Wednesday, January 31, 2024

01-02-2024 EE DIVASA KANNADA DAILY NEWS PAPER

ಪ್ರಶಸ್ತಿ ನೀಡಿಕೆ ಮುಂದೂಡಬಾರದು. ಆಯಾ ವರ್ಷವೇ ನೀಡಿ ಗೌರವಿಸಬೇಕು: ಸಿ.ಎಂ.ಸಿದ್ದರಾಮಯ್ಯ ಸೂಚನೆ

ಈ ದಿವಸ ವಾರ್ತೆ

ಬೆಂಗಳೂರು : ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ. ನಾವು ಮೂಗು ತೀರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜೀವಮಾನ ಸಾಧನೆಗಾಗಿ ಕೊಡಮಾಡುವ ವಿವಿಧ ಪ್ರಶಸ್ತಿಗಳನ್ನು 75 ಮಹನೀಯರಿಗೆ ನೀಡಿ ಸನ್ಮಾನಿಸಿ ಮಾತನಾಡಿದರು. 

ಸಾಹಿತ್ಯ, ಕಲೆ , ಸಂಸ್ಕೃತಿ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಉತ್ತೇಜನ ನೀಡುವುದು ಸಮಾಜ ಮತ್ತು ಸರ್ಕಾರದ ಜವಾಬ್ದಾರಿ. ನಮ್ಮ ಸಸರ್ಕಾರ ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರೋತ್ಸಾಹ ನೀಡುವುದರಲ್ಲಿ ಹಿಂದೆ ಬೀಳುವುದಿಲ್ಲ ಎಂದರು. 

ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ. ನಾವು ಮೂಗು ತೀರಿಸುವುದಿಲ್ಲ. ಈ ವಿಚಾರದಲ್ಲಿ ನಾನು ಬಹಳ ನಿಷ್ಠುರವಾಗಿ ವರ್ತಿಸುತ್ತೇನೆ. ನನ್ನ ಮೇಲೆ ಒತ್ತಡ ಹಾಕುವ ಎಲ್ಲರಿಗೂ ನಾನು ಅಷ್ಟೆ ನಿಷ್ಠುರವಾಗಿ ಹೇಳಿಬಿಡುತ್ತೇನೆ ಎಂದರು. 

ನಮ್ಮ ಸರ್ಕಾರ ಜನರ ನಂಬಿಕೆಗಳನ್ನು ಗೌರವಿಸುತ್ತದೆ. ಬಸವಣ್ಣನವರು ಮೌಡ್ಯ ಮುಕ್ತ, ಜಾತಿ ಮುಕ್ತ, ವರ್ಗ ಮುಕ್ತ ಸಮ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ್ದರು. ಅದಕ್ಕೆ ದೇಹವೇ ದೇಗುಲ ಎಂದು ವಚನಕಾರರು ಪ್ರತಿಪಾದಿಸಿದ್ದಾರೆ. ಆದರೆ ಕೆಲವರು ದೇವಸ್ಥಾನದಲ್ಲಿ ಮಾತ್ರ ದೇವರಿದ್ದಾನೆ ಎಬ್ನುವ ನಂಬಿಕೆಯಿಂದ ಹೋಗುತ್ತಾರೆ. ಅವರ ನಂಬಿಕೆಯನ್ನೂ ಗೌರವಿಸುತ್ತೇವೆ. ದೇವಸ್ಥಾನಕ್ಕೆ ಹೋಗುವವರು ಅವರ ಇಷ್ಟದ ಉಡುಪು ಧರಿಸಿ ಹೋಗಬಹುದು. ಈ ವಿಚಾರದಲ್ಲೂ ನಮ್ಮದೇನೂ ಅಭ್ಯಂತರ ಇಲ್ಲ ಎಂದರು. 

ದೇವರು, ಧರ್ಮದ ಬಗ್ಗೆ ಯಾರ ನಂಬಿಕೆ ಏನೇ ಇದ್ದರೂ ಎಲ್ಲರೂ ಮೊದಲು ಮನುಷ್ಯರಾಗಬೇಕು. ಮನುಷ್ಯ ಮನುಷ್ಯರನ್ನು ದ್ವೇಷಿಸಬಾರದು. ಇದೇ ಅತ್ಯುನ್ನತ ಮೌಲ್ಯ ಎಂದರು. 

ರವೀಂದ್ರ ಕಲಾ ಕ್ಷೇತ್ರ ಮತ್ತು ಸಂಸ ರಂಗ ಮಂದಿರ ನವೀಕರಣಕ್ಕೆ ಇಷ್ಟೆ ಖರ್ಚು ಮಾಡಬೇಕು ಎನ್ನುವ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. 24 ಕೋಟಿ ಖರ್ಚು ಮಾಡಿ ನವೀಕರಣ ಮಾಡುತ್ತಿದೆ ಎನ್ನುವುದು ಸರಿಯಲ್ಲ. ಮೊತ್ತದ ಬಗ್ಗೆ ಯಾವ ತೀರ್ಮಾನವೂ ಆಗಿಲ್ಲ ಎಂದು ಪುನರುಚ್ಚರಿಸಿದರು. 

2020-21 ರಿಂದ 2023-24ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರ, ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ, ಪಂಡಿತ್ ಪಂಚಾಕ್ಷರಿ ಗವಾಯಿ ಪ್ರಶಸ್ತಿ, ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಅಕ್ಕಮಹಾದೇವಿ ಪ್ರಶಸ್ತಿ, ಕನಕಶ್ರೀ ಪ್ರಶಸ್ತಿ, ಪಂಪ ಪ್ರಶಸ್ತಿ, ಶ್ರೀ ನಿಜಗುಣ ಪುರಂದರ ಪ್ರಶಸ್ತಿ, ಕುಮಾರವ್ಯಾಸ ಪ್ರಶಸ್ತಿ, ಶಾಂತಲಾನಾಟ್ಯ ರಾಣಿ ಪ್ರಶಸ್ತಿ, ಸಂತ ಶಿಶುನಾಳ ಷರೀಫ ಪ್ರಶಸ್ತಿ,  ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ, ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಬಿ.ವಿ.ಕಾರಂತ ಪ್ರಶಸ್ತಿ, ಡಾ.ಗುಬ್ಬಿ ವೀರಣ್ಣ ಪ್ರಶಸ್ತಿ, ಡಾ.ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಜಾನಪದಶ್ರೀ ಪ್ರಶಸ್ತಿ ಪುರಸ್ಕೃತರಾದ ಒಟ್ಟು 75 ಮಂದಿಗೆ ಮುಖ್ಯಮಂತ್ರಿಗಳು ಪ್ರಶಸ್ತಿ ನೀಡಿ ಗೌರವಿಸಿದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಶರಣ ಶ್ರೇಷ್ಠರಾದ ಬಸವಣ್ಣನವರನ್ನು ಕನ್ನಡ ನಾಡಿನ ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಲಾಖೆ ಪರವಾಗಿ ಅಭಿನಂದನೆ ಸಲ್ಲಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Tuesday, January 30, 2024

31-01-2024 EE DIVASA KANNADA DAILY NEWS PAPER

ಜಿಲ್ಲಾ ಮಟ್ಟದ ದಿನ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಹೆಚ್ಚಿನ ಜಾಹೀರಾತು ನೀಡಿ ಸರ್ಕಾರ ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು. : ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ

ಈ ದಿವಸ ವಾರ್ತೆ

ವಿಜಯಪುರ : ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಮಾಧ್ಯಮಪಟ್ಟಿಯಲ್ಲಿರುವ ದಿನ ಮತ್ತು ಪ್ರಾದೇಶಿಕ ಪತ್ರಿಕೆಗಳು ತೀರಾ ಸಂಕಷ್ಟ ಅನುಭವಿಸುತ್ತಿವೆ. ಸರ್ಕಾರದ ಜಾಹೀರಾತುಗಳು ನೀಡುವಲ್ಲಿ ತಾರತಮ್ಯವಾಗುತ್ತಿವೆ. ರಾಜ್ಯಮಟ್ಟದ ಪತ್ರಿಕೆಗಳಿಗೆ ಹೆಚ್ಚಿನ ಜಾಹೀರಾತುಗಳನ್ನು ರಾಜ್ಯ ಸರ್ಕಾರ ನೀಡಿ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಜಾಹೀರಾತು ನೀಡದೇ ಅನ್ಯಾಯ ಮಾಡುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ ಗಂಭೀರ ಆರೋಪ ಮಾಡಿದರು.

ಅವರು ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ವಿಜಯಪುರ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 

ಸರ್ಕಾರ ಪತ್ರಿಕೆಗಳಿಗೆ ಕಳೆದ ಒಂದು ವರ್ಷದಿಂದ ಜಾಹೀರಾತು ದರ ಪರಿಷ್ಕರಣೆ ಮಾಡಿಲ್ಲ. ಪ್ರಕಟಗೊಂಡ ಜಾಹೀರಾತುಗಳ ಮೊತ್ತವನ್ನು ಏಜೆನ್ಸಿಗಳಿಗೆ ಕೊಡದೇ ಸತಾಯಿಸುತ್ತಿವೆ. ಇದರಿಂದ ಪತ್ರಿಕೆಗಳನ್ನು ಮುನ್ನೆಡೆಸುವುದಕ್ಕೆ ಸಂಪಾದಕರಿಗೆ ತೀರ ಕಷ್ಟವಾಗಿದೆ. ಇಂತಹ ಕ್ಲೀಷ್ಟ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಪತ್ರಿಕೆಗಳ ನೆರವಿಗೆ ಬಂದು ತಾರತಮ್ಯ ನೀತಿ ಅನುಸರಿಸದೇ ಜಾಹೀರಾತು ನೀತಿ ಪ್ರಕಾರ ಜಿಲ್ಲಾ ಪ್ರಾದೇಶಿಕ ಪತ್ರಿಕೆಗಳಿಗೆ ಎಲ್ಲಾ ಬಗ್ಗೆಯ ಜಾಹೀರಾತುಗಳನ್ನು ಬಿಡುಗಡೆ ಮಾಡಬೇಕು. ಬಾಕಿ ಇರುವ ಜಾಹೀರಾತು ಬಿಲ್ಲುಗಳನ್ನು ಪಾವತಿಸಬೇಕು. ಹಣ ಕೊಡದೇ ಸತಾಯಿಸುವ ಏಜೆನ್ಸಿಗಳ ಮೇಲೆ ಕಠಿಣ ಕ್ರಮ ಜರಗಿಸಬೇಕು. ಕಾಮಗಾರಿಗಳ ಮೌಲ್ಯಕ್ಕೆ ತಕ್ಕಂತೆ ಟೆಂಡರ್‌ಗಳನ್ನು ಜಿಲ್ಲಾ ಪ್ರಾದೇಶಿಕ ಪತ್ರಿಕೆಗಳಿಗೆ ಬಿಡುಗಡೆ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು. 

ಈ ಸಂದರ್ಭದಲ್ಲಿ ಜಿಲ್ಲಾ ದಿನ ಪತ್ರಿಕೆಗಳ ಸಂಪಾದಕರ ಸರ್ವಾನುಮತದ ನಿರ್ಣಯದಂತೆ ಗುಮ್ಮಟನಗರಿ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಮೊಹ್ಮದ್ ಇರ್ಪಾನ್ ಶೇಖ ಇವರನ್ನು ಅಧ್ಯಕ್ಷರನ್ನಾಗಿ ಮತ್ತು ಬಿಜಾಪುರ ವಾರ್ತಾ ಪತ್ರಿಕೆ ಸಂಪಾದಕರಾದ ಅವಿನಾಶ ಬಿದರಿ ಇವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ಕೇಂದ್ರ ಸಂಘದ ಕಾರ್ಯಕಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರನ್ನಾಗಿ ಕೆ.ಕೆ. ಕುಲಕರ್ಣಿ, ಮಾಧವರಾವ್ ಕುಲಕರ್ಣಿ, ರಾಜು ಕೊಂಡಗೂಳಿ ಇವರನ್ನು ನೇಮಕ ಮಾಡಲಾಯಿತು. 

ಇದೇ ಸಂದರ್ಭದಲ್ಲಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಚನ್ನಬಸವ, ಉಪಾಧ್ಯಕ್ಷರಾದ ಮಂಜುನಾಥಅಬ್ಬಿಗೇರಿ, ಕಾರ್ಯದರ್ಶಿ ರಶ್ಮೀ ಪಾಟೀಲ, ಸುಚೇಂದ್ರ ಲಂಬು, ಖಜಾಂಚಿ ಖಾನ್‌ಸಾಬ ಮೋಮೀನ, ಗದಗ ಜಿಲ್ಲಾಧ್ಯಕ್ಷ ನೂರಮಹ್ಮದ ಅ. ಮಕಾನದಾರ ಸೇರಿದಂತೆ ಜಿಲ್ಲಾ ಪತ್ರಿಕೆಗಳ ಸಂಪಾದಕರಾದ ವಿನೋದ ಸಾರವಾಡ, ಚಿದಂಬರ ಕುಲಕರ್ಣಿ, ಉಮೇಶ ಶಿವಶರಣ, ಕೌಶಲ್ಯ ಪನಾಳಕರ, ಲಕ್ಷ್ಮೀ ವಾಲೀಕಾರ, ಸೀತಾರಾಮ ಕುಲಕರ್ಣಿ, ಫಯಾಜ ಕಲಾದಗಿ, ರಜಾಕ ಬಾಗೇವಾಡಿ, ಪರಶುರಾಮ ಪವಾರ, ಶರತ ಅರ್ಜುಣಗಿ, ಯೂಸೂಪ್ ನೇವಾರ, ಮಲ್ಲಿಕಾರ್ಜಿನ ಮಠ, ಮಲಕು ಹೂಗಾರ, ಶ್ರೀನಿವಾಸ ಸೊರಗೊಂಡ ಮತ್ತಿತ್ತರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, January 25, 2024

ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಲಿಂಗ ತಾರತಮ್ಯ ಭಾವನೆ ತೊಡೆದು ಹಾಕಿ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ


ವಿಜಯಪುರ : ಗಂಡು-ಹೆಣ್ಣು ಎಂಬ ಬೇಧಭಾವ ಮಾಡದೇ ಇಬ್ಬರೂ ಸರಿಸಮಾನರು ಎಂಬ ಭಾವನೆ ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಶು ಅಭಿವೃದ್ದಿ ಯೋಜನೆ ವಿಜಯಪುರ ನಗರ ಮತ್ತು ಗ್ರಾಮೀಣ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಮಗಳನ್ನು ರಕ್ಷಿಸಿ, ಮಗಳನ್ನು ಓದಿಸಿ ಯೋಜನೆಯಡಿ ಹಮ್ಮಿಕೊಂಡ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಸಮಾಜದಲ್ಲಿನ ಲಿಂಗ ತಾರತಮ್ಯ ಹೋಗಲಾಡಿಸಲು ಪ್ರತಿಯೊಬ್ಬರು ಗಂಡು-ಹೆಣ್ಣು ಎಂಬ ಬೇಧ ಭಾವಕ್ಕೆ ಅಂತ್ಯ ಹಾಡಬೇಕು. ಇಬ್ಬರೂ ಸರಿಸಮಾನರು ಎಂಬ ಭಾವನೆ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ, ಬಾಲ್ಯ ವಿವಾಹ, ವರದಕ್ಷಿಣೆಯಂತಹ ಸಾಮಾಜಿಕ ಪಿಡುಗಳನ್ನು ತೊಡೆದು ಹಾಕಲು ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಬಾಲ್ಯವಿವಾಹ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಹೇಳಿದರು. 


ಹೆಣ್ಣು ಮಗುವಿಗೆ ರಕ್ಷಣೆ ಮತ್ತು ಧೈರ್ಯ ತುಂಬಬೇಕು. ಹೆಣ್ಣು ಮಗುವಿನ ಜನನದಿಂದ ಗೌರವಪಡುವ ಮನೋಭಾವನೆ ಬೆಳೆಸಿಕೊಳ್ಳುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಹೆಣ್ಣಾಗಲಿ, ಗಂಡಾಗಲಿ ಶಿಕ್ಷಣಕ್ಕೆ ಆದ್ಯತೆ ನೀಡಿ, ಸಮಾಜ, ದೇಶಕ್ಕೆ ಕೊಡುಗೆ ನೀಡುವ ನಿಟ್ಟಿನಲ್ಲಿ ಉತ್ತಮ ಶಿಕ್ಷಣ ನೀಡುವ ಮೂಲಕ ಮಹದೆತ್ತರಕ್ಕೆ ಬೆಳೆಸಬೇಕು ಎಂದು ಅವರು ಹೇಳಿದರು. 

ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ ಅವರು ಮಾತನಾಡಿ, ಹೆಣ್ಣು ಮಗುವಿನ ಉಜ್ವಲ ಭವಿಷ್ಯ ರೂಪಿಸುವುದು ಪೋಷಕರ ಕರ್ತವ್ಯವಾಗಿದೆ. ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಹೆಣ್ಣು ಹೊರೆ ಎಂಬ ಭಾವನೆ ತೊಡೆದು ಹಾಕಬೇಕು. ಬಾಲ್ಯವಿವಾಹ ಪದ್ಧತಿ ಕಾನೂನು ಬಾಹಿರವಾಗಿದ್ದು, ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮ ಕುರಿತು ಪಾಲಕರು ಜಾಗೃತಿ ಹೊಂದಿ ಬಾಲ್ಯ ವಿವಾಹ ತಡೆಗೆ ಮುಂದಾಗಬೇಕು ಎಂದು ಹೇಳಿದರು. 

ಪ್ರಾಸ್ತಾವಿಕವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಅವರು ಮಾತನಾಡಿ, ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸಲಾಗುತ್ತಿದೆ. ತಾಲೂಕಾ ಪಂಚಾಯತ್, ಗ್ರಾಮ ಪಂಚಾಯತ್, ಜಿಲ್ಲಾ ಮಟ್ಟದದಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ಯೋಜನೆಯಡಿ ಸಹಿ ಅಭಿಯಾನ ಹಾಗೂ ಸೆಲ್ಫಿ ವಿಥ್ ಡಾಟರ್ ಕಾರ್ಯಕ್ರಮ ಮತ್ತು ಯೋಜನೆಯ ಲೋಗೊ, ಮಾಹಿತಿ ಕೈಪಿಡಿ ಮತ್ತು ಕ್ಯಾಲೆಂಡರ್‌ನ್ನು ಬಿಡುಗಡೆಗೊಳಿಸಿದರು. ಭಾಗ್ಯಲಕ್ಷಿö್ಮÃ ಸುಕನ್ಯ ಸಮೃದ್ದಿ ಯೋಜನೆಯ ಫಲಾನುಭವಿಗೆ ಪಾಸ್ ಬುಕ್ ವಿತರಣೆ, ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಸನ್ಮಾನ, ವಿವಿಧ ಸ್ಪರ್ಧೆ ವಿಜೇತರು ಹಾಗೂ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಪಡೆದ ಮಕ್ಕಳಿಗೆ ಪ್ರಶಸ್ತಿ ಹಾಗೂ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಸೇರಿದಂತೆ ತಾಲೂಕಿನ ವಿವಿಧ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಮಹಿಳಾ ಮೇಲ್ವಿಚಾರಕರು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.