ್ಯೂಸೆಕ್ಸ್  ನೀರು. ಇಡೀ ಕರ್ನಾಟಕದ  ಜಲಾಶಯಗಳಲ್ಲಿ  ಕೃಷ್ಣಾ ಮೇಲ್ದಂಡೆ ಪೂರ್ಣ ಭರ್ತಿಯಾಗಿದೆ. ನಾರಾಯಣಪುರ ಜಲಾಶಯ ತುಂಬಿದೆ. ಭರ್ತಿಯಾಗಿರುವುದರಿಂದ ನಾಲೆಗಳಿಗೆ, ಕುಡಿಯುವ ನೀರು, ವಿದ್ಯುಚ್ಛಕ್ತಿ ಉತ್ಪಾದನೆಗೆ ನೀರು ಹರಿಸಲಾಗುತ್ತಿದೆ. ಕುಡಿಯುವ  ನೀರು ಬಿಟ್ಟಿರುವುದರಿಂದ ಒಂದು ಟಿಎಂಸಿ ನೀರು ಕಡಿಮೆ ಇದೆ. ನಾರಾಯಣಪುರದಲ್ಲಿಯೂ ಕೂಡ 492 ಮೀ. ನೀರು ಇದೆ. 105.46 ಟಿಎಂಸಿ ನೀರು  ಲೈವ್ ಸ್ಟೋರೇಜೆ ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ 11 ಟಿಎಂಸಿ ನೀರಿನ ಸಂಗ್ರಹ ಕಡಿಮೆ ಇದೆ. ಕಳೆದ ವರ್ಷ ಒಳಹರಿವು ಹೆಚ್ಚಿತ್ತು.25450 ಕ್ಯೂಸೆಕ್ಸ್ ನೀರಿತ್ತು , ಆದರೆ ಈಗ 3730 ಕ್ಯೂಸೆಕ್ಸ್ ನೀರಿನ ಸಂಗ್ರಹ ಇದೆ ಎಂದರು.

 ಬರಗಾಲ ಘೋಷಣೆ: ಸೆ.4 ರಂದು ತೀರ್ಮಾನ

ಒಟ್ಟಾರೆಯಾಗಿ ಈ ವರ್ಷ  ಕೃಷ್ಣಾ ಮೇಲ್ದಂಡೆ ಪ್ರದೇಶದ ಅಚ್ಚುಕಟ್ಟಿನಲ್ಲಿ ಮಳೆ ಕಡಿಮೆಯಾಗಿದೆ. ಈ ವರ್ಷ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಮಳೆ ಕಡಿಮೆಯಾಗಿದೆ. ಶೇ. 56% ಕೊರತೆಯಾಗಿದೆ.  ಆಗಸ್ಟ್ ನಲ್ಲಿಯೂ ಕೊರತೆ ಕಂಡು ಬಂದಿದ್ದು, ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ಈಗಾಗಲೇ  ಮೂರು ಸಭೆಗಳನ್ನು ನಡೆಸಿದೆ.  ಪುನ: ಸೆ.04 ರಂದು ಮತ್ತೊಂದು ಸಭೆ ನಡೆಯಲಿದೆ. 113 ತಾಲ್ಲೂಕುಗಳಲ್ಲಿ  ಬರಗಾಲ ಇದೆ ಎಂದು ಜಂಟಿ ಸಮೀಕ್ಷೆ ನಡೆಸಿದ್ದಾರೆ. ಇದಲ್ಲದೆ 73 ತಾಲ್ಲೂಕುಗಳಲ್ಲಿ ಬರಗಾಲ  ಉಂಟಾಗಿದೆ ಎಂದು ಹೇಳಿದ್ದಾರೆ. ಅದಕ್ಕೂ ಜಂಟಿ ಸಮೀಕ್ಷೆ ನಡೆಸಿ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗಿದೆ. ಸೆ.4 ರಂದು ಒಂದು ತೀರ್ಮಾನಕ್ಕೆ ಬರಲಾಗುವುದು ಎಂದರು.

ಎನ್ ಡಿ ಆರ್ ಎಫ್ ಮಾರ್ಗಸೂಚಿಗಳ ಪರಿಷ್ಕರಣೆಗೆ ಮನವಿ :

ಬರ ಘೋಷಣೆಯ ನಂತರ ಕೇಂದ್ರಸರ್ಕಾರಕ್ಕೆ  ಬರಪೀಡಿತ ತಾಲ್ಲೂಕುಗಳಿಗೆ ನೆರವು ಕೋರಿ ಮನವಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಸಮಿತಿಯು ಸಮೀಕ್ಷೆ ನಡೆಸಿದ ನಂತರ , ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಹಣ ಬಿಡುಗಡೆ ಮಾಡುತ್ತದೆ. ರಾಜ್ಯಸರ್ಕಾರ  ಈ ಅನುದಾನದಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತದೆ . ಅದಲ್ಲದೇ ರಾಜ್ಯ ಸರ್ಕಾರವೂ ಪರಿಹಾರ ಕಾರ್ಯಗಳಿಗೆ ಹಣ ವಿನಿಯೋಗಿಸಲಿದೆ. 2020 ರಿಂದ  ಇಲ್ಲಿಯವರೆಗೆ  ಪರಿಷ್ಕರಣೆ ಆಗಿಲ್ಲ. ಎನ್ ಡಿ ಆರ್ ಎಫ್ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಹಾಗೂ ರಾಜ್ಯಗಳಿಗೆ ಹೆಚ್ಚು ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

ಅಖಂಡ ಕರ್ನಾಟಕ: ಉತ್ತರ/ದಕ್ಷಿಣ ಎಂಬ ತಾರತಮ್ಯ ಇಲ್ಲ

ಕೃಷ್ಣಾ ಕಾವೇರಿ ಜೀವನದಿಗಳು. ಕಾವೇರಿ, ಕೃಷ್ಣಾ ನದಿ ಪಾತ್ರದಲ್ಲಿರುವವರೆಲ್ಲರೂ ನಮ್ಮ ರೈತರೇ. ತಾರತಮ್ಮ ಮಾಡುವ ಪ್ರಶ್ನೆಯೇ ಇಲ್ಲ.ಅಖಂಡ ಕರ್ನಾಟಕದಲ್ಲಿ ದಕ್ಷಿಣ, ಉತ್ತರ ಎಂಬ ಪ್ರಶ್ನೇ ಇಲ್ಲ ಎಂದರು.

ತಮಿಳುನಾಡಿಗೆ ಕಾವೇರಿ  ನೀರು: ದೆಹಲಿಗೆ ಶೀಘ್ರ ಸರ್ವ ಪಕ್ಷ ನಿಯೋಗ

ಕಾವೇರಿ ನೀರಿಗೆ ಸಂಬಂಧಿಸಿದಂತೆ ಸರ್ವ ಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಸಂಪನ್ಮೂಲ ಸಚಿವರ ಸಮಯವನ್ನು ಕೋರಿದ್ದೇವೆ. ಈಗಾಗಲೇ ನಮ್ಮ ಜಲಸಂಪನ್ಮೂಲ  ಸಚಿವರು ನಮ್ಮ ರಾಜ್ಯದ ಪರವಾಗಿ ವಾದ ಮಂಡಿಸುವ ವಕೀಲರನ್ನು ಭೇಟಿ ಮಾಡಿ ಅವರಿಗೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಬುಧವಾರ ಪ್ರಕರಣ ವಿಚಾರಣೆಗೆ ಬರಲಿದ್ದು ನಮ್ಮ ವಾದ ಏನಿರಬೇಕು ಎಂದು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಧಿಸೂಚನೆಗೆ ಆಗ್ರಹ :

ಕೇಂದ್ರ ಸಚಿವರು ಭೇಟಿಗೆ ಅವಕಾಶ ನೀಡಿದ್ದಲ್ಲಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು. ಮಹಾದಾಯಿ ಯೋಜನೆಗೆ ಅಧಿಸೂಚನೆ ಹೊರಡಿಸಲಾಗಿದ್ದರೂ, ಅರಣ್ಯ ಹಾಗೂ ಪರಿಸರ  ತೀರುವಳಿ ದೊರೆತಿರುವುದಿಲ್ಲ.ಈ ಯೋಜನೆಗೆ ತೀರುವಳಿ ಹಾಗೂ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು.  ಇಂದು ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಿಲ್ಲದ ಕಾರಣ ಹಾಗೂ ಕುಡಿಯುವ ನೀರಿನ ಕೊರತೆಯಿಂದಾಗಿ ಸಂಕಷ್ಟದ ಸಮಯವನ್ನು ಎದುರಿಸುವಂತಾಗಿದೆ. ಜಲನೀತಿಯ ಪ್ರಕಾರ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಾಗುತ್ತದೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯ 3 ನೇ ಹಂತ ಪೂರ್ಣಗೊಳ್ಳಲು 1 ಲಕ್ಷ ಕೋಟಿ ರೂ. ಅಗತ್ಯ :

ಕೃಷ್ಣಾ ಮೇಲ್ದಂಡೆ ಯೋಜನೆಯ 3 ನೇ ಹಂತ ಪೂರ್ಣಗೊಳ್ಳಲು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯಗಳು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲು ಸುಮಾರು 1 ಲಕ್ಷ ಕೋಟಿ ರೂ.ಗಳ ಅಗತ್ಯವಿದೆ. 2023 ರ ಅಂದಾಜಿನ ಪ್ರಕಾರ 83700 ಕೋಟಿ ರೂ. ಇದ್ದು, ಯೋಜನೆ ಪೂರ್ಣಗೊಳ್ಳುವವರೆಗೆ 1 ಲಕ್ಷ ಕೋಟಿ ವೆಚ್ಚವಾಗುವ ಸಾಧ್ಯತೆ ಇದೆ. ರಾಜ್ಯಸರ್ಕಾರ ಯೋಜನೆಯ ಕಾಮಗಾರಿ ಕೈಗೆತ್ತಿಕೊಳ್ಳಲು ಸಿದ್ಧವಿದ್ದು, ಕೇಂದ್ರಸರ್ಕಾರ ತ್ವರಿತಗತಿಯಲ್ಲಿ ಅಧಿಸೂಚನೆ  ಹೊರಡಿಸಬೇಕಾಗಿದೆ. ಆದಾಗ್ಯೂ  ಯೋಜನೆಯ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯಗಳು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚಿನ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇಸ್ರೋ ವಿಜ್ಞಾನಿಗಳಿಗೆ ಸನ್ಮಾನ :

ಇಸ್ರೋ ಸಂಸ್ಥೆಯು ಆದಿತ್ಯ -ಎಲ್1 ಉಪಗ್ರಹವನ್ನು ಯಶಸ್ಸಿಯಾಗಿ ಉಡಾವಣೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಸ್ರೋ ವಿಜ್ಞಾನಿಗಳಿಗೆ ಶುಭ ಕೋರಲಾಗಿದೆ. ಚಂದ್ರಯಾನ -3 ರ ಯಶಸ್ಸಿಗೆ ದ್ಯೋತಕವಾಗಿ ಇಸ್ರೋ ವಿಜ್ಞಾನಿಗಳಿಗೆ ಸರ್ಕಾರದ ವತಿಯಿಂದ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗುವುದು ಎಂದರು.

ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ .ಎಂ.ಬಿ ಪಾಟೀಲ್ , ಸಚಿವರಾದ ಕೃಷ್ಣಬೈರೇಗೌಡ, ಶಾಸಕರಾದ ಎಚ್.ವೈ. ಮೇಟಿ, ಯಶವಂತ ರಾಯಗೌಡ ಪಾಟೀಲ, ಅಶೋಕ ಮನಗೂಳಿ, ವಿಠಲ ಕಟಕದೋಂಡ, ಸಂಸದ ರಮೇಶ್ ಜಿಗಜಿಣಗಿ, ಪಿ.ಸಿ ಗದ್ದಿಗೌಡ  ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

 


ಈ ದಿವಸ ವಾರ್ತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಲಮಟ್ಟಿಯಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.‌

ಈ ಸಂಸರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Friday, September 1, 2023

02-09-2023 EE DIVASA KANNADA DAILY NEWS PAPER

ಪ್ರಪ್ರಥಮ ಬಾರಿಗೆ ವಿನೂತನ ಶಿಕ್ಷಣ ಅದಾಲತ್ ಕಾರ್ಯಕ್ರಮ ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಕುಂದು ಕೊರತೆ ನಿವಾರಣೆ ಅತ್ಯವಶ್ಯಕ : ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ

 ವಿಜಯಪುರ: ಮಕ್ಕಳ ಶೈಕ್ಷಣಿಕ ಅಭಿವೃದ್ದಿಯಲ್ಲಿ ಬಹುಮುಖ್ಯ ಪಾತ್ರ ವಹಿಸುವ ಶಿಕ್ಷಕರ ಕುಂದು ಕೊರತೆ ನಿವಾರಣೆ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹೇಳಿದರು. 

ಶುಕ್ರವಾರ ನಗರದ ಜಿಲ್ಲಾ ಪಂಚಾಯತ ಸಭಾಗಂಣದಲ್ಲಿ ಶಿಕ್ಷಕರ ಕುಂದು ಕೊರತೆಗಳನ್ನು ಬಗೆಹರಿಸಲು  ಹಮ್ಮಿಕೊಂಡ ಶಿಕ್ಷಣ ಅದಾಲತ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಅವರು, ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ ಹೊತ್ತಿಕೊಂಡಿರುವ ಶಿಕ್ಷಣ ಇಲಾಖೆ ಕಾರ್ಯ ಅತಿ ಮುಖ್ಯ ಹಾಗೂ ಮಹತ್ವದ್ದಾಗಿದೆ. ಶಿಕ್ಷಕರ ಹಲವಾರು ಕುಂದು ಕೊರತೆಗಳ ನಿವಾರಣೆಗೆ ಪ್ರತಿ ದಿನ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶಿಕ್ಷಕರ ಕುಂದು ಕೊರತೆಗಳನ್ನು ನಿವಾರಿಸಲು ರಾಜ್ಯದಲ್ಲಿಯೇ ಪ್ರಪ್ರಥಮಬಾರಿಗೆ ಶಿಕ್ಷಣ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. 

ಶಿಕ್ಷಕರು ಶಾಲಾ ಭೋಧನೆ ಬಿಟ್ಟು ಕಚೇರಿ ಕಚೇರಿ ಅಲೆದಾಡಿದರೆ ಮಕ್ಕಳ ಭವಿಷ್ಯ ಉಜ್ವಲವಾಗುವುದು ಅಸಾಧ್ಯ. ಆದ್ದರಿಂದ ಇಂದಿನ ಮಕ್ಕಳು ನಮ್ಮ ದೇಶದ ಮುಂದಿನ ಸತ್ಪ್ರಜೆಯನ್ನಾಗಿ ಮಾಡಲು ಶಿಕ್ಷಕರ ಕುಂದು ಕೊರತೆಗಳನ್ನು ನಿವಾರಿ ಸಲು ಏಕಗವಾಕ್ಷಿ ಪದ್ಧತಿಯಲ್ಲಿ ಶಿಕ್ಷಣ ಅದಾಲತ್ ಎಂಬ ವಿನೂತನ ಕಾರ್ಯ ಕ್ರಮ ಆಯೋಜಿಸಿಲಾಗಿದೆ. ಇದರ ನಿವಾರಣೆಗಾಗಿ ಇಂದು ಈ ಶಿಕ್ಷಣ ಅದಾಲತ್ ಹಮ್ಮಿಕೊಳ್ಳಲಾಗಿದೆ. ನಿರೀಕ್ಷೆ ಗೂ ಮೀರಿ ಶಿಕ್ಷಕರು ಈ ಅದಾಲತ್ ನಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳಿಗೆ ಪರಿಹಾರ ಕಂಡುಕೊಂಡಿದ್ದು ನಿಜಕ್ಕೂ ಖುಷಿ ತಂದಿದೆ. ಮುಂದಿನ ದಿನಗಳಲ್ಲಿ  ಜಿಲ್ಲಾ ಪಂಚಾಯತಿ ಅಧೀನ ದಲ್ಲಿ ಬರುವ ಎಲ್ಲ ಇಲಾಖೆಯ ಅಧಿಕಾ ರಿಗಳ ಮತ್ತು ಸಿಬ್ಬಂದಿಗಳ ಹಿತದೃಷ್ಠಿ ಯಿಂದ ಎಲ್ಲ ಇಲಾಖೆಗಳ ಕುಂದು ಕೊರತೆ ಅದಾಲತ್ ಹಮ್ಮಿಕೊಳ್ಳಲಾಗು ವುದು ಎಂದು ಅವರು ಹೇಳಿದರು. 

ಶಿಕ್ಷಣ ಅದಾಲತ್ ಕಾರ್ಯಕ್ರಮದಲ್ಲಿ ಇಂಡಿ ಮತ್ತು ವಿಜಯಪುರ ಗ್ರಾಮೀಣ ಭಾಗದ ನೂರಾರು ಶಿಕ್ಷಕರು ಬಾಗವಹಿಸಿ ಗಳಿಕೆ ರಜೆ ನಗದೀಕರಣ, ಹಬ್ಬದ ಮುಂಗಡ, ವೇತನ ಬಡ್ತಿ, ಕಾಲಮಿತಿ ಬಡ್ತಿ, ಸ್ಥಗಿತ ವೇತನ ಬಡ್ತಿ, ಸೇವಾ ಪುಸ್ತಕ ಅಪಡೇಟ್ ಮಾಡುವುದು, ಶಿಸ್ತು ಕ್ರಮ, ಪಿಂಚಣಿ, ಜಿಪಿಎಫ್ ಮತ್ತು ವೈಧ್ಯಕೀಯ ಬಿಲ್ಲುಗಳಿಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಅದಾಲತ್ ನಲ್ಲಿ ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲಾಯಿತು. 

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಿಕ್ಷಕರು, ತಮ್ಮ ಕುಂದು ಕೊರತೆಗಳನ್ನು ಪರಿಹಾರ ಮಾಡಿಕೊಳ್ಳುವಲ್ಲಿ ಸಫಲರಾಗಿ ಹರ್ಷವನ್ನು ವ್ಯಕ್ತಪಡಿಸಿದರು. ಜಿಲ್ಲಾ ಶಿಕ್ಷಕರ ಸಂಘದ ಪ್ರತಿನಿದಿ ಅರ್ಜುನ ಲಮಾಣಿ ತಮ್ಮ ಸಂತಸವನ್ನು ವ್ಯಕ್ತಪಡಿಸಿ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ನಮ್ಮ ಜಿಲ್ಲೆಯಲ್ಲಿ ಇಂತಹ ವಿನೂತನ ಕಾರ್ಯಕ್ರಮ ಆಯೋಜನೆ ಮಾಡಿರುವುದರಿಂದ  ಜಿಲ್ಲೆಯ ಶಿಕ್ಷಕ ವರ್ಗಕ್ಕೆ ಉಪಯುಕ್ತವಾಗಿದೆ ಎಂದು ಹೇಳಿದರು. 

ಇಂತಹ ವಿನೂತನ ಕಾರ್ಯಕ್ರಮ ಆಯೋಜನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾದಿಕಾರಿಗಳಿಗೆ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು. 

  ಈ ಸಂದರ್ಭದಲ್ಲಿ  ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು (ಆಡಳಿತ) ಎನ್.ಎಚ್.ನಾಗೂರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಟಿ.ಎಸ್.ಆಲಗೂರ, ಶ್ರೀಮತಿ ಪ್ರಮೋದಿನಿ ಬಳೋಲಮಟ್ಟಿ, ಉಪ ಯೋಜನಾ ಸಮನ್ವಯಾಧಿಕಾರಿ ಎಮ್.ಎ.ಗುಳೆದಗುಡ್ಡ, ಶ್ರೀಮತಿ ಟಿ.ಎಚ್.ಕೊಲ್ಹಾರ, ರಾಜಶೇಖರ ದೈವಾಡಿ ಸೇರಿದಂತೆ ಜಿಲ್ಲಾ ಪಂಚಾಯತಿ ಮತ್ತು ಬಿಇಒ ಕಾರ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪೋಷಣ್ ಮಾಸಾಚರಣೆ ಕಾರ್ಯಕ್ರಮ

 


ವಿಜಯಪುರ: ಶಿಶು ಅಭಿವೃದ್ಧಿ ಯೋಜನೆ ವಿಜಯಪುರ (ನಗರ) ಯೋಜನೆಯಲ್ಲಿ ಪೋಷಣ್ ಅಭಿಯಾಯಾನ ಯೋಜನೆಯಡಿಯಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಜರುಗಿತು.

ಸಂತೋಷ ಕುಂದರ್ ಹಿರಿಯ ಸಿವಿಲ್ ನ್ಯಾಯಾಧೀಶರು ಕಾನೂನು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ರವರು ಕಾರ್ಯಕ್ರಮ ಉದ್ಘಾಟಣೆ ನೆರವೆರಿಸಿ ಪೌಷ್ಠಿಕ ಆಹಾರ ಆರೋಗ್ಯಕ್ಕೆ ಎಷ್ಟು ಉತ್ತಮ ಅದರ ಮಹತ್ವವ ಏನು ಎಂಬುದನ್ನು ಸವಿಸ್ತಾರವಾಗಿ ತಿಳಿಸಿದರು. 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಕೆ.ಕೆ.ಚವ್ಹಾಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿವಿಧ ಪೌಷ್ಟಿಕಾಂಶ ಸಂಬಂಧಿತ ಯೋಜನೆಗಳ ಒಮ್ಮುಖವನ್ನು ಖಾತ್ರಿಪಡಿಸುವ ಮೂಲಕ ಅಪೌಷ್ಟಿಕತೆ ಮತ್ತು ಇತರ ಸಂಬಂಧಿತ ಸಮಸ್ಯೆಗಳನ್ನು ಕಡಿಮೆ ಮಾಡಲು ಇದು ಗುರಿಯಾಗಿದೆ. ಇದು ಕುಂಠಿತ, ಅಪೌಷ್ಟಿಕತೆ, ರಕ್ತಹೀನತೆ (ಚಿಕ್ಕ ಮಕ್ಕಳು, ಮಹಿಳೆಯರು ಮತ್ತು ಹದಿಹರೆಯದ ಹುಡುಗಿಯರಲ್ಲಿ) ಮತ್ತು ಕಡಿಮೆ ಜನನ ಪ್ರಮಾಣವನ್ನು ಗುರಿಯಾಗಿಸುತ್ತದೆ ಎಂದರು.

ಈ ಸಂದರ್ಭ ಮಹಾನಗರ ಪಾಲಿಕೆ ಸದಸ್ಯರು ದಿನೇಶ ಹಳ್ಳಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ದೀಪಾಕ್ಷಿ ಜಾನಕಿ ವಿಜಯಪುರ(ನಗರ) ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು.

ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಾಹೇಬಗೌಡ ಝುಂಜರವಾಡ, ರಾಜಶೇಖರ ಜಿಲ್ಲಾ ಸಂಯೋಜಕರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. 

ಶ್ರೀಮತಿ ಅಶ್ವಿನಿ ಸನದಿ ಮೇಲ್ವಿಚಾರಕಿ ನಿರೂಪಿಸಿದರು.

ಇದೇ ಸಂಧರ್ಭದಲ್ಲಿ ಸೀಮಂತ ಕಾರ್ಯಕ್ರಮವನ್ನು ಮಾಡಲಾಯಿತು. ಇದಕ್ಕು ಮುನ್ನ ಸಹಿ ಕ್ಯಾಂಪಿಯನ್ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಯಿತು. ಕೇಕ್ ಕಟ್ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಮೇಲ್ವಿಚಾರಕಿಯರು, ಗರ್ಭಿಣಿ/ಬಾಣಂತಿಯರು ಕಾರ್ಯಕರ್ತೆ, ಸಹಾಯಕಿಯರು ಮುದ್ದು ಮಕ್ಕಳು ಹಾಜರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.