Monday, September 4, 2023
Sunday, September 3, 2023
ಸಿದ್ದಸಿರಿ ಸೌಹಾರ್ದ ಸಹಕಾರಿಯ 17ನೇ ವಾರ್ಷಿಕೋತ್ಸವ ಸಿದ್ದಸಿರಿ ಸಹಕಾರಿಗೆ ರೂ.11.11 ಕೋಟಿ ನಿವ್ವಳ ಲಾಭ
ಈ ದಿವಸ ವಾರ್ತೆ
ವಿಜಯಪುರ: ಸಿಬ್ಬಂದಿ ಹಾಗೂ ಗ್ರಾಹಕರ ಸಹಕಾರದಿಂದ ಸಿದ್ದಸಿರಿ ಸೌಹಾರ್ದ ಸಹಕಾರಿ ರೂ. 2,244 ಕೋಟಿ ಠೇವಣಿ ಹೊಂದಿದ್ದು, 2022-23ನೇ ಸಾಲಿನಲ್ಲಿ ರೂ.11,11,11,111 ನಿವ್ವಳ ಲಾಭ ಗಳಿಸಿದೆ ಎಂದು ಸೌಹಾರ್ದದ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ರಾ ಪಾಟೀಲ ಯತ್ನಾಳ ಅವರು ಹೇಳಿದರು.
ನಗರದ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಭಾನುವಾರ ನಡೆದ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದ 17ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೇ ನಂಬರ್-1 ಸೌಹಾರ್ದ ಸ್ಥಾನದಲ್ಲಿರುವ ನಮ್ಮ ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ, ಸತತ 3ನೇ ವರ್ಷವೂ ಶೇ 25 ರಷ್ಟು ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಸಹಕಾರಿಯ ಶೇರು ಬಂಡವಾಳ ರೂ.33 ಕೋಟಿ, ದುಡಿಯುವ ಬಂಡವಾಳ ರೂ.2319 ಕೋಟಿ ಇದ್ದು, ಠೇವಣಿಗಳು ರೂ.2,244 ಕೋಟಿ, ಸಾಲವ ಮುಂಗಡ ರೂ.1,555, ಕಾಯ್ದಿಟ್ಟ ನಿಧಿ ರೂ.42 ಕೋಟಿ, ನಿಶ್ಚಿತ ಆಸ್ತಿಗಳು ರೂ.39 ಕೋಟಿ, ಹೂಡಿಕೆಗಳು ರೂ.171 ಕೋಟಿ ಹೊಂದಿದೆ. ರಾಜ್ಯಾದ್ಯಂತ ಸಂಪೂರ್ಣ ಗಣಕೀಕೃತ 154 ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು, 14 ಸ್ವಂತ ಕಟ್ಟಡಗಳು, 20 ಖಾಲಿ ನಿವೇಶನ ನಗಳನ್ನು ಹೊಂದಿದೆ. 21,941 ಸದಸ್ಯರು ಇರುತ್ತಾರೆ ಎಂದು ತಿಳಿಸಿದರು.
ಸಹಕಾರಿ ಲೇವಾದೇವಿ ವ್ಯವಹಾರ ಅಲ್ಲದೆ 3 ಸಿದ್ದಸಿರಿ ಭಾರತೀಯ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರಗಳು, ಜೇವರ್ಗಿಯಲ್ಲಿ ಸಿದ್ದಸಿರಿ ರೈತರ ಉಗ್ರಾಣ, ಸಿದ್ದಸಿರಿ ಇಂಧನ ಕೇಂದ್ರ, ವಿಜಯಪುರ, ಸಿಂದಗಿ, ಬಬಲೇಶ್ವರ, ಬಿಜ್ಜರಗಿ, ಝಳಕಿಯಲ್ಲಿ ಸಿದ್ದಸಿರಿ ಕೃಷಿ ಕೇಂದ್ರಗಳು ಸ್ಥಾಪನೆ. ವಿಜಯಪುರದಲ್ಲಿ 5 ಸಾವಿರ ಮೆಟ್ರಿಕ್ ಟನ್ ಸಾಮಾರ್ಥ್ಯದ ಸಿದ್ದಸಿರಿ ಶೀತಲ ಘಟಕ ಮತ್ತು ಸಂಸ್ಕರಣ ಘಟಕ, 28 ಸಿದ್ದಸಿರಿ ಇ- ಸ್ಟಾಂಪ್ ಕೇಂದ್ರಗಳು, ಕಲಬುರ್ಗಿ ಜಿಲ್ಲೆಯ ಚಿಂಚೋಳಿಯಲ್ಲಿ ಸಿದ್ದಸಿರಿ ಎಥೆನಾಲ್ ಮತ್ತು ಪವರ ಉತ್ಪಾದನಾ ಘಟಕ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಹಿರಿಯ ನಾಗರಿಕರು, ಸೈನಿಕರು, ಮಾಜಿ ಸೈನಿಕರು, ವಿಧವೆಯರು ಮತ್ತು ದಿವ್ಯಾಂಗ ಠೇವಣಿದಾರರಿಗೆ ಶೆ 0.5 ಹೆಚ್ಚಿನ ಬಡ್ಡಿದರ ನೀಡಲಾಗುತ್ತದೆ. 6 ವರ್ಷಕ್ಕೆ ಹಣ ದ್ವಿಗುಣ ನೀಡಲಾಗುತ್ತಿದ್ದು, ಹಿರಿಯ ನಾಗರಿಕರಿಗೆ 5 ವರ್ಷ 8 ತಿಂಗಳಿಗೆ ಕೊಡಲಾಗುತ್ತದೆ. ಇದಲ್ಲದೇ, ಸಿದ್ದಸಿರಿ ಲಕ್ಕಿ ಗೋಲ್ಡ್ ಆರ್.ಡಿ ಸ್ಲಿಮ್ ಸೌಲಭ್ಯ ಇರುತ್ತದೆ ಎಂದು ಹೇಳಿದರು.
ಇದೇ ವೇಳೆ ಈಚೆಗೆ ಲಿಂಗೈಕ್ಯರಾದ ಸಿದ್ದೇಶ್ವರ ಶ್ರೀಗಳು, ನಿಧನರಾದ ರಾಜಕೀಯ ಮುಖಂಡರು, ಬ್ಯಾಂಕಿನ ಸಿಬ್ಬಂದಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಚಂದ್ರಯಾನ-3 ಯಶಸ್ಸಿಗೆ ಬೆನ್ನೆಲುಬಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ಹೆಮ್ಮೆಯ ವಿಜ್ಞಾನಿಗಳಿಗೆ ಗೌರವ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ನಿರ್ದೇಶಕರಾಗಿ ಆಯ್ಕೆಯಾದ ರಾಮನಗೌಡ ಬ. ಪಾಟೀಲ ಯತ್ನಾಳ ಅವರನ್ನು ಹಾಗೂ ಅತ್ಯುತ್ತಮ ಕಾರ್ಯನಿರ್ವಹಿಸಿದ ಸಿಬ್ಬಂದಿಗಳಿಗೆ ಸನ್ಮಾನಿಸಲಾಯಿತು. ಸಿದ್ದಸಿರಿ ಒಣದ್ರಾಕ್ಷಿ ಬ್ರಾಂಡ್ ಬಿಡುಗಡೆಗೊಳಿಸಲಾಯಿತು.
ಸೌಹಾರ್ದದ ಉಪಾಧ್ಯಕ್ಷರಾದ ಬಸಯ್ಯ ಹಿರೇಮಠ, ನಿರ್ದೇಶಕರಾದ ಸಂಗನಬಸಪ್ಪ ಸಜ್ಜನ, ಶಿವಾನಂದ ಅಣೆಪ್ಪನವರ, ಸಾಯಿಬಾಬಾ ಸಿಂದಗೇರಿ, ಜಗದೀಶ ಕ್ಷತ್ರಿ, ಪ್ರಭುಗೌಡ ದೇಸಾಯಿ, ರಮೇಶ ಬಿರಾದಾರ, ವಿಜಯಕುಮಾರ್ ಚವ್ಹಾಣ, ಅಶೋಕಗೌಡ ತೊರವಿ, ಶೈಲಜಾ ಪಾಟೀಲ, ಸೀಮಾ ಕೋರೆ, ಸೋಮಶೇಖರ್ ಬಂಡಿ, ಡಾ.ಬಸನಗೌಡ ಪಾಟೀಲ ನಾಗರಾಳ ಹುಲಿ, ಗಣಪತಿ ಜಾಧವ, ವ್ಯವಸ್ಥಾಪಕ ನಿರ್ದೇಶಕರು ಜೋತಿಬಾ ಖಂಡಗಾಳೆ, ಜಂಟಿ ವ್ಯವಸ್ಥಾಪಕ ನಿರ್ದೇಶಕರು ರಾಘವ ಅಣ್ಣಿಗೇರಿ ಮತ್ತಿತರರು ಇದ್ದರು.
Saturday, September 2, 2023
ರಾಘವೇಂದ್ರ ಮಹಾಸ್ವಾಮಿಗಳ ಆರಾಧಾನಾ ಮಹೋತ್ಸವ
ವಿಜಯಪುರ : ವಿಜಯಪುರದ ದಿವಟಗೇರಿಗಲ್ಲಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸನ್ನಿಧಾನದಲ್ಲಿ ಶ್ರೀ ರಾಘವೇಂದ್ರ ಮಹಾಸ್ವಾಮಿಗಳ ಆರಾಧಾನಾ ಮಹೋತ್ಸವ ಪ್ರಯುಕ್ತ ಉತ್ತರಾರಾಧನೆ ಭಕ್ತಿಪರ‍್ವಕವಾಗಿ ನಡೆಯಿತು.
ಕರ‍್ಯಕ್ರಮದ ಅಂಗವಾಗಿ ಬೆಳಿಗ್ಗೆ ಸುಪ್ರಭಾತ ಆರಂಭವಾಯಿತು, ನಂತರ ರಥಾಂಗಹವನ, ಶ್ರೀ ಹರಿ ವಾಯುಸ್ತುತಿ ಪುನಶ್ಚರಣ, ಸಪ್ತಕಹವನ, ಶ್ರೀ ಗುರು ಸ್ತೊçÃತ್ರ ಅಷ್ಟೋತ್ತರ ಶತ:ಪಠಣ ಪರ‍್ವಕ ಭಕ್ತಿಭಾವದಿಂದ ನಡೆಯಿತು.
ನಂತರ ಶ್ರೀ ಗುರುಸಾರ್ವಭೌಮರಿಗೆ ಕ್ಷೀರಾಭಿಷೇಕ, ಮಹಾ ಪಂಚಾಮೃತ ಅಭೀಷೇಕ ಸಲ್ಲಿಸಲಾಯಿತು. ಪಲ್ಲಕ್ಕಿ ಸೇವೆ, ರಜತ ರಥೋತ್ಸವ ವೈಭವದಿಂದ ನಡೆಯಿತು. ನಂತರ ಅಷ್ಟಾವಧಾನ ಸೇವೆ, ಮಹಾಮಂಗಳಾರತಿ, ಮಂತ್ರಪುಷ್ಪ, ಸ್ವಸ್ತಿವಾಚನ, ಶ್ರೇಯ: ಪ್ರರ‍್ಥನೆ ನೆರವೇರಿತು. ನಂತರ ಮಹಾಪೂಜೆ, ನೈವೇದ್ಯ ಸರ‍್ಪಣೆ ಹಾಗೂ ಮಹಾಮಂಗಳಾರತಿ ನಡೆಯಿತು.
ಪ್ರಕಾಶ್ ಅಕ್ಕಲಕೋಟ, ಅಪ್ಪಣ್ಣಾಚಾರ್ಯ, ಡಿ.ಜಿ. ಹರಿದಾಸ್, ನಾರಾಯಣ ಕುಲಕರ್ಣಿ, ವೆಂಕಟೇಶ್ ಖಾಸನಿಸ್, ಗೋವಿಂದರಾಜ ದೇಶಪಾಂಡೆ ,ವಿಜಯ ಜೋಶಿ ವಿಕಾಸ್ ಪದಕಿ, ರಾಕೇಶ್ ಕುಲಕರ್ಣಿ, ಶ್ರೀಹರಿ ಕುಲಕರ್ಣಿ, ವೆಂಕಟೇಶ್ ಗುಡಿ, ಉಮೇಶ ಕುಲಕರ್ಣಿ ಪಾಲ್ಗೊಂಡಿದ್ದರು.
ಅಖಂಡ ಕರ್ನಾಟಕ: ಉತ್ತರ/ದಕ್ಷಿಣ ಎಂಬ ತಾರತಮ್ಯ ಇಲ್ಲ ಬರಗಾಲ ಘೋಷಣೆ: ಸೆ.4 ರಂದು ತೀರ್ಮಾನ ಮುಖ್ಯಮಂತ್ರಿ ಸಿದ್ದರಾಮಯ್ಯ
ಈ ದಿವಸ ವಾರ್ತೆ
ವಿಜಯಪುರ : ಕೃಷ್ಣಾ ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷ್ಣೆಗೆ ಇಂದು ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.
ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಆಲಮಟ್ಟಿಯ ಸಂಗ್ರಹಣೆ ಮಟ್ಟ 519.6 ಮೀಟರ್ ಅಡಿ ಇದೆ. ಅದರ ಒಟ್ಟು ಸಂಗ್ರಹಣೆ 123.08 ಟಿ.ಎಂಸಿ. ಒಂದು ಟಿಎಂಸಿ ನೀರು ಎಂದರೆ 11 ಸಾವಿರ ಕ್ಯೂಸೆಕ್ಸ್ ನೀರು. ಇಡೀ ಕರ್ನಾಟಕದ ಜಲಾಶಯಗಳಲ್ಲಿ ಕೃಷ್ಣಾ ಮೇಲ್ದಂಡೆ ಪೂರ್ಣ ಭರ್ತಿಯಾಗಿದೆ. ನಾರಾಯಣಪುರ ಜಲಾಶಯ ತುಂಬಿದೆ. ಭರ್ತಿಯಾಗಿರುವುದರಿಂದ ನಾಲೆಗಳಿಗೆ, ಕುಡಿಯುವ ನೀರು, ವಿದ್ಯುಚ್ಛಕ್ತಿ ಉತ್ಪಾದನೆಗೆ ನೀರು ಹರಿಸಲಾಗುತ್ತಿದೆ. ಕುಡಿಯುವ ನೀರು ಬಿಟ್ಟಿರುವುದರಿಂದ ಒಂದು ಟಿಎಂಸಿ ನೀರು ಕಡಿಮೆ ಇದೆ. ನಾರಾಯಣಪುರದಲ್ಲಿಯೂ ಕೂಡ 492 ಮೀ. ನೀರು ಇದೆ. 105.46 ಟಿಎಂಸಿ ನೀರು ಲೈವ್ ಸ್ಟೋರೇಜೆ ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ 11 ಟಿಎಂಸಿ ನೀರಿನ ಸಂಗ್ರಹ ಕಡಿಮೆ ಇದೆ. ಕಳೆದ ವರ್ಷ ಒಳಹರಿವು ಹೆಚ್ಚಿತ್ತು.25450 ಕ್ಯೂಸೆಕ್ಸ್ ನೀರಿತ್ತು , ಆದರೆ ಈಗ 3730 ಕ್ಯೂಸೆಕ್ಸ್ ನೀರಿನ ಸಂಗ್ರಹ ಇದೆ ಎಂದರು.
ಬರಗಾಲ ಘೋಷಣೆ: ಸೆ.4 ರಂದು ತೀರ್ಮಾನ
ಒಟ್ಟಾರೆಯಾಗಿ ಈ ವರ್ಷ ಕೃಷ್ಣಾ ಮೇಲ್ದಂಡೆ ಪ್ರದೇಶದ ಅಚ್ಚುಕಟ್ಟಿನಲ್ಲಿ ಮಳೆ ಕಡಿಮೆಯಾಗಿದೆ. ಈ ವರ್ಷ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಮಳೆ ಕಡಿಮೆಯಾಗಿದೆ. ಶೇ. 56% ಕೊರತೆಯಾಗಿದೆ. ಆಗಸ್ಟ್ ನಲ್ಲಿಯೂ ಕೊರತೆ ಕಂಡು ಬಂದಿದ್ದು, ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ಈಗಾಗಲೇ ಮೂರು ಸಭೆಗಳನ್ನು ನಡೆಸಿದೆ. ಪುನ: ಸೆ.04 ರಂದು ಮತ್ತೊಂದು ಸಭೆ ನಡೆಯಲಿದೆ. 113 ತಾಲ್ಲೂಕುಗಳಲ್ಲಿ ಬರಗಾಲ ಇದೆ ಎಂದು ಜಂಟಿ ಸಮೀಕ್ಷೆ ನಡೆಸಿದ್ದಾರೆ. ಇದಲ್ಲದೆ 73 ತಾಲ್ಲೂಕುಗಳಲ್ಲಿ ಬರಗಾಲ ಉಂಟಾಗಿದೆ ಎಂದು ಹೇಳಿದ್ದಾರೆ. ಅದಕ್ಕೂ ಜಂಟಿ ಸಮೀಕ್ಷೆ ನಡೆಸಿ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗಿದೆ. ಸೆ.4 ರಂದು ಒಂದು ತೀರ್ಮಾನಕ್ಕೆ ಬರಲಾಗುವುದು ಎಂದರು.
ಎನ್ ಡಿ ಆರ್ ಎಫ್ ಮಾರ್ಗಸೂಚಿಗಳ ಪರಿಷ್ಕರಣೆಗೆ ಮನವಿ :
ಬರ ಘೋಷಣೆಯ ನಂತರ ಕೇಂದ್ರಸರ್ಕಾರಕ್ಕೆ ಬರಪೀಡಿತ ತಾಲ್ಲೂಕುಗಳಿಗೆ ನೆರವು ಕೋರಿ ಮನವಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಸಮಿತಿಯು ಸಮೀಕ್ಷೆ ನಡೆಸಿದ ನಂತರ , ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಹಣ ಬಿಡುಗಡೆ ಮಾಡುತ್ತದೆ. ರಾಜ್ಯಸರ್ಕಾರ ಈ ಅನುದಾನದಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತದೆ . ಅದಲ್ಲದೇ ರಾಜ್ಯ ಸರ್ಕಾರವೂ ಪರಿಹಾರ ಕಾರ್ಯಗಳಿಗೆ ಹಣ ವಿನಿಯೋಗಿಸಲಿದೆ. 2020 ರಿಂದ ಇಲ್ಲಿಯವರೆಗೆ ಪರಿಷ್ಕರಣೆ ಆಗಿಲ್ಲ. ಎನ್ ಡಿ ಆರ್ ಎಫ್ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಹಾಗೂ ರಾಜ್ಯಗಳಿಗೆ ಹೆಚ್ಚು ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಅಖಂಡ ಕರ್ನಾಟಕ: ಉತ್ತರ/ದಕ್ಷಿಣ ಎಂಬ ತಾರತಮ್ಯ ಇಲ್ಲ
ಕೃಷ್ಣಾ ಕಾವೇರಿ ಜೀವನದಿಗಳು. ಕಾವೇರಿ, ಕೃಷ್ಣಾ ನದಿ ಪಾತ್ರದಲ್ಲಿರುವವರೆಲ್ಲರೂ ನಮ್ಮ ರೈತರೇ. ತಾರತಮ್ಮ ಮಾಡುವ ಪ್ರಶ್ನೆಯೇ ಇಲ್ಲ.ಅಖಂಡ ಕರ್ನಾಟಕದಲ್ಲಿ ದಕ್ಷಿಣ, ಉತ್ತರ ಎಂಬ ಪ್ರಶ್ನೇ ಇಲ್ಲ ಎಂದರು.
ತಮಿಳುನಾಡಿಗೆ ಕಾವೇರಿ ನೀರು: ದೆಹಲಿಗೆ ಶೀಘ್ರ ಸರ್ವ ಪಕ್ಷ ನಿಯೋಗ
ಕಾವೇರಿ ನೀರಿಗೆ ಸಂಬಂಧಿಸಿದಂತೆ ಸರ್ವ ಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಸಂಪನ್ಮೂಲ ಸಚಿವರ ಸಮಯವನ್ನು ಕೋರಿದ್ದೇವೆ. ಈಗಾಗಲೇ ನಮ್ಮ ಜಲಸಂಪನ್ಮೂಲ ಸಚಿವರು ನಮ್ಮ ರಾಜ್ಯದ ಪರವಾಗಿ ವಾದ ಮಂಡಿಸುವ ವಕೀಲರನ್ನು ಭೇಟಿ ಮಾಡಿ ಅವರಿಗೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಬುಧವಾರ ಪ್ರಕರಣ ವಿಚಾರಣೆಗೆ ಬರಲಿದ್ದು ನಮ್ಮ ವಾದ ಏನಿರಬೇಕು ಎಂದು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಧಿಸೂಚನೆಗೆ ಆಗ್ರಹ :
ಕೇಂದ್ರ ಸಚಿವರು ಭೇಟಿಗೆ ಅವಕಾಶ ನೀಡಿದ್ದಲ್ಲಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು. ಮಹಾದಾಯಿ ಯೋಜನೆಗೆ ಅಧಿಸೂಚನೆ ಹೊರಡಿಸಲಾಗಿದ್ದರೂ, ಅರಣ್ಯ ಹಾಗೂ ಪರಿಸರ ತೀರುವಳಿ ದೊರೆತಿರುವುದಿಲ್ಲ.ಈ ಯೋಜನೆಗೆ ತೀರುವಳಿ ಹಾಗೂ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು. ಇಂದು ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಿಲ್ಲದ ಕಾರಣ ಹಾಗೂ ಕುಡಿಯುವ ನೀರಿನ ಕೊರತೆಯಿಂದಾಗಿ ಸಂಕಷ್ಟದ ಸಮಯವನ್ನು ಎದುರಿಸುವಂತಾಗಿದೆ. ಜಲನೀತಿಯ ಪ್ರಕಾರ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಾಗುತ್ತದೆ ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆಯ 3 ನೇ ಹಂತ ಪೂರ್ಣಗೊಳ್ಳಲು 1 ಲಕ್ಷ ಕೋಟಿ ರೂ. ಅಗತ್ಯ :
ಕೃಷ್ಣಾ ಮೇಲ್ದಂಡೆ ಯೋಜನೆಯ 3 ನೇ ಹಂತ ಪೂರ್ಣಗೊಳ್ಳಲು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯಗಳು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲು ಸುಮಾರು 1 ಲಕ್ಷ ಕೋಟಿ ರೂ.ಗಳ ಅಗತ್ಯವಿದೆ. 2023 ರ ಅಂದಾಜಿನ ಪ್ರಕಾರ 83700 ಕೋಟಿ ರೂ. ಇದ್ದು, ಯೋಜನೆ ಪೂರ್ಣಗೊಳ್ಳುವವರೆಗೆ 1 ಲಕ್ಷ ಕೋಟಿ ವೆಚ್ಚವಾಗುವ ಸಾಧ್ಯತೆ ಇದೆ. ರಾಜ್ಯಸರ್ಕಾರ ಯೋಜನೆಯ ಕಾಮಗಾರಿ ಕೈಗೆತ್ತಿಕೊಳ್ಳಲು ಸಿದ್ಧವಿದ್ದು, ಕೇಂದ್ರಸರ್ಕಾರ ತ್ವರಿತಗತಿಯಲ್ಲಿ ಅಧಿಸೂಚನೆ ಹೊರಡಿಸಬೇಕಾಗಿದೆ. ಆದಾಗ್ಯೂ ಯೋಜನೆಯ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯಗಳು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚಿನ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇಸ್ರೋ ವಿಜ್ಞಾನಿಗಳಿಗೆ ಸನ್ಮಾನ :
ಇಸ್ರೋ ಸಂಸ್ಥೆಯು ಆದಿತ್ಯ -ಎಲ್1 ಉಪಗ್ರಹವನ್ನು ಯಶಸ್ಸಿಯಾಗಿ ಉಡಾವಣೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಸ್ರೋ ವಿಜ್ಞಾನಿಗಳಿಗೆ ಶುಭ ಕೋರಲಾಗಿದೆ. ಚಂದ್ರಯಾನ -3 ರ ಯಶಸ್ಸಿಗೆ ದ್ಯೋತಕವಾಗಿ ಇಸ್ರೋ ವಿಜ್ಞಾನಿಗಳಿಗೆ ಸರ್ಕಾರದ ವತಿಯಿಂದ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗುವುದು ಎಂದರು.
ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ .ಎಂ.ಬಿ ಪಾಟೀಲ್ , ಸಚಿವರಾದ ಕೃಷ್ಣಬೈರೇಗೌಡ, ಶಾಸಕರಾದ ಎಚ್.ವೈ. ಮೇಟಿ, ಯಶವಂತ ರಾಯಗೌಡ ಪಾಟೀಲ, ಅಶೋಕ ಮನಗೂಳಿ, ವಿಠಲ ಕಟಕದೋಂಡ, ಸಂಸದ ರಮೇಶ್ ಜಿಗಜಿಣಗಿ, ಪಿ.ಸಿ ಗದ್ದಿಗೌಡ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಈ ದಿವಸ ವಾರ್ತೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಲಮಟ್ಟಿಯಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.
ಈ ಸಂಸರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.






