Monday, October 9, 2023

ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಪೀರಬಾಶಾ ಗಚ್ಚಿನಮಹಲ್ ನೇಮಕ

ಈ ದಿವಸ ವಾರ್ತೆ

ವಿಜಯಪುರ: ಪೀರಬಾಶಾ ಶಮಶೋದ್ದೀನ ಗಚ್ಚಿನಮಹಲ್ ಅವರನ್ನು ವಿಜಯಪುರ ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ಜಿಲ್ಲಾ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಜನತಾದಳ (ಜಾತ್ಯಾತೀತ) ಶಾಸಕಾಂಗ ಪಕ್ಷದ ನಾಯಕರಾದ ಎಚ್.ಡಿ. ಕುಮಾರಸ್ವಾಮಿಯವರ ಸೂಚನೆ ಮೇರೆಗೆ ನೇಮಕಮಾಡಿ ಆದೇಶ ಹೊರಡಿಸಿದೆ.

ಕೂಡಲೇ ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ದರಾಗಿ, ಪಕ್ಷದ ಎಲ್ಲ ಮುಖಂಡರನ್ನು ಹಾಗೂ ಅಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ವಿಜಯಪುರ ಜಿಲ್ಲೆಯ ಜನತಾದಳ (ಜಾತ್ಯಾತೀತ) ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಲು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಕಲ್ಲಪ್ಪ ಶಿವಶರಣ
ವ್ಯವಸ್ಥಾಪಕ ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
 ಮೊ: 7204279187/     
          9900378892

ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.

Sunday, October 8, 2023

ಹೊನ್ನಾವರದ ಶಾಂತಿ ನಾಯಕ ಅವರಿಗೆ “ದೇಸಿ ಸನ್ಮಾನ” ಪ್ರಶಸ್ತಿ

ಈ ದಿವಸ ವಾರ್ತೆ

ವಿಜಯಪುರ: ಸಿಂದಗಿಯ ನೆಲೆ ಪ್ರಕಾಶನ ಸಂಸ್ಥೆಯ ಎಂ.ಎಂ.ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನ'ವು ನಾಡಿನ ಹಿರಿಯ ಜಾನಪದ ವಿದ್ವಾಂಸರಿಗೆ ಕೊಡಮಾಡುವ ‘ದೇಸಿ ಸನ್ಮಾನ' ಪ್ರಶಸ್ತಿಗೆ ಹೊನ್ನಾವರದ ಹಿರಿಯ ಜಾನಪದ ವಿದ್ವಾಂಸರಾದ ಶಾಂತಿ ನಾಯಕ ಅವರು 2023ನೆಯ ಸಾಲಿಗೆ ಭಾಜನರಾಗಿದ್ದಾರೆ.

ಪಶಸ್ತಿ ಆಯ್ಕೆ ಸಮಿತಿಯ ಸದಸ್ಯರಾದ ಡಾ.ರಾಮಕೃಷ್ಣ ಮರಾಠೆ, ಡಾ.ವಿಜಯಕುಮಾರ ಕಟಗಿಹಳ್ಳಿಮಠ ಹಾಗೂ ಡಾ.ಎಫ್.ಟಿ.ಹಳ್ಳಿಕೇರಿ ಅವರು ಶಾಂತಿ ನಾಯಕ ಅವರ ಸಾಧನೆಯನ್ನು ಗಮನಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಸಿಂದಗಿಯಲ್ಲಿ ನವೆಂಬರ್ 5, 2023ರಂದು ಜರುಗಲಿದೆ. ಪುರಸ್ಕೃತರಿಗೆ ರೂ.11000/- ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು. ಅದೇ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ನಾಗರಾಜ ಹೆಗಡೆ, ಅಪಗಾಲ ಅವರು ರಚಿಸಿದ 'ಶಾಂತಿ ನಾಯಕ: ಬದುಕು-ಬರಹ' ಎನ್ನುವ ಕಿರುಹೊತ್ತಿಗೆಯನ್ನು ನೆಲೆ ಪ್ರಕಾಶನ ಸಂಸ್ಥೆಯು ಪ್ರಕಟಗೊಳಿಸಿ ಲೋಕಾರ್ಪಣೆ ಮಾಡುವುದು ಎಂದು ಎಂ.ಎಂ.ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕರಾದ ಡಾ.ಚನ್ನಪ್ಪ ಕಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಕಲ್ಲಪ್ಪ ಶಿವಶರಣ
ವ್ಯವಸ್ಥಾಪಕ ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
 ಮೊ: 7204279187/     
          9900378892

ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.

Friday, October 6, 2023

07-10-2023 EE DIVASA KANNADA DAILY NEWS PAPER

ಬೆಂವಿವಿ: ತತ್ವಶಾಸ್ತ್ರ ವಿಭಾಗದಿಂದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಇಂದು

ಈ ದಿವಸ ವಾರ್ತೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಆಯೋಜಿಸಿರುವ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆಂದು ಕಾರ್ಯಕ್ರಮದ ನಿರ್ದೇಶಕ ಡಾ.ಎಂ. ಗೋವಿಂದರಾಜು ರವರು ತಿಳಿಸಿದ್ದಾರೆ.

 "ಬೌದ್ಧ ಧರ್ಮ ಮತ್ತು ಮಹಿಳಾ ಸಬಲೀಕರಣದ ಕುರಿತು ಬಾಬಾಸಾಹೇಬ್ ಅಂಬೇಡ್ಕರ್ ರವರ  ತಾತ್ವಿಕ ಚಿಂತನೆಗಳು" ಎಂಬ ವಿಷಯದ ಮೇಲೆ ಈ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.

ಜ್ಞಾನಭಾರತಿ ಆವರಣದಲ್ಲಿರುವ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸೆಮಿನಾರ್ ಹಾಲ್ ನಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು, ಅಕ್ಟೋಬರ್ 07 ಬೆಳಗ್ಗೆ 10 ಗಂಟೆಗೆ ಉದ್ಘಾಟನೆಯಾಗಲಿದೆ. 

ಸಂಪನ್ಮೂಲ ವ್ಯಕ್ತಿಗಳಾಗಿ ಬೆಂವಿವಿಯ ಸೆಂಟರ್ ಫಾರ್ ರೂರಲ್ ಡೆವಲಪ್ಮೆಂಟ್ ಸ್ಟಡೀಸ್ ನ ನಿರ್ದೇಶಕ ಪ್ರೊ.ಟಿ.ಎಚ್.ಮೂರ್ತಿ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಕೃಷಿ ಎಂಜಿನಿಯರ್‌ ಶ್ರೀ ಎಸ್. ಸಿದ್ದಯ್ಯ ಅವರಿಂದ ವಿಚಾರ ಮಂಡನೆ ಮಾಡಲಿದ್ದಾರೆ. ಸದರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ.ಟಿ.ರಾಜೇಂದ್ರ ಪ್ರಸಾದ್ ರವರು ವಹಿಸಿಲಿದ್ದಾರೆ. ಈ ವಿಚಾರ ಸಂಕಿರಣದಲ್ಲಿ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಮತ್ತಿತರರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ನಿರ್ದೇಶಕರು ಶ್ರೀ ಡಾ. ಎಂ. ಗೋವಿಂದರಾಜು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.